ಅಕ್ರಮವಾಗಿ ಗೃಹ ಬಳಕೆ ಸಿಲಿಂಡರ್ ಮಾರಾಟ : ಆಹಾರ ಇಲಾಖೆ ಅಧಿಕಾರಿಗಳ ದಾಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 6: ವಿಜಯಪುರ ನಗರದ ಹುಡ್ಕೋ ಹಾಗೂ ರಾಘವೇಂದ್ರ ಕಾಲೋನಿ ಹತ್ತಿರದಲ್ಲಿ ಗೃಹ ಬಳಕೆ ಸಿಲಿಂಡರ್ ಗಳನ್ನು ಬಳಸಿ ಅಕ್ರಮವಾಗಿ ಆಟೋಗಳಿಗೆ ತುಂಬಿಸುತ್ತಿದ್ದ ಸಂದರ್ಭದಲ್ಲಿ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ನಾಲ್ಕು ಗೃಹ ಬಳಕೆ ಸಿಲಿಂಡರ್ ಹಾಗೂ ತೂಕ ಮಾಡುವ ಯಂತ್ರವನ್ನು ವಶಕ್ಕೆ ಪಡೆದಿದ್ದಾರೆ.ದಾಳಿಯಲ್ಲಿ ಆಹಾರ ಇಲಾಖೆ ನಿರೀಕ್ಷಕ ವಿಜಯಕುಮಾರ ಗುಮಶೆಟ್ಟಿ, ಜಲನಗರ ಪೊಲೀಸ್ ಠಾಣೆ ಸಬ್ ಇನ್ಸಪೆಕ್ಟರ್ ಮಹೇಶ ಸಂಖ, ಪೋಲಿಸ ಸಿಬ್ಬಂದಿಗಳಾದ ವಿ.ಎಂ.ಪವಾರ, ಪಿ.ಆರ್.ರಾಠೋಡ, ಎಸ್.ವಾಯ್.ನಾಟಿಕಾರ, ಎಚ್.ಎನ್.ಪೂಜಾರಿ, ಎನ್.ಬಿ.ಚವ್ಹಾಣ,…

Read More

ಯುವನಿಧಿ ಅಭ್ಯರ್ಥಿಗಳು ಕೌಶಲ್ಯ ತರಬೇತಿಗೆ ನೋಂದಾಯಿಸಿಕೊಳ್ಳಲು ಮನವಿ

ಸಪ್ತಸಾಗರ ವಾರ್ತೆ ವಿಜಯಪುರ, ಅ. 6: ಯುವನಿಧಿ ಯೋಜನೆಯಡಿ ನೊಂದಾಯಿಸಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಹಾಗೂ ಪಡೆದಿರುವ ಅಭ್ಯರ್ಥಿಗಳು ಕಡ್ಡಾಯವಾಗಿ ತರಬೇತಿಯನ್ನು ಪಡೆಯಲು kaushalkar.com ಪೋರ್ಟಲ್‍ನಲ್ಲಿ ನೋಂದಾಯಿಸಿಕೊಳ್ಳುವಂತೆ ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿಗಳು ತಿಳಿಸಿದ್ದಾರೆ.ಯುವನಿಧಿ ಫಲಾನುಭವಿಗಳು ಕಡ್ಡಾಯವಾಗಿ ತರಬೇತಿ ಪಡೆಯಲು ನೋಂದಾಯಿಸಿಕೊಳ್ಳಬೇಕು. ಪೋರ್ಟಲ್‍ನಲ್ಲಿ ನೋಂದಾಯಿಸಿಕೊಳ್ಳುವುದರಿಂದ ಪ್ರಸ್ತುತ ತಾವು ಪಡೆಯುತ್ತಿರುವ ನಿರುದ್ಯೋಗ ಭತ್ಯೆ ಯಾವುದೇ ಕಾರಣಕ್ಕಾಗಿ ಸ್ಥಗಿತಗೊಳ್ಳವುದಿಲ್ಲ ಮತ್ತು ಈ ಕುರಿತು ಅಭ್ಯರ್ಥಿಗಳು ಆತಂಕ ಪಡುವ ಅವಶ್ಯಕತೆ ಇಲ್ಲ. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿಗಳ ಕಚೇರಿ,…

Read More

ಮಳಸಿದ್ದ ನಾಯ್ಕೋಡಿಗೆ ರಾಜ್ಯ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ‌ ಪ್ರಶಸ್ತಿ

ಸಪ್ತ ಸಾಗರ ವಾರ್ತೆ ವಿಜಯಪುರ, ಅ. 6: ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ‌ ಪ್ರಶಸ್ತಿಗೆ ಮಳಸಿದ್ದ ಲಕ್ಷ್ಮಣ ನಾಯ್ಕೋಡಿ ಅವರು ಭಾಜನರಾಗಿದ್ದಾರೆ.ಅವರನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಸೋಮವಾರ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಸಮಾಜ‌ ಕಲ್ಯಾಣ ಇಲಾಖೆಯ‌ ಉಪ‌ ನಿರ್ದೇಶಕ ಮಹೇಶ ಪೋತದಾರ, ಇಲಾಖೆಯ ಟಿ.ವಿ ಮಂಟೂರ, ಡಾ. ಅರವಿಂದ ಲಂಬೂ, ಎಂ.ಟಿ. ಬಿರಾದಾರ, ಆನಂದ‌ ಕಳಸಗೊಂಡ‌ ಸೇರಿದಂತೆ ಇಲಾಖಾ ಅಧಿಕಾರಿ ಸಿಬ್ಬಂದಿ ಉಪಸ್ಥಿತರಿದ್ದರು.

Read More

ಹುಬ್ಬಳ್ಳಿ ರೈಲ್ವೆ ಸಿಬ್ಬಂದಿಯ ಪ್ರಯಾಣಿಕ ಸ್ನೇಹಿ ಕಾರ್ಯಕ್ಕೆ ಮೆಚ್ಚುಗೆ

ಸಪ್ತಸಾಗರ ವಾರ್ತೆ ಹುಬ್ಬಳ್ಳಿ, ಅ. 5: ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ರೈಲ್ವೆ ಸಿಬ್ಬಂದಿಯ ಪ್ರಯಾಣಿಕ ಸ್ನೇಹಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.ಹೌದು. ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರು ಬ್ಯಾಗ್ ಮರೆತು ಬೆಂಗಳೂರಿಗೆ ರೈಲಿನಲ್ಲಿ ಪ್ರಯಾಣ ಬೆಳೆಸಿದರು.ಘಟನೆ ನಡೆದ ಮಾಹಿತಿ ಸಿಗುತ್ತಿದ್ದಂತೆಯೇ ರೈಲ್ವೆ ಸಿಬ್ಬಂದಿಯವರು ತಕ್ಷಣ ಕಾರ್ಯ ಪ್ರವೃತ್ತರಾಗಿ ಮಹಿಳಾ ಪ್ರಯಾಣಿಕರಿಗೆ ಬ್ಯಾಗ್ ಮರಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬ್ಯಾಗ್ ಹುಡುಕಿದ್ದು ಹೇಗೆ? : ಹುಬ್ಬಳ್ಳಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಮಹಿಳಾ ಪ್ರಯಾಣಿಕರು ಆಕಸ್ಮಿಕವಾಗಿ ತಮ್ಮ ಲಗೇಜ್ ಒಂದನ್ನು ಹುಬ್ಬಳ್ಳಿ ನಿಲ್ದಾಣದಲ್ಲೇ ಬಿಟ್ಟು,…

Read More

ವಿಜಯಪುರದಲ್ಲಿ ಕವಿಗಳು ಏನು ಮಾಡಿದರು ಗೊತ್ತಾ?

ಸಪ್ತಸಾಗರ ವಾರ್ತೆ, ವಿಜಯಪುರ, ಅ. 5 : ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗೆ ಆಗ್ರಹಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ನಡೆಯುತ್ತಿರುವ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಭಾನುವಾರ ೧೮ನೇ ದಿನಕ್ಕೆ ಕಾಲಿಟ್ಟಿದೆ. ಕವಿಗಳು ಹೋರಾಟದ ವೇದಿಕೆಯಲ್ಲಿಯೇ ಕವಿಗೋಷ್ಠಿ ನಡೆಸಿ ಹೋರಾಟಕ್ಕೆ ವಿನೂತನ ರೀತಿಯಲ್ಲಿ ಬೆಂಬಲ ವ್ಯಕ್ತಪಡಿಸಿದರು.ಜಿಲ್ಲೆಯ ೨೦ಕ್ಕೂ ಹೆಚ್ಚು ಕವಿಗಳು ಕವಿತೆಗಳನ್ನು ವಾಚನ ಮಾಡುವ ಮೂಲಕ ಪಿಪಿಪಿ ಬೇಡ. ಸರ್ಕಾರಿ ವೈದ್ಯಕೀಯ ಕಾಲೇಜು ಬೇಕು ಎಂದು ಅರ್ಥವತ್ತಾದ ಕವಿತೆಗಳನ್ನು ಓದುವ ಮೂಲಕ ಸರ್ಕಾರದ ಗಮನ ಸೆಳೆದರು.ಕವಿತೆ ಓದುವ ಮೂಲಕ…

Read More

ಹಾಪ್ ಕಾಮ್ಸ್ ಜಿಲ್ಲಾ ಅಧ್ಯಕ್ಷರಾಗಿ ಸಿದ್ದಪ್ಪ ಕಬಾಡಗಿ, ಉಪಾಧ್ಯಕ್ಷರಾಗಿ ನಂದಕಿಶೋರ ರಾಠೋಡ ಅವಿರೋಧ ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಅ.5.ಜಿಲ್ಲಾ ತೋಟಗಾರಿಕೆ ಸಂಸ್ಕರಣ ಸಂಘದ ಆಡಳಿತ ಮಂಡಳಿ ನೂತನ ಅಧ್ಯಕ್ಷರಾಗಿ ಸಿದ್ದಪ್ಪ ಕಬಾಡಗಿ ಹಾಗೂ ಉಪಾಧ್ಯಕ್ಷರಾಗಿ ನಂದಕಿಶೋರ ರಾಠೋಡ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಸಂಘದ ಕಚೇರಿಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಮುಂದಿನ ಐದು ವರ್ಷದವರೆಗೆ ಅವರು ಅಧಿಕಾರಾವಧಿ ಹೊಂದಿದ್ದು, ಅಲ್ಲದೆ, ಆಡಳಿತ ಮಂಡಳಿಯ ಸದಸ್ಯರಾಗಿ ಗುರುಪಾದಪ್ಪಗೌಡ ಪಾಟೀಲ, ಎಸ್.ಪಿ. ಬಿರಾದಾರ, ಸಂಜೀವ ಮಠ, ವಿರುಪಾಕ್ಷಿ ಕಕಮರಿ, ಹಿದಾಯಿತಲ್ಲಾ ಖಾಜಿ, ಎಸ್‌ .ವಿ. ಪಾಟೀಲ, ಸಂಜಯ ನಾಯಕ, ಮಡಿವಾಳಪ್ಪ ವಾಲಿಕಾರ, ಗುರುಬಾಯಿ…

Read More

ಕೇಂದ್ರದ ಜಿಎಸ್‌ಟಿ ನೀತಿ ಮೂಲಕ ಜನರ ಲೂಟಿ: ಮಂಜುನಾಥ ಗೌಡ ಟೀಕೆ

ಸಪ್ತಸಾಗರ ವಾರ್ತೆ, ಮುದ್ದೇಬಿಹಾಳ, ಅ.5 :ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಗಿನ್ನಿಸ್ ದಾಖಲೆ ನಿರ್ಮಿಸಿದೆ. ಆದರೆ, ಕೇಂದ್ರದ ಬಿಜೆಪಿ ಸರ್ಕಾರ ಜಿಎಸ್‌ಟಿ, ಡಿಜಿಟಲ್ ಇಂಡಿಯಾ ಹೆಸರಿನಲ್ಲಿ ಜನರನ್ನು ಲೂಟಿ ಮಾಡುತ್ತಿದೆ ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಮಂಜುನಾಥ ಗೌಡ ಗಂಭೀರ ಆರೋಪ ಮಾಡಿದರು.ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಯುವ ಕಾಂಗ್ರೆಸ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಸಾಧನೆಗಳನ್ನು ಮತ್ತು ಕೇಂದ್ರ…

Read More

ಸಚಿವ ಎಂ.ಬಿ. ಪಾಟೀಲ ಜನ್ಮದಿನ ನಿಮಿತ್ತ ಬೃಹತ್ ಉಚಿತ ಆರೋಗ್ಯ ಶಿಬಿರ

ಸಪ್ತಸಾಗರ ವಾರ್ತೆ ವಿಜಯಪುರ, ಅ. 4: ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಜನ್ಮದಿನದ ಅಂಗವಾಗಿ ಅಕ್ಟೋಬರ್ 7ರಂದು ಮಂಗಳವಾರ ಜಿಲ್ಲೆಯ ನಾಲ್ಕು ಕಡೆಗಳಲ್ಲಿ‌ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಬೃಹತ್ ಶಿಬಿರಗಳನ್ನು ಆಯೋಜಿಸಲಾಗಿದೆ.ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೋಧನೆ ಕೇಂದ್ರದ ವತಿಯಿಂದ ತಿಕೋಟಾ, ಬಬಲೇಶ್ವರ, ದೇವರ ಗೆಣ್ಣೂರ ಮತ್ತು ಬಸವನ‌…

Read More

ಜಿಲ್ಲೆಯಲ್ಲಿ ನ.1 ರಿಂದ ಕಬ್ಬು ನುರಿಸುವ ಕಾರ್ಯ ಆರಂಭಿಸಿ: ಜಿಲ್ಲಾಧಿಕಾರಿ ಡಾ. ಆನಂದ ಸೂಚನೆ

ಸಪ್ತಸಾಗರ ವಾರ್ತೆ ವಿಜಯಪುರ, ಅ. 4: ಜಿಲ್ಲೆಯಲ್ಲಿ ಪಕ್ವವಾಗಿರುವ ಕಬ್ಬನ್ನು ಆದ್ಯತೆಯ ಮೇಲೆ ಕಟಾವು ಮಾಡಿ ನವೆಂಬರ್ 1 ರಿಂದ ಕಬ್ಬು ನುರಿಸುವ ಕಾರ್ಯ ಆರಂಭಿಸಿ ಕಬ್ಬು ಪೂರೈಸಿದ ರೈತರಿಗೆ 14 ದಿನಗಳೊಳಗಾಗಿ ಕಬ್ಬಿನ ಹಣ ಪಾವತಿಸಲು ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಸೂಚನೆ ನೀಡಿದ್ದಾರೆ.ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಸಭೆ ನಡೆಸಿದ ಅವರು, ಆಯುಕ್ತರು ಕಬ್ಬು ಅಭಿವೃದ್ದಿ ಹಾಗೂ ಸಕ್ಕರೆ ನಿರ್ದೇಶನಾಲಯ ಬೆಂಗಳೂರು ಇವರು ಪ್ರಸಕ್ತ…

Read More

ಬಿಜೆಪಿ ನಿಯೋಗದಿಂದ ಬೆಳೆ ಹಾನಿ ಸಮೀಕ್ಷೆ: ರೈತರ ಅಹವಾಲು ಕೇಳಿದ ಬಿಜೆಪಿ ಮುಖಂಡರು

ಸಪ್ತಸಾಗರ ವಾರ್ತೆ ವಿಜಯಪುರ, ಅ. 4 : ಧಾರಾಕಾರ ಮಳೆ, ಭೀಮೆ ಹಾಗೂ ಡೋಣಿ ನದಿ ಪ್ರವಾಹದಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಹಾಗೂ ಜಮೀನುಗಳಿಗೆ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ, ವಿಧಾನ ಪರಿಷತ್ ಪ್ರತಿಪಕ್ಷ ಮುಖ್ಯಸಚೇತಕ ಎನ್. ರವಿಕುಮಾರ್, ಮಾಜಿ ಸಚಿವ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಸೇರಿದಂತೆ ಅನೇಕ ಹಿರಿಯ ನಾಯಕರ ತಂಡ ಭೇಟಿ ನೀಡಿ ಹಾನಿ ಸಮೀಕ್ಷೆ ನಡೆಸಿ ರೈತರ ಅಹವಾಲು ಆಲಿಸಿತು.ಅಂಜುಟಗಿ, ಅಗರಖೇಡ, ಮಿರಗಿ, ದೇವಣಗಾಂವ ಸೇರಿದಂತೆ ಹಲವಾರು…

Read More