14ರಂದು ಮಧುಮೇಹ ಪಾದ ರೋಗದ ತಪಾಸಣೆ ಹಾಗೂ ಉಚಿತ ಚಿಕಿತ್ಸೆ ಶಿಬಿರ

ಸಪ್ತಸಾಗರ ವಾರ್ತೆ, ವಿಜಯಪುರ, ನ. 12:
ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ನಗರದ ಬಾಗಲಕೋಟೆ ರಸ್ತೆಯ ಬಿ.ಎಲ್.ಡಿ.ಇ ಸಂಸ್ಥೆಯ ಎ. ವಿ. ಎಸ್. ಆಯುರ್ವೇದ ಮಹಾವಿದ್ಯಾಲಯದ ನಗರ ಆರೋಗ್ಯ ಕೇಂದ್ರದಲ್ಲಿ ನವೆಂಬರ್ 14 ರಂದು ಮಧುಮೇಹ ಪಾದರೋಗದ ತಪಾಸಣೆ ಮತ್ತು ಚಿಕಿತ್ಸೆ ಉಚಿತ ಶಿಬಿರ ನಡೆಯಲಿದೆ.
ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರ ಚಿಕಿತ್ಸೆ ವಿಭಾಗ ಮತ್ತು ವಿಜಯಪುರ ಶಸ್ತ್ರ ಚಿಕಿತ್ಸಕರ ಸಂಘದ ಸಹಯೋಗದಲ್ಲಿ, ಶುಕ್ರವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಈ ಶಿಬಿರ ನಡೆಯಲಿದೆ.
ಈ ಸಂದರ್ಭದಲ್ಲಿ ರಕ್ತ, ಮೂತ್ರ ತಪಾಸಣೆ, ಮೋನೊಫಿಲಾಮೆಂಟ್, ಬಯೋಥೀಸಿಯೋಮೀಟರ್, ಹ್ಯಾರಿಸ್ ಮ್ಯಾಟ್ ಪರೀಕ್ಷೆಗಳನ್ನು ಮಾಡಲಾಗುವುದು. ತಪಾಸಣೆ ಮತ್ತು ಚಿಕಿತ್ಸೆ ಅಗತ್ಯವಿರುವ ಮಧುಮೇಹಿಗಳು ಶಿಬಿರದ ಸದುಪಯೋಗವನ್ನು ಪಡೆಯಬೇಕು ಎಂದು ಶಿಬಿರದ ಸಂಚಾಲಕ ಮತ್ತು ಶಸ್ತ್ರಚಿಕಿತ್ಸೆ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ಕೋಟೆಣ್ಣವರ ಹಾಗೂ ವಿಜಯಪುರ ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘದ ಕಾರ್ಯದರ್ಶಿ ಡಾ. ರಮಾಕಾಂತ ಬಳೂರಕರ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

Share this