ದಲಿತ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾಗಿ ಕಿತ್ತೂರ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 4:
ದಲಿತ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷರಾಗಿ ರವಿ ಕಿತ್ತೂರ ನೇಮಕಗೊಂಡಿದ್ದಾರೆ.
ಸಮಾಜಮುಖಿ ಹಾಗೂ ಸೃಜನಾತ್ಮಕ ಚಟುವಟಿಕೆಯಲ್ಲಿ ಸದಾ ತಮ್ಮನ್ನು ತಾವು ತೊಡಗಿಸಿಕೊಂಡು, ಸಾಮಾಜಿಕ ಹೋರಾಟ ಮತ್ತು ದಲಿತಪರ ಚಿಂತನೆಯ ವ್ಯಕ್ತಿಗಳಾದ
ರವಿ ಕಿತ್ತೂರ ಅವರನ್ನು ವಿಜಯಪುರ ದಲಿತ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಿದ ಬಗ್ಗೆ ದಲಿತ ಸಾಹಿತ್ಯ ಪರಿಷತ್ ಬೆಳಗಾವಿ ವಿಭಾಗದ ಸಂಯೋಜಕ ಮೋಹನ ಕಟ್ಟಿಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this