ನದಿಜೋಡಣೆಯೋಜನೆಯಲ್ಲಿರಾಜ್ಯಕ್ಕೆಕನಿಷ್ಠ 40-45 ಟಿಎಂಸಿನೀರುನಿಗದಿಮಾಡಿ : ಡಿಸಿಎಂಡಿ.ಕೆ. ಶಿವಕುಮಾರ್ಮನವಿ
ಸಪ್ತಸಾಗರ ವಾರ್ತೆ ನವದೆಹಲಿ, ಡಿ.24:“ನದಿ ಜೋಡಣೆ ಯೋಜನೆಯಲ್ಲಿ ನಮ್ಮ ರಾಜ್ಯಕ್ಕೆ ಕನಿಷ್ಠ 40-45 ಟಿಎಂಸಿ ನೀರನ್ನು ನೀಡಬೇಕು. ಗೋದಾವರಿ- ಕಾವೇರಿ ನದಿ ಜೋಡಣೆ ಯೋಜನೆಯಲ್ಲಿ ಹೆಚ್ಚುವರಿ 5 ಟಿಎಂಸಿ ನೀರನ್ನು ಭೀಮಾ ನದಿ ಪ್ರದೇಶಕ್ಕೆ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ದೆಹಲಿಯ ಕರ್ನಾಟಕ ಭವನದಲ್ಲಿ ಬುಧವಾರ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಶಿವಕುಮಾರ್ ಅವರು ಮಾತನಾಡಿದರು.“ನದಿ ಜೋಡಣೆ ವಿಚಾರವಾಗಿ ಕೇಂದ್ರ ಜಲ ಶಕ್ತಿ ಸಚಿವರ ನೇತೃತ್ವದಲ್ಲಿ ರಾಷ್ಟ್ರೀಯ ಜಲ ಅಭಿವೃದ್ಧಿ…


