ಸಪ್ತಸಾಗರ ವಾರ್ತೆ, ವಿಜಯಪುರ, ಜು. 14:
ಕನ್ನಡ ಚಿತ್ರರಂಗದ ಮೇರು ನಟಿ ಬಿ.ಸರೋಜಾದೇವಿ ನಿಧನಕ್ಕೆ ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸಂತಾಪ ಸಂದೇಶ ನೀಡಿರುವ ಸಚಿವರು, ಭಾರತೀಯ ಚಿತ್ರರಂಗದಲ್ಲಿ ಬಹುಭಾಷಾ ತಾರೆಯಾಗಿ ಕನ್ನಡದ ಕೀರ್ತಿ ಹೆಚ್ಚಿಸಿದ್ದ ಸರೋಜಾದೇವಿ ಅವರು, ಕನ್ನಡ ಚಿತ್ರರಂಗಕ್ಕೆ ಮಹೋನ್ನತ ಕೊಡುಗೆ ನೀಡಿದ್ದರು ಎಂದು ಸ್ಮರಿಸಿದ್ದಾರೆ.
ಸರೋಜಾದೇವಿ ಅವರು ಮನೋಜ್ಞ ಅಭಿನಯ ನೀಡಿದ್ದ ಹಾಗೂ ಕಿತ್ತೂರು ರಾಣಿ ಚನ್ನಮ್ಮ ಪಾತ್ರಕ್ಕೆ ಜೀವತುಂಬಿದ್ದನ್ನು ಕನ್ನಡಿಗರ ಹೃದಯ ಗೆದ್ದಿದ್ದರು ಎಂದು ಸ್ಮರಿಸಿದ್ದಾರೆ.
ಸರೋಜಾದೇವಿ ಅವರನ್ನು ಕಳೆದುಕೊಂಡು ಕನ್ನಡ ಚಿತ್ರರಂಗ ಬಡವಾಗಿದ್ದು, ಕನ್ನಡಿಗರ ಹೃದಯದಲ್ಲಿ ಅವರು ಸದಾ ಅಮರವಾಗಿದ್ದಾರೆ ಎಂದಿದ್ದಾರೆ.
ಸರೋಜಾದೇವಿ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಕಂಬನಿ


