ವಲಯ ಮಟ್ಟದ ಕ್ರೀಡಾಕೂಟದಲ್ಲಿ ಹಳಕಟ್ಟಿ ಶಾಲಾ ಮಕ್ಕಳ ಮಿಂಚಿನ ಸಾಧನೆಕಬಡ್ಡಿಯಲ್ಲಿ ಪ್ರಥಮ, ಹಲವು ಸ್ಪರ್ಧೆಗಳಲ್ಲಿ ಪ್ರಶಸ್ತಿ; ತಾಲೂಕು ಮಟ್ಟಕ್ಕೆ ಆಯ್ಕೆ

ಸಪ್ತಸಾಗರ ವಾರ್ತೆ,ಆಲಮಟ್ಟಿ, ಸೆ. 16: ನಿಡಗುಂದಿ ‘ಎ’ ವಲಯ ಮಟ್ಟದ 2026-27ನೇ ಸಾಲಿನ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಆಲಮಟ್ಟಿಯ ಎಸ್.ವಿ.ವಿ. ಸಂಸ್ಥೆಯ ರಾವಬಹದ್ದೂರ ಡಾ. ಫ.ಗು. ಹಳಕಟ್ಟಿ (ಆರ್.ಬಿ.ಪಿ.ಜಿ.) ಪ್ರೌಢಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ.ಶಾಲಾ ಶಿಕ್ಷಣ ಇಲಾಖೆ, ವಿಜಯಪುರ ಜಿಲ್ಲಾ ಪಂಚಾಯತ್ ಹಾಗೂ ಬಸವನಬಾಗೇವಾಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿಗಳ ಸಹಯೋಗದಲ್ಲಿ, ನಿಡಗುಂದಿ ಬಿ.ಎಂ.ಎಸ್. ಪಬ್ಲಿಕ್ ಸ್ಕೂಲ್ ಆತಿಥ್ಯದಲ್ಲಿ ಆರ್.ಬಿ.ಪಿ.ಜಿ. ಹಳಕಟ್ಟಿ ಪ್ರೌಢಶಾಲಾ ಮೈದಾನದಲ್ಲಿ ಕ್ರೀಡಾಕೂಟ ಆಯೋಜಿಸಲಾಗಿತ್ತು. ಕಬಡ್ಡಿಯಲ್ಲಿ ಜಯಭೇರಿ ಬಾಲಕರ…

Read More

ಸತ್ಸಂಗವು ಆಧ್ಯಾತ್ಮಿಕ ಚೈತನ್ಯಕ್ಕೆ ದಾರಿ: ಡಾ. ಬಿ.ಎಂ. ಪಾಟೀಲ ಗುರೂಜಿ

ವಿಜಯಪುರದಲ್ಲಿ ಮಹಾ ಸತ್ಸಂಗ; ಭಕ್ತಿ, ಜ್ಞಾನ, ಸಂಗೀತದ ಅಪೂರ್ವ ಸಂಗಮ ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 16:ಸತ್ಸಂಗವು ಕೇವಲ ಧಾರ್ಮಿಕ ಕಾರ್ಯಕ್ರಮವಲ್ಲ. ಅದು ಮನಸ್ಸಿಗೆ ನೆಮ್ಮದಿ, ಜೀವನಕ್ಕೆ ಶಿಸ್ತು ಹಾಗೂ ಸಮಾಜದಲ್ಲಿ ಪ್ರೀತಿ, ಸೌಹಾರ್ದತೆ ಬೆಳೆಸುವ ಶಕ್ತಿಯುತ ಮಾಧ್ಯಮವಾಗಿದೆ ಎಂದು ಆರ್ಟ್ ಆಫ್ ಲಿವಿಂಗ್‌ನ ಡಾ. ಬಿ.ಎಂ. ಪಾಟೀಲ ಗುರೂಜಿ ಹೇಳಿದರು.ನಗರದ ಸಮರ್ಥ ಬಡಾವಣೆಯ ಶ್ರೀ ಸಾಕ್ಷಿ ಗಜಾನನ ದೇವಸ್ಥಾನದ ಮಹಾಮಂಡಳದ ವತಿಯಿಂದ ಗಜಾನನ ಉತ್ಸವ ಸಮಿತಿಯ ಸಹಯೋಗದಲ್ಲಿ ಆರ್ಟ್ ಆಫ್ ಲಿವಿಂಗ್ ಬೆಂಗಳೂರು ಹಾಗೂ ವಿಜಯಪುರ…

Read More

ಶಿಕ್ಷಣದಷ್ಟೇ ದೈಹಿಕ ಶಿಕ್ಷಣ, ಕ್ರೀಡೆಗೂ ಆದ್ಯತೆ ನೀಡಿ: ಲಕ್ಷ್ಮಣ ನಿಂಬರಗಿ

ಬಿ.ಎಲ್.ಡಿ.ಇ. ನರ್ಸಿಂಗ್ ಕಾಲೇಜಿನಲ್ಲಿ ವಿಭಾಗೀಯ ಪುರುಷರ ಕಬಡ್ಡಿ ಪಂದ್ಯಾವಳಿಗೆ ಚಾಲನೆ ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 16: ಶಿಕ್ಷಣಕ್ಕೆ ನೀಡುವಷ್ಟೇ ಮಹತ್ವವನ್ನು ದೈಹಿಕ ಶಿಕ್ಷಣ ಮತ್ತು ಕ್ರೀಡೆಗಳಿಗೂ ನೀಡಬೇಕು. ಕ್ರೀಡೆ ವಿದ್ಯಾರ್ಥಿಗಳಲ್ಲಿ ಶಿಸ್ತು, ಏಕಾಗ್ರತೆ, ತಂಡದ ಸಹಕಾರ ಹಾಗೂ ಆತ್ಮವಿಶ್ವಾಸ ಬೆಳೆಸುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹೇಳಿದರು.ನಗರದ ಬಿ.ಎಲ್.ಡಿ.ಇ. ಸಂಸ್ಥೆಯ ಶ್ರೀ ಬಿ.ಎಂ. ಪಾಟೀಲ ನರ್ಸಿಂಗ್ ಮಹಾವಿದ್ಯಾಲಯದಲ್ಲಿ ಬುಧವಾರ ಆಯೋಜಿಸಿದ್ದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕಲಬುರಗಿ ವಿಭಾಗೀಯ ಪುರುಷರ ಕಬಡ್ಡಿ…

Read More

ಸಮಾಜದ ಅಭಿವೃದ್ಧಿಯಲ್ಲಿ ಇಂಜಿನಿಯರ್‌ಗಳ ಪಾತ್ರ ಮಹತ್ವದ್ದು: ರಾಕೇಶ ಜೋಶಿ

ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಇಂಜಿನಿಯರ್ಸ್ ದಿನಾಚರಣೆ ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 16: ಸಮಾಜದ ಅಭಿವೃದ್ಧಿ ಹಾಗೂ ದೇಶದ ಪ್ರಗತಿಯಲ್ಲಿ ಇಂಜಿನಿಯರ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ರೋಟರಿ ಸಂಸ್ಥೆಯ ಅಧ್ಯಕ್ಷ ರಾಕೇಶ್ ಗೋಪಾಲ್ ಜೋಶಿ ಹೇಳಿದರು.ನಗರದ ಸರ್ಕಾರಿ ಪಾಲಿಟೆಕ್ನಿಕ್ ಮಹಾವಿದ್ಯಾಲಯದಲ್ಲಿ ರೋಟರಿ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಇಂಜಿನಿಯರ್ಸ್ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ನಿರಂತರವಾಗಿ ನಡೆಯುತ್ತಿರುವ ಬೆಳವಣಿಗೆಗಳಿಗೆ ಇಂಜಿನಿಯರ್‌ಗಳ ಕೊಡುಗೆ ಅಪಾರವಾಗಿದೆ. ಮೂಲಸೌಕರ್ಯ, ಕೈಗಾರಿಕೆ, ಕೃಷಿ, ಸಾರಿಗೆ ಹಾಗೂ ಮಾಹಿತಿ ತಂತ್ರಜ್ಞಾನ ಸೇರಿದಂತೆ…

Read More

ಇಂಡಿ ತಾಲೂಕಿನ ಕೆರೆಗಳಿಗೆ ನೀರು ತುಂಬಿಸಲು ರೈತರ ಆಗ್ರಹ

ಬೇಡಿಕೆ ಈಡೇರದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹದ ಎಚ್ಚರಿಕೆ ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 16: ತೀವ್ರ ಬರದ ಸಂಕಷ್ಟ ಎದುರಿಸುತ್ತಿರುವ ಇಂದಿ ತಾಲೂಕಿನ ಕೆರೆಗಳಿಗೆ ತಕ್ಷಣ ನೀರು ತುಂಬಿಸುವುದು ಹಾಗೂ ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ ಕಲ್ಪಿಸುವಂತೆ ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ ಕರ್ನಾಟಕ ಉತ್ತರ ಪ್ರಾಂತ, ವಿಜಯಪುರ ಜಿಲ್ಲಾ ಘಟಕವು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರಿಗೆ ಮನವಿ ಸಲ್ಲಿಸಿದೆ.ಇಂಂಡಿ ತಾಲೂಕಿನ ಕೆರೆಗಳಿಗೆ ಪೈಪ್‌ಗಳ ಮೂಲಕ ನೀರು ತುಂಬಿಸುವ ಯೋಜನೆ ಇದ್ದರೂ, ಇದುವರೆಗೆ…

Read More

ನಂದಿ ಸಹಕಾರಿ ಪತ್ತಿನ ಸಂಘಕ್ಕೆ ₹76.63 ಲಕ್ಷ ಲಾಭ

ಕೃಷ್ಣನಗರದಲ್ಲಿ 17ನೇ ವಾರ್ಷಿಕ ಸರ್ವಸಾಧಾರಣ ಸಭೆ ಸಪ್ತಸಾಗರ ವಾರ್ತೆ, ಕೃಷ್ಣನಗರ, ಸೆ. 16:ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕೃಷ್ಣನಗರದ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಕಬ್ಬು ಬೆಳೆಗಾರರ ಸದಸ್ಯರ ಪತ್ತಿನ ಸಹಕಾರಿ ಸಂಘವು 2025-26ನೇ ಸಾಲಿನಲ್ಲಿ ₹76.63 ಲಕ್ಷ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಶಶಿಕಾಂತಗೌಡ ಭೀಮನಗೌಡ ಪಾಟೀಲ (ಶಿರಬೂರ) ತಿಳಿಸಿದರು.ನಗರದ ದಿವಂಗತ ಕೆ.ಎಚ್. ಪಾಟೀಲ ಸಭಾಭವನ (ರೈತ ಭವನ)ದಲ್ಲಿ ನಡೆದ ಸಂಘದ 17ನೇ ವಾರ್ಷಿಕ ಸರ್ವಸಾಧಾರಣ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸದಸ್ಯರು, ನಿರ್ದೇಶಕರು,…

Read More

ಪ್ರಜಾಪ್ರಭುತ್ವವೆಂದರೆ ಐದು ವರ್ಷಕ್ಕೊಮ್ಮೆ ಮತ ಚಲಾಯಿಸುವುದಷ್ಟೇ ಅಲ್ಲ; ಅದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಶಾಸಕ ಕಟಕದೊಂಡ

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ, ಯುವ ಸಂಸತ್ತು ಸಭೆಗೆ ಚಾಲನೆ ಸಪ್ತಸಾಗರ ವಾರ್ತೆ, ವಿಜಯಪುರ, ಸೆ.15:ಪ್ರಜಾಪ್ರಭುತ್ವವೆಂದರೆ ಐದು ವರ್ಷಕ್ಕೊಮ್ಮೆ ಮತ ಚಲಾಯಿಸುವುದಷ್ಟೇ ಅಲ್ಲ; ಅದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಸಂವಿಧಾನದ ಆಶಯದಂತೆ ಪರಸ್ಪರ ಚರ್ಚೆ, ಸಮಾಲೋಚನೆ, ಸಹಕಾರ, ಸಮಾನತೆ ಹಾಗೂ ಭ್ರಾತೃತ್ವದೊಂದಿಗೆ ಎಲ್ಲರನ್ನು ಒಗ್ಗೂಡಿಸಿಕೊಂಡು ಸಾಗುವುದೇ ಪ್ರಜಾಪ್ರಭುತ್ವದ ನಿಜವಾದ ಸೌಂದರ್ಯ ಎಂದು ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ ಹೇಳಿದರು.ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ…

Read More

‘ಸಿದ್ದರಾಮಯ್ಯ ಬಾಯಿಂದ ಸತ್ಯ ಹೇಳಿಸಲಿ; ಇಲ್ಲವಾದರೆ ನನ್ನ ಆರೋಪ ವಾಪಸ್ ಪಡೆಯುವುದಿಲ್ಲ’

ಎಂ.ಬಿ. ಪಾಟೀಲ ವಿರುದ್ಧ ಯತ್ನಾಳ ಮತ್ತೆ ಗುಡುಗು; ‘ದ್ರೋಹದ ಭಯಕ್ಕೆ ಸಿದ್ದರಾಮಯ್ಯ ಮನೆಗೆ ಹೋಗಿ ಟ್ರೀಟ್ಮೆಂಟ್ ಪಡೆಯಿರಿ’ ಎಂದು ಟಾಂಗ್ ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 15:ಮುಖ್ಯಮಂತ್ರಿ ಇದ್ದಾಗ ಸಿದ್ದರಾಮಯ್ಯ ಅವರಿಗೆ ಅವರದೇ ಆತ್ಮೀಯರಾದ ಸಚಿವರಾದ ಜಮೀರ್ ಅಹ್ಮದ್ ಖಾನ್, ಸತೀಶ ಜಾರಕಿಹೊಳಿ ಹಾಗೂ ಎಂ.ಬಿ. ಪಾಟೀಲ ಸಾಥ್ ನೀಡಿಲ್ಲ ಎಂಬ ತಮ್ಮ ಆರೋಪಕ್ಕೆ ಬದ್ಧವಾಗಿರುವುದಾಗಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಘೋಷಿಸಿದ್ದಾರೆ.ಮಂಗಳವಾರ ವಿಜಯಪುರದಲ್ಲಿ ಸಚಿವ ಎಂ.ಬಿ. ಪಾಟೀಲ ವಿರುದ್ಧ ಮತ್ತೊಮ್ಮೆ ತೀವ್ರ ವಾಗ್ದಾಳಿ ನಡೆಸಿದ…

Read More

ಅನೇಕತೆಯಲ್ಲಿ ಏಕತೆ ಸಾಧಿಸುವುದೇ ಭಾರತದ ಶಕ್ತಿ: ಎಂ.ಬಿ. ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 15:ಧಾರ್ಮಿಕ ಪರಂಪರೆ, ಆಧ್ಯಾತ್ಮಿಕತೆ ಹಾಗೂ ಸಾಂಸ್ಕೃತಿಕ ವೈವಿಧ್ಯತೆಯಲ್ಲಿ ಭಾರತ ಜಗತ್ತಿನಲ್ಲಿಯೇ ಶ್ರೇಷ್ಠ ಸ್ಥಾನ ಹೊಂದಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು.ಬಬಲೇಶ್ವರ ತಾಲೂಕಿನ ಬೆಳ್ಳುಬ್ಬಿ ಗ್ರಾಮದ ಮಳೆ ಮಲ್ಲೇಶ್ವರ ದೇವಸ್ಥಾನದಲ್ಲಿ ಸೋಮವಾರ ನಡೆದ ಅಜಾತ ನಾಗಲಿಂಗ ಮಹಾಸ್ವಾಮಿಗಳ ಮಹಾಪುರಾಣ ಹಾಗೂ ಭಜನಾ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.ಭಕ್ತಿ, ಜ್ಞಾನ ಮತ್ತು ಸಂಸ್ಕೃತಿಯ ಸಂಗಮವಾಗಿರುವ ಧಾರ್ಮಿಕ ಕಾರ್ಯಕ್ರಮಗಳು ಜನರಲ್ಲಿ ಮಾನವೀಯ ಮೌಲ್ಯಗಳನ್ನು ಜಾಗೃತಗೊಳಿಸುತ್ತವೆ. ಪುರಾಣ ಹಾಗೂ…

Read More

ಗಣೇಶೋತ್ಸವದ ಸಾರ್ಥಕತೆಗೆ ಆರೋಗ್ಯ ಸೇವೆಯ ಸಂಕಲ್ಪ

ಶಂಕರಲಿಂಗ ಗಜಾನನ ತರುಣ ಮಂಡಳಿಯಿಂದ ಸೆ.16ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 15: ಗಣೇಶೋತ್ಸವವನ್ನು ಸಾಮಾಜಿಕ ಸೇವೆಯೊಂದಿಗೆ ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಶ್ರೀ ಶಂಕರಲಿಂಗ ಗಜಾನನ ತರುಣ ಮಂಡಳಿ ವತಿಯಿಂದ ‘ಸಂಕಲ್ಪ ಸಿದ್ಧಿ’ ಮಹಾ ಗಣಪತಿ ಉತ್ಸವದ ಅಂಗವಾಗಿ ಸೆ.16ರಂದು ಬೆಳಿಗ್ಗೆ 10 ಗಂಟೆಯಿಂದ ಶ್ರೀ ಶಂಕರಲಿಂಗ ದೇವಸ್ಥಾನದ ಆವರಣದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ.ಶಿಬಿರದಲ್ಲಿ ವಿವಿಧ ಆರೋಗ್ಯ ಸಮಸ್ಯೆಗಳ ಕುರಿತು ತಜ್ಞ ವೈದ್ಯರಿಂದ ತಪಾಸಣೆ ಮತ್ತು ಅಗತ್ಯ…

Read More