ಸಪ್ತಸಾಗರ ವಾರ್ತೆ, ವಿಜಯಪುರ ಡಿ.23: ವಿಜಯಪುರ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳ ಮಾರಾಟ ಮಾಡಲು ನೇರ ಪ್ರತಿನಿಧಿಗಳ ಆಯ್ಕೆಗೆ ಗೋಲಗುಂಬಜ್ ಹತ್ತಿರದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ಜನವರಿ 2ರ ಬೆಳಿಗ್ಗೆ 11 ಗಂಟೆಗೆ ನೇರ ಸಂದರ್ಶನ ನಡೆಯಲಿದೆ.
ಆಸಕ್ತರು ತಮ್ಮ ಸ್ವವಿವರ, ಇತ್ತೀಚಿನ ಭಾವಚಿತ್ರ, ಶೈಕ್ಷಣಿಕ ಪ್ರಮಾಣ ಪತ್ರದ ಪ್ರತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 8971127772 ಸಂಪರ್ಕಿಸಬಹುದಾಗಿದೆ ಎಂದು ವಿಜಯಪುರ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Editor
Rudrappa B Asangi
Editor
Managing Editor
Chetan Asangi
Managing Editor


