ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಕಾನೂನು ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಏಕತಾ ದಿನ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 31: ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಕಾನೂನು ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಏಕತಾ ದಿನ ಆಚರಿಸಲಾಯಿತು.
ಶುಕ್ರವಾರ ಭಾರತದ ಉಕ್ಕಿನ ಮನುಷ್ಯ ಎಂದೇ ಖ್ಯಾತರಾದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಏಕತಾ ದಿನ‌ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಎಲ್ಲರೂ ಏಕತಾ ಪ್ರತಿಜ್ಞೆ ಸ್ವೀಕರಿಸಿ ದೇಶದ ಏಕತೆ, ಅಖಂಡತೆ ಹಾಗೂ ಭದ್ರತೆಯನ್ನು ಕಾಪಾಡುವ ಕುರಿತು ಬದ್ಧತೆಯನ್ನು ವ್ಯಕ್ತಪಡಿಸಿದರು.
ಇದೇ ವೇಳೆ ಕಾಲೇಜಿನ ಪ್ರಾಚಾರ್ಯ ಡಾ. ರಘುವೀರ ಜಿ. ಕುಲಕರ್ಣಿ,‌ ಬೋಧಕ ಮತ್ತು ಬೋಧಕರ ಹೊರತಾದ ಸಿಬ್ಬಂದಿ, ಬಿ. ಎ. ಎಲ್.ಎಲ್.ಬಿ. ಮತ್ತು ಎಲ್.ಎಲ್.ಬಿ. ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Share this