12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ನಕಲಿ ಡಿಎಸ್‌ಪಿ ಬಂಧನ; ಬೆಂಗಳೂರಿನಲ್ಲಿ ಆರೋಪಿ ಸೆರೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು.7: ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ, ತಾನು ಡಿಎಸ್‌ಪಿ ಎಂದು ನಂಬಿಸಿ ನಿರುದ್ಯೋಗಿ ಯುವಕರಿಗೆ ಪೊಲೀಸ್ ಹಾಗೂ ಇತರೆ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ವಂಚನೆ ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ ಜಿಲ್ಲೆಯ ಎಪಿಎಂಸಿ ಠಾಣೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಂಧಿತನನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ವರಗೋಡದಿನ್ನಿ ಗ್ರಾಮದ ಗ್ಯಾನನಗೌಡ @ ಜ್ಞಾನಗೌಡ @ ಗಣೇಶ @ ಸಿ. ಸಂಪತ್‌ಕುಮಾರ (31) ಎಂದು ಗುರುತಿಸಲಾಗಿದೆ. ಕೊಲೆ ಯತ್ನ ಪ್ರಕರಣದಲ್ಲೂ ಆರೋಪ 2014ರಲ್ಲಿ…

Read More

ವಿಜಯಪುರದಲ್ಲಿ ಯುವಕನ ಬರ್ಬರ ಹತ್ಯೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 5: ನಗರದ ಚಪ್ಪರಬಂದ್ ಗಲ್ಲಿಯಲ್ಲಿ 36 ವರ್ಷದ ಯುವಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ.ಮೃತನನ್ನು ಉಮರಸಾಬ್ ಪಟೇಲ್ (36) ಎಂದು ಗುರುತಿಸಲಾಗಿದೆ. ಆರೋಪಿಗಳು ಕಬ್ಬಿಣದ ರಾಡ್ ಹಾಗೂ ಸ್ಕ್ರೂ (ಚೂಪಾದ ಕಬ್ಬಿಣದ ವಸ್ತು) ಬಳಸಿ ತಲೆಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಕೊಲೆ ಮಾಡಿರುವುದಾಗಿ ಪ್ರಾಥಮಿಕ ಮಾಹಿತಿ ತಿಳಿಸಿದೆ.ಉಮರಸಾಬ್ ಶನಿವಾರ ರಾತ್ರಿ ತನ್ನ ಕೆಲ ಗೆಳೆಯರೊಂದಿಗೆ ಪಾರ್ಟಿಯಲ್ಲಿ ಭಾಗವಹಿಸಿದ್ದ ಎನ್ನಲಾಗಿದೆ. ಇದೇ ವೇಳೆ ಪರಸ್ಪರ ಮಾತಿನ ಚಕಮಕಿ ನಡೆದು ಜಗಳಕ್ಕೆ…

Read More

ವಿಶ್ವ ಪರಂಪರೆ ಪಟ್ಟಿಗೆ ಯಾವಾಗ ಸೇರುತ್ತದೆ ವಿಜಯಪುರದ ಹೆಮ್ಮೆಯ ಗೋಳಗುಮ್ಮಟ?

ಇಚ್ಛಾಶಕ್ತಿ ಕೊರತೆಯಿಂದ ನೆನೆಗುದಿಗೆ ಬಿದ್ದ ವಿಶ್ವಮಾನ್ಯತೆಯ ಕನಸು ಚೇತನ ಆಸಂಗಿಸಪ್ತಸಾಗರ ವಾರ್ತೆ,ವಿಜಯಪುರ, ಜು. 5: ಆದಿಲ್‌ಶಾಹಿ ವಾಸ್ತುಶಿಲ್ಪದ ಶ್ರೇಷ್ಠ ಮಾದರಿ, ವಿಶ್ವದ ಅತಿದೊಡ್ಡ ಗುಮ್ಮಟಗಳಲ್ಲಿ ಒಂದಾದ ಗೋಳಗುಮ್ಮಟ ಇಂದು ದೇಶ-ವಿದೇಶದ ಪ್ರವಾಸಿಗರನ್ನು ಸೆಳೆಯುತ್ತಿರುವ ಐತಿಹಾಸಿಕ ಸ್ಮಾರಕ. ಆದರೆ, ಹಲವು ದಶಕಗಳಿಂದ ಕೇಳಿಬರುತ್ತಿರುವ ಯುನೆಸ್ಕೋ (UNESCO) ವಿಶ್ವ ಪರಂಪರೆ ಪಟ್ಟಿಗೆ ಸೇರಿಸುವ ಕನಸು ಮಾತ್ರ ಇನ್ನೂ ನನಸಾಗಿಲ್ಲ. ಅಧಿಕಾರಿಗಳ ನಿರಾಸಕ್ತಿ, ರಾಜಕೀಯ ಇಚ್ಛಾಶಕ್ತಿಯ ಕೊರತೆ ಹಾಗೂ ಸಮನ್ವಯದ ಅಭಾವದಿಂದ ಈ ಮಹತ್ವಾಕಾಂಕ್ಷೆಯ ಯೋಜನೆ ವರ್ಷದಿಂದ ವರ್ಷಕ್ಕೆ ಮುಂದೂಡಲ್ಪಡುತ್ತಲೇ ಬಂದಿದೆ.ಗೋಳಗುಮ್ಮಟ…

Read More

‘ಮನೆ ಮನೆಗೆ’ ಎಂದ ಸರ್ಕಾರ… ‘ಶಿಬಿರಕ್ಕೆ ಬನ್ನಿ’ ಎಂದ ಅಧಿಕಾರಿಗಳು?:

ವೃದ್ಧರು, ಅಂಗವಿಕಲರು, ದಿನಗೂಲಿ ಕಾರ್ಮಿಕರಿಗೆ ಹೆಚ್ಚಿದ ಸಂಕಷ್ಟ ರುದ್ರಪ್ಪ ಆಸಂಗಿ ಸಪ್ತಸಾಗರ ವಾರ್ತೆ,ವಿಜಯಪುರ, ಜು. 4:ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರಾಜ್ಯಾದ್ಯಂತ ಜೋರಾಗಿ ನಡೆಯುತ್ತಿದೆ. ಚುನಾವಣಾ ಆಯೋಗದ ಉದ್ದೇಶ ಸ್ಪಷ್ಟ—ಪ್ರತಿಯೊಬ್ಬ ಅರ್ಹ ಮತದಾರನ ಮನೆ ಬಾಗಿಲಿಗೆ ತೆರಳಿ ಮಾಹಿತಿ ಪರಿಶೀಲಿಸಿ, ದಾಖಲೆಗಳನ್ನು ಸಂಗ್ರಹಿಸಿ, ಯಾರೂ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳುವುದು. ಈ ಉದ್ದೇಶಕ್ಕಾಗಿ ಬೂತ್ ಮಟ್ಟದ ಅಧಿಕಾರಿಗಳಿಗೆ (ಬಿಎಲ್‌ಒ) ಮನೆ ಮನೆಗೆ ಭೇಟಿ ನೀಡುವ ಜವಾಬ್ದಾರಿಯನ್ನು ನೀಡಲಾಗಿದೆ.ಆದರೆ ವಿಜಯಪುರ ಸೇರಿದಂತೆ ಹಲವು ಭಾಗಗಳಿಂದ…

Read More

ರೈತ ವಿರೋಧಿ ಕ್ಯಾಬಿನೆಟ್ ನಿರ್ಧಾರ ಖಂಡಿಸಿ ಆಪ್ ಆಕ್ರೋಶ

ಪಂಜಾಬ್ ಮಾದರಿಯ ರೈತಪರ ಆಡಳಿತ ಜಾರಿಗೆ ಆಗ್ರಹ ಸಪ್ತಸಾಗರ ವಾರ್ತೆ,ವಿಜಯಪುರ, ಜು. 3: ರಾಜ್ಯ ಸರ್ಕಾರದ ಇತ್ತೀಚಿನ ಕ್ಯಾಬಿನೆಟ್ ನಿರ್ಧಾರ ರೈತರಿಗೆ ಅನ್ಯಾಯವಾಗಿದ್ದು, “ಬೆಳೆ ಬೆಳೆಯಬೇಡಿ, ಪರಿಹಾರ ಕೇಳಬೇಡಿ” ಎನ್ನುವ ಧೋರಣೆಯನ್ನು ಪ್ರತಿಬಿಂಬಿಸುತ್ತದೆ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷದ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ ಸೋಲಾಪುರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮಳೆ ಕೊರತೆ, ಅತಿವೃಷ್ಟಿ, ಬೆಳೆಗಳಿಗೆ ಸಮರ್ಪಕ ಬೆಲೆ ಸಿಗದಿರುವುದು, ಉತ್ಪಾದನಾ ವೆಚ್ಚ ಹೆಚ್ಚಳ, ಸಾಲದ ಹೊರೆ ಸೇರಿದಂತೆ ಹಲವು ಸಮಸ್ಯೆಗಳಿಂದ ರೈತರು…

Read More

ಹೆಣ್ಣು ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ- ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜುಲೈ 3,ಕೋಟ್ಯಾಳ ಗ್ರಾಮದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರತಿಷ್ಠಾನ ಮತ್ತು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ ಸಂಸ್ಥೆಗಳ ಸಿ.ಎಸ್.ಆರ್ ಅನುದಾನದಡಿ 3.25 ಕೋಟಿ ರೂಪಾಯಿ ವೆಚ್ಚದಲ್ಲಿ, ಸುಸಜ್ಜಿತ ಶಾಲಾ ಕಟ್ಟಡ ನಿರ್ಮಾಣಗೊಂಡಿದ್ದು, ಕೋಟ್ಯಾಳ ಸುತ್ತಮುತ್ತಲಿನ ಗ್ರಾಮಗಳ ನೂರಾರು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಆಧುನಿಕ ಕಲಿಕಾ ವಾತಾವರಣವನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಸಚಿವರಾದ ಎಂ.ಬಿ. ಪಾಟೀಲ ಅವರು…

Read More

ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ಇಂಡಿ, ಜು. 3: ಮಿತಿಮೀರಿದ ಪ್ಲಾಸ್ಟಿಕ್‌ ಬಳಕೆಯಿಂದ ಮನುಷ್ಯನ ಆರೋಗ್ಯ ಹದಗೆಡುತ್ತಿದೆ. ಮುಂದಿನ ತಲೆಮಾರಿಗೆ ವಿಷಮುಕ್ತ ಪರಿಸರ ನೀಡಲು ಇಂದೇ ಪ್ಲಾಸ್ಟಿಕ್ ತ್ಯಜಿಸಿ. ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಶುಕ್ರವಾರ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಅಂತಾರಾಷ್ಟ್ರೀಯ ಪ್ಲಾಸ್ಟಿಕ್ ಮುಕ್ತ ದಿನವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಪ್ಲಾಸ್ಟಿಕ್ ಪರಿಸರಕ್ಕೆ ಮಾರಕವಾಗಿದ್ದು, ಭೂಮಿ, ಸಮುದ್ರ, ಜೀವಸಂಕುಲಕ್ಕೆ ಅಪಾಯವಾಗಿದೆ. ಅಂಗಡಿ, ಮಾರುಕಟ್ಟೆಗೆ ಹೋಗುವಾಗ ಮನೆಯಿಂದ ಬಟ್ಟೆ ಕೈಚೀಲ ತೆಗೆದುಕೊಂಡು ಹೋಗಬೇಕು….

Read More

ಮಳೆ ಅಭಾವ ಪರಿಸ್ಥಿತಿ ಎದುರಿಸಲು ಸಜ್ಜಾಗಿ- ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಖುಷ್ಬು ಗೋಯಲ್ ಚೌಧರಿ ಅಧಿಕಾರಿಗಳಿಗೆ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 3:ಜಿಲ್ಲೆಯಲ್ಲಿನ ಕುಡಿಯುವ ನೀರಿನ ಲಭ್ಯತೆ, ಹಿಂಗಾರು ಹಾಗೂ ಮುಂಗಾರು ಮಳೆ ಪರಿಸ್ಥಿತಿ, ಮಳೆ ಕೊರತೆಯಾದಲ್ಲಿ ಪರ್ಯಾಯ ಮಾರ್ಗಗಳನ್ನು ಕೈಗೊಳ್ಳುವಂತೆ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಕೈಗಾರಿಕಾ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರೂ ಆಗಿರುವ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಖುಷ್ಬು ಗೋಯಲ್ ಚೌಧರಿ ಅವರು ಹೇಳಿದರು.ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ಇವರ ಸಹಯೋಗದಲ್ಲಿ ಶುಕ್ರವಾರ ನಗರದ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಮುಂಗಾರು ಮಳೆ…

Read More

ಮೋದಿ, ನಿರ್ಮಲಾ ಸೀತಾರಾಮನ್ ಹೆಸರಿನಲ್ಲಿ ಹಣ ದ್ವಿಗುಣದ ಆಮಿಷ!

ಸಾಮಾಜಿಕ ಜಾಲತಾಣಗಳಲ್ಲಿ AI ಆಧಾರಿತ ನಕಲಿ ಜಾಹೀರಾತುಗಳ ಅಬ್ಬರ – ಮೌನ ಯಾಕೆ ಸರ್ಕಾರ? ಜನರಲ್ಲಿ ಹೆಚ್ಚುತ್ತಿರುವ ಆತಂಕ ರುದ್ರಪ್ಪ ಆಸಂಗಿಸಪ್ತಸಾಗರ ವಾರ್ತೆ,ವಿಜಯಪುರ, ಜು. 3: “ಕೇವಲ ₹22 ಸಾವಿರ ಹೂಡಿಕೆ ಮಾಡಿ ಲಕ್ಷಾಂತರ ರೂಪಾಯಿ ಗಳಿಸಿ…”, “ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದ ಹೊಸ ಯೋಜನೆ…”, “ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅನುಮೋದಿಸಿದ ವಿಶೇಷ ಹೂಡಿಕೆ ಅವಕಾಶ…” – ಇಂತಹ ಶೀರ್ಷಿಕೆಗಳೊಂದಿಗೆ ಕಳೆದ ಒಂದು ತಿಂಗಳಿನಿಂದ ಫೇಸ್‌ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಪ್ರಸಾರವಾಗುತ್ತಿರುವ…

Read More

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರದ ಮೊದಲ 30 ದಿನ: ಪ್ರಮುಖ ನಿರ್ಧಾರಗಳ ಸರಣಿ

ಸಪ್ತಸಾಗರ ವಾರ್ತೆ,ಬೆಂಗಳೂರು, ಜು. 3: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರ ವಹಿಸಿಕೊಂಡು ಒಂದು ತಿಂಗಳು ಪೂರ್ಣಗೊಂಡಿದ್ದು, ಈ ಅವಧಿಯಲ್ಲಿ ಆಡಳಿತ, ಮೂಲಸೌಕರ್ಯ, ರೈತ ಕಲ್ಯಾಣ, ಉದ್ಯೋಗ, ಶಿಕ್ಷಣ, ಕಾನೂನು ಸುವ್ಯವಸ್ಥೆ ಹಾಗೂ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದಾರೆ.ಪ್ರಮುಖವಾಗಿ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, 72 ಸಾವಿರ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆರು ತಿಂಗಳ ಗಡುವು, 2,500 ಚದರ ಅಡಿವರೆಗಿನ ಮನೆಗಳಿಗೆ ಓಸಿ ವಿನಾಯಿತಿಯೊಂದಿಗೆ ಶಾಶ್ವತ ವಿದ್ಯುತ್ ಸಂಪರ್ಕ,…

Read More