ಪ್ರವಾಸಿಗರ ಸಂಖ್ಯೆ ಹೆಚ್ಚಿದರೆ ಉದ್ಯೋಗಾವಕಾಶವೂ ಹೆಚ್ಚಳ— ಎಡಿಜಿಪಿ ಆರ್. ಹಿತೇಂದ್ರ

ವಿಜಯಪುರದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 26:ವಿಜಯಪುರದ ಐತಿಹಾಸಿಕ ಸ್ಮಾರಕಗಳನ್ನು ವಿಶ್ವಮಟ್ಟದಲ್ಲಿ ಪ್ರವಾಸಿ ಆಕರ್ಷಣೆಯನ್ನಾಗಿ ರೂಪಿಸಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರನ್ನು ಸೆಳೆಯುವುದರಿಂದ ಜಿಲ್ಲೆಯ ಆರ್ಥಿಕತೆಗೆ ಮತ್ತಷ್ಟು ಬಲ ದೊರೆಯುವುದರ ಜೊತೆಗೆ ಸ್ಥಳೀಯರಿಗೆ ದೊಡ್ಡ ಪ್ರಮಾಣದಲ್ಲಿ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಆರ್. ಹಿತೇಂದ್ರ ಹೇಳಿದರು.ವಿಶ್ವ ಪ್ರವಾಸೋದ್ಯಮ ದಿನಾಚರಣೆ-2026ರ ಅಂಗವಾಗಿ ‘ಡಿಜಿಟಲ್ ಕಾರ್ಯಸೂಚಿ ಮತ್ತು ಕೃತಕ ಬುದ್ಧಿಮತ್ತೆ ಬಳಸಿ ಪ್ರವಾಸೋದ್ಯಮದ ಮರುಸೃಷ್ಟಿ’ ಎಂಬ ಧ್ಯೇಯವಾಕ್ಯದೊಂದಿಗೆ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಸೇರಿದಂತೆ…

Read More

ದಲಿತಪರ ಸರ್ಕಾರದಲ್ಲಿ ದಲಿತರ ಮೇಲೆ ದೌರ್ಜನ್ಯ ಹೆಚ್ಚಳ: ಶ್ರೀಶೈಲ ಛಲವಾದಿ ಆಕ್ರೋಶ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 26:ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ ಹಾಗೂ ಕೊಲೆ ಪ್ರಕರಣಗಳು ನಿರಂತರವಾಗಿ ಹೆಚ್ಚಾಗುತ್ತಿದ್ದು, ದಲಿತಪರ ಸರ್ಕಾರ ಎಂದು ಹೇಳಿಕೊಳ್ಳುತ್ತಿರುವ ಕಾಂಗ್ರೆಸ್ ಸರ್ಕಾರ ದೌರ್ಜನ್ಯ ಎಸಗುವವರಿಗೆ ಮುಕ್ತ ಅವಕಾಶ ನೀಡಿದೆಯೇ ಎಂಬ ಅನುಮಾನ ಮೂಡುತ್ತಿದೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಶ್ರೀಶೈಲ ಛಲವಾದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಕಳೆದ ಎರಡೂವರೆ ವರ್ಷಗಳಲ್ಲಿ ರಾಜ್ಯದಲ್ಲಿ 2 ಸಾವಿರಕ್ಕೂ ಅಧಿಕ ದಲಿತ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ ಎಂದು…

Read More

ಬರದ ಹೊಡೆತಕ್ಕೆ ರೈತರು ಕಂಗಾಲು: ತಕ್ಷಣ ಬರಪೀಡಿತ ಪ್ರದೇಶ ಘೋಷಿಸಿ

ಕುಡಿಯುವ ನೀರು, ಮೇವು, ಬೆಳೆಹಾನಿ ಪರಿಹಾರಕ್ಕೆ ಜೆಡಿಎಸ್ ಆಗ್ರಹ ಸಪ್ತಸಾಗರ ವಾರ್ತ,ವಿಜಯಪುರ, ಸೆ. 25: ರಾಜ್ಯದಲ್ಲಿ ತಲೆದೋರಿರುವ ತೀವ್ರ ಬರ ಪರಿಸ್ಥಿತಿಯಿಂದ ರೈತರು ಹಾಗೂ ಗ್ರಾಮೀಣ ಜನತೆ ಸಂಕಷ್ಟಕ್ಕೆ ಸಿಲುಕಿದ್ದು, ಬರದ ತೀವ್ರತೆ ಹೆಚ್ಚಿರುವ ತಾಲೂಕು ಹಾಗೂ ಗ್ರಾಮಗಳನ್ನು ಕೂಡಲೇ ಬರಪೀಡಿತ ಪ್ರದೇಶಗಳೆಂದು ಘೋಷಿಸಿ ಸಮರೋಪಾದಿಯಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ವಿಜಯಪುರ ನಗರ ಜನತಾದಳ (ಜಾತ್ಯತೀತ) ಆಗ್ರಹಿಸಿದೆ.ಈ ಕುರಿತು ಜೆಡಿಎಸ್ ನಗರ ಘಟಕದ ಅಧ್ಯಕ್ಷ ಪ್ರಶಾಂತ ಎಸ್. ಕಿಣಗಿ ಅವರ ನೇತೃತ್ವದಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು…

Read More

ಬಿ.ಎಲ್.ಡಿ ಸೌಹಾರ್ದ ಸಹಕಾರಿ ಸಂಘಕ್ಕೆ ₹7.17 ಕೋಟಿ ನಿವ್ವಳ ಲಾಭ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ.25: ಶಿಸ್ತುಬದ್ಧ ಆರ್ಥಿಕ ಕ್ರಮಗಳಿಂದಾಗಿ ಬಿಜಾಪುರ ಲಿಂಗಾಯತ ಡೆವಲಪ್‌ಮೆಂಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ (ಬಿ.ಎಲ್.ಡಿ ಸೌಹಾರ್ದ) ಯಶಸ್ವಿಯಾಗಿ ಮುನ್ನಡೆಯುತ್ತಿದೆ ಎಂದು ಸಂಘದ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು.ನಗರದಲ್ಲಿ ಶುಕ್ರವಾರ ನಡೆದ ಬಿ.ಎಲ್.ಡಿ ಸೌಹಾರ್ದದ 4ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, 2025-26ನೇ ಆರ್ಥಿಕ ವರ್ಷದಲ್ಲಿ ಸಂಘ ಗಮನಾರ್ಹ ಆರ್ಥಿಕ ಸಾಧನೆ ಮಾಡಿದೆ. ಸಂಘದ ಒಟ್ಟು ವ್ಯವಹಾರ ₹760 ಕೋಟಿ ತಲುಪಿದ್ದು, ₹7.17 ಕೋಟಿ ನಿವ್ವಳ ಲಾಭ…

Read More

ಪ್ರತಾಪ್ ಸಿಂಹ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 25:ದಲಿತ ಸಮುದಾಯ ಹಾಗೂ ದಲಿತ ಸಂಘರ್ಷ ಸಮಿತಿಯ ಕುರಿತು ಮಾಜಿ ಸಂಸದ ಪ್ರತಾಪ್ ಸಿಂಹ ಅವರು ನೀಡಿರುವ ಹೇಳಿಕೆಗಳನ್ನು ಖಂಡಿಸಿರುವ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದೆ.ಸಂಘಟನೆಯ ಮುಖಂಡ ಸಿದ್ದು ರಾಯಣ್ಣವರ ಅವರು ಪ್ರಕಟಣೆಯಲ್ಲಿ, ಡಾ. ಬಿ.ಆರ್. ಅಂಬೇಡ್ಕರ್ ಅವರ ಸಾಮಾಜಿಕ ನ್ಯಾಯದ ವಿಚಾರಧಾರೆ ಹಿನ್ನೆಲೆಯಲ್ಲಿ ದಲಿತ ಸಂಘರ್ಷ ಸಮಿತಿ ರಾಜ್ಯದಲ್ಲಿ ದಲಿತರ ಹಕ್ಕುಗಳಿಗಾಗಿ ಹಲವು ದಶಕಗಳಿಂದ…

Read More

ದಸರಾ ಪುಸ್ತಕ ಮೇಳದಲ್ಲಿ ಹೊಸ ಪುಸ್ತಕಗಳ ಬಿಡುಗಡೆಗೆ ನೋಂದಣಿ : ಅ.5 ಅರ್ಜಿ ಸಲ್ಲಿಕೆಗೆ ಕೊನೆಯ ದಿನ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ.25 :ಮೈಸೂರು ದಸರಾ ಉತ್ಸವ-2026ರ ಅಂಗವಾಗಿ ಅಕ್ಟೋಬರ್ 11ರಿಂದ 20ರವರೆಗೆ ಮೈಸೂರಿನ ಹಳೆ ಜಿಲ್ಲಾಧಿಕಾರಿ ಕಚೇರಿ ಎದುರಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಆಯೋಜಿಸಲಾಗಿರುವ ಮೈಸೂರು ದಸರಾ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳ-2026ರಲ್ಲಿ ಹೊಸ ಪುಸ್ತಕಗಳ ಬಿಡುಗಡೆಗೆ ಅವಕಾಶ ಕಲ್ಪಿಸಲಾಗಿದ್ದು, ಆಸಕ್ತ ಲೇಖಕರು ಹಾಗೂ ಪ್ರಕಾಶಕರು ನೋಂದಾಯಿಸಿಕೊಳ್ಳುವಂತೆ ಕನ್ನಡ ಪುಸ್ತಕ ಪ್ರಾಧಿಕಾರ ತಿಳಿಸಿದೆ.ಪುಸ್ತಕ ಮೇಳದ ಸಂದರ್ಭದಲ್ಲಿ ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿಚಾರ ಸಂಕಿರಣ ಸೇರಿದಂತೆ ವಿವಿಧ ಸಾಹಿತ್ಯಕ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದ್ದು, 2026ರಲ್ಲಿ…

Read More

ಸೆ.30ರೊಳಗೆ e-KYC ಪೂರ್ಣಗೊಳಿಸಿ: ಮಹಾಪೌರ ಮಡಿವಾಳಪ್ಪ ಕರಡಿ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ.25: ನಗರದ ಎಲ್ಲ ಪಡಿತರ ಚೀಟಿದಾರರ ಬಾಕಿ ಇರುವ e-KYC ಪ್ರಕ್ರಿಯೆಯನ್ನು ಸೆ.30ರೊಳಗೆ ಪೂರ್ಣಗೊಳಿಸಬೇಕು. ಯಾವುದೇ ಗ್ರಾಹಕರು e-KYCಯಿಂದ ಹೊರಗುಳಿಯದಂತೆ ಕ್ರಮ ವಹಿಸಬೇಕು ಹಾಗೂ ಸರ್ಕಾರ ನಿಗದಿಪಡಿಸಿದ ಪ್ರಮಾಣದಲ್ಲಿ, ಸರಿಯಾದ ತೂಕದೊಂದಿಗೆ ಪಡಿತರ ವಿತರಿಸಬೇಕು ಎಂದು ಮಹಾಪೌರ ಮಡಿವಾಳಪ್ಪ ಕರಡಿ ಅವರು ನ್ಯಾಯಬೆಲೆ ಅಂಗಡಿಕಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ವಿಜಯಪುರ ಮಹಾನಗರ ಪಾಲಿಕೆಯಲ್ಲಿ ನಡೆದ ನಗರದ ನ್ಯಾಯಬೆಲೆ ಅಂಗಡಿಕಾರರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಪ್ರತಿಯೊಬ್ಬ ಪಡಿತರ ಚೀಟಿದಾರರನ್ನು ಸಂಪರ್ಕಿಸಿ ಬಾಕಿ ಇರುವ e-KYC…

Read More

ಸ್ವಾಮಿ ರಾಮಾನಂದ ತೀರ್ಥರ ಜಯಂತಿ ಸರಕಾರದಿಂದ ಆಚರಿಸಲು ಆಗ್ರಹ– ವಿನೋದ ಖೇಡ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 24:ಹೈದರಾಬಾದ್ ವಿಮೋಚನಾ ಚಳವಳಿಯ ಮಹಾನಾಯಕ, ರಾಷ್ಟ್ರವೀರ ಸ್ವಾಮಿ ರಾಮಾನಂದ ತೀರ್ಥರ ಜನ್ಮದಿನವಾದ ಅಕ್ಟೋಬರ್ 3ರಂದು ರಾಜ್ಯಾದ್ಯಂತ ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಸರ್ಕಾರದ ವತಿಯಿಂದ ಜಯಂತಿ ಆಚರಿಸಬೇಕು ಎಂದು ಆಗ್ರಹಿಸಿ ವಿಜಯಪುರ ಜಿಲ್ಲಾ ಸಂಘ-ಸಂಸ್ಥೆಗಳ ಮುಖಂಡರು ಜಿಲ್ಲಾಧಿಕಾರಿ ಕೆ. ಆನಂದ ಅವರ ಮೂಲಕ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.ಸಂಘ-ಸಂಸ್ಥೆಗಳ ಒಕ್ಕೂಟದ ಮುಖಂಡ ವಿನೋದ ಖೇಡ ಮಾತನಾಡಿ, ಸಿಂದಗಿ ತಾಲೂಕಿನವರಾದ ಸ್ವಾಮಿ ರಾಮಾನಂದ ತೀರ್ಥರು ಭಾರತದ…

Read More

NIDJAM-2026: ವಿಜಯಪುರ ಜಿಲ್ಲಾ ಅಥ್ಲೆಟಿಕ್ಸ್ ತಂಡಕ್ಕೆ ಆಯ್ಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 23:20ನೇ ರಾಷ್ಟ್ರೀಯ ಅಂತರ ಜಿಲ್ಲಾ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ (NIDJAM–2026)ಕ್ಕೆ ವಿಜಯಪುರ ಜಿಲ್ಲಾ ಅಥ್ಲೆಟಿಕ್ಸ್ ತಂಡದ ಆಯ್ಕೆ ಪ್ರಕ್ರಿಯೆ ಸೆ. 27ರಂದು ನಡೆಯಲಿದೆ.ವಿಜಯಪುರ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ (BDAA) ವತಿಯಿಂದ ಭಾನುವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯ್ಕೆ ಪರೀಕ್ಷೆ ನಡೆಯಲಿದೆ.14 ಮತ್ತು 16 ವರ್ಷ ವಯೋಮಿತಿಯ ಬಾಲಕ–ಬಾಲಕಿಯರು ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು. ಆಯ್ಕೆಯಾದ ಕ್ರೀಡಾಪಟುಗಳು ನ.14ರಿಂದ 16ರವರೆಗೆ ತೆಲಂಗಾಣದ ಹೈದರಾಬಾದ್‌ನ ವಾಕ್ಸನ್ ವಿಶ್ವವಿದ್ಯಾಲಯ,…

Read More

ಪೌರಕಾರ್ಮಿಕರ ಆರೋಗ್ಯ, ಮಕ್ಕಳ ಶಿಕ್ಷಣಕ್ಕೆ ಆದ್ಯತೆ: ಮೇಯರ್ ಕರಡಿ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 23:ನಗರದ ಸ್ವಚ್ಛತೆ ಹಾಗೂ ನೈರ್ಮಲ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ ಅತ್ಯಂತ ಮಹತ್ವದ್ದಾಗಿದ್ದು, ಅವರು ನಗರದ ಬೆನ್ನೆಲುಬಾಗಿದ್ದಾರೆ ಎಂದು ಮಹಾನಗರ ಪಾಲಿಕೆ ಮೇಯರ್ ಮಡಿವಾಳಪ್ಪ ಕರಡಿ ಹೇಳಿದರು.ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಗರಾಭಿವೃದ್ಧಿ ಇಲಾಖೆ, ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಸಹಯೋಗದಲ್ಲಿ ಆಯೋಜಿಸಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಕೋವಿಡ್‌ ಸೇರಿದಂತೆ ಸಂಕಷ್ಟದ ಸಂದರ್ಭದಲ್ಲಿಯೂ ಪೌರಕಾರ್ಮಿಕರು ಕರ್ತವ್ಯ ನಿರ್ವಹಿಸಿದ್ದು, ಅವರ ಸೇವೆಯನ್ನು ಗೌರವಿಸಬೇಕು. ಕರ್ತವ್ಯ ನಿರ್ವಹಿಸುವಾಗ ಸಮವಸ್ತ್ರ, ಮಾಸ್ಕ್…

Read More