ಸ್ವಾತಂತ್ರೋತ್ಸವ ಆಚರಣೆ: ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ

ಸಪ್ತಸಾಗರ ವಾರ್ತೆ ವಿಜಯಪುರ, ಆ. 15:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ‌ ಕನ್ನಡ‌ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ವಿವಿಧ ಶಾಲಾ ಮಕ್ಕಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ‌ ಮನ ಸೂರೆಗೊಂಡವು.
ಪ್ರತಿ ತಂಡವು ತಮ್ಮ ಮನೋಜ್ಞ ಅಭಿನಯ ಪ್ರೇಕ್ಷಕರ ರೋಮಾಂಚನಗೊಳಿಸುವ ಮೂಲಕ ಮಂತ್ರಮುಗ್ಧಗೊಳಿಸಿತು. ಪ್ರೇಕ್ಷಕರು ಮಕ್ಕಳ ಅಭಿನಯಕ್ಕೆ ‌ಚಪ್ಪಾಳೆ ತಟ್ಟುವ ಮೂಲಕ ಅವರನ್ನು ಹುರಿ ದುಂಬಿಸುತ್ತಿದ್ದರು.
ವಿದ್ಯಾರ್ಥಿಗಳು ದೇಶ ಭಕ್ತಿ ಗೀತೆ, ಸಮೂಹ ನೃತ್ಯ‌,ಗಾಯನ ಪ್ರೇಕ್ಷಕರ ಮನಮುಟ್ಟಿತು.
ಈ ಸಂದರ್ಭದಲ್ಲಿ ಮಕ್ಕಳಿಗೆ ಪ್ರಮಾಣ‌ ಪತ್ರ ನೀಡಿ ಪ್ರೋತ್ಸಾಹಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪ‌ ನಿರ್ದೇಶಕಿ ಟಿ.ಎಚ್ ಕೋಲಾರ, ವಿಜಯಪುರದ ಗ್ರೇಡ್-2 ತಹಶೀಲ್ದಾರ ಜಿ.ಎಸ್ ನಾಯಕ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಜೆ. ಬಿರಾದಾರ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಅಲ್ತಾಫ್ ಮಣಿಯಾರ,‌ ಕ್ರೀಡಾಧಿಕಾರಿ ರಾಜಶೇಖರ ದೈವಾಡಿ, ಜಿಲ್ಲಾ ಮಿಶನ್‌ ಶಕ್ತಿ‌ ಸಂಯೋಜಕಿ ಭಾರತಿ ಪಾಟೀಲ, ಕನ್ನಡ‌ ಮತ್ತು ಸಂಸ್ಕೃತಿ ಇಲಾಖೆಯ
ಸಹಾಯಕ ನಿರ್ದೇಶಕ ಸಂತೋಷ ಭೋವಿ, ವಾರ್ತಾಧಿಕಾರಿ ಅಮರೇಶ ದೊಡಮನಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.
ನಿವೃತ್ತ ಶಿಕ್ಷಕ ಹುಮಾಯೂನ್ ಮಮದಾಪೂರ ನಿರೂಪಿಸಿ,ವಂದಿಸಿದರು.

Share