ಸಾಂಸ್ಕೃತಿಕ ಚಟುವಟಿಕೆ ವ್ಯಕ್ತಿತ್ವ ವಿಕಸನಕ್ಕೆ ಬುನಾದಿ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 11:ವಿದ್ಯಾರ್ಥಿಗಳಿಗೆ ಪಠ್ಯದ ಜತೆ ಪಠ್ಯೇತರ ಚಟುವಟಿಕೆ ಸಹ ಮುಖ್ಯ. ಸಾಂಸ್ಕೃತಿಕ ಚಟುವಟಿಕೆ ಅವರ ಜೀವನದ ಅವಿಭಾಜ್ಯ ಅಂಗವಾಗಬೇಕು. ಅವು ಇಡೀ ಜೀವನದ ಯಶಸ್ಸು ಮತ್ತು ವ್ಯಕ್ತಿತ್ವ ವಿಕಸನಕ್ಕೆ ಭದ್ರ ಬುನಾದಿಯಾಗಿವೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ಶನಿವಾರ ನಗರದ ಬಸವೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನೆ ಹಾಗೂ 2026-27ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ,…

Read More

ವಿಜಯಪುರ: ಡಿವೈಡರ್‌ಗೆ ಕಾರು ಡಿಕ್ಕಿ; ತಾಯಿ-ಇಬ್ಬರು ಪುತ್ರರ ದುರ್ಮರಣ

ಸಪ್ತಸಾಗರ ವಾರ್ತೆ,ವಿಜಯಪುರ, ಜು.10:ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ದಾರುಣ ಘಟನೆ ಶುಕ್ರವಾರ ನಡೆದಿದೆ.ಮೃತರನ್ನು ಸತ್ಯವೇಣಿ (38), ಅವರ ಪುತ್ರರಾದ ಹರಿವೆಂಕಟರಾಮ್ (20) ಹಾಗೂ ಜಶ್ವಂತ (18) ಎಂದು ಗುರುತಿಸಲಾಗಿದೆ. ಕುಟುಂಬದ ಮುಖ್ಯಸ್ಥ ರಾಘವೇಂದ್ರ (41) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಕಾರಟಗಿಯಿಂದ ಶಿರಡಿಗೆ ತೆರಳುತ್ತಿದ್ದ ಈ ಕುಟುಂಬದ KA-33 N-4689 ನೋಂದಣಿಯ ಕ್ರೆಟಾ ಕಾರನ್ನು ಹರಿವೆಂಕಟರಾಮ್ ಚಾಲನೆ ಮಾಡುತ್ತಿದ್ದರು. ಈ…

Read More

ಎಸ್‌ ಐ ಆರ್‌ ಗೆ ಸಹಾಯವಾಣಿ ಕೇಂದ್ರ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 10:ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆಮತದಾರರಿಗೆ ಗಣತಿ ನಮೂನೆಗಳನ್ನು ಭರ್ತಿ ಮಾಡುವ ಅನೂಕೂಲಕ್ಕಾಗಿ ಪ್ರತಿ ವಾರ್ಡ್ ನಲ್ಲಿ ಮತದಾರರ ಸಹಾಯವಾಣಿ ಕೇಂದ್ರ ಸ್ಥಾಪಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಅವರು ತಿಳಿಸಿದ್ದಾರೆ.ಮಹಾನಗರ ಪಾಲಿಕೆಯ ಘನತ್ಯಾಜ್ಯ ವಾಹನಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಸಾರ್ವಜನಿಕರಿಗೆ ಧ್ವನಿ ಮುದ್ರಣ ಮೂಲಕ ಪ್ರಚಾರ ಮಾಡಲಾಗುತ್ತಿದೆ.ವಿಜಯಪುರ ನಗರ ಪ್ರದೇಶದಲ್ಲಿ ಈ ಮೊದಲು ವಾಸವಿದ್ದ ಸ್ಥಳದ ಮತದಾರ ಪಟ್ಟಿಯಲ್ಲಿ ಹೆಸರು ದಾಖಲೆಯಿದ್ದು, ಹೊಸ…

Read More

ಗೂಂಡಾ ಕಾಯ್ದೆಯಡಿ ಕುಖ್ಯಾತ ರೌಡಿ ತುಳಸಿರಾಮ್ ಬನಸೋಡೆ ಬಂಧನಕ್ಕೆ ಜಿಲ್ಲಾಧಿಕಾರಿ ಆದೇಶ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 10:ಜಿಲ್ಲೆಯ ಸಾರ್ವಜನಿಕ ಶಾಂತಿ, ಸುವ್ಯವಸ್ಥೆ ಹಾಗೂ ಕಾನೂನು ಸುವ್ಯವಸ್ಥೆಗೆ ಭಂಗ ಉಂಟುಮಾಡುವ ಚಟುವಟಿಕೆಗಳಲ್ಲಿ ತೊಡಗಿದ್ದಾನೆ ಎಂಬ ಆರೋಪದ ಮೇರೆಗೆ ವಿಜಯಪುರ ನಗರದ ಗಣೇಶನಗರ ನಿವಾಸಿ, ಮೂಲತಃ ಇಂಡಿ ತಾಲೂಕಿನ ಅರ್ಜನಾಳ ಗ್ರಾಮದ *ತುಳಸಿರಾಮ್ ತಂದೆ ಪಂಡಿತ ಹರಿಜನ @ ಬನಸೋಡೆ (27) ವಿರುದ್ಧ ಗೂಂಡಾ ಕಾಯ್ದೆಯಡಿ ಬಂಧನ ಆದೇಶ ಹೊರಡಿಸಲಾಗಿದೆ.ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಆನಂದ್ ಕೆ. ಅವರು ಕರ್ನಾಟಕ ಅಕ್ರಮ ಕಳ್ಳಭಟ್ಟಿ ಸಾರಾಯಿ ವ್ಯವಹಾರ, ಮಾದಕ ದ್ರವ್ಯ ಅಪರಾಧಿಗಳು, ಜೂಜುಕೋರರು,…

Read More

ಆಷಾಢ ಮಾಸ ಅಂಗವಾಗಿ ನಾಳೆ ವಿಜಯಪುರದಿಂದ ಪಂಡರಪುರಕ್ಕೆ ಸೈಕಲ್ ಯಾತ್ರೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು.10:ವಿಜಯಪುರ ಸೈಕ್ಲಿಂಗ್ ಗ್ರೂಪ್ (ವಿಸಿಜಿ) ವತಿಯಿಂದ ಆಷಾಢ ಮಾಸದ ಅಂಗವಾಗಿ ಪಂಡರಪುರಕ್ಕೆ ವಿಶೇಷ ಸೈಕಲ್ ಯಾತ್ರೆಯನ್ನು ಜುಲೈ 11ರಂದು (ಶನಿವಾರ) ಆಯೋಜಿಸಲಾಗಿದೆ ಎಂದು ವಿಸಿಜಿ ಸಂಘಟನಾ ಕಾರ್ಯದರ್ಶಿ ಸೋಮಶೇಖರ ಸ್ವಾಮಿ ತಿಳಿಸಿದ್ದಾರೆ.ವಿಜಯಪುರದ ಬಿ.ಎಂ. ಪಾಟೀಲ ವೃತ್ತದಿಂದ ಶನಿವಾರ ಬೆಳಿಗ್ಗೆ 5.30ಕ್ಕೆ ಯಾತ್ರೆಗೆ ಚಾಲನೆ ದೊರೆಯಲಿದ್ದು, ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಬಿ. ಪಾಟೀಲ ಚಾಲನೆ ನೀಡಲಿದ್ದಾರೆ. ವಿಸಿಜಿ ಅಧ್ಯಕ್ಷ ಡಾ. ಮಹಾಂತೇಶ ಬಿರಾದಾರ ಉಪಸ್ಥಿತರಿರಲಿದ್ದಾರೆ.ಈ ಯಾತ್ರೆಯಲ್ಲಿ ಡಾ. ರವಿ ಚೌಧರಿ, ವಿಸಿಜಿ ಉಪಾಧ್ಯಕ್ಷ ಶಿವನಗೌಡ…

Read More

ವಿಶಾಲ ಗಾಂಧಿ ವೃತ್ತದಲ್ಲಿ ಪುಟ್ಟ ಗಾಂಧಿ..! ರಾಷ್ಟ್ರಪಿತನಿಗೆ ವಿಜಯಪುರದಲ್ಲಿ ಸಿಗಬೇಕಿದೆ ಭವ್ಯ ಗೌರವ

ರುದ್ರಪ್ಪ ಆಸಂಗಿಸಪ್ತಸಾಗರ ವಾರ್ತೆ,ವಿಜಯಪುರ, ಜು. 9:ಐತಿಹಾಸಿಕ ಸ್ಮಾರಕಗಳ ನಗರ, ಪ್ರವಾಸೋದ್ಯಮದ ಪ್ರಮುಖ ತಾಣ, ಸ್ಮಾರಕಗಳ ವೈಭವಕ್ಕೆ ಹೆಸರಾದ ವಿಜಯಪುರ ನಗರದ ಹೃದಯಭಾಗದಲ್ಲಿರುವ ಗಾಂಧಿ ವೃತ್ತ ಇಂದು ಒಂದು ಪ್ರಶ್ನೆಯನ್ನು ಎತ್ತುತ್ತಿದೆ—ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹೆಸರಿಗೆ ತಕ್ಕ ಗೌರವ ಇಲ್ಲಿ ಸಿಕ್ಕಿದೆಯೇ? ಗಾಂಧಿ ಪ್ರತಿಮೆಗೆ ಕಾಯಕಲ್ಪ ಯಾವಾಗ? ನಗರದ ಅತ್ಯಂತ ಪ್ರಮುಖ ವೃತ್ತಗಳಲ್ಲಿ ಒಂದಾದ ಗಾಂಧಿ ವೃತ್ತದಲ್ಲಿ ವಿಶಾಲವಾದ ಜಾಗವಿದೆ. ದಿನವಿಡೀ ಸಾವಿರಾರು ವಾಹನಗಳು, ಪಾದಚಾರಿಗಳು ಈ ಮಾರ್ಗದಲ್ಲಿ ಸಂಚರಿಸುತ್ತಾರೆ. ಆದರೆ, ಈ ವೃತ್ತದ ಮಧ್ಯಭಾಗದಲ್ಲಿರುವ ಗಾಂಧೀಜಿಯವರ ಪ್ರತಿಮೆ…

Read More

ಜನರ ಸೇವೆಯೇ ಆಡಳಿತದ ಧರ್ಮ; ಕರ್ತವ್ಯ ಲೋಪ ಸಹಿಸುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

“ಜನರು ನಮ್ಮನ್ನು ಅಧಿಕಾರಕ್ಕೆ ತಂದಿದ್ದಾರೆ; ಈಗ ಜನರ ಮನೆ ಬಾಗಿಲಿಗೆ ಸರ್ಕಾರವನ್ನು ತಲುಪಿಸುವ ಜವಾಬ್ದಾರಿ ನಮ್ಮದು.” “ಅಧಿಕಾರಿಗಳು ಜನರ ಮಧ್ಯೆ ಇರಬೇಕು; ಕಚೇರಿಗಳ ಗೋಡೆಗಳ ನಡುವೆ ಅಲ್ಲ.” “ಅಭಿವೃದ್ಧಿ, ಪಾರದರ್ಶಕತೆ ಮತ್ತು ಶಿಸ್ತು – ಸರ್ಕಾರದ ಮೂರು ಮೂಲಮಂತ್ರಗಳು.” ಸಪ್ತಸಾಗರ ವಾರ್ತೆ,ಬೆಳಗಾವಿ, ಜು. 9: ಸುವರ್ಣಸೌಧದಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಆಡಳಿತದ ಕಾರ್ಯಕ್ಷಮತೆ, ಜನಸೇವೆ, ಅಭಿವೃದ್ಧಿ ಮತ್ತು ಅಧಿಕಾರಿಗಳ ಹೊಣೆಗಾರಿಕೆ ಕುರಿತು ಸ್ಪಷ್ಟ ಹಾಗೂ…

Read More

ನರೇಗಲ್–ರಟ್ಟಿಹಳ್ಳಿ ಹಿಂದೂ ಕುಟುಂಬಗಳಿಗೆ ₹4.50 ಲಕ್ಷ ಆರ್ಥಿಕ ನೆರವು: ಶಾಸಕ ಬಸನಗೌಡ ಪಾಟೀಲ ಯತ್ನಾಳ್

ಸಪ್ತಸಾಗರ ವಾರ್ತೆ,ಹಾವೇರಿ, ಜು. 9: ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದಲ್ಲಿ ಹತ್ಯೆಯಾದ ಹಿಂದೂ ವ್ಯಾಪಾರಿ ಶಿವಾಜಿರಾವ್ ಬೈರೋಜಿರಾವ್ ಅವರ ಕುಟುಂಬಕ್ಕೆ ಹಾಗೂ ಹಾನಗಲ್ಲ ತಾಲ್ಲೂಕಿನ ನರೇಗಲ್ ಗ್ರಾಮದಲ್ಲಿ ಹಲ್ಲೆಗೊಳಗಾದ ಹಿಂದೂ ಕಾರ್ಯಕರ್ತರ ಮನೆಗಳಿಗೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಭೇಟಿ ನೀಡಿ ಒಟ್ಟು ₹4.50 ಲಕ್ಷ ಆರ್ಥಿಕ ನೆರವು ನೀಡಿದರು.ರಟ್ಟಿಹಳ್ಳಿಯಲ್ಲಿ ನಡೆದ ಘಟನೆಯಲ್ಲಿ ಮೃತಪಟ್ಟ ಶಿವಾಜಿರಾವ್ ಬೈರೋಜಿರಾವ್ ಅವರ ನಿವಾಸಕ್ಕೆ ಭೇಟಿ ನೀಡಿದ ಯತ್ನಾಳ್, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ₹2.50 ಲಕ್ಷ ಪರಿಹಾರ…

Read More

ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ: ಲಾರಿ–ಬೈಕ್ ಡಿಕ್ಕಿಗೆ ಇಬ್ಬರು ಯುವಕರು ಸ್ಥಳದಲ್ಲೇ ಸಾವು

ಸಪ್ತಸಾಗರ ವಾರ್ತೆ,ವಿಜಯಪುರ, ಜು.7: ನಗರದ ಹೊರವಲಯದ ಸೊಲ್ಲಾಪುರ ರಸ್ತೆಯ ರಾಷ್ಟ್ರೀಯ ಹೆದ್ದಾರಿ-50 (ಎನ್‌ಎಚ್-50)ರಲ್ಲಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೋರ್ವ ಪಾದಚಾರಿ ಯುವಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.ಮೃತರನ್ನು ವಿಜಯಪುರ ಮೂಲದ ಭೂಷಣ್ ನಾಯಕ (24) ಹಾಗೂ ಗಗನ್ ಪರಮೇಶ (19) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡಿರುವ ಬಿಲಾಲ್ ಜಾತಗಾರ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಡಿಕ್ಕಿಯ ರಭಸಕ್ಕೆ ಇಬ್ಬರೂ ಯುವಕರು…

Read More

ಬರ ಪರಿಸ್ಥಿತಿ ನಿರ್ವಹಣೆ, ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ

ಸಪ್ತಸಾಗರ ವಾರ್ತೆ ಕಲಬುರಗಿ, ಜುಲೈ 7: ರಾಜ್ಯವನ್ನು ಕಾಡುತ್ತಿರುವ ಬರಗಾಲ ಪರಿಸ್ಥಿತಿ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.ಕಲ್ಬುರ್ಗಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಂಗಳವಾರ ಪ್ರಸ್ತಾವಿಕ ಭಾಷಣ ಮಾಡಿದ ಸಿಎಂ ಅವರು, ಜನಪರ ಕೆಲಸ ಮಾಡದ ಅಧಿಕಾರಿಗಳನ್ನು ಸಹಿಸಿಕೊಳ್ಳುವುದಿಲ್ಲ ಎಂದರು.ಉತ್ತರ ಕರ್ನಾಟಕದ ಮೊದಲ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಕಲಬುರಗಿಯಲ್ಲಿ ಆಯೋಜಿಸಲಾಗಿತ್ತು.ಸರ್ವರನ್ನೂ ಒಳಗೊಂಡ ಪರಿಶುದ್ಧ ಆಡಳಿತ, ಅಭಿವೃದ್ಧಿ…

Read More