ಸಾವಯವ ತ್ಯಾಜ್ಯ ಕೊಳೆಯುವ ಉಪಕರಣ: ಭಾರತ ಸರ್ಕಾರದ ಪೇಟೆಂಟ್ ಮಂಜೂರು

ಸಪ್ತಸಾಗರ ವಾರ್ತೆ, ವಿಜಯಪುರ, ಆ. 10: ನಗರದ ಬಿಎಲ್‌ಡಿಇ ಸಂಸ್ಥೆಯ ವಚನ ಪಿತಾಮಹ ಡಾ. ಫ.ಗು. ಹಳಕಟ್ಟಿ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳಿಗೆ “ಸಾವಯವ ತ್ಯಾಜ್ಯವನ್ನು ಕೊಳೆಯುವ ಉಪಕರಣ” ಎಂಬ ಶೀರ್ಷಿಕೆಯ ವಿನ್ಯಾಸಕ್ಕಾಗಿ ಭಾರತ ಸರ್ಕಾರದ ಪೇಟೆಂಟ್ ಕಚೇರಿಯು ಪೇಟೆಂಟ್ ನೀಡಿದೆ.2025ರ ಜು. 30ರಂದು ಸಂಖ್ಯೆ 454549-001 ಹೊಂದಿರುವ ವಿನ್ಯಾಸದ ನೋಂದಣಿ ಪ್ರಮಾಣಪತ್ರದ ಅಡಿಯಲ್ಲಿ ಪೇಟೆಂಟ್ ನೋಂದಾಯಿಸಲಾಗಿದೆ. ಅಧ್ಯಾಪಕರು ಮತ್ತು ವಿದ್ಯಾರ್ಥಿಗಳಾದ ಉತ್ಪನ್ನವನ್ನು ವಿನ್ಯಾಸಗೊಳಿಸುವಲ್ಲಿ ಪ್ರೊ. ಸಂದೀಪ ಶಂಕರ…

Read More

ಸಂಸದ ರಮೇಶ ಜಿಗಜಿಣಗಿ ನೇತೃತ್ವದಲ್ಲಿ ಹರ ಘರ ತಿರಂಗಾ ಯಾತ್ರೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಆ. 10:ಸ್ವಾತಂತ್ರ್ಯೋತ್ಸವದ ಪೂರ್ವಭಾವಿಯಾಗಿ ಹರ ಘರ ತಿರಂಗಾ ಯಾತ್ರೆ ಸಂಸದ ರಮೇಶ ಜಿಗಜಿಣಗಿ ನೇತೃತ್ವದಲ್ಲಿ ವಿಜಯಪುರ ಜಿಲ್ಲೆ ಬಿಜೆಪಿ ವತಿಯಿಂದ ನಗರದಲ್ಲಿ ಭಾನುವಾರ ಆಯೋಜಿಸಲಾಗಿತ್ತು.ರಾಷ್ಟ್ರಭಕ್ತಿಯನ್ನು ಬಿಂಬಿಸುವ ಕಾರ್ಯಕ್ರಮವಾಗಿ ಬೈಕ್ ರ‍್ಯಾಲಿ ನಡೆಯಿತು. ಬೈಕ್ ಗೆ ತ್ರಿವರ್ಣ ಧ್ವಜ ಇರಿಸಿ ರ‍್ಯಾಲಿಯಲ್ಲಿ ಸಾರ್ವಜನಿಕರು ಭಾಗವಹಿಸಿದ್ದರು.ಬೋಲೊ ಭಾರತ ಮಾ ಕೀ ಜೈ, ವಂದೇ ಮಾತರಂ ಘೋಷಣೆ ಹಾಕುತ್ತಾ ಬೈಕ್ ರ‍್ಯಾಲಿ ಸಾಗಿತು.ವಿಜಯಪುರ ನಗರದ ಸೆಟಲೈಟ್ ಬಸ್‌ ಸ್ಟ್ಯಾಂಡ್ (ಗೋದಾವರಿ ಹೊಟೆಲ್) ನಿಂದ ಶಿವಾಜಿ ಸರ್ಕಲ್,…

Read More

ನಂಜನಗೂಡು ರಾಯರ ಮಠದಲ್ಲಿಭಕ್ತಿ ಭಾವದಿಂದ ಪೂರ್ವಾರಾಧನೆ ಆಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 10:ಕಲಿಯುಗದ ಕಾಮಧೇನು-ಕಲ್ಪವೃಕ್ಷ ಎಂದೇ ಖ್ಯಾತನಾಮರಾದ ಶ್ರೀ ರಾಘವೇಂದ್ರ ಗುರು ಸಾರ್ವಭೌಮರ ೩೫೪ನೇ ಆರಾಧನಾ ಮಹೋತ್ಸವ ಪೀಠಾಧಿಪತಿ ಶ್ರೀ ಸುಬುಧೇಂದ್ರತೀರ್ಥರ ಆಜ್ಞಾನುಸಾರವಾಗಿ ಭಾನುವಾರ ಇಲ್ಲಿಯ ನಂಜನಗೂಡು ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ಅತ್ಯಂತ ಭಕ್ತಿಪುರಸ್ಸರವಾಗಿ ಆರಂಭಗೊಂಡಿತು.ಇದರ ಅಂಗವಾಗಿ ಸುಪ್ರಭಾತ,ನಿರ್ಮಾಲ್ಯ ವಿಸರ್ಜನೆ, ವೇದ ಪಾರಾಯಣ ಜರುಗಿದವು. ಬಳಿಕ ಬೆಳಿಗ್ಗೆ ಅಷ್ಟೋತ್ತರ ಸಹಿತ ಫಲಪಂಚಾಮೃತಾಭಿಷೇಕ ನಡೆಯಿತು.ಶ್ರೀ ಗುರುಸಾರ್ವಭೌಮರ ಮಹಿಮೆ ಕುರಿತು ಪಂಡಿತ ಮಧ್ವೇಶಾಚಾರ್ಯ ಜೋಶಿ(ಮುತ್ತಗಿ) ಪ್ರವಚನ ನೀಡಿ, ಗುರುಸಾರ್ವಭೌ ಮರು ಕರುಣಾಮಯಿ ಭಕ್ತರು ಭಕ್ತಿಯಿಂದ ಕೇಳಿದ ಎಲ್ಲವನ್ನು ಕರುಣಿಸಬಲ್ಲವರು…

Read More

ಶಿವಶರಣ ಹಡಪದ ಅಪ್ಪಣ್ಣನವರ ಕೊಡುಗೆ ಅನನ್ಯ: ಎಂ.ಬಿ. ಪಾಟೀಲ್

ಸಪ್ತಸಾಗರ ವಾರ್ತೆ, ವಿಜಯಪುರ, ಆ. 10: ಅಣ್ಣ ಬಸವಣ್ಣನವರ ಪರಮಾಪ್ತರಾಗಿದ್ದ ಶಿವಶರಣ ಶ್ರೀ ಹಡಪದ ಅಪ್ಪಣ್ಣನವರು ಅನೇಕ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ನೆರವಾಗುವ ಮೂಲಕ ಸಮಾಜ ಸುಧಾರಣೆಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶನಿವಾರ ಬಬಲೇಶ್ವರ ತಾಲೂಕಿನ ಕಾಖಂಡಕಿ ಗ್ರಾಮದಲ್ಲಿ ದುರ್ಗಾದೇವಿ ದೇವಸ್ಥಾನದ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಬಳಿಕ ನಡೆದ ಶಿವಶರಣ ಶ್ರೀ ಹಡಪದ ಅಪ್ಪಣ್ಣನವರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ…

Read More

ಮಮದಾಪೂರ ಆದರ್ಶ ಗ್ರಾಮವನ್ನಾಗಿ ರೂಪಿಸಲು ಗ್ರಾಮಸ್ಥರು ಕೈ ಜೋಡಿಸಬೇಕು: ಸಚಿವ ಎಂ.ಬಿ. ಪಾಟೀಲ್

ಸಪ್ತ ಸಾಗರ ವಾರ್ತೆ,ವಿಜಯಪುರ, ಆ. 9: ಜಿಲ್ಲೆಯ ಮಮದಾಪುರ ಬಳಿ ನಿರ್ಮಿಸಲಾಗಿರುವ ಅರಣ್ಯದ ಪ್ರಕೃತಿಯಲ್ಲಿ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳು ನೆಲೆಸಿದ್ದು, ಶ್ರೀಗಳ ಆಶಯದಂತೆ ವ್ಯಸನಮುಕ್ತ, ಜಗಳರಹಿತವಾಗಿ ಬದುಕಿ ಆದರ್ಶ ಗ್ರಾಮವನ್ನಾಗಿ ಮಾಡಲು ಈ ಭಾಗದ ಗ್ರಾಮಸ್ಥರು ಕೈ ಜೋಡಿಸಬೇಕು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ. ಶನಿವಾರ ಬಬಲೇಶ್ವರ ತಾಲೂಕಿನ ಮಮದಾಪುರ ಗ್ರಾಮದಲ್ಲಿ ಅಂದಾಜು ರೂ. 120 ಲಕ್ಷ ವೆಚ್ಚದಲ್ಲಿ ಹೆಸ್ಕಾಂ ನೂತನ ಶಾಖಾಧಿಕಾರಿಗಳ ಕಚೇರಿ ಕಟ್ಟಡ…

Read More

ಸಚಿವ ಎಂ.ಬಿ. ಪಾಟೀಲರಿಗೆ ರಾಖಿ ಕಟ್ಟಿದ ವಿದ್ಯಾರ್ಥಿನಿಯರು

ಸಪ್ತಸಾಗರ ವಾರ್ತೆ, ವಿಜಯಪುರ, ಆ. 9: ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಗ್ರಾಮಸ್ಥರು ಸರಕಾರಿ ಎಂ.ಪಿ.ಎಸ್ ಶಾಲೆಯನ್ನು ಸಿ.ಎಸ್.ಆರ್ ಅನುದಾನದಡಿ ಹಿರಿಯ ಪ್ರಾಥಮಿಕ ಶಾಲೆಯನ್ನು ಪ್ರೌಢಶಾಲೆಯನ್ನಾಗಿ ಉನ್ನತೀಕರಿಸಲು ಸರಕಾರ ಆದೇಶ ಹೊರಡಿಸಿದೆ.ಈ ಹಿನ್ನೆಲಯಲ್ಲಿ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಶನಿವಾರ ನಗರದಲ್ಲಿರುವ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಗೃಹ ಕಚೇರಿಗೆ ಆಗಮಿಸಿ ಕೃತಜ್ಞತೆ ಸಲ್ಲಿಸಿದರು.ಈ ವೇಳೆ ಮಾತನಾಡಿದ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು, ಶಾಲೆಯನ್ನು ಉನ್ನತೀಕರಿಸಿರುವುದು ಸಂತಸ ತಂದಿದೆ. ಇದರಿಂದ…

Read More

ಬ್ರಹ್ಮಕುಮಾರಿ ಈಶ್ವರಿಯ ವಿವಿ ವತಿಯಿಂದ ಸಚಿವ ಎಂ.ಬಿ. ಪಾಟೀಲರಿಗೆ ರಾಖಿ ಕಟ್ಟಿದ ಸಹೋದರಿ ಶೋಭಾ

ಸಪ್ತ ಸಾಗರ ವಾರ್ತೆ, ವಿಜಯಪುರ ಆ. 9: ರಕ್ಷಾ ಬಂಧನದ ಅಂಗವಾಗಿ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದವರು ಸಚಿವ ಎಂ. ಬಿ. ಪಾಟೀಲ ಅವರಿಗೆ ರಾಖಿ ಕಟ್ಟಿ ಹಬ್ಬದ ಶುಭಾಷಯ ಕೋರಿದರು.ಶನಿವಾರ ಬೆಳಿಗ್ಗೆ ಸಚಿವರ ಗೃಹ ಕಚೇರಿಗೆ ಆಗಮಿಸಿದ ನಗರದ ಬ್ರಹ್ಮಕುಮಾರಿ‌ ಈಶ್ವರಿಯ ವಿವಿ ಪ್ರಕೃತಿ ಕಾಲನಿ ಸೇವಾ ಕೇಂದ್ರ ಸಂಚಾಲಕಿ ಶೋಭಾ‌ ಅವರು ಸಚಿವರಿಗೆ ರಾಖಿ‌ ಕಟ್ಟಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ಪ್ರೇಮ, ವಿಶ್ವಾಸ ಮತ್ತು ರಕ್ಷಣೆಯ ಬಾಂಧವ್ಯವನ್ನು ಪ್ರತಿಬಿಂಬಿಸುವ ಪವಿತ್ರ ಹಬ್ಬ ಸಹೋದರ–ಸಹೋದರಿಯರ ನಡುವಿನ ಆತ್ಮೀಯ…

Read More

ಮಹಾನಗರ ಪಾಲಿಕೆ ಕಚೇರಿ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 9:ವಿಜಯಪುರ ಮಹಾನಗರ ಪಾಲಿಕೆ 22ನೇ ಅವಧಿಗೆ ಮಹಾಪೌರ ಹಾಗೂ ಉಪ ಮಹಾಪೌರ ಚುನಾವಣೆ ಪ್ರಕ್ರಿಯೆ ಹಿನ್ನೆಲೆಯಲ್ಲಿ ಆ.11ರಂದು ವಿಜಯಪುರ ಮಹಾನಗರ ಪಾಲಿಕೆ ಕಚೇರಿ ವ್ಯಾಪ್ತಿಯ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಿಗೂ ಜಿಲ್ಲಾ ದಂಡಾಧಿಕಾರಿ ಡಾ. ಆನಂದ ಕೆ. ಅವರು ಆದೇಶ ಹೊರಡಿಸಿದ್ದಾರೆ.ಆ.11ರ ಬೆಳಿಗ್ಗೆ 6 ಗಂಟೆಯಿಂದ ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರುತ್ತದೆ.ವಿಜಯಪುರ ಮಹಾನಗರ ಪಾಲಿಕೆ ಕಚೇರಿ ವ್ಯಾಪ್ತಿಯ 200 ಮೀಟರ್ ಪ್ರದೇಶದಲ್ಲಿ ಶಸ್ತ್ರ,…

Read More

ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿ- ಸಚಿವ ಎಂ.ಬಿ.ಪಾಟೀಲ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 9:ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ ಹಾನಿ ಕುರಿತಂತೆ ಸಮಗ್ರ ಸಮೀಕ್ಷೆ ನಡೆಸಿ ಪರಿಹಾರೋಪಾಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಸೂಚನೆ ನೀಡಿದರು.ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮಳೆಯಿಂದಾದ ಹಾನಿ ಹಾಗೂ ಅದರ ಪರಿಣಾಮಗಳ ಕುರಿತು ಮಾಹಿತಿ ಪಡೆದುಕೊಂಡ ಸಚಿವರು,…

Read More

ಕಾಯಕ ಶರಣರ ತತ್ವಾದರ್ಶಗಳು ಸರ್ವಕಾಲಕ್ಕೂ ಪ್ರಸ್ತುತ: ಪಿ.ಜಿ. ಪವಾರ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 9:ತಮ್ಮ ಬದುಕಿನ ಮೂಲಕವೇ ಕಾಯಕ ತತ್ವಗಳನ್ನು 12ನೇ ಶತಮಾನದಲ್ಲಿಯೇ ಜಗತ್ತಿಗೆ ಸಾರಿದ ಶರಣರು ಆದರ್ಶ ವಿಚಾರಗಳು ನಮಗೆ ದಾರದೀಪವಾಗಿದೆ ಎಂದು ಚುನಾವಣಾ ತಹಶೀಲ್ದಾರ ಪಿ.ಜಿ.ಪವಾರ ಅವರು ಹೇಳಿದರು.ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಶ್ರೀ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಶರಣರು ತಮ್ಮ ವಚನಗಳ ಮೂಲಕ ಈ ಸಮಾಜಕ್ಕೆ ಬಹು‌ ದೊಡ್ಡ ಕೊಡುಗೆ ನೀಡಿದ್ದಾರೆ.‌ ಶರಣರ…

Read More