ಜಿಬಿಎವ್ಯಾಪ್ತಿಯನೂತನಪಾಲಿಕೆಕಚೇರಿಗಳನಿರ್ಮಾಣಕ್ಕೆನ. 1 ರಂದುಭೂಮಿಪೂಜೆ: ಡಿಸಿಎಂಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ,ಬೆಂಗಳೂರು, ಸೆ.3:“ಐದು ಪಾಲಿಕೆಗಳ ನೂತನ ಕಚೇರಿಗೆ ಭೂಮಿಪೂಜೆಯನ್ನು ನವೆಂಬರ್ 1 ರಂದು ನೆರವೇರಿಸಲಾಗುವುದು. ಎಲ್ಲಾ ಪಾಲಿಕೆಗಳ ಗಡಿ ಭಾಗಗಳಲ್ಲಿ ಗಡಿ ಗೋಪುರಗಳನ್ನು ನಿರ್ಮಾಣ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಚೇರಿಯ ನಾಮಫಲಕ ಅನಾವರಣಗೊಳಿಸಿದ ನಂತರ ಶಿವಕುಮಾರ್ ಅವರು ಬುಧವಾರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು.“ಪ್ರತಿ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆಗಳ ಸುಧಾರಣೆ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ 500 ಮಂದಿ ಎಂಜಿನಿಯರ್ ಗಳಿಗೆ ಅನುಮೋದನೆ ನೀಡಲಾಗಿದೆ. ಈ ಹಿಂದೆ 198 ವಾರ್ಡ್ ಗಳಿದ್ದವು….

Read More

ಕ್ರೀಡಾ ಕ್ಷೇತ್ರದಲ್ಲಿ ಸಾಧಕರಾಗಿ ಜಿಲ್ಲೆಯ ಕೀರ್ತಿ ಹೆಚ್ಚಿಸಿ -ಸಂಗಮೇಶ ಬಬಲೇಶ್ವರ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ.3: ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಹೆಚ್ಚು ಹೆಚ್ಚು ಪ್ರಶಸ್ತಿ ಪಡೆದು ಜಿಲ್ಲೆಗೆ ಕೀರ್ತಿ ತರಬೇಕು ಎಂದು ಧಾರವಾಡದ ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ನಗರದ ಡಾ. ಬಿ.ಆರ್.ಅಂಬೆಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ, ಮಾತನಾಡಿದ ಅವರು, ಪಠ್ಯದೊಂದಿಗೆ ಕ್ರೀಡೆಗಳಲ್ಲಿಯೂ ಭಾಗಿಯಾಗಿ ಸತತ ಪರಿಶ್ರಮದಿಂದ ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ…

Read More

ಪೌರಕಾರ್ಮಿಕರಿಗೆಉಚಿತಮಧುಮೇಹಚಿಕಿತ್ಸೆ: ಡಾ. ಬಾಬುರಾಜೇಂದ್ರನಾಯಕಘೋಷಣೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 3 : ಜಿಲ್ಲೆಯ ಮನಗೂಳಿ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣೆ ಶಿಬಿರವು ಯಶಸ್ವಿಯಾಗಿ ನೆರವೇರಿತು.ಈ ಶಿಬಿರವನ್ನು ಶ್ರೀ ತುಳಸಿಗಿರೀಶ ಫೌಂಡೇಶನ್‌ ಸಂಸ್ಥಾಪಕ ಅಧ್ಯಕ್ಷ, ಖ್ಯಾತ ಮಧುಮೇಹ ತಜ್ಞ ಡಾ. ಬಾಬುರಾಜೇಂದ್ರ ನಾಯಿಕ ಹಾಗೂ ಭೀಮವಾದ ದಲಿತ ಸಂಘರ್ಷ ಸಮಿತಿಯ ತಾಲೂಕಾಧ್ಯಕ್ಷ ಮಹೇಶ ಪಿರಗಾ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಡಿಎಸ್ ಧುರೀಣ ಸೋಮನಗೌಡ ಪಾಟೀಲ ವಹಿಸಿಕೊಂಡಿದ್ದರು.ಕಾರ್ಯಕ್ರಮದ ಉದ್ಘಾಟನೆಯನ್ನು ವಿಶ್ವನಾಥಗೌಡ ಪಾಟೀಲ ನೆರವೇರಿಸಿದವರು. ಡಾ. ಬಾಬುರಾಜೇಂದ್ರ…

Read More

ಯುಕೆಪಿಹಂತ-3 ಯೋಜನೆಸಾಕಾರಕ್ಕೆಬದ್ಧ, ಎರಡು- ಮೂರುದಿನಗಳಲ್ಲಿಅಂತಿಮತೀರ್ಮಾನ: ಡಿಸಿಎಂಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ,ಬೆಂಗಳೂರು, ಸೆ.3:“ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ರ ಅನುಷ್ಠಾನಕ್ಕೆ ಕೇಂದ್ರ ಜಲಶಕ್ತಿ ಸಚಿವರಲ್ಲಿ ಮನವಿ ಮಾಡಿದ್ದೇನೆ. ಅವರು ಸಹ ಈ ಬಗ್ಗೆ ಶೀಘ್ರದಲ್ಲೇ ಸಭೆ ನಿಗದಿ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ. ನಮ್ಮ ಸರ್ಕಾರ ಈ ಯೋಜನೆ ಸಾಕಾರಕ್ಕೆ ಬದ್ಧವಾಗಿದೆ. ಎರಡು- ಮೂರು ದಿನಗಳಲ್ಲಿ ಅಂತಿಮ ತೀರ್ಮಾನ ಮಾಡಲಾಗುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ನಡೆದ ಸಭೆಯ ನಂತರ ಜಲಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಅವರು…

Read More

7ನೇ ಕರ್ನಾಟಕ ರಾಜ್ಯ ರೋಪ್ ಸ್ಕಿಪ್ಪಿಂಗ್ ಚಾಂಪಿಯನ್‌ಶಿಪ್ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 3:ಬಬಲೇಶ್ವರ ತಾಲೂಕಿನ ಕೃಷ್ಣಾನಗರದ ದಿ. ಶ್ರೀ ಬಿ.ಟಿ. ಪಾಟೀಲ್ ಮೆಮೋರಿಯಲ್ ನಂದಿ ಅಂತರರಾಷ್ಟ್ರೀಯ ವಸತಿ ಶಾಲೆಯು ರೋಪ ಸ್ಕಿಪ್ಪಿಂಗ್ ಅಸೋಸಿಯೇಶನ್ ಆಫ್ ಕರ್ನಾಟಕ ಇವರ ಸಹಯೋಗದೊಂದಿಗೆ ಇತೀಚೆಗೆ 7ನೇ ಕರ್ನಾಟಕ ರಾಜ್ಯ ರೋಪ್ ಸ್ಕಿಪ್ಪಿಂಗ್ ಚಾಂಪಿಯನ್‌ಶಿಪ್ ಕ್ರೀಡಾಕೂಟವನ್ನು ನಂದಿ ಅಂತರರಾಷ್ಟ್ರೀಯ ವಸತಿ ಶಾಲೆಯ ರೋಪ ಸ್ಕಿಪ್ಪಿಂಗ್ ತರಬೇತುದಾರ ವಿಶ್ವನಾಥ ಸಿದ್ದಾಪೂರ ನೇತೃತ್ವದಲ್ಲಿ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯ ಕೆ.ಎಚ್. ಪಾಟೀಲ ಸಭಾಭವನದಲ್ಲಿ ಏರ್ಪಡಿಸಿತ್ತು.ವಿವಿಧ ಜಿಲ್ಲೆಗಳಿಂದ ಸುಮಾರು 210 ವಿದ್ಯಾರ್ಥಿಗಳು ರೋಪ ಸ್ಕಿಪ್ಪಿಂಗ್…

Read More

ಯುಕೆಪಿ ಮೂರನೇ ಹಂತದ ಯೋಜನೆ ಕುರಿತು ಡಿಸಿಎಂ ಡಿಕೆಶಿ ಚರ್ಚೆ

ಸಪ್ತಸಾಗರ ವಾರ್ತೆ, ಬೆಂಗಳೂರು, ಸೆ. 3:ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ, ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ ಅವರು ಮಂತ್ರಿಗಳು ಹಾಗೂ ಅಧಿಕಾರಿಗಳೊಂದಿಗೆ ವಿಧಾನಸೌಧದಲ್ಲಿ ಬುಧವಾರ ಸಭೆ ನಡೆಸಿದರು.ಭೂಸ್ವಾಧೀನ, ಪುನರ್ವಸತಿ, ಪುನರ್‌ನಿರ್ಮಾಣ, ಭೂಪರಿಹಾರ ಹಾಗೂ ವಿವಿಧ ನ್ಯಾಯಾಲಯಗಳಲ್ಲಿ ಹೆಚ್ಚುವರಿ ಭೂ ಪರಿಹಾರ ಕೋರಿ ದಾಖಲಿಸಿರುವ ಪ್ರಕರಣಗಳ ಕುರಿತು ಸಭೆಯಲ್ಲಿ ಸುಧೀರ್ಘವಾಗಿ ಚರ್ಚಿಸಲಾಯಿತು.ಸಚಿವರಾದ ಪ್ರಿಯಾಂಕ್ ಖರ್ಗೆ, ಬೋಸರಾಜ್, ಶಿವಾನಂದ ಪಾಟೀಲ, ಆರ್.ಬಿ. ತಿಮ್ಮಾಪುರ, ದರ್ಶನಪೂರ್, ಡಿ. ಸುಧಾಕರ್ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.

Read More

ಗಣಪ ಹೋದ, ಜೋಕುಮಾರ ಬಂದ…

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 3: ‘ಅಡ್ಡಡ್ಡ ಮಳಿ ಬಂದು..ದೊಡ್ಡದೊಡ್ಡ ಕೆರೆ ತುಂಬಿ..‌ಗೊಡ್ಡುಗಳೆಲ್ಲ ಹೈನಾಗಿ..ಜೋಕುಮಾರ ಮಳಿ ತಂದ’..ಎಂಬ ಜೋಕುಮಾರನ ಬಗ್ಗೆ ಮಹಿಳೆಯರು ಪದಗಳ ಮೂಲಕ ಹಾಡುತ್ತಾ, ಉತ್ತರ ಕರ್ನಾಟಕದಲ್ಲಿ ಗಣಪತಿ ಹೋದ ಮಾರನೇ ದಿನ ಜನ್ಮ ತಾಳುವ ಜೋಕುಮಾರ ರೈತರ ಪಾಲಿಗೆ ವರವಾಗಿ ಪರಿಣಮಿಸಿದ್ದಾನೆ. ತಾಲೂಕಿನ ನಾಗಠಾಣ ಗ್ರಾಮದಲ್ಲಿ ಬಹಳ ವರ್ಷಗಳಿಂದ ಈ ಜೋಕುಮಾರನ ಹಬ್ಬ ಚಾಲ್ತಿಯಲ್ಲಿದೆ.ಮಳೆಗಾಗಿ ಜೋಕುಮಾರನನ್ನು ನೆನೆದು ಪ್ರಾರ್ಥಿಸುವ ಮಹಿಳೆಯರು ಜೋಕುಮಾರ ಮೂರ್ತಿಯನ್ನು ಏಳು ದಿನಗಳ ಕಾಲ ಗ್ರಾಮದಲ್ಲಿನ ಮನೆ ಮನೆಗೆ ಹೊತ್ತು ಸಂಚರಿಸುತ್ತಾರೆ….

Read More

ದೇವರನಿಂಬರಗಿಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಮೇಲೆ ಗುಂಡಿನ ದಾಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 3:ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.ಭೀಮನಗೌಡ ಬಿರಾದಾರ ಎಂಬುವರ ಮೇಲೆ ನಾಲ್ವರು ಮುಸುಕಧಾರಿ ದುಷ್ಕರ್ಮಿಗಳು ಮೂರು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ.ಬಿರಾದಾರನಿಗೆ ತಲೆ ಹಾಗೂ ಎದೆಗೆ ಗುಂಡು ತಗುಲಿದ್ದು, ಈತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಗಾಯಾಳು ಬಿರಾದಾರ ಈತನು ಭೀಮಾತೀರದ ಮಹಾದೇವ ಬೈರಗೊಂಡ ಪರಮಾಪ್ತ ಹಾಗೂ ಬಲಗೈ ಭಂಟನಾಗಿದ್ದ ವ್ಯಕ್ತಿ.ಬಿರಾದಾರ ದೇವರ ನಿಂಬರಗಿ ಗ್ರಾಮದ ಕಟಿಂಗ್ ಶಾಪ್ ನಲ್ಲಿ ಕಟಿಂಗ್…

Read More

ಗಣೇಶ ಮೂರ್ತಿ ವಿಸರ್ಜನೆ ವೇಳೆ ವಿದ್ಯುತ್ ತಗುಲಿ ಯುವಕ ಸಾವು, ಇಬ್ಬರಿಗೆ ಗಾಯ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 3:ಏಳನೇ ದಿನದ ಗಣೇಶ ಮೂರ್ತಿ ವಿಸರ್ಜನೆ ವೇಳೆ ಮಂಗಳವಾರ ರಾತ್ರಿ ವಿದ್ಯುತ್ ತಗುಲಿ ಯುವಕನೊಬ್ಬ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಅವಘಡ ನಗರದ ಗಾಂಧಿ ವೃತ್ತದ ಬಳಿ ಟಾಂಗಾ ನಿಲುಗಡೆ ಸ್ಥಳದಲ್ಲಿ ಸಂಭವಿಸಿದೆ.ನಗರದ ಡೋಬಲೆ ಗಲ್ಲಿ ನಿವಾಸಿಶುಭಂ ಸಂಕಳ (21) ಮೃತ ಯುವಕ.ಇದೇ ವೇಳೆ ಪ್ರಭಾಕರ ಜಂಗಲೆ ಹಾಗೂ ಲಖನ್ ಚವ್ಹಾಣ ಎಂಬ ಯುವಕರು ಗಾಯಗೊಂಡಿದ್ದು, ಈ ಇಬ್ಬರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.ಗಣೇಶ ಮೂರ್ತಿ ಮೆರವಣಿಗೆ ಸಾಗಲು ವಿದ್ಯುತ್ ತಂತಿ ಮೇಲೆತ್ತುವ ವೇಳೆ…

Read More

ದಿವಂಗತ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಿ

ಸಪ್ತಸಾಗರ ವಾರ್ತೆ, ಬೆಂಗಳೂರು, ಸೆ. 2: ಕನ್ನಡ ಚಲನಚಿತ್ರ ರಂಗದ ಹಿರಿಯ ನಟಿಯರಾದ ಜಯಮಾಲ, ಶ್ರತಿ ಮತ್ತು ಮಾಳವಿಕ ಅವಿನಾಶ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ದಿವಂಗತ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಸಲ್ಲಿಸಿದರು.ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ. ಸರೋಜಾದೇವಿ ಅವರ ಹೆಸರನ್ನು ಅವರು ವಾಸವಿದ್ದ ಮಲ್ಲೇಶ್ವರದ ನಾಮಕರಣ ಮಾಡುವಂತೆಯೂ ಮನವಿ ಮಾಡಿದರು.

Read More