ಸಪ್ತಸಾಗರ ವಾರ್ತೆ,ವಿಜಯಪುರ, ಫೆ.10: ಜಿಲ್ಲೆಯಲ್ಲಿರುವ ನೋಂದಾಯಿತ ಸಹಕಾರ ಸಂಘಗಳು 2025-26ನೇ ಸಾಲಿನ ಲೆಕ್ಕಪರಿಶೋಧನೆಗೆ ಈವರೆಗೂ ಠರಾವನ್ನು ಸಲ್ಲಿಸದ ಸಹಕಾರ ಸಂಘಗಳು ಈ ಪ್ರಕಟಣೆಯ 7 ದಿನಗಳೊಳಗಾಗಿ ವಾರ್ಷಿಕ ಮಹಾಸಭೆಯಲ್ಲಿ ಲೆಕ್ಕಪರಿಶೋಧಕರನ್ನು-
ಲೆಕ್ಕಪರಿಶೋಧನಾ ಫರ್ಮನ್ನು ನೇಮಕಾತಿ ಮಾಡಿಕೊಂಡು ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹಾಗೂ ಅಧ್ಯಕ್ಷರ ಸಹಿಯೊಂದಿಗೆ ಮಾಹಿತಿಯನ್ನು ಜಂಟಿ ನಿರ್ದೇಶಕರ ಕಚೇರಿ, ಲೆಕ್ಕಪರಿಶೋಧನಾ ಇಲಾಖೆ, ಕಾರ್ಮಿಕ ಇಲಾಖಾ ಕಟ್ಟಡ, ಸಿಂದಗಿ ನಾಕಾ ಹತ್ತಿರ, ಅಲ್ಲಾಪೂರ ಓಣಿ, ವಿಜಯಪುರ ಕಚೇರಿಗೆ ಸಲ್ಲಿಸುವಂತೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ 08352-241937 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಹೇಳಿದ್ದಾರೆ.
Editor
Rudrappa B Asangi
Editor
Managing Editor
Chetan Asangi
Managing Editor


