ಅರ್ಕಾಟ್ ದರ್ಗಾ ಉರುಸು: ವಿಜಯಪುರದಲ್ಲಿ ಭವ್ಯ ಸದ್ಭಾವನಾ ಯಾತ್ರೆ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 23:ಮಾನವೀಯತೆ, ಶಾಂತಿ ಹಾಗೂ ಸದ್ಭಾವನೆಯ ಸಂದೇಶ ಸಾರಿದ ಹಜರತ್ ಗೌಸ್-ಏ-ಆಜಂ ಅವರ ಸ್ಮರಣೆ ಹಾಗೂ ಸರ್ವಧರ್ಮ ಸಮನ್ವಯತೆಯ ಕೇಂದ್ರವಾಗಿರುವ ಐತಿಹಾಸಿಕ ಹಜರತ್ ಅರ್ಕಾಟ್ ದರ್ಗಾದ ಉರುಸು ಅಂಗವಾಗಿ ಬುಧವಾರ ನಗರದಲ್ಲಿ ಭವ್ಯ ಭಕ್ತಿ-ಸದ್ಭಾವನಾ ಯಾತ್ರೆ ನಡೆಯಿತು.ಸಾವಿರಾರು ಭಕ್ತರು ‘ನಾರಾಯೇ ತಕ್ಬೀರ್, ಅಲ್ಲಾಹು ಅಕ್ಬರ್’ ಘೋಷಣೆ ಮೊಳಗಿಸುತ್ತಾ, ಪವಿತ್ರ ಧ್ವಜಗಳನ್ನು ಹಿಡಿದು ಯಾತ್ರೆಯಲ್ಲಿ ಪಾಲ್ಗೊಂಡರು. ಪವಿತ್ರ ಪುಷ್ಪಗಳಿಂದ ಅಲಂಕರಿಸಲಾದ ಪಂಚ ಝೇಲಾಗಳು ಮೆರವಣಿಗೆಯ ಪ್ರಮುಖ ಆಕರ್ಷಣೆಯಾಗಿದ್ದವು.ಜಾಮೀಯಾ ಮಸೀದಿ, ಶಹಾಪೇಟಿ, ಶಹಾಪುರ ದರ್ವಾಜಾ, ಮದೀನಾ ನಗರ,…

Read More

ಮಕ್ಕಳ ಚಿತ್ರಕಲಾ ಪ್ರದರ್ಶನ, ಬಹುಮಾನ ವಿತರಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 23:ಪ್ರವಾಸೋದ್ಯಮ ಇಲಾಖೆಯ ಸರ್ಕಾರಿ ಆರ್ಟ್ ಗ್ಯಾಲರಿಯಲ್ಲಿ ವಿಜಯಪುರದ ಅಪ್ಪ ಫೌಂಡೇಶನ್ ವತಿಯಿಂದ ಮಕ್ಕಳ ಚಿತ್ರಕಲಾ ಪ್ರದರ್ಶನ ಹಾಗೂ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಭಾನುವಾರ ಆಯೋಜಿಸಲಾಗಿತ್ತು.ಕಾರ್ಯಕ್ರಮವನ್ನು ರೇಖಾಚಿತ್ರ ರಚಿಸುವ ಮೂಲಕ ಕಲಾವಿದ ಸತೀಶ್ ಹಿರೇಮಠ ಉದ್ಘಾಟಿಸಿದರು. ಶಿಕ್ಷಕ ಟಿ.ವಿ. ಮಲಗೊಂಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಎನ್.ಎ. ಚಿಮ್ಮಲಗಿ ಮಾತನಾಡಿ, ಅಪ್ಪ ಫೌಂಡೇಶನ್‌ನ ಉದ್ದೇಶ ಹಾಗೂ ಮಕ್ಕಳಿಗಾಗಿ ನಡೆಸುತ್ತಿರುವ ವಿವಿಧ ಚಟುವಟಿಕೆಗಳ ಕುರಿತು ವಿವರಿಸಿದರು. ‘ಅಪ್ಪ’ ಎಂಬುದು ಕೇವಲ ಒಂದು…

Read More

ಬರ ಘೋಷಣೆಗೆ ಸ್ಪಂದಿಸದ ಸರ್ಕಾರ: ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ

ಇಂಡಿ–ಚಡಚಣ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸದಿರುವುದಕ್ಕೆ ಅಸಮಾಧಾನ; ಕ್ಷೇತ್ರದ ಜನರ ಆಶೋತ್ತರ ಈಡೇರಿಸಲು ಸಾಧ್ಯವಾಗುತ್ತಿಲ್ಲ ಎಂದು ಬೇಸರ ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 23:ವಿಜಯಪುರ ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ವ್ಹಿ. ಪಾಟೀಲ್ ಅವರು ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿಸದಿರುವುದನ್ನು ವಿರೋಧಿಸಿ ಬುಧವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ವಿಧಾನಸಭಾ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲೇ ಅವರು ವಿಧಾನಸಭಾಧ್ಯಕ್ಷ ಜಿ.ಎಸ್. ಪಾಟೀಲ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ…

Read More

ಮೈಸೂರು ದಸರಾ: ಕನ್ನಡ ಪುಸ್ತಕಗಳ ಮಾರಾಟ ಮೇಳಕ್ಕೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ.23:ವಿಶ್ವಪ್ರಸಿದ್ಧ ಮೈಸೂರು ದಸರಾ ಉತ್ಸವ-2026ರ ಅಂಗವಾಗಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿಯ ಸಹಯೋಗದಲ್ಲಿ ಅ.11 ರಿಂದ 20ರವರೆಗೆ ಮೈಸೂರು ದಸರಾ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳದಲ್ಲಿ ಭಾಗವಹಿಸಲು ಆಸಕ್ತ ಕನ್ನಡ ಪ್ರಕಾಶಕರು ಹಾಗೂ ಪುಸ್ತಕ ಮಾರಾಟಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.ಮೈಸೂರಿನ ಹಳೆಯ ಜಿಲ್ಲಾಧಿಕಾರಿ ಕಚೇರಿ ಎದುರಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ನಡೆಯಲಿದೆ.ಪುಸ್ತಕ ಮಳಿಗೆಗಳನ್ನು ಆದ್ಯತೆಯ ಮೇರೆಗೆ ಹಂಚಿಕೆ ಮಾಡಲಾಗುತ್ತಿದ್ದು,…

Read More

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ:ಅರ್ಹ ಮತದಾರರಿಗೆ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ: ಜಿಲ್ಲಾ ಚುನಾವಣಾಧಿಕಾರಿ ಡಾ. ಆನಂದ ಕೆ.

ಸಪ್ತಸಾಗರ ವಾರ್ತೆ,ವಿಜಯಪುರ, ಸೆ.22:ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026ರ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ನಡೆಯಿತು.ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮತದಾರರ ಪಟ್ಟಿಗೆ ಸಂಬಂಧಿಸಿದ ಹಕ್ಕು ಮತ್ತು ಆಕ್ಷೇಪಣೆಗಳ ಕುರಿತು ಮಾಹಿತಿ ನೀಡಲಾಯಿತು.ಭಾರತ ಚುನಾವಣಾ ಆಯೋಗದ ಮಾರ್ಗದರ್ಶನದಂತೆ ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಸೆಪ್ಟೆಂಬರ್ 23ರವರೆಗೆ ಅವಕಾಶವಿದೆ.ಕರಡು ಮತದಾರರ ಪಟ್ಟಿಯಲ್ಲಿ ಹೆಸರು…

Read More

ಇಂಟ್ಯಾಕ್ ರಸಪ್ರಶ್ನೆ ಸ್ಪರ್ಧೆಯಲ್ಲಿ ಬಿ.ಎಲ್.ಡಿ.ಇ. ಶಾಲೆ ವಿದ್ಯಾರ್ಥಿಗಳ ಸಾಧನೆ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 22:ದೆಹಲಿಯ ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಅಂಡ್ ಕಲ್ಚರಲ್ ಹೆರಿಟೇಜ್‌ (ಇಂಟ್ಯಾಕ್) ಸಂಸ್ಥೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ.ಎಂ. ಪಾಟೀಲ ಪಬ್ಲಿಕ್ ಸಿಬಿಎಸ್‌ಇ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.ನಗರದ ವಚನ ಪಿತಾಮಹ ಡಾ. ಫ.ಗು. ಹಳಕಟ್ಟಿ ಸಂಶೋಧನ ಕೇಂದ್ರದಲ್ಲಿ ಶನಿವಾರ ನಡೆದ ಸ್ಪರ್ಧೆಯಲ್ಲಿ ಶಾಲೆಯ ವಿದ್ಯಾರ್ಥಿಗಳಾದ ಪ್ರಜ್ವಲ ಸಾವಳಗಿ ಹಾಗೂ ದರ್ಶ ಕುಲಕರ್ಣಿ ಅವರ…

Read More

ಸಂವಿಧಾನದ ಆಶಯಗಳ ಸಾಕಾರಕ್ಕೆ ದಲಿತ ಪರ ಸಂಘಟನೆಗಳ ಹೋರಾಟ: ಶ್ರೀಶೈಲ ಚೆಲವಾದಿ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 21: ಸಮಾಜದಲ್ಲಿ ಬೇರೂರಿರುವ ಜಾತಿ ವ್ಯವಸ್ಥೆ, ಸಾಮಾಜಿಕ ಅಸಮಾನತೆ, ಆರ್ಥಿಕ ಹಾಗೂ ಶೈಕ್ಷಣಿಕ ತಾರತಮ್ಯ ಮತ್ತು ಸಂಪತ್ತಿನ ಅಸಮಾನ ಹಂಚಿಕೆಯ ವಿರುದ್ಧ ದಲಿತ ಸಂಘರ್ಷ ಸಮಿತಿ ಸೇರಿದಂತೆ ವಿವಿಧ ದಲಿತ ಪರ ಸಂಘಟನೆಗಳು ನಿರಂತರವಾಗಿ ಹೋರಾಟ ನಡೆಸುತ್ತಿವೆ. ಶೋಷಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ದೊರಕಿಸುವುದರ ಜೊತೆಗೆ, ಅವರನ್ನು ರಾಜಕೀಯವಾಗಿ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿಸುವ ನಿಟ್ಟಿನಲ್ಲಿ ಸಂಘಟನೆಗಳು ಮಹತ್ವದ ಪಾತ್ರ ವಹಿಸುತ್ತಿವೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ…

Read More

ಮತದಾರರ ಹಕ್ಕುಗಳ ಪರಿಶೋಧನೆಗೆ ವಿಜಯಪುರಕ್ಕೆ ಪ್ರಕಾಶ್ ರಾಜ್

ಸೆ. 22ರಂದು ‘SIR ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’; ಮತದಾರರ ಸಮಸ್ಯೆಗಳ ಕುರಿತು ಚರ್ಚೆ ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 21:ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಎದುರಾಗಿರುವ ಲೋಪದೋಷಗಳು, ಮತದಾರರ ಹಕ್ಕುಗಳು ಹಾಗೂ ಸಾರ್ವಜನಿಕರ ಅಹವಾಲುಗಳನ್ನು ಪರಿಶೀಲಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿರುವ ‘SIR ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’ದ ಭಾಗವಾಗಿ ಖ್ಯಾತ ಚಲನಚಿತ್ರ ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ರಾಜ್ ಅವರು ಸೆ. 22ರಂದು ವಿಜಯಪುರಕ್ಕೆ ಆಗಮಿಸಲಿದ್ದಾರೆ.ಮತದಾರರ ಪಟ್ಟಿಯಲ್ಲಿನ ಸಮಸ್ಯೆಗಳನ್ನು ಗುರುತಿಸಿ, ಸಾರ್ವಜನಿಕರ…

Read More

ರಾಷ್ಟ್ರೀಯ ಕರಾಟೆ ಕ್ರೀಡಾಕೂಟದಲ್ಲಿ ವಿಜಯಪುರದ ಕ್ರೀಡಾಪಟುಗಳ ಸಾಧನೆ 11 ಪದಕಗಳ ಬೇಟೆ: 1 ಚಿನ್ನ, 6 ಬೆಳ್ಳಿ, 4 ಕಂಚು

ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 21: ಹೈದರಾಬಾದ್‌ನ ಕಟೆಡನ್ ಕ್ರೀಡಾ ಸಂಕೀರ್ಣದಲ್ಲಿ ಸೆ. 20ರಂದು ನಡೆದ ರಾಷ್ಟ್ರೀಯ ಕರಾಟೆ ಕ್ರೀಡಾಕೂಟದಲ್ಲಿ ವಿಜಯಪುರದ ಕರಾಟೆ ಪಟುಗಳು ಒಟ್ಟು 11 ಪದಕಗಳನ್ನು ಗೆಲ್ಲುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.ಕ್ರೀಡಾಕೂಟದಲ್ಲಿ ಬಾಲಕ, ಬಾಲಕಿಯರು ಹಾಗೂ ಪುರುಷರ ವಿವಿಧ ವಯೋಮಿತಿ ಮತ್ತು ಬೆಲ್ಟ್ ವಿಭಾಗಗಳಲ್ಲಿ ಸ್ಪರ್ಧಿಸಿದ ಕ್ರೀಡಾಪಟುಗಳು 1 ಚಿನ್ನ, 6 ಬೆಳ್ಳಿ ಹಾಗೂ 4 ಕಂಚಿನ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಪದಕ ವಿಜೇತರ ವಿವರ ಚಿನ್ನದ ಪದಕ ಬೆಳ್ಳಿ ಪದಕ ಕಂಚಿನ ಪದಕ ಕ್ರೀಡಾಪಟುಗಳ…

Read More

ಪೆಟ್ರೋಲ್ ಬಂಕ್‌ನಲ್ಲಿ ಗುಂಡಿನ ಸದ್ದು!

ಬಂಕ್ ಮಾಲೀಕನ ಪಿಸ್ತೂಲ್‌ನಿಂದ ಫೈರಿಂಗ್: ಇಬ್ಬರಿಗೆ ಗಾಯ ಕ್ಷುಲ್ಲಕ ವಿಚಾರಕ್ಕೆ ಜಗಳವೇ ಗುಂಡಿನ ದಾಳಿಗೆ ತಿರುಗಿತೇ? ಲೈಸೆನ್ಸ್ ಪಿಸ್ತೂಲ್ ಬಳಸಿ ಗುಂಡು ಹಾರಿಸಿದ ಆರೋಪ ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 20: ಪೆಟ್ರೋಲ್ ಬಂಕ್‌ನಲ್ಲಿ ನಡೆದ ಮಾತಿನ ಚಕಮಕಿ ಕ್ಷಣಾರ್ಧದಲ್ಲಿ ಗುಂಡಿನ ದಾಳಿಗೆ ತಿರುಗಿದ ಘಟನೆ ಜಿಲ್ಲೆಯ ಕೊಲ್ಹಾರ ಪೊಲೀಸ್ ಠಾಣೆ ವ್ಯಾಪ್ತಿಯ ಮಟ್ಯಾಳ ಗ್ರಾಮದಲ್ಲಿ ವರದಿಯಾಗಿದೆ. ಪೆಟ್ರೋಲ್ ಬಂಕ್ ಮಾಲೀಕನೇ ತನ್ನ ಲೈಸೆನ್ಸ್ ಹೊಂದಿರುವ ಪಿಸ್ತೂಲ್‌ನಿಂದ ಗುಂಡು ಹಾರಿಸಿದ ಆರೋಪ ಕೇಳಿಬಂದಿದ್ದು, ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ.ಮಟ್ಯಾಳ ಗ್ರಾಮದ…

Read More