ಐತಿಹಾಸಿಕ ಸ್ಮಾರಕಗಳ ದುರಸ್ತಿಗೆ ಮಹಾ ನಿರ್ದೇಶಕರಿಗೆ ಕಲಾಲ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 1:
ಗುಮ್ಮಟ ನಗರಿ ವಿಜಯಪುರದಲ್ಲಿ ಇತ್ತೀಚಿಗೆ ಸುರಿದ ಭಾರಿ ಮಳೆಯಿಂದಾಗಿ ಐತಿಹಾಸಿಕ ಸ್ಮಾರಕಗಳು ಹಾನಿಗೊಳಗಾಗಿದ್ದು ಅವುಗಳ ದುರಸ್ತಿ ಕಾರ್ಯ ಕೈಗೊಳ್ಳಬೇಕೆಂದು ಕಾಂಗ್ರೆಸ್ ಮುಖಂಡ ಡಿ.ಎಚ್. ಕಲಾಲ ಅವರು
ಕಾಂಗ್ರೆಸ್ ನಾಯಕ ಡಿ.ಎಚ್.ಕಲಾಲ್ ನವದೆಹಲಿಯಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ ಮಹಾನಿರ್ದೇಶಕ ಯದುಬೀರ್ ಸಿಂಗ್ ರಾವತ್ ಅವರಿಗೆ ಭೇಟಿ ಮಾಡಿ ಮನವಿ ಸಲ್ಲಿಸಿದರು.
ವಿಜಯಪುರದಲ್ಲಿ ಇತ್ತೀಚಿಗೆ ಸೇರಿದ ಭಾರಿ ಮಳೆಯಿಂದಾಗಿ ನಗರದಲ್ಲಿನ ಪ್ರಮುಖ ಐತಿಹಾಸಿಕ ಸ್ಮಾರಕಗಳು ಹಾನಿಗೀಡಾಗಿವೆ. ಅವುಗಳ ದುರಸ್ತಿ ಕಾರ್ಯವನ್ನು ಕೂಡಲೇ ಕೈಗೊಳ್ಳಬೇಕೆಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮಹಾ ನಿರ್ದೇಶಕರು ಕಲಾಲ್ ಅವರಿಗೆ ಭರವಸೆ ನೀಡಿದ್ದಾರೆ.

Share