ಹವಾಮಾನ ಇಲಾಖೆ ಮುನ್ಸೂಚನೆ: ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಲು ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚನೆ
ಸಪ್ತ ಸಾಗರ ವಾರ್ತೆ ವಿಜಯಪುರ, ಸೆ. 26: ಜಿಲ್ಲೆಯಲ್ಲಿ ಸೆ.26 ರಿಂದ 28ರವರೆಗೆ ಬಿರುಗಾಳಿಯೊಂದಿಗೆ ಭಾರಿ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹಾಗೂ ಸೆ.29 ರಿಂದ ಅ.03ರವರೆಗೆ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಕುರಿತು ಹವಾಮಾನ ಇಲಾಖೆ ಹಾಗೂ ಕೆಎಸ್‍ಎನ್‍ಡಿಎಂಸಿ ಮುನ್ಸೂಚನೆಗಳನ್ನು ನೀಡಿದ್ದು, ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ರಕ್ಷಣೆ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸಲು ಸನ್ನದ್ಧರಾಗಿರಲು ಮತ್ತು ರಜೆ ಮೇಲೆ ತೆರಳಲು-ಕೇಂದ್ರ ಸ್ಥಾನ ಬಿಡುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರಿಯವರ ಪೂರ್ವಾನುಮತಿ ಪಡೆಯುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ….


