ವಿಜಯಪುರದಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಏ. 25:
ನಗರದ ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ಪಂಚಾಯತ್ ರಾಜ್ ದಿನಾಚರಣೆ ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ವಿವಿಧ ವಿಭಾಗಗಳಲ್ಲಿ ವಾರ್ಷಿಕ ಪ್ರಗತಿಯಲ್ಲಿ ಉತ್ತಮ ಸಾಧನೆ ಮಾಡಿದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭ ನೆರವೇರಿಸಲಾಯಿತು. ಇದರಲ್ಲಿ ಜಿಲ್ಲೆಯಲ್ಲಿ ವಾರ್ಷಿಕ ಕರ ವಸೂಲಾತಿಯಲ್ಲಿ ಶೇ.100ರಷ್ಟು ಸಾಧನೆಗೈದ ವಿಭಾಗದಲ್ಲಿ ತೃತೀಯ ಸ್ಥಾನದಲ್ಲಿ ಹೊನಗನಹಳ್ಳಿ ಗ್ರಾಮ ಪಂಚಾಯಿತಿಗೆ ಪ್ರಶಸ್ತಿ ಲಭಿಸಿದ್ದು, ಜಿ. ಪಂ ಸಿಇಒ ರಿಷಿ ಆನಂದ ಅವರಿಂದ ಪಿಡಿಒ ಜಯಶ್ರೀ ಪವಾರ, ಕಾರ್ಯದರ್ಶಿ ಅಮೃತಾ ನಿಂಬಾಳಕರ,ಕರ ವಸೂಲಿಗಾರ ಸುನೀಲ್ ಚಂದನವಾಡಿ, ಡಿಇಒ ಮಲ್ಲಿಕಾರ್ಜುನ ಹುಣಶ್ಯಾಳ ಇವರಿಗೆ ಪ್ರಶಸ್ತಿಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಪಂಚಾಯತ್ ರಾಜ್ ಇಲಾಖೆಯ ಗಣ್ಯರು ಹಾಜರಿದ್ದರು.

Share this