ತುಂಬಿದ ಇಬ್ರಾಹಿಂಪುರ ಐತಿಹಾಸಿಕ ‘ಹಿರೇಬಾವಿ’ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಗ್ರಹಣ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 12 : ಇದು ವಿಜಯಪುರ ನಗರದ ಮನಗೂಳಿ- ಬಸವನ ಬಾಗೇವಾಡಿ ರಸ್ತೆ ಪಕ್ಕದ ಇಬ್ರಾಹಿಂಪುರ ಬಡಾವಣೆಯಲ್ಲಿರುವ ಪ್ರಾಚೀನವಾದ ಐತಿಹಾಸಿಕ ಹಿರೇಬಾವಿ. ಇದನ್ನು ವಿಜಯಪುರದ ಎರಡನೇ ‘ತಾಜ್ ಬಾವಡಿ’ ಎಂದರೂ ತಪ್ಪಾಗಲಿಕ್ಕಿಲ್ಲ.ಇಬ್ರಾಹಿಂಪುರದ ಹಿರೇಬಾವಿ ನೋಡಿದ ಯಾರಿಗೇ ಆಗಲಿ ಥಟ್ಟನೆ ‘ತಾಜ್ ಬಾವಡಿ’ ಅವರ ನೆನಪಿಗೆ ಬರದೇ ಇರದು.ತಾಜ್ ಬಾವಡಿಯಂತೆಯೇ ವಿಶಾಲವಾಗಿದೆ ಆದಿಲಶಾಹಿ ಕಾಲದ ಈ ಹಿರೇಬಾವಿ. ನೂರಕ್ಕೂ ಅಧಿಕ ಕಟ್ಟೆಗಳು, ಹಲವು ಕಮಾನುಗಳಿರುವ ಅದ್ಭುತ, ಸುಸಜ್ಜಿತ ಹಾಗೂ ಅತ್ಯಾಕರ್ಷಕ ಕಟ್ಟಡವನ್ನು ಈ ಹಿರೇಬಾವಿ ಹೊಂದಿದೆ.ಈ…

Read More

ಗೋಧಿ ದಾಸ್ತಾನು ಮಿತಿ ನಿಗದಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 11: ಕೇಂದ್ರ ಸರ್ಕಾರದ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ನಿರ್ದೇಶಕರ ಜೂನ್ 2ರ ಪತ್ರದ ಮೇರೆಗೆ ಮುಕ್ತ ಮಾರುಕಟ್ಟೆಯ ಸಗಟುದಾರರಿಗೆ 3 ಸಾವಿರ ಮೆಟ್ರಿಕ್ ಟನ್, ರಿಟೇಲರಗಳಿಗೆ 10 ಸಾವಿರ ಮೆಟ್ರಿಕ್ ಟನ್ ಹಾಗೂ ಉತ್ಪಾದಕರಿಗೆ ಅವರ ಉತ್ಪಾದನಾ ಸಾಮರ್ಥ್ಯದ ಶೇ. 70ರಷ್ಟು ಗೋಧಿ ದಾಸ್ತಾನು ಮಿತಿಯನ್ನು 31-03-2026ರವರೆಗೆ ನಿಗದಿ ಪಡಿಸಲಾಗಿದೆ.ಜಿಲ್ಲೆಯ ಗೋಧಿ ಸಗಟು ವ್ಯಾಪಾರಸ್ಥರು, ರಿಟೇಲರ್ಸ್ ಹಾಗೂ ಗೋಧಿ ಉತ್ಪಾದನೆ ಮಾಡುವವರು ತಮ್ಮಲಿರುವ ಗೋಧಿ ದಾಸ್ತಾನಿನ ಮಾಹಿತಿಯನ್ನು ತುರ್ತಾಗಿ…

Read More

ಇಬ್ರಾಹಿಂಪುರ ಸುಸಜ್ಜಿತ ರೈಲು ನಿಲ್ದಾಣ ಕಟ್ಟಡಕ್ಕೆ 1.50 ಕೋಟಿ ಮಂಜೂರು

ಸಪ್ತಸಾಗರ ವಾರ್ತೆ,ವಿಜಯಪುರ,ಆ. 11 : ನಗರದಲ್ಲಿರುವ ಇಬ್ರಾಹಿಂಪೂರ ರೈಲ್ವೆ ನಿಲ್ದಾಣದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕಾಗಿ ಅಂದಾಜು 1.50 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಶೀಘ್ರದಲ್ಲಿಯೇ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಸಂಸದ ರಮೇಶ ಜಿಗಜಿಣಗಿ ಮಾಹಿತಿ ನೀಡಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ವಿಜಯಪುರ ನಗರದ ಇಬ್ರಾಹಿಂಪೂರ ಭಾಗದ ಜನತೆಯ ಅನುಕೂಲಕ್ಕಾಗಿ ರೈಲ್ವೆ ನಿಲ್ದಾಣ ಇರಬೇಕು ಎನ್ನುವ ಕಾರಣಕ್ಕೆ ಆಗ ನಿಲ್ದಾಣ ಆರಂಭಿಸಲು ವಿಶೇಷ ಪ್ರಯತ್ನ ವಹಿಸಿ ಯಶಸ್ವಿಯಾಗಿದ್ದೆನು. ಈ ಇಬ್ರಾಹಿಂಪೂರ ರೈಲ್ವೆ ನಿಲ್ದಾಣ…

Read More

ಸುಕ್ಷೇತ್ರ ಧರ್ಮಸ್ಥಳದ ಅಪಪ್ರಚಾರದ ವಿರುದ್ಧ ಆಗಸ್ಟ್ 13ರಂದು ಪ್ರತಿಭಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 11:ಸುಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆದಿರುವ ಅಪಪ್ರಚಾರವನ್ನು ಖಂಡಿಸಿ ಆ. 13ರಂದು ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಶ್ರೀಧರ್ಮಸ್ಥಳ ಭಕ್ತಾಭಿಮಾನಿ ಹಾಗೂ ಲಿಂಬೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪುರ ಹೇಳಿದರು.ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.ಶ್ರೀ ಧರ್ಮಸ್ಥಳದ ಬಗ್ಗೆ ಷಡ್ಯಂತ್ರ ರೂಪಿಸಿ ಸುಕ್ಷೇತ್ರಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನ ನಡೆದಿದೆ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದರು.ಆ. 13ರಂದು ವಿಜಯಪುರ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಡಾ….

Read More

ಗ್ರಾಮೀಣರ ಬದುಕು ಸುಧಾರಣೆಗೆ ಆದ್ಯತೆ ನೀಡಿ-ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 11: ಜಿಲ್ಲೆಯ ಗ್ರಾಮೀಣ ಜನರ ಜೀವನ ಸುಧಾರಿಸುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕ ಸಮಸ್ಯೆಗಳಿಗೆ ತತ್‌ಕ್ಷಣ ಸ್ಪಂದಿಸಿ, ಪರಿಹಾರ ಒದಗಿಸಲು ಹಾಗೂ ಮೂಲಸೌಲಭ್ಯಗಳನ್ನು ಆದ್ಯತೆ ಮೇಲೆ ಕಲ್ಪಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲು ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಸೋಮವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಗ್ರಾಮೀಣ ಭಾಗದ ಜನರು ಯಾವುದೇ ಮೂಲಭೂತ ಸೌಲಭ್ಯಗಳಿಂದ…

Read More

ಪಾಲಿಕೆ ನೂತನ ಮೇಯರ್ ಉಪಮೇಯರ್ ಬಿಜೆಪಿ ಕಚೇರಿ ಭೇಟಿ

ಸಪ್ತಸಾಗರ ವಾರ್ತೆ ವಿಜಯಪುರ, ಆ. 11: ಮಹಾನಗರ. ಪಾಲಿಕೆಯಲ್ಲಿ ಕಮಲ‌ ಅರಳಿದ್ದು, ನೂತನ ಮೇಯರ್ ಆಗಿ ಆಯ್ಕೆಯಾದ ಎಂ.ಎಸ್. ಕರಡಿ ಹಾಗೂ ಉಪಮೇಯರ್ ಆಗಿ ಆಯ್ಕೆಯಾದ ಸುಮಿತ್ರಾ ಜಾಧವ ಅವರು ಬಿಜೆಪಿ ಕಾರ್ಯಾಲಯಕ್ಕೆ ಭೇಟಿ ನೀಡಿದರು.ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾಂಜಲಿ ಸಲ್ಲಿಸಿದರು. ಈ ವೇಳೆ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು, ಪಾಲಿಕೆಯ ಬಿಜೆಪಿ ಸದಸ್ಯರು ಅವರನ್ನು ಆತ್ಮೀಯವಾಗಿ ಸನ್ಮಾನಿಸಿದರು.ಸನ್ಮಾನ ಸ್ವೀಕರಿಸಿದ ನೂತನ ಮೇಯರ್ ಎಂ.ಎಸ್. ಕರಡಿ ಮಾತನಾಡಿ, ಬಿಜೆಪಿ ದೇಶಾಭಿಮಾನ ಉಸಿರಾಗಿಸಿಕೊಂಡ ಪಕ್ಷ, ಈ ಪಕ್ಷದ ಸದಸ್ಯನಾಗಿರುವುದೇ…

Read More

ಬಿಎಲ್ ಡಿಇ ಲೈಫ್ ಕೇರ್ ಪ್ರೊಡಕ್ಟ್ಸಗಳ ಆರೋಗ್ಯ ಫಾರ್ಮಸಿ ಉದ್ಘಾಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 11: ಬಿ.ಎಲ್.ಡಿ ಲೈಫ್ ಕೇರ್ ಪ್ರೊಡಕ್ಟ್ಸ್ ಗಳ ಘಟಕವಾದ ಆರೋಗ್ಯ ಫಾರ್ಮಸಿ ಉದ್ಘಾಟನೆ ಕಾರ್ಯಕ್ರಮ ಇಂದು ಸೋಮವಾರ ನಡೆಯಿತು.ನಗರದ 770 ಲಿಂಗದ ಗುಡಿ ಹತ್ತಿರವಿರುವ ಬಿ.ಎಲ್.ಡಿ ಸೌಹಾರ್ದ ಸಹಕಾರಿ ಶಾಖೆಯ ನೆಲ ಅಂತಸ್ತಿನಲ್ಲಿ ಕಟ್ಟಡದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜ್ಞಾನಯೋಗಾಶ್ರಮದ ಅಧ್ಯಕ್ಷ ಶ್ರೀ ಬಸವಲಿಂಗ ಸ್ವಾಮೀಜಿ ಸಾನಿಧ್ಯ ವಹಿಸಿ ಪೂಜೆ ನೆರವೇರಿಸಿದರು. ಅಲ್ಲದೇ, ಬಿ.ಎಲ್.ಡಿ ಲೈಫಕೇರ್ ತಯಾರಿಸಿರುವ ಹೈಜೀನ್ ಮತ್ತು ಹೆಲ್ತಕೇರ್ ಉತ್ಪನ್ನಗಳನ್ನು ಬಿಡುಗಡೆ ಮಾಡಿದರು.ಬಳಿಕ ಮಾತನಾಡಿದ ಶ್ರೀಗಳು, ಬಿ.ಎಲ್.ಡಿ.ಇ ಸಂಸ್ಥೆ ಜನಪರ…

Read More

ಮಹಾಪೌರರಾಗಿ ಎಂ.ಎಸ್. ಕರಡಿ, ಉಪ ಮಹಾಪೌರರಾಗಿ ಸುಮಿತ್ರಾ ಜಾಧವ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 11: ವಿಜಯಪುರ ಮಹಾನಗರ ಪಾಲಿಕೆ ಮಹಾಪೌರರಾಗಿ ಎಂ.ಎಸ್.ಕರಡಿ ಹಾಗೂ ಉಪ ಮಹಾಪೌರರಾಗಿ ಸುಮಿತ್ರಾಜಾಧವ ಆಯ್ಕೆಯಾಗಿದ್ದಾರೆ.ಬೆಳಗಾವಿ ಪ್ರಾದೇಶಿಕ ಆಯುಕ್ತ ಸಂಜಯ್ ಶೆಟ್ಟೆನವರ ವಿಜಯಪುರ ಮಹಾನಗರ ಪಾಲಿಕೆಯ 22ನೇ ಮಹಾಪೌರ ಹಾಗೂ ಉಪ ಮಹಾಪೌರರ ಆಯ್ಕೆಯ ಚುನಾವಣೆ ಫಲಿತಾಂಶವನ್ನು ಸೋಮವಾರ ಅಧಿಕೃತವಾಗಿ ಘೋಷಿಸಿದರು.ಜನೆವರಿ, ಫೆಬ್ರವರಿ ತಿಂಗಳಲ್ಲಿ ನಡೆದ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ ಚುನಾವಣೆ ಫಲಿತಾಂಶವನ್ನು ಘೋಷಣೆ ಮಾಡಲು ಈ ಮುಂಚೆ ಆ.7ರಂದು ಸಭೆ ನಿಗದಿಪಡಿಸಲಾಗಿತ್ತು. ನಂತರ ಈ ದಿನಾಂಕವನ್ನು ಆ. 11ಕ್ಕೆ…

Read More

ವಿವಿಧ ಕಂಪನಿಗಳ ಸಿಇಒ ಜೊತೆಗೆ ಸಿಎಂ ಸಿದ್ದರಾಮಯ್ಯ ಉಪಹಾರ ಕೂಟದಲ್ಲಿ ಭಾಗಿ

ಸಪ್ತಸಾಗರ ವಾರ್ತೆ ಬೆಂಗಳೂರು, ಆ. 11: ನವೆಂಬರ್ 18-20ರ ವರೆಗೆ ನಡೆಯಲಿರುವ ಬೆಂಗಳೂರು ಟೆಕ್ ಸಮ್ಮಿತ್-2025ರ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳ ಜೊತೆ ಉಪಹಾರ ಕೂಟ ಸಭೆಯಲ್ಲಿ ಪಾಲ್ಗೊಂಡರು.ಡಿಸಿಎಂ ಡಿ.ಕೆ.ಶಿವಕುಮಾರ್, ಐಟಿ ಸಚಿವ ಪ್ರಿಯಾಂಕ್ ಖರ್ಗೆ, ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.“ಭವಿಷ್ಯೋದಯ” ಧ್ಯೇಯ ವಾಕ್ಯದೊಂದಿಗೆ 2025ರ ಬೆಂಗಳೂರು ಟೆಕ್ ಸಮ್ಮಿತ್ ಸಂಯೋಜಿಸಲಾಗುತ್ತಿದೆ.

Read More

ಸಹಕಾರ ವಲಯವು ಆರ್ಥಿಕ ವ್ಯವಸ್ಥೆಯ ಅಮೂಲ್ಯ ಕೊಂಡಿ: ಎಸ್.ಆರ್. ಪಾಟೀಲ

ಸಪ್ತಸಾಗರ ವಾರ್ತೆ, ಬಾಗಲಕೋಟೆ, ಆ. 10:ಸಹಕಾರ ವಲಯವು ನಮ್ಮ ದೇಶದ ಆರ್ಥಿಕ ವ್ಯವಸ್ಥೆಯಲ್ಲಿಯೇ ಒಂದು ಅಮೂಲ್ಯ ಕೊಂಡಿಯಾಗಿದೆ. ಜನತೆಗೆ ಸಾಲ, ಉಳಿತಾಯ, ವಿಮೆ, ಕೌಟುಂಬಿಕ ಬೆಂಬಲ ಇವೆಲ್ಲವನ್ನೂ ಸಮರ್ಥವಾಗಿ ನೀಡುತ್ತಿರುವುದು ಸಹಕಾರ ಸಂಘಗಳ ಮಹತ್ವವನ್ನು ಪ್ರತಿಪಾದಿಸುತ್ತದೆ. ಈ ಹಿನ್ನೆಲೆಯಲ್ಲಿ, ಸೌಹಾರ್ದ ಸಹಕಾರ ಸಂಘಗಳು ನಂಬಿಕೆ ಮತ್ತು ಯಶಸ್ಸಿನ ನಿದರ್ಶನವಾಗಿದೆ ಎಂದು ಮಾಜಿ ಸಚಿವ ಎಸ್.ಆರ್. ಪಾಟೀಲ್ ಹೇಳಿದರು.ನವನಗರದ ಸೆಕ್ಟರ್ ನಂ.25ರಲ್ಲಿ ನೂತನ ಬಾಪೂಜಿ ಮಲ್ಟಿಸ್ಟೇಟ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಬಾಗಲಕೋಟೆ ಇದರ ಉದ್ಘಾಟನಾ ಸಮಾರಂಭ…

Read More