ಸಪ್ತಸಾಗರ ವಾರ್ತೆ, ವಿಜಯಪುರ, ನ. 11: ಮೌಲಾನಾ ಅಬ್ದುಲ್ ಕಲಾಂ ಅಜಾದ್ ಅವರ ಜಯಂತಿಯ ಪ್ರಯುಕ್ತ ಹೊನ್ನುಟಗಿ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ರಾಷ್ಟ್ರದ ಪ್ರಥಮ ಶಿಕ್ಷಣ ಮಂತ್ರಿ ಹಾಗೂ ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಮೌಲಾನಾ ಅಜಾದ್ ಅವರ ಶಿಕ್ಷಣ ಸೇವೆ ಹಾಗೂ ರಾಷ್ಟ್ರ ನಿರ್ಮಾಣದ ಕೊಡುಗೆಯನ್ನು ಸ್ಮರಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲೆಯ ಪ್ರಾಂಶುಪಾಲ ದಿವಾಕರ್ ಮಾತನಾಡಿ, ಮೌಲಾನಾ ಅಜಾದ್ ಅವರ ಜೀವನ, ಅವರ ಶಿಕ್ಷಣದ ದೃಷ್ಟಿಕೋನ ಹಾಗೂ ಯುವ ಪೀಳಿಗೆಯು ಅವರ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕಾದ ಅಗತ್ಯವನ್ನು ಮಕ್ಕಳಿಗೆ ತಿಳಿ ಹೇಳಿದರು.
ಕಾರ್ಯಕ್ರಮದ ಪ್ರಾರಂಭದಲ್ಲಿ ನಿಧಿಶ್ ಪ್ರಾಸ್ತಾವಿಕ ಮಾತನಾಡಿ, ಅಜಾದ ಅವರ ಜೀವನ ಚರಿತ್ರೆ, ಹಾಗೂ ಸ್ವಾತಂತ್ರ್ಯ ನಂತರ ನೆಹರು ಅವರ ಜೊತೆಯಲ್ಲಿ ಮೊದಲ ಕೇಂದ್ರ ಶಿಕ್ಷಣ ಮಂತ್ರಿಯಾಗಿ ಸಂಪುಟ ಸೇರಿದರು ಎಂದು ತಿಳಿಸಿದರು.
ವಿದ್ಯಾರ್ಥಿಗಳು ಮೌಲಾನಾ ಅಜಾದ್ ಅವರ ಕುರಿತಾಗಿ ಕವನ, ಭಾಷಣ ಮತ್ತು ನಾಟಕಗಳ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.
ಈ ಸಂದರ್ಭದಲ್ಲಿ ಬೋಧಕ, ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉತ್ಸಾಹಭರಿತವಾಗಿ ಭಾಗವಹಿಸಿದ್ದರು.
ಡಾ. ಶಮಷರಲಿ ಮುಲ್ಲಾ ನಿರೂಪಿಸಿದರು.
ಮೌಲಾನಾ ಅಬ್ದುಲ್ ಕಲಾಂ ಅಜಾದ್ ಜಯಂತಿ


