ಇಂಡಿ, ಚಡಚಣ, ತಾಳಿಕೋಟೆ ಸೇರಿ ನಾಲ್ಕು ತಾಲೂಕುಗಳ ಬರ ಅಧಿಸೂಚನೆ ಶೀಘ್ರ: ಎಂ.ಬಿ. ಪಾಟೀಲ

ಸೋಮವಾರದೊಳಗೆ ಕ್ಷೇತ್ರ ಪರಿಶೀಲನೆ ಪೂರ್ಣ; ವರದಿ ಆಧರಿಸಿ ಅಂತಿಮ ಘೋಷಣೆ ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 20:ಬರ ನಿರ್ವಹಣೆ ಕೈಪಿಡಿ-2020ರ ಮೌಲ್ಯಮಾಪನ ಮಾನದಂಡಗಳ ಪ್ರಕಾರ ಇಂಡಿ, ಚಡಚಣ ಮತ್ತು ತಾಳಿಕೋಟೆ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಪರಿಗಣಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಸೋಮವಾರದೊಳಗೆ ನಾಲ್ಕು ತಾಲೂಕುಗಳ ಕ್ಷೇತ್ರ ಪರಿಶೀಲನೆ (ಗ್ರೌಂಡ್ ಟ್ರೂಥಿಂಗ್) ಪೂರ್ಣಗೊಳಿಸಿ, ವರದಿ ಆಧರಿಸಿ ಅಂತಿಮ ಬರ ಅಧಿಸೂಚನೆ ಹೊರಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.ಈ…

Read More

ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ 10 ಕೋಟಿ ಜನರನ್ನು ತಲುಪುವ ಗುರಿ: ಸುವರ್ಣ ಅಕ್ಕ

ಯುವಜನರಲ್ಲಿ ಆತ್ಮಶಕ್ತಿ, ನೈತಿಕ ಮೌಲ್ಯ ಬೆಳೆಸಲು ಕರೆ ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 19: ನಶೆ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯವು ದೇಶಾದ್ಯಂತ ಹಮ್ಮಿಕೊಂಡಿರುವ ಜಾಗೃತಿ ಅಭಿಯಾನದ ಮೂಲಕ 10 ಕೋಟಿ ಜನರನ್ನು ತಲುಪುವ ಗುರಿ ಹೊಂದಲಾಗಿದೆ ಎಂದು ರಾಜಯೋಗಿನಿ ಬ್ರಹ್ಮಕುಮಾರಿ ಸುವರ್ಣ ಅಕ್ಕನವರು ಹೇಳಿದರು.ನಗರದ ವಿವೇಕ ನಗರದ ಶ್ರೀ ಬಸವೇಶ್ವರ ಗಜಾನನ ತರುಣ ಮಂಡಳಿಯವರು ಉತ್ಸವ ಸಮಿತಿಯ ಅಂಗವಾಗಿ ಆಯೋಜಿಸಿದ್ದ ನಶೆ ಮುಕ್ತ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾದಕ ವಸ್ತುಗಳ…

Read More

ಮಕ್ಕಳ ಆರೋಗ್ಯವೇ ದೇಶದ ಪ್ರಗತಿಯ ಸಂಕೇತ: ಸಂತೋಷ ಬಂಡೆ

ಪೌಷ್ಟಿಕತೆ, ಸ್ವಾಸ್ಥ್ಯ, ಶುಚಿತ್ವ ಮಕ್ಕಳ ಬೆಳವಣಿಗೆಯ ಮೂರು ಸ್ತಂಭಗಳು ಸಪ್ತಸಾಗರ ವಾರ್ತೆ, ಇಂಡಿ, ಸೆ. 19:ಇಂದಿನ ಸ್ಪರ್ಧಾತ್ಮಕ ಹಾಗೂ ತಂತ್ರಜ್ಞಾನ ಆಧಾರಿತ ಜಗತ್ತಿನಲ್ಲಿ ಮಕ್ಕಳ ದೈಹಿಕ, ಮಾನಸಿಕ ಮತ್ತು ಸರ್ವಾಂಗೀಣ ಬೆಳವಣಿಗೆಗೆ ಪೌಷ್ಟಿಕತೆ, ಸ್ವಾಸ್ಥ್ಯ ಹಾಗೂ ಶುಚಿತ್ವ ಅತ್ಯಂತ ಅಗತ್ಯವಾಗಿವೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಸಂಭ್ರಮ ಶನಿವಾರದ ನಿಮಿತ್ತ ಹಮ್ಮಿಕೊಂಡಿದ್ದ ‘ಪೌಷ್ಟಿಕತೆ, ಸ್ವಾಸ್ಥ್ಯ ಮತ್ತು ನೈರ್ಮಲೀಕರಣ’ ವಿಷಯದ ಕುರಿತು ಅವರು ಮಾತನಾಡಿದರು.ಇಂದಿನ ಮಕ್ಕಳೇ ದೇಶದ ನಾಳಿನ ಪ್ರಜೆಗಳು. ಮಕ್ಕಳ…

Read More

ಭೌತಿಕ ಆಸ್ತಿಗಿಂತ ಬೌದ್ಧಿಕ ಜ್ಞಾನವೇ ಶ್ರೇಷ್ಠ ಸಂಪತ್ತು: ಸುನೀಲಗೌಡ ಪಾಟೀಲ

ಪ್ರತಿಭೋತ್ಸವದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 19:ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಭೌತಿಕ ಆಸ್ತಿಗಿಂತ ಬೌದ್ಧಿಕ ಜ್ಞಾನವೇ ಶ್ರೇಷ್ಠ ಸಂಪತ್ತಾಗಿದೆ. ಪ್ರತಿಯೊಂದು ಸಾಧನೆಯ ಹಿಂದೆ ಶಿಕ್ಷಣ ಮತ್ತು ಪರಿಶ್ರಮದ ಪಾತ್ರ ಮಹತ್ವದ್ದಾಗಿದೆ ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಹೇಳಿದರು.ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಎಸ್. ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ‘ಪ್ರತಿಭೋತ್ಸವ 2025-26’ ಕಾರ್ಯಕ್ರಮ ಉದ್ಘಾಟಿಸಿ, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳು ಇಂದಿನ ಸ್ಪರ್ಧಾತ್ಮಕ…

Read More

ಮಹಾನ್ ಹೋರಾಟಗಾರರ ತ್ಯಾಗ ಯುವಜನತೆಗೆ ಸ್ಫೂರ್ತಿ: ಜಗದೇವ ಸೂರ್ಯವಂಶಿ

ವಿಜಯಪುರದಲ್ಲಿ ಹೈದರಾಬಾದ್ ವಿಮೋಚನಾ ದಿನಾಚರಣೆ ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 17:ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳು ಇಂದಿನ ಯುವಜನಾಂಗಕ್ಕೆ ಸ್ಫೂರ್ತಿಯಾಗಿವೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ರಾಜ್ಯಾಧ್ಯಕ್ಷ ಜಗದೇವ ಸೂರ್ಯವಂಶಿ ಹೇಳಿದರು.ನಗರದ ವಲ್ಲಭಭಾಯಿ ಪಟೇಲ ವೃತ್ತದಲ್ಲಿ ವಿಜಯಪುರ ಜಿಲ್ಲಾ 371(ಜೆ) ಹೋರಾಟ ಸಮಿತಿ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ವತಿಯಿಂದ ಆಯೋಜಿಸಿದ್ದ ಹೈದರಾಬಾದ್ ವಿಮೋಚನಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.ಆಪರೇಷನ್ ಪೋಲೊ ಮೂಲಕ ಹೈದರಾಬಾದ್ ಪ್ರಾಂತವನ್ನು ಭಾರತದ ಒಕ್ಕೂಟಕ್ಕೆ ಸೇರ್ಪಡೆಗೊಳಿಸುವಲ್ಲಿ…

Read More

ಚಿತ್ರಕಲೆ ಕನ್ನಡ ನಾಡಿನ ಸಾಂಸ್ಕೃತಿಕ ಅಸ್ಮಿತೆ: ವಿದ್ಯಾಶ್ರೀ ಶಿರನಾಳ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 17:ಕನ್ನಡ ನಾಡಿನ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಪ್ರತಿಬಿಂಬವಾಗಿರುವ ಚಿತ್ರಕಲೆ, ಕಲಾವಿದರ ಸೃಜನಶೀಲತೆಯ ಮೂಲಕ ನಾಡಿನ ಹಿರಿಮೆಯನ್ನು ಜಗತ್ತಿಗೆ ಪರಿಚಯಿಸುತ್ತಿದೆ. ವಿಜಯಪುರದ ಯುವ ಕಲಾವಿದೆ ಸವಿತಾ ಜಾಧವ ಅವರ ವೈವಿಧ್ಯಮಯ ಕಲಾಕೃತಿಗಳು ಕಲಾಸಕ್ತರ ಗಮನ ಸೆಳೆಯುತ್ತಿದ್ದು, ಕಲೆಯ ಮೂಲಕ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ ಬೆಳೆಸುವ ಪ್ರಯತ್ನ ಶ್ಲಾಘನೀಯ ಎಂದು ಪ್ರೇರಣಾ ಶಾಲೆಯ ಕನ್ನಡ ಶಿಕ್ಷಕಿ ವಿದ್ಯಾಶ್ರೀ ಶಿರನಾಳ ಹೇಳಿದರು.ನಗರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಧನಸಹಾಯದೊಂದಿಗೆ ಆಯೋಜಿಸಿರುವ ಕಲಾವಿದೆ ಸವಿತಾ ಜಾಧವ ಅವರ…

Read More

ಹಿರಿಯ ನಾಗರಿಕರು ಸಮಾಜದ ಆಸ್ತಿ; ಅವರ ಅನುಭವ ಕಿರಿಯರಿಗೆ ಮಾರ್ಗದರ್ಶಿ: ನ್ಯಾಯಾಧೀಶ ಅರವಿಂದ ಹಾಗರಗಿ

ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 17: ಹಿರಿಯ ನಾಗರಿಕರು ತಮ್ಮ ಸುದೀರ್ಘ ಜೀವನದ ಅನುಭವ ಹಾಗೂ ಜ್ಞಾನವನ್ನು ಕಿರಿಯರೊಂದಿಗೆ ಹಂಚಿಕೊಳ್ಳುವ ಮೂಲಕ ಸಮಾಜಕ್ಕೆ ಮಾರ್ಗದರ್ಶನ ನೀಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಎಸ್. ಹಾಗರಗಿ ಹೇಳಿದರು.ನಗರದ ಕನಕದಾಸ ಬಡಾವಣೆಯ ಈಜುಕೊಳದ ಬಳಿಯ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ…

Read More

ಕೌಶಲ್ಯವೇ ಯಶಸ್ಸಿನ ಮೆಟ್ಟಿಲು: ಯುವಜನತೆಗೆ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಕರೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 17: ಇಂದಿನ ಸ್ಪರ್ಧಾತ್ಮಕ ಹಾಗೂ ತಾಂತ್ರಿಕ ಯುಗದಲ್ಲಿ ಕೇವಲ ಶೈಕ್ಷಣಿಕ ಜ್ಞಾನದಿಂದ ಯಶಸ್ಸು ಸಾಧಿಸಲು ಸಾಧ್ಯವಿಲ್ಲ. ಜ್ಞಾನದ ಜೊತೆಗೆ ವೃತ್ತಿಪರ ಕೌಶಲ್ಯವನ್ನು ಬೆಳೆಸಿಕೊಂಡಾಗ ಆತ್ಮವಿಶ್ವಾಸ, ಸ್ವಾವಲಂಬನೆ ಹಾಗೂ ಯಶಸ್ವಿ ಬದುಕಿನ ಹಾದಿ ಸುಗಮವಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಹೇಳಿದರು.ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಭಗವಾನ್ ವಿಶ್ವಕರ್ಮರು…

Read More

ಪಿಡಬ್ಲ್ಯುಡಿ ಐಬಿಯನ್ನು ಸ್ಮಾರಕ ಹಾಗೂ ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಪಡಿಸಲು ದಲಿತ ಸಂಘರ್ಷ ಸಮಿತಿ ಆಗ್ರಹ

ಅಂಬೇಡ್ಕರ್ ಅವರ ಬೃಹತ್ ಪ್ರತಿಮೆ, ಗ್ರಂಥಾಲಯ ಸ್ಥಾಪನೆಗೆ ಒತ್ತಾಯ ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 16: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ವಿಜಯಪುರದಲ್ಲಿ ವಾಸ್ತವ್ಯ ಹೂಡಿದ್ದ ಐತಿಹಾಸಿಕ ಪಿಡಬ್ಲ್ಯುಡಿ ಐಬಿ ಕಟ್ಟಡವನ್ನು ಸಂರಕ್ಷಿಸಿ, ಸ್ಮಾರಕ ಹಾಗೂ ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಪಡಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಡಾ. ಜಿ. ಸಾಗರ ಬಣ) ಜಿಲ್ಲಾ ಸಮಿತಿ ಜಿಲ್ಲಾಡಳಿತವನ್ನು ಆಗ್ರಹಿಸಿದೆ.ಈ ಕುರಿತು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರಿಗೆ ಮನವಿ ಸಲ್ಲಿಸಿರುವ ಸಮಿತಿಯ ಜಿಲ್ಲಾ…

Read More

ರಾಣಿ ಚನ್ನಮ್ಮನ ಆದರ್ಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಲಿ: ಪ್ರೊ. ತ್ಯಾಗರಾಜ

ಸ್ವಾತಂತ್ರ್ಯ, ಸ್ವಾಭಿಮಾನ, ಧೈರ್ಯ ಮತ್ತು ಸಾಹಸದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಕರೆ ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 16: ಕಿತ್ತೂರು ರಾಣಿ ಚನ್ನಮ್ಮನ ಚರಿತ್ರೆ ಹಾಗೂ ಅವರ ಸ್ವಾತಂತ್ರ್ಯ, ಸ್ವಾಭಿಮಾನ, ಧೈರ್ಯ ಮತ್ತು ಸಾಹಸದ ಆದರ್ಶಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ವಿಶೇಷವಾಗಿ ವಿದ್ಯಾರ್ಥಿಗಳು ಈ ಆದರ್ಶಗಳನ್ನು ತಮ್ಮ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದು ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸಿ.ಎಂ. ತ್ಯಾಗರಾಜ ಕರೆ ನೀಡಿದರು.ನಗರದ ಡಾ. ಫ.ಗು. ಹಳಕಟ್ಟಿ ಸ್ನಾತಕೋತ್ತರ ಕೇಂದ್ರದಲ್ಲಿ ರಾಣಿ ಚನ್ನಮ್ಮ ಅಧ್ಯಯನ ಪೀಠದ…

Read More