ಸಪ್ತಸಾಗರ ವಾರ್ತೆ ವಿಜಯಪುರ,ಅ. 3: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲೆಯ ಎಲ್ಲ ಸಂಘ ಸಂಸ್ಥೆಗಳ ಸಹಯೋದಲ್ಲಿ ಅಕ್ಟೋಬರ್ 04ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 10:30ಕ್ಕೆ ನಡೆಯುವ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಅವರು ಉದ್ಘಾಟಿಸುವರು. ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮಿಹೆಬ್ಬಾಳ್ಕರ್ ಅವರು ಗೌರವ ಉಪಸ್ಥಿತರಿರಲಿದ್ದು, ನಗರದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ರವಿಕುಮಾರ.ಎನ್, ಕರ್ನಾಟಕ ಸರ್ಕಾರದ ನವದೆಹಲಿಯ ವಿಶೇಷ ಪ್ರತಿನಿಧಿ ಹಾಗೂ ಪರಿಷತ್ತಿನ ಶಾಸಕ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತದ ಅಧ್ಯಕ್ಷರು ಹಾಗೂ ಶಾಸಕ ಸಿ.ಎಸ್. ನಾಡಗೌಡ, ಸಂಸದರಾದ ರಮೇಶ ಜಿಗಜಿಣಗಿ, ಸುಧಾ ಮೂರ್ತಿ, ಶಾಸಕರಾದ ಯಶವಂತರಾಯಗೌಡ ಪಾಟೀಲ, ಹನಮಂತ ನಿರಾಣಿ, ಸುನೀಲಗೌಡ ಪಾಟೀಲ, ಪಿ.ಎಚ್. ಪೂಜಾರಿ, ವಿಠ್ಠಲ ಕಟಕಧೋಂಡ, ರಾಜುಗೌಡ ಪಾಟೀಲ, ಅಶೋಕ ಮನಗೂಳಿ, ಕೇಶವ ಪ್ರಸಾದ.ಎಸ್, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯ್ಕ, ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಮಹಾನಗರ ಪಾಲಿಕೆಯ ಮೇಯರ್ ಮಡಿವಾಳಪ್ಪ ಕರಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕನಾನ್ ಮುಶ್ರೀಫ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಇಲಿಯಾಸ ಬೋರಾಮಣಿ ಭಾಗವಹಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಜಿಲ್ಲಾಧಿಕಾರಿ ಡಾ. ಆನಂದ ಕೆ., ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ
ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಹಾಗರಗಿ, ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಇಂಡಿ ಉಪ ವಿಭಾಗಾಧಿಕಾರಿ ಅನುರಾಧಾ ವಸ್ತ್ರದ ಅವರು ಪಾಲ್ಗೊಳ್ಳಲಿದ್ದಾರೆ.
ಕಾರ್ಯಕ್ರಮದಲ್ಲಿ ಎಸ್.ಎನ್. ಬಸವರಡ್ಡಿ ಅವರು ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಅ.4ರಂದು ವಿಶ್ವ ನಾಗರಿಕರ ದಿನಾಚರಣೆ


