ಸಪ್ತಸಾಗರ ವಾರ್ತೆ, ವಿಜಯಪುರ,ಫೆ.3:
ಮಹಿಳಾ ಉದ್ಯಮಿದಾರರು ತಾವು ತಯಾರಿಸಿದ ಉತ್ಪನ್ನಗಳಿಗೆ ಡಿಜಿಟಲ್ ವೇದಿಕೆಯ ಮೂಲಕ ಮಾರುಕಟ್ಟೆ ಒದಗಿಸುವ ಸೌಲಭ್ಯ ಕಲ್ಪಿಸಲಾಗಿದ್ದು, ಜ.9 ರಂದು ಗೃಹಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆಪ್ ಅನ್ನು ಬಿಡುಗಡೆ ಮಾಡಲಾಗಿದೆ.
ಮಹಿಳಾ ಉದ್ಯಮಿಗಳ ನೋಂದಣಿ ಕಾರ್ಯ ಕೈಗೊಳ್ಳಲು ಸ್ತ್ರೀ ಶಕ್ತಿ ಸ್ವ ಸಹಾಯ ಗುಂಪಿನ ಸದಸ್ಯರು, ಎನ್ ಆರ್ ಎಲ್ಎಮ್ ಫಲಾನುಭವಿಗಳು ಹಾಗೂ ಎನ್ ಆರ್ ಎಲ್ಎಮ್ ಉದ್ಯಮಿಗಳು, ಅಕ್ಕ ಕೆಫೆ ಘಟಕಗಳನ್ನು ನಿರ್ವಹಿಸುತ್ತಿರುವ ಮಹಿಳೆಯರು, ಕಾಸಿಯಾ (ಕರ್ನಾಟಕ ಸ್ಮಾಲ್ ಸ್ಕೇಲ್ ಇಂಡಸ್ಟ್ರೀಜ್ ಅಸೋಷಿಯೇಶನ್) ಘಟಕಗಳ ಮಹಿಳಾ ಉದ್ಯಮಿಗಳು, ರುಡ್ ಸೆಟ್-ಆರ್ ಎಸ್ ಇಟಿಐ (ಧರ್ಮಸ್ಥಳ) ಮೂಲಕ ತರಬೇತಿ ಪಡೆದು ಸ್ವ ಉದ್ಯೋಗ ನಡೆಸುತ್ತಿರುವ ಮಹಿಳೆಯರು,ಮಹಿಳಾ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳ ಅಡಿಯಲ್ಲಿ ಸೌಲಭ್ಯ ಪಡೆದ ಮಹಿಳಾ ಫಲಾನುಭವಿಗಳು, ಜಿಲ್ಲಾ ತಾಲೂಕು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇತರೆ ಯಶಸ್ವಿ ಮಹಿಳಾ ಉದ್ಯಮಿಗಳು ತಾವು ತಯಾರಿಸುವ ಉತ್ಪನ್ನಗಳ ಮಾಹಿತಿ ನೀಡಲು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಹಿಳಾ ಅಭಿವೃದ್ಧಿ ನಿಗಮ ಅಭಿವೃದ್ಧಿ ನಿರೀಕ್ಷಕ (ದೂ.08352-295353) ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Editor
Rudrappa B Asangi
Editor
Managing Editor
Chetan Asangi
Managing Editor


