ಸಪ್ತಸಾಗರ ವಾರ್ತೆ, ವಿಜಯಪುರ, ಜು. 29:
ಲಂಚ ಸ್ವೀಕರಿಸುತ್ತಿದ್ದಾಗ ಜಿಲ್ಲೆಯ ಕೊಲ್ಹಾರ ತಾಲೂಕಿನ ಮುಳವಾಡ ಗ್ರಾಮ ಪಂಚಾಯತಿ ದ್ವಿತೀಯ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಮಲ್ಲಪ್ಪ ಸಾಬು ಹೊಸಕೇರಿ ಲೋಕಾಯುಕ್ತ ಬಲೆಗೆ ಬಿದ್ದ ಮುಳವಾಡ ಗ್ರಾಮ ಪಂಚಾಯತಿ ದ್ವಿತೀಯ ದರ್ಜೆ ಸಹಾಯಕ.
ಮುಳವಾಡ ಗ್ರಾಮದ ಕೆಐಎಡಿಬಿ ನಿವೇಶನದ ಇ- ಸ್ವತ್ತು ಉತಾರೆ ಮಾಡಿಕೊಡಲು ನಿವೇಶನದ ಮಾಲೀಕರಿಗೆ 10 ಸಾವಿರ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದ.
ಈ ಬಗ್ಗೆ ನಿವೇಶನ ಮಾಲೀಕ ಲೋಕಾಯುಕ್ತ ಪೊಲೀಸ್ ಠಾಣೆಗೆ ಹಾಜರಾಗಿ ಗ್ರಾಮ ಪಂಚಾಯತಿ ದ್ವಿತೀಯ ದರ್ಜೆ ಸಹಾಯಕ ಹೊಸಕೇರಿ ಎಂಬುವವರ ವಿರುದ್ಧ ದೂರು ನೀಡಿದ್ದರು.
ಈ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಮಂಗಳವಾರ ಸಂಜೆ ಮುಳುವಾಡ ಗ್ರಾಮ ಪಂಚಾಯತಿ ಮೇಲೆ ದಾಳಿ ನಡೆಸಿ ದ್ವಿತೀಯ ದರ್ಜೆ ಸಹಾಯಕ ಹೊಸಕೇರಿ ಎಂಬುವರು ರೂ.10,000 ಲಂಚ ಪಡೆಯುತ್ತಿರುವಾಗ ದಾಳಿ ನಡೆಸಿ ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ 10,000ಗಳನ್ನು ಲೋಕಾಯುಕ್ತ ಪೊಲೀಸರು ವಶಪಡಿಸಿಕೊಂಡಿದ್ದು, ತನಿಖೆ ಮುಂದುವರೆದಿದೆ.
ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಟಿ. ಮಲ್ಲೇಶ್ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಗಳಾದ ಆನಂದ ವೈ ಟಕ್ಕನ್ನವರ್, ಆನಂದ ಡೋಣಿ ಹಾಗೂ ಕರ್ನಾಟಕ ಲೋಕಾಯುಕ್ತ ಪೊಲೀಸ್ ಠಾಣೆಯ ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ.
ಮುಳವಾಡ ಪಂಚಾಯತಿ ಕ್ಲರ್ಕ್ ಲೋಕಾಯುಕ್ತ ಬಲೆಗೆ
