ವಿಜಯಪುರ ಜಿಲ್ಲಾ ಕೊರಮ ಕ್ಷೇಮಾಭಿವೃದ್ಧಿ ಸಂಘದ ನೂತನ ಜಿಲ್ಲಾ ಪದಾಧಿಕಾರಿಗಳ ಅವಿರೋಧ ಆಯ್ಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 13:
ಜಿಲ್ಲೆಯ ಕೊರಮ ಜನಾಂಗದ ಅಭಿವೃದ್ಧಿಗಾಗಿ ಕಾರ್ಯ ನಿರ್ವಹಿಸುತ್ತಿರುವ ವಿಜಯಪುರ ಜಿಲ್ಲಾ ಕೊರಮ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಪದಾಧಿಕಾರಿಗಳನ್ನು ಭಾನುವಾರ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಕೃಷ್ಣ ತೆರಿಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೂತನ ಜಿಲ್ಲಾ ಅಧ್ಯಕ್ಷರಾಗಿ ರವೀಂದ್ರ ಕೃಷ್ಣಜಿ. ಜಾಧವ್, ಪ್ರಧಾನ ಕಾರ್ಯದರ್ಶಿಯಾಗಿ ರಾಜಶೇಖರ ಬಸಪ್ಪ ಭಜಂತ್ರಿ ಹಾಗೂ ಜಿಲ್ಲಾ ಉಪಾಧ್ಯಕ್ಷರಾಗಿ ಹಣಮಂತ ಭಜಂತ್ರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನೂತನ ಪದಾಧಿಕಾರಿಗಳು ಕೊರಮ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುವ ಸಂಕಲ್ಪ ವ್ಯಕ್ತಪಡಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Share this