ಸಪ್ತಸಾಗರ ವಾರ್ತೆ, ವಿಜಯಪುರ,ಫೆ.9: ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಕಾಯಕ ಶರಣ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಫೆ.10ರ ಬೆಳಿಗ್ಗೆ 9:30ಕ್ಕೆ ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಕಾಯಕ ಶರಣರ ಭಾವಚಿತ್ರದ ಮೆರವಣಿಗೆ ನಡೆಯಲಿದೆ.
ಅಂದು ಬೆಳಿಗ್ಗೆ 10:30ಕ್ಕೆ ನಗರದ ಕಂದಗಲ್ ಶ್ರೀ ಹನುಂತರಾಯ ರಂಗಮಂದಿರದಲ್ಲಿ ನಡೆಯುವ ಜಯಂತಿ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ಉದ್ಘಾಟಿಸುವರು. ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅವರು ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತರಿರುವರು. ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ರವಿಕುಮಾರ ಎನ್, ನವದೆಹಲಿಯಲ್ಲಿನ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ–2 ಹಾಗೂ ಪರಿಷತ್ತಿನ ಶಾಸಕರಾದ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತದ ಅಧ್ಯಕ್ಷರೂ ಆದ ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ, ಸಂಸದರಾದ ರಮೇಶ ಜಗಜಿಣಗಿ ಹಾಗೂ ಸುಧಾ ಮೂರ್ತಿ,ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ, ಹಣಮಂತ ನಿರಾಣಿ, ಸುನೀಲಗೌಡ ಪಾಟೀಲ, ಪಿ.ಎಚ್. ಪೂಜಾರ,ವಿಠ್ಠಲ ಕಟಕಧೋಂಡ,ರಾಜುಗೌಡ ಪಾಟೀಲ,ಅಶೋಕ ಮನಗೂಳಿ, ಕೇಶವ ಪ್ರಸಾದ ಎಸ್, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಕಾಂತಾ ನಾಯ್ಕ, ಧಾರವಾಡದ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ, ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಬಿ.ಎಸ್.ಕವಲಗಿ,ವಿಜಯಪುರ ಮಹಾನಗರ ಪಾಲಿಕೆಯ ಮಹಾಪೌರರಾದ ಮಡಿವಾಳಪ್ಪ ಕರಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಗಂಗಾಧರ ಸಂಬಣ್ಣಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಇಲಿಯಾಸ ಬೋರಾಮಣಿ ಅವರು ಭಾಗವಹಿಸಲಿದ್ದಾರೆ.
ಡಾ.ಸುಜಾತ ಚಲವಾದಿ ಹಾಗೂ ಹೇಮಂತ ಭೂತನಾಳ ಅವರು ವಿಶೇಷ ಉಪನ್ಯಾಸ ನೀಡಲಿದ್ದು,ವಿನೋದ ಕಟಗೇರಿ ಅವರು ಸುಗಮಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Editor
Rudrappa B Asangi
Editor
Managing Editor
Chetan Asangi
Managing Editor


