ಮಾನಸಿಕ ಆರೋಗ್ಯ ಮತ್ತು ಸೌಲಭ್ಯಗಳ ಅರಿವು ಮೂಡಿಸಿ : ನ್ಯಾಯಾಧೀಶ ಅರವಿಂದ ಹಾಗರಗಿ
ಸಪ್ತಸಾಗರ ವಾರ್ತೆ, ವಿಜಯಪುರ ಅ.10: ಮಾನಸಿಕ ಆರೋಗ್ಯದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದ ಅತ್ಯವಶ್ಯಕವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಅರವಿಂದ ಹಾಗರಗಿ ಅವರು ಹೇಳಿದರು.ಜಿಲ್ಲಾ ಆಡಳಿತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಘಟಕ ವಿಜಯಪುರ ಹಾಗೂ ವಿವಿಧ ನರ್ಸಿಂಗ್ ಕಾಲೇಜು ಹಾಗೂ…


