ಆ. 24ರಂದು ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ ಕುರಿತು ಕಾರ್ಯಗಾರ, ಪೋಸ್ಟರ್ ಬಿಡುಗಡೆ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 18: ಜಿಲ್ಲೆಯಲ್ಲಿ ಸರಕಾರಿ ಉದ್ಯೋಗದ ಅಭಿಲಾಷೆಯಿಂದ ಓದುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಉದ್ದೇಶದಿಂದ ಸಮಾಜ ಕಲ್ಯಾಣ ಇಲಾಖೆ ಮತ್ತು ದಲಿತ ವಿದ್ಯಾರ್ಥಿ ಪರಿಷತ್ ಸಹಯೋಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಹೇಗೆ ? ಎಂಬ ಒಂದು ದಿನದ ಕಾರ್ಯಾಗಾರವನ್ನು ಆ. 24ರಂದು ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ ಅವರು ಕಾರ್ಯಗಾರದ ಪೋಸ್ಟರ್ ಬಿಡುಗಡೆ ಮಾಡಿದರು.
ದಲಿತ ವಿದ್ಯಾರ್ಥಿ ಪರಿಷತ್ ಮುಖಂಡ ಅಕ್ಷಯಕುಮಾರ ಅಜಮನಿ ಅವರು ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ಸರಕಾರಿ ನೌಕರಿ ಉದ್ದೇಶದಿಂದ ವಿಜಯಪುರ ನಗರಕ್ಕೆ ಲಕ್ಷಾಂತರ ವಿದ್ಯಾರ್ಥಿಗಳು ಆಗಮಿಸುತ್ತಾರೆ. ಎಷ್ಟೋ ವಿದ್ಯಾರ್ಥಿಗಳು ಸುಮಾರು ವರ್ಷದಿಂದ ಓದಿಕೊಂಡೆ ಇರುತ್ತಾರೆ. ಅವರಿಗೆ ಸರಿಯಾದ ಮಾರ್ಗದರ್ಶನವಿಲ್ಲದೆ ಏನು ಓದಬೇಕು. ಯಾವ ರೀತಿ ಓದಬೇಕೆನ್ನುವ ಗೊಂದಲದಲ್ಲಿರುತ್ತಾರೆ. ಅಂತಹ ವಿದ್ಯಾರ್ಥಿಗಳಿಗೆ ಅನುಕೂಲ ಆಗಬೇಕೆನ್ನುವ ಉದ್ದೇಶದಿಂದ ಜಿಲ್ಲೆಯ ಉನ್ನತ ಮಟ್ಟದ ಅಧಿಕಾರಿಗಳ ಮತ್ತು ನಾಡಿನ ಹೆಸರಾಂತ ಉಪನ್ಯಾಸಕ ಮಂಜುನಾಥ ಶಿಕಾರಿ, ಸಾಧನ ಅಕಾಡೆಮಿ ಮತ್ತು ಡಿ. ವಿ ಪಿ. ರಾಜ್ಯಾಧ್ಯಕ್ಷ ಶ್ರೀನಾಥ ಪೂಜಾರಿ ಹಾಗೂ ಶರಣಯ್ಯ ಭಂಡಾರಿಮಠ ಅವರಿಂದ ಉಪನ್ಯಾಸ ನಡೆಯಲಿದೆ ಎಂದರು.
ಈ ಕಾರ್ಯಕ್ರಮವೂ ಆ.24 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ನಡೆಯಲಿದೆ ಎಂದರು.
ಆದ್ದರಿಂದ ಜಿಲ್ಲೆಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ವಿನಂತಿಸಿಕೊಂಡರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಎಲ್ಲಾ ಅಧಿಕಾರಿ ವೃಂದ ಮತ್ತು ಸಿಬ್ಬಂದಿಗಳು ಹಾಗೂ ದಲಿತ ವಿದ್ಯಾರ್ಥಿ ಪರಿಷತ್ ಎಲ್ಲಾ ಮುಖಂಡರು, ಪದಾಧಿಕಾರಿಗಳು ಭಾಗವಹಿಸಿದ್ದರು.

Share