ಪೊಲೀಸರ ಗುಂಡೇಟಿಗೆ ರೌಡಿಶೀಟರ್ ಬಲಿ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 18:ಪರಾರಿಯಾಗಲು ಯತ್ನಿಸಿದ ರೌಡಿಶೀಟರ್ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದು, ರೌಡಿಶೀಟರ್ ತೀವ್ರವಾಗಿ ಗಾಯಗೊಂಡು ಮೃತಪಟ್ಟ ಘಟನೆಜಿಲ್ಲೆಯ ಸಿಂದಗಿ ತಾಲೂಕಿನ ರಾಂಪೂರ ಬಳಿ ಶನಿವಾರ ಬೆಳಗ್ಗೆ ನಡೆದಿದೆ.ಯುನಸ್ ಇಕ್ಲಾಸ್ ಪಟೇಲ್ (35) ಮೃತಪಟ್ಟ ರೌಡಿಶೀಟರ್.ನಿನ್ನೆ ಓರ್ವನಿಗೆ ಚಾಕೂ ತೋರಿಸಿ 25 ಸಾವಿರ ಹಣ ಯುನಸ್ ದರೋಡೆ ಮಾಡಿದ್ದ.ನಂತರ ಆತನು ಸ್ಕೂಟಿ ಸಹ ದರೋಡೆ ಮಾಡಿ ಪರಾರಿಯಾಗಿದ್ದ.ಈ ಕುರಿತು ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಯುನಸ್ ಆತನ ಸ್ವಗ್ರಾಮ ಆಲಮೇಲ…

Read More

ಸರ್ಕಾರಿ ವೈದ್ಯಕೀಯ ಕಾಲೇಜ್:ಸಿ.ಎಂ.ಗೆ ಮನವರಿಕೆ ಮಾಡಿದ್ದೇನೆ- ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ ವಿಜಯಪುರ, ಅ. 17: ಜಿಲ್ಲೆಯಲ್ಲಿ ಖಾಸಗಿ ಸಹಭಾಗಿತ್ವದ ಬದಲಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಕುರಿತು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಹೇಳಿದರು.ಶುಕ್ರವಾರ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಧಾನ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳು ಮೊನ್ನೆ ಕರೆದಿದ್ದ ಸಚಿವರ ಸಭೆಯಲ್ಲಿ ನಮ್ಮ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಕುರಿತು ಮಾತನಾಡಿದ್ದೇನೆ. ಸಿದ್ಧರಾಮಯ್ಯ ಅವರು…

Read More

ಜಿಲ್ಲೆಯ ದಕ್ಷಿಣ ಭಾಗದ ಜನರಿಗೂ ಅತ್ಯುತ್ತಮ ಆರೋಗ್ಯ ಸೇವೆ‌: ಡಾ. ಹೊನ್ನುಟಗಿ

ಸಪ್ತಸಾಗರ ವಾರ್ತೆ ವಿಜಯಪುರ, ಅ. 17: ಬಿ.ಎಲ್.ಡಿ.ಇ‌ ಆಸ್ಪತ್ರೆ ನಗರ ಆರೋಗ್ಯ ಕೇಂದ್ರ ಸ್ಥಾಪಿಸುವ ಮೂಲಕ‌ ನಗರದ ದಕ್ಷಿಣ ಭಾಗದ ಜನರಿಗೂ ಅತ್ಯುತ್ತಮ ಆರೋಗ್ಯ ಸೇವೆ‌ ಒದಗಿಸುತ್ತಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ‌ ಡಾ. ರಾಜೇಶ ಹೊನ್ನುಟಗಿ‌ ತಿಳಿಸಿದ್ದಾರೆ.ಶುಕ್ರವಾರ ನಗರದ ಸರಕಾರಿ ಪಾಲಿಟೆಕ್ನಿಕ್ ಹಿಂಭಾದಲ್ಲಿರುವ ಬಿ.ಎಲ್.ಡಿ.ಇ ಆಯುರ್ವೇದ ಕಾಲೇಜಿನಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸಿದ್ದ ಅಲೋಪಥಿ ಮತ್ತು ಆಯುರ್ವೇದ ಉಚಿತ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಎಂ. ಬಿ. ಪಾಟೀಲ‌ ಮತ್ತು…

Read More

ಕಿತ್ತೂರು ರಾಣಿ ಚೆನ್ನಮ್ಮ ವಿಜಯಜ್ಯೋತಿ ಯಾತ್ರೆಗೆ ಜಿಲ್ಲಾಡಳಿತದಿಂದ ಸ್ವಾಗತ-ಬೀಳ್ಕೊಡುಗೆ

ಸಪ್ತಸಾಗರ ವಾರ್ತೆ ವಿಜಯಪುರ, ಅ. 16:ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ನಿಮಿತ್ತ ಕಿತ್ತೂರು ರಾಣಿ ಚೆನ್ನಮ್ಮ ವಿಜಯಜ್ಯೋತಿ ಯಾತ್ರೆಯು ಜಿಲ್ಲೆಗೆ ಬುಧವಾರ ವಿಜಯಪುರಕ್ಕೆ ಆಗಮಿಸಿದ ವಿಜಯ ಜ್ಯೋತಿ ಯಾತ್ರೆಯ ರಥಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಜಿಲ್ಲಾಧಿಕಾರಿ ಡಾ. ಆನಂದ ಕೆ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರು ಪೂಜೆ ಸಲ್ಲಿಸಿ ಕಿತ್ತೂರ ರಾಣಿ ಚನ್ನಮ್ಮ ಪ್ರತಿಮೆಗೆ ಪುಷ್ಪಾರ್ಚನೆ ನೆರವೇರಿಸಿದರು.ವೀರ ರಾಣಿ ಚನ್ನಮ್ಮ ಅವರ ಧೈರ್ಯ, ಶೌರ್ಯ ಮತ್ತು ಹೋರಾಟದ ಸ್ಫೂರ್ತಿಯನ್ನು…

Read More

ಯೋಗ ಶಿಕ್ಷಕ ಪ್ರಕಾಶ ಚವ್ಹಾಣಗೆ ಕಂಚಿನ ಪದಕ

ಸಪ್ತಸಾಗರ ವಾರ್ತೆ ವಿಜಯಪುರ, ಅ. 16:ನಗರ ಹೊರವಲಯದ ಬೇಗಂ ತಲಾಬ್ ತಾಂಡಾ ನಿವಾಸಿ, ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ಯೋಗ ಶಿಕ್ಷಕ ಪ್ರಕಾಶ ಚವ್ಹಾಣ ಹಿರಿಯರ ರಾಷ್ಟ್ರೀಯ ಯೋಗ ಸ್ಪೋರ್ಟ್ಸ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದುಕೊಂಡು ಕಂಚಿನ ಪದಕ ಗಳಿಸಿದ್ದಾರೆ.ಮೈಸೂರಿನಲ್ಲಿ ಅಕ್ಟೋಬರ್ 9 ರಿಂದ 12 ರವರೆಗೆ ಯೋಗ ಫೆಡರೇಶನ್ ಆಫ್ ಇಂಡಿಯಾ ಆಯೋಜಿಸಿದ್ದ 50ನೇ ಹಿರಿಯರ ರಾಷ್ಟ್ರೀಯ ಯೋಗ ಸ್ಪೋರ್ಟ್ಸ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು ಕಂಚಿನ ಪದಕ ಗೆದ್ದುಕೊಂಡಿದ್ದಾರೆ.ಈ…

Read More

ಉದ್ಯಮಿಗಳಾಗಿ, ಇತರರಿಗೆ ಉದ್ಯೋಗ ನೀಡಿ- ಬೆಳ್ಳಿ ಕರೆ

ಸಪ್ತಸಾಗರ ವಾರ್ತೆ ವಿಜಯಪುರ,ಅ. 16 : ಸರಕಾರದ ಯೋಜನೆಗಳ ಲಾಭ ಪಡೆದುಕೊಂಡು, ಪ್ರತಿಯೊಬ್ಬರೂ ಯಶಸ್ಸನ್ನು ಹೊಂದಿ, ಉದ್ಯಮಿಗಳಾಗುವುದರ ಜೊತೆಗೆ ಬೇರೆಯವರಿಗೂ ಉದ್ಯೋಗವನ್ನು ನೀಡುವಂತವರಾಗಿ ಎಂದು ನಿವೃತ್ತ ಕೃಷಿ ಸಹ ವಿಸ್ತರಣೆ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ ಕರೆ ನೀಡಿದರು.ನಗರ ಹೊರ ವಲಯದ ಹಿಟ್ನಳ್ಳಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣೆಯ ಯೋಜನೆಯ ಫಲಾನುಭವಿಗಳಿಗೆ ಹಮ್ಮಿಕೊಂಡ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಕೃಷಿಯಲ್ಲಿ ಉದ್ಯಮಿಗಳಾಗಲು ಅನೇಕ ಅವಕಾಶಗಳಿವೆ. ಆಡು, ಕುರಿ ಸಾಕಣೆ, ಹೈನೋದ್ಯಮ, ಎರೆಹುಳು…

Read More