ನವೆಂಬರ 26 ರಂದು ಜಿಲ್ಲಾಡಳಿತದಿಂದ ಸಂವಿಧಾನ ದಿನಾಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 24 :
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನವೆಂಬರ 26 ರಂದು ಸಂವಿಧಾನ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಸಂವಿಧಾನ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಅಂದು ಬೆಳಿಗ್ಗೆ 9.30ಕ್ಕೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದವರೆಗೆ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಹಾಗೂ ಭಾರತದ ಸಂವಿಧಾನ ಪೀಠಿಕೆಯ ಮೆರವಣಿಗೆಯನ್ನು ವಿವಿಧ ಜಾನಪದ‌ ಕಲಾ ತಂಡಗಳೊಂದಿಗೆ ನಡೆಯಲಿದೆ.
ಬೆಳಿಗ್ಗೆ 10.30ಕ್ಕೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ. ಬಿ. ಪಾಟೀಲ ಅವರು ಉದ್ಘಾಟಿಸಲಿದ್ದಾರೆ.
ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅವರು ಗೌರವ ಉಪಸ್ಥಿತರಿರಲಿದ್ದು,ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ರವಿಕುಮಾರ ಎನ್, ಕರ್ನಾಟಕ ಸರ್ಕಾರದ ನವದೆಹಲಿಯ ವಿಶೇಷ ಪ್ರತಿನಿಧಿ ಹಾಗೂ ವಿಧಾನ ಪರಿಷತ್ತಿನ ಶಾಸಕ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್. ನಾಡಗೌಡ, ಸಂಸದರಾದ ರಮೇಶ ಜಿಗಜಿಣಗಿ, ಶ್ರೀಮತಿ ಸುಧಾ ಮೂರ್ತಿ ಸೇರಿದಂತೆ ಜಿಲ್ಲೆಯ ವಿವಿಧ ಶಾಸಕರು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಹೈಕೋರ್ಟಿನ ನ್ಯಾಯವಾದಿಗಳು ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಯೂನಿವರ್ಸಿಟಿಯ ಆಡಳಿತ ಮಂಡಳಿಯ ಸದಸ್ಯರಾದ ಶ್ರೀಮತಿ ರಾಜಲಕ್ಷ್ಮೀ‌ ಅಂಕಲಗಿ ವಿಶೇಷ ಉಪನ್ಯಾಸ ನೀಡಲಿದ್ದಾರೆ‌ ಎಂದು ಸಮಾಜ‌ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.

Share this