371(ಜೆ) ಹೋರಾಟಕ್ಕೆ ಜಂಗಮ ಸಂಘ ಬೆಂಬಲ

ಸಪ್ತಸಾಗರ ವಾರ್ತೆ,ಸಿಂದಗಿ, ಅ. 11: ವಿಜಯಪುರ ಜಿಲ್ಲೆಯನ್ನು 371(ಜೆ) ಕಲಂ ವ್ಯಾಪ್ತಿಗೆ ಸೇರಿಸಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಧರಣಿ ಸತ್ಯಾಗ್ರಹಕ್ಕೆ ತಾಲ್ಲೂಕು ಜಂಗಮ ಕ್ಷೇಮಾಭಿವೃದ್ಧಿ ಸಂಘ ಬೆಂಬಲ ವ್ಯಕ್ತಪಡಿಸಿದೆ.
ಸಂಘದ ಅಧ್ಯಕ್ಷ ಶಂಕರಲಿಂಗಯ್ಯ ಹಿರೇಮಠ ಮಾತನಾಡಿ, ವಿಜಯಪುರ ಜಿಲ್ಲೆಯನ್ನು 371(ಜೆ) ವ್ಯಾಪ್ತಿಗೆ ತಕ್ಷಣ ಸೇರಿಸಿ, ಈ ಭಾಗದ ಜನರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.
ಹೋರಾಟದ ಮುಖಂಡ ರಂಗನಾಥ ತೋರ್ಪೆ ಮಾತನಾಡಿ, 371(ಜೆ) ಜಾರಿಗಾಗಿ ಜಿಲ್ಲೆಯ ಎಲ್ಲ ಸಮುದಾಯಗಳು ಒಗ್ಗಟ್ಟಾಗಿ ಹೋರಾಡಬೇಕು ಎಂದರು. ಸಿದ್ದಲಿಂಗಯ್ಯ ಹಿರೇಮಠ ಮಾತನಾಡಿ, ಡಾ. ನಂಜುಂಡಪ್ಪ ವರದಿಯ ಶಿಫಾರಸುಗಳನ್ನು ಪರಿಗಣಿಸಿ ವಿಜಯಪುರ ಜಿಲ್ಲೆಗೆ 371(ಜೆ) ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಮಹಿಳಾ ಸಂಘಟಕಿ ಶೈಲಜಾ ಸ್ಥಾವರಮಠ ಮಾತನಾಡಿ, 371(ಜೆ) ಜಾರಿಯಾಗುವವರೆಗೆ ಹೋರಾಟ ಮುಂದುವರಿಯಲಿದೆ ಎಂದರು.
ಗುರುರಾಜ ಪಡಶೆಟ್ಟಿ, ಶೈಲ ನಂದಿಕೋಲ, ಬಸವರಾಜ ವಸ್ತ್ರದ, ಬಸಯ್ಯ ಹಿರೇಮಠ, ಮಲ್ಲಿಕಾರ್ಜುನ ಹಿರೇಮಠ ಸೇರಿದಂತೆ ಜಂಗಮ ಸಮಾಜ ಹಾಗೂ ಹೋರಾಟ ಸಮಿತಿಯ ಮುಖಂಡರು ಉಪಸ್ಥಿತರಿದ್ದರು.

Share this