ಆ.28ರಂದು ಖಾಯಂ ಜನತಾ ನ್ಯಾಯಾಲಯ ವಿಶೇಷ ಅಭಿಯಾನ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 23: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ವಿಜಯಪುರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಲಬುರ್ಗಿಯ ಖಾಯಂ ಜನತಾ ನ್ಯಾಯಾಲಯ, ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ಇವರ ಸಂಯುಕ್ತಾಶ್ರಯದಲ್ಲಿ ಆ.28ರಂದು ಖಾಯಂ ಜನತಾ ನ್ಯಾಯಾಲಯ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಅಭಿಯಾನವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನೂ ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹರೀಶ ಎ. ಅವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕಲಬುರ್ಗಿ ಖಾಯಂ ಜನತಾ ನ್ಯಾಯಾಲಯದ ಅಧ್ಯಕ್ಷ ಜಿಲ್ಲಾ ನ್ಯಾಯಾಧೀಶರಾದ ಎಸ್.ಎಲ್.ಚವ್ಹಾಣ, ಹಿರಿಯ ಸಿವ್ಹಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಹಾಗರಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ, ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಡಿ.ಜಿ.ಬಿರಾದಾರ, ಕಲಬುರಗಿ ಖಾಯಂ ಜನತಾ ನ್ಯಾಯಾಲಯದ ಸದಸ್ಯರಾದ ವಿಜಯ ವಿಠ್ಠಲ, ಜಿಲ್ಲಾ ಲೀಡ್ ಬ್ಯಾಂಕಿನ ಮ್ಯಾನೇಜರ್ ಬಿ.ಸಿದ್ದಯ್ಯ ಭಾಗವಹಿಸಲಿದ್ದಾರೆ.

Share this