ಸಪ್ತಸಾಗರ ವಾರ್ತೆ,ವಿಜಯಪುರ, ಫೆ. 28:
ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಿಂದ ನೀಡುವ ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ-2026 ನೀಡಿ ಈಚೆಗೆ ಗೌರವಿಸಲಾಗಿದೆ.
ಮಂತ್ರಾಲಯದ ಶ್ರೀ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಗದ್ಗುರು ಶ್ರೀಮನ್ಮಧ್ವಾಚಾರ್ಯರ ಮೂಲಮಹಾಸಂಸ್ಥಾನ ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದ ಪೀಠಾಧಿಪತಿಗಳಾದ ಡಾ.ಶ್ರೀ 108 ಶ್ರೀ ಮತ್ಸುಬುಧೇಂದ್ರತೀರ್ಥ ಶ್ರೀ ಪಾದಂಗಳ ದಿವ್ಯ ಸಾನ್ನಿಧ್ಯದಲ್ಲಿ ಪ್ರತಿಷ್ಠಿತ ಮಂತ್ರಾಲಯ ಪರಿಮಳ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ದೇಶ ಕಂಡ ಶ್ರೇಷ್ಠ ಪ್ರಧಾನಮಂತ್ರಿಗಳಾದ ಅಟಲ್ ಬಿಹಾರಿ ವಾಜಪೇತಿ ಸರ್ಕಾರದಲ್ಲಿ ಕೇಂದ್ರದ ಸಚಿವರಾಗಿ, ಶಾಸಕರಾಗಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿರುವ ಹಾಗೂ ಜನಪರ ಹೋರಾಟಗಳ ನೇತೃತ್ವ ವಹಿಸಿ ಯಶಸ್ವಿಯಾಗಿರುವ ಹಾಗೂ ಗೋ ಸೇವೆ, ಹಿಂದುತ್ವ, ಹಿಂದೂಗಳ ಪರವಾಗಿ ಗಟ್ಟಿ ಧ್ವನಿಯಾಗಿ ಶ್ರಮಿಸುತ್ತಿರುವ ಬಸನಗೌಡ ಪಾಟೀಲ ಯತ್ನಾಳ ಅವರು ಇಡೀ ನಾಡಿನ ಗಮನ ಸೆಳೆದಿದ್ದಾರೆ. ಇದೀಗ ಅವರಿಗೆ ಮಂತ್ರಾಲಯ ಪ್ರಶಸ್ತಿ ದೊರೆತಿರುವುದು ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.
ಶಾಸಕ ಯತ್ನಾಳರಿಗೆ ಮಂತ್ರಾಲಯ ಪರಿಮಳ ಪ್ರಶಸ್ತಿ ಪ್ರದಾನ


