ಸಪ್ತಸಾಗರ ವಾರ್ತೆ, ವಿಜಯಪುರ, ಆ. 5: ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘದಿಂದ ಜಿಲ್ಲೆಯ ಛಾಯಾಗ್ರಾಹಕರ ಮಕ್ಕಳಿಗೆ ೨೦೨೪-೨೫ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ.ಯಲ್ಲಿ ಶೇ.೮೦ ಕಿಂತ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ಛಾಯಾಗ್ರಾಹಕರ ಮಕ್ಕಳಿಗೆ ಜಿಲ್ಲಾ ಮಟ್ಟದಲ್ಲಿ ಸಂಘದಿಂದ ಪ್ರತಿಭಾ ಪುರಸ್ಕಾರ ಮಾಡಲು ನಿರ್ಧರಿಸಲಾಗಿದೆ. ವಿಜಯಪುರ ಜಿಲ್ಲೆಯ ಎಲ್ಲ ತಾಲೂಕಿನ ಛಾಯಾಗ್ರಾಹಕರು ತಮ್ಮ ಮಕ್ಕಳ ಪ್ರಸಕ್ತ ಸಾಲಿನ ಶಾಲೆಯ ಧೃಢೀಕೃತ ಎಸ್.ಎಸ್.ಎಲ್.ಸಿ. ಮತ್ತು ಧೃಢೀಕೃತ ಕಾಲೇಜಿನ ದ್ವಿತೀಯ ಪಿ.ಯು.ಸಿ ಅಂಕಪಟ್ಟಿ, ಆಧಾರ ಕಾರ್ಡ್, ವಿದ್ಯಾರ್ಥಿಯ ಬ್ಯಾಂಕ್ ವಿವರ, ಇತ್ತೀಚಿನ ಎರಡು ಪಾಸಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಆ. 15ರ ಒಳಗಡೆ ಅಧ್ಯಕ್ಷರು, ವಿಜಯಪುರ ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘ ಅಂಗಡಿ ನಂ. ೨೦೧, ಮೊದಲನೆ ಮಹಡಿ, ಎಸ್.ಎಸ್. ಕಾಂಪ್ಲೆಕ್ಸ್, ಸಿದ್ದೇಶ್ವರ ದೇವಸ್ಥಾನದ ಹತ್ತಿರ, ಬಿ.ಎಲ್.ಡಿ.ಇ. ರಸ್ತೆ, ವಿಜಯಪುರ-೫೮೬೧೦೧ ಇಲ್ಲಿಗೆ ಸಲ್ಲಿಸಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಧ್ಯಕ್ಷ ರಮೇಶ ಚವ್ಹಾಣ ಮೊ : ೯೬೧೧೫೬೩೫೦೮, ಕಾರ್ಯದರ್ಶಿ ಸತೀಶ ಕಲಾಲ ಮೊ : ೯೯೦೦೯೦೫೨೯೧, ನಿರ್ದೇಶಕ ಸುನೀಲ ಗಲಗಲಿ ಮೊ: ೯೪೪೮೮೯೭೦೭೩ ಅವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಛಾಯಾಗ್ರಾಹಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
