ವಿಜಯಪುರ ಸೈನಿಕ ಶಾಲೆಯಲ್ಲಿಕಾರ್ಗಿಲ್ ವಿಜಯ ದಿವಸ ಆಚರಣೆ

ಸಪ್ತಸಾಗರ ವಾರ್ತೆ ವಿಜಯಪುರ, ಜು. 26:ಕಾರ್ಗಿಲ್ ವಿಜಯ ದಿವಸದ 26 ನೇ ವಾರ್ಷಿಕೋತ್ಸವವನ್ನು ನಗರದ ಸೈನಿಕ ಶಾಲೆ ಆವರಣದಲ್ಲಿ ಶನಿವಾರ ಆಚರಿಸಲಾಯಿತು.ಇಂದು ನಮ್ಮ ದೇಶಭಕ್ತಿಯನ್ನು ಪ್ರದರ್ಶಿಸುವ ಮತ್ತು ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ ಯೋಧರನ್ನು ಸ್ಮರಿಸುವ ದಿನವಾಗಿದೆ. 1999 ರ ಕಾರ್ಗಿಲ್ ಯುದ್ಧದ ಸಮಯದಲ್ಲಿ ದೇಶಕ್ಕಾಗಿ ಜೀವ ತ್ಯಾಗ ಮಾಡಿದ ಭಾರತೀಯ ಸೈನಿಕರ ಶೌರ್ಯಕ್ಕೆ ಗೌರವ ಸಲ್ಲಿಸಲು ಪ್ರತಿ ವರ್ಷ ಜುಲೈ 26 ರಂದು ‘ಕಾರ್ಗಿಲ್ ವಿಜಯ ದಿವಸ್’ ವನ್ನು ಆಚರಿಸಲಾಗುತ್ತದೆ. ಈ ಘಟನೆಯು ಭಾರತ ಮತ್ತು ಪಾಕಿಸ್ತಾನದ…

Read More

ಗ್ಯಾರಂಟಿಗಳಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿ.ಎಂ ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ, ಅರಸೀಕೆರೆ, ಜು.26:ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ರಾಜ್ಯ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಅರಸೀಕೆರೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.ಬಿಜೆಪಿಯವರಿಗೆ ಆರ್ಥಿಕತೆ ಅರ್ಥವಾಗುವುದಿಲ್ಲ ಎಂದು ನುಡಿದರುಕ್ಷೇತ್ರದ ಜನಪರ ಅಭಿವೃದ್ಧಿ ಕೆಲಸ ಮಾಡುವುದರಲ್ಲಿ, ಸದನದಲ್ಲಿ ಕ್ಷೇತ್ರದ ಬಗ್ಗೆ ಧ್ವನಿ ಎತ್ತುವುದರಲ್ಲ ಶಾಸಕ ಶಿವಲಿಂಗೇಗೌಡರು ಮುಂದಿದ್ದಾರೆ. ನಾಲ್ಕು ಬಾರಿ ಚುನಾವಣೆಯಲ್ಲಿ ಗೆದ್ದಿರುವ ಅವರು ಮುಂದಿನ ಚುನಾವಣೆಯಲ್ಲೂ ಗೆಲ್ಲುವುದು ಶತಸಿದ್ಧ ಎಂದು…

Read More

ನಾಳೆ ಬಿ.ಎಲ್.ಡಿ.ಇ ಹೈಟೆಕ್ ಆಯುರ್ವೇದ ಆಸ್ಪತ್ರೆ ಉದ್ಘಾಟನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 26:ಬಿ.ಎಲ್.ಡಿ.ಇ ಆಸ್ಪತ್ರೆ ನಗರ ಆರೋಗ್ಯ ಕೇಂದ್ರ ಮತ್ತು ಹೈಟೆಕ್ ಆಯುರ್ವೇದ ಆಸ್ಪತ್ರೆ ಹಾಗೂ ಶೈಕ್ಷಣಿಕ ಭವನದ ಉದ್ಘಾಟನೆ ಸಮಾರಂಭ ಜು. 27 ರಂದು ನಗರದಲ್ಲಿ ನಡೆಯಲಿದೆ.ಬಿ.ಎಲ್.ಡಿ.ಇ. ಸಂಸ್ಥೆಯ ಎ.ವಿ.ಎಸ್.ಆಯುರ್ವೇದ ಮಹಾವಿದ್ಯಾಲಯ ಆಸ್ಪತ್ರೆ ಹಾಗೂ ಸಂಶೋಧನ ಕೇಂದ್ರದ ಆವರಣದಲ್ಲಿ ಬೆಳಗ್ಗೆ 8 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಬೆಂಗಳೂರಿನ ಶ್ರೀ ಬೇಲಿಮಠ ಮಹಾಸಂಸ್ಥಾನದ ಶ್ರೀ ಶಿವಾನುಭವ ಚರಮೂರ್ತಿ ಶಿವರುದ್ರ ಮಹಾಸ್ವಾಮಿಜಿ ಉದ್ಘಾಟನೆ ನೆರವೇರಿಸಲಿದ್ದಾರೆ.ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ…

Read More

ಫೋಟೋಗ್ರಾಫರ್ಸ್ ಅಕಾಡೆಮಿ ಸ್ಥಾಪಿಸಲು ಪ್ರಾಮಾಣಿಕ ಪ್ರಯತ್ನ: ಸಚಿವ ಎಂ.ಬಿ. ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 26:ಛಾಯಾಗ್ರಾಹಕರ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿದೆ ಎಂದು ಕೈಗಾರಿಕೆ, ಮೂಲ ಸೌಲಭ್ಯ ಅಭಿವೃದ಼್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದ್ದಾರೆ.ಶನಿವಾರ ನಗರದಲ್ಲಿ ಕರ್ನಾಟಕ ಛಾಯಾಗ್ರಾಹಕರ ಸಂಘ ಜಿಲ್ಲಾ ಘಟಕ‌ ಆಯೋಜಿಸಿದ್ದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಹಾಗೂ ಬೃಹತ್ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.ಇಂದಿನ‌ ತಂತ್ರಜ್ಞಾನ‌ ಯುಗದಲ್ಲಿ ಛಾಯಾಗ್ರಾಹಕರಿಗೂ ಅನೇಕ‌ ಸವಾಲುಗಳಿದ್ದು, ಆರ್ಟಿಫಿಶಿಯಲ್ ಇಂಟಲಿಜನ್ಸ್ ಮತ್ತು ಡಿಜಿಟಲ್ ತಂತ್ರಜ್ಞಾನಕ್ಕೆ ಬದಲಾವಣೆಗೆ ತಕ್ಕಂತೆ ವೃತ್ತಿಕೌಶಲ್ಯವನ್ನು ಹೆಚ್ಚಿಸಿಕೊಳ್ಳಬೇಕು. ಹಿಂದಿನ ದಿನಗಳಲ್ಲಿ ನಮ್ಮ ಹಿರಿಯ ಛಾಯಾಗ್ರಾಹಕರಿಗೆ…

Read More

ನಮ್ಮ ಸೈನಿಕರು ಧೈರ್ಯ-ದೇಶಭಕ್ತಿಯ ಪ್ರತೀಕ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 26:ಕಾರ್ಗಿಲ್ ಪರಂಪರೆಯು ಪ್ರತಿ ವಿದ್ಯಾರ್ಥಿಗೆ ಭಾರತೀಯ ಸೈನಿಕರ ಧೈರ್ಯ, ತ್ಯಾಗ, ಬಲಿದಾನ, ಸಾಹಸದ ಮಹತ್ವವನ್ನು ತಿಳಿಸುತ್ತದೆ. ಭಾವೈಕ್ಯತೆಗಾಗಿ ಇಂದಿನ ಮಕ್ಕಳು ಏಕತೆ, ಗೌರವದ ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಶನಿವಾರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ‘ಕಾರ್ಗಿಲ್‌ ವಿಜಯೋತ್ಸವ-2025 ಹುತಾತ್ಮ ವೀರಯೋಧರಿಗೆ ನಮನ ಕಾರ್ಯಕ್ರಮ’ದಲ್ಲಿ ಅವರು ಮಾತನಾಡಿದರು.ಕಾರ್ಗಿಲ್ ಯುದ್ಧ ವೀರರ ಕಥೆಗಳು ರಾಷ್ಟ್ರಕ್ಕಾಗಿ ತ್ಯಾಗ, ಧೈರ್ಯ ಮತ್ತು ಸಮರ್ಪಣೆಯ ಅತ್ಯುನ್ನತ ಆದರ್ಶಗಳನ್ನು ಸಾರುತ್ತವೆ….

Read More

ದೋಷರಹಿತ-ಅಪಘಾತ ರಹಿತ ಹೆಸ್ಕಾಂಗೆ ಕ್ರಮ- ಅಧ್ಯಕ್ಷ ಸೈಯ್ಯದ ಅಜೀಮಪೀರ ಎಸ್.ಖಾದ್ರಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 25:ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಇಂಧನ ಸಚಿವರ ಮಾರ್ಗದರ್ಶನದಲ್ಲಿ ಈಗಾಗಲೇ ಇರುವ ಸಂಪನ್ಮೂಲಗಳ ಸದ್ಬಳಕೆ ಮಾಡಿಕೊಂಡು ಇರುವ ಸಣ್ಣ ಪುಟ್ಟ ಸಮಸ್ಯೆಗಳನ್ನು ಪರಿಹರಿಸಿ ದೋಷರಹಿತ, ಅಪಘಾತ ರಹಿತ ಹೆಸ್ಕಾಂವನ್ನಾಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುತ್ತಿದೆ ಎಂದು ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಅಧ್ಯಕ್ಷ, ಮಾಜಿ ಶಾಸಕ ಸೈಯ್ಯದ ಅಜೀಮಪೀರ ಎಸ್.ಖಾದ್ರಿ ಅವರು ಹೇಳಿದರು.ನಗರದ ಬಿಡಿಎ ಕಚೇರಿಯ ಹತ್ತಿರವಿರುವ ಹೆಸ್ಕಾಂ ಅಧೀಕ್ಷಕ ಅಭಿಯಂತರರ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹೆಸ್ಕಾಂ ವ್ಯಾಪ್ತಿಯ 7…

Read More

ಮಕ್ಕಳ ಹಕ್ಕುಗಳ ರಕ್ಷಣೆಗೆ ಮುಂದಾಗಿ- ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 25:ಮಕ್ಕಳ ರಕ್ಷಣೆ ಮತ್ತು ಅವರ ಉಜ್ವಲ ಭವಿಷ್ಯಕ್ಕಾಗಿ ಸರ್ಕಾರ ವಿವಿಧ ಇಲಾಖೆಗಳ ಮೂಲಕ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಯೋಜನೆಗಳನ್ನು ಅಧಿಕಾರಿಗಳು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಮೂಲಕ ಮಕ್ಕಳ ರಕ್ಷಣೆಗೆ ಮುಂದಾಗಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಅವರು ಹೇಳಿದರು.ಮಕ್ಕಳ ನಿರ್ದೇಶನಾಲಯ ಬೆಂಗಳೂರು, ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ವಿವಿಧ ಭಾಗಿದಾರ…

Read More

ಧರ್ಮಸ್ಥಳ ಪ್ರಕರಣ: ಸೂಕ್ತ ತನಿಖೆಗೆ ಆಗ್ರಹಿಸಿ ಸಿಎಂಗೆ ಆಮ್ ಆದ್ಮಿ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ,ಜು. 25:ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆ ನಡೆಸಿ ನೊಂದವರಿಗೆ ನ್ಯಾಯ ದೊರಕಿಸಿ ಕೊಡಬೇಕು ಎಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆಮ್ ಆದ್ಮಿ ಪಾರ್ಟಿ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.ಅನಂತರ ಜಿಲ್ಲಾಧಿಕಾರಿ ಮೂಲಕ ಈ ಬಗ್ಗೆ ಸಿಎಂ ಹಾಗೂ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.ಆಮ್ ಆದ್ಮಿ ಪಾರ್ಟಿ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ ಸೋಲಾಪುರ ಮಾತನಾಡಿ, ಕರ್ನಾಟಕದ ನಾಗರಿಕರ ಪರವಾಗಿ ಮತ್ತು 2012 ರಲ್ಲಿ ಧರ್ಮಸ್ಥಳದಲ್ಲಿ ಕ್ರೂರವಾಗಿ ಅತ್ಯಾಚಾರ ಮತ್ತು ಕೊಲೆಗೆ…

Read More

ತಾಳಿಕೋಟೆಯಲ್ಲಿ ಕಳ್ಳರ ಚಡ್ಡಿ ಗ್ಯಾಂಗ್ ಸಿಸಿ ಕ್ಯಾಮೆರಾದಲ್ಲಿ ಸೆರೆ: ಜನರಲ್ಲಿ ಆತಂಕ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 25:ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಚಡ್ಡಿ ಗ್ಯಾಂಗ್ ಕಾಣಿಸಿಕೊಂಡು ಜನರಲ್ಲಿ ಭಯದ ವಾತಾವರಣ ಮೂಡಿಸಿದೆ.ಈ ಹಿಂದೆ ವಿಜಯಪುರ ಜಿಲ್ಲೆಯಲ್ಲಿ ಚಡ್ಡಿ ಗ್ಯಾಂಗ್ ಜನರ ನಿದ್ರೆಗೆಡಿಸಿ ಭಯದ ವಾತಾವರಣ ಮೂಡಿಸಿತ್ತು. ಕೆಲವು ತಿಂಗಳುಗಳಿಂದ ಚಡ್ಡಿ ಗ್ಯಾಂಗ್ ಉಪಟಳ ಇಲ್ಲವಾಗಿ ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು. ಆದರೆ ಈಗ ಮತ್ತೆ ಜಿಲ್ಲೆಯ ತಾಳಿಕೋಟೆ ಪಟ್ಟಣದ ಗಣೇಶನಗರದಲ್ಲಿಚಡ್ಡಿ ಗ್ಯಾಂಗ್ ಕದೀಮರು ಬಾಲ ಬಿಚ್ಚಿದ್ದಾರೆ. ಈ ಕದೀಮರ ಚಲನವಲನ ಸಿಸಿ ಕೆಮೆರಾದಲ್ಲಿ ಸೆರೆಯಾಗಿದೆ.ಆರು ಜನರು ಇರುವ ಕಳ್ಳರ ಚಡ್ಡಿ ಗ್ಯಾಂಗ್…

Read More

ಜು. 27 ರಂದು ರಾಜ್ಯ ಮಟ್ಟದ ಆರ್ಮ್ ಕುಸ್ತಿ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 25:ಜು. 27 ರಂದು ರಾಜ್ಯ ಮಟ್ಟದ ಆರ್ಮ್ ಕುಸ್ತಿ ಕ್ರೀಡಾಕೂಟ ಬೆಳಗಾವಿ ಜಿಲ್ಲೆಯ ಸವದತ್ತಿಯ ಗುರುರಾಜ ಭವನ್ ಲಿಂಗರಾಜ್ ಕಾಲೇಜ್ ನಲ್ಲಿ ನಡೆಯಲಿದೆ.ಕರ್ನಾಟಕ ಆರ್ಮ್ ಕುಸ್ತಿ,ಸಂಸ್ಥೆ ಮತ್ತು ಛತ್ರಪತಿ ಫೌಂಡೇಶನ್ ಹಾಗೂ ಸವದತ್ತಿ ವಿ ಎಸ್ ಫಿಟ್ನೆಸ್ ಸೆಂಟರ್ ಇವರ ವತಿಯಿಂದ ರಾಜ್ಯ ಮಟ್ಟದ ಆರ್ಮ್ ಕುಸ್ತಿ ಕ್ರೀಡಾಕೂಟ ಆಯೋಜಿಸಲಾಗಿದೆ. ಪುರುಷರ ತೂಕದ ವಿವರ- 50- 55, 60-65,70-75,-80-85,-90-95,-100+100 ಈ ರೀತಿ 12 ವಿಭಾಗದಲ್ಲಿ ಕ್ರೀಡಾಕೂಟ ನಡೆಯಲಿದೆ.ಚಾಂಪಿಯನ್ ಆಫ್ ದಿ ಚಾಂಪಿಯನ್,…

Read More