ಸಪ್ತಸಾಗರ ವಾರ್ತೆ, ವಿಜಯಪುರ ಡಿ.23:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ,ಜಿಲ್ಲಾ ಗ್ರಾಹಕರ ದೂರು ಪರಿಹಾರ ವೇದಿಕೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರ, ಕೆಎಫ್‌ಸಿಎಸ್‌ಸಿ ನಿಗಮ, ವಿಜಯಪುರ ಜಿಲ್ಲಾ ಮಾಹಿತಿ ಕೇಂದ್ರ ನ್ಯೂ ಸಂಸ್ಥೆ, ವಿಜಯಪುರ ಹಾಗೂ ಸಿಕ್ಯಾಬ್ ಅಸೋಸಿಯೇಶನ್ ಇವರ ಸಹಯೋಗದಲ್ಲಿ ರಾಷ್ಟ್ರೀಯ ಗ್ರಾಹಕರ ಹಕ್ಕುಗಳ ದಿನಾಚರಣೆ ಪ್ರಯುಕ್ತ ಡಿಜಿಟಲ್ ನ್ಯಾಯದ ಮೂಲಕ ದಕ್ಷ ಮತ್ತು ತ್ವರಿತ ವಿಲೇವಾರಿ ಕುರಿತು ಕಾರ್ಯಕ್ರಮವನ್ನು ಡಿಸೆಂಬರ್ 24ರ ಬೆಳಿಗ್ಗೆ 10.30ಗಂಟೆಗೆ ಬಾಗಲಕೋಟೆ ರಸ್ತೆಯಲ್ಲಿರುವ ಸಿಕ್ಯಾಬ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆಯೋಜಿಸಲಾಗಿದೆ.
ಜಿಲ್ಲಾಧಿಕಾರಿ ಡಾ. ಆನಂದ.ಕೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಜಿಲ್ಲಾ ಗ್ರಾಹಕರ ದೂರು ಪರಿಹಾರ ವೇದಿಕೆಯ ಅಧ್ಯಕ್ಷೆ ವಿದ್ಯಾ ಗಲಗಲಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ರಿಷಿ ಆನಂದ, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಎಸ್. ಹಾಗರಗಿ, ಜಿಲ್ಲಾ ಗ್ರಾಹಕರ ದೂರು ಪರಿಹಾರ ವೇದಿಕೆಯ ಸದಸ್ಯ ಕಮಲಕಿಶೋರ ಜೋಶಿ, ಸಿಕ್ಯಾಬ್ ಅಸೋಸಿಯೇಶನ್‌ನ ಜನರಲ್ ಸೆಕ್ರೆಟರಿ ಎ.ಎಸ್.ಪಾಟೀಲ, ನಿರ್ದೇಶಕ ಸಲಾವುದ್ದೀನ್ ಪುಣೇಕರ ಅವರು ಉಪಸ್ಥಿತರಿರಲಿದ್ದು, ಎಂ.ಜಿ. ಮಠಪತಿ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Editor
Rudrappa B Asangi
Editor
Managing Editor
Chetan Asangi
Managing Editor


