ಉದ್ಯಮಿಗಳಾಗಿ, ಇತರರಿಗೆ ಉದ್ಯೋಗ ನೀಡಿ- ಬೆಳ್ಳಿ ಕರೆ

ಸಪ್ತಸಾಗರ ವಾರ್ತೆ ವಿಜಯಪುರ,ಅ. 16 : ಸರಕಾರದ ಯೋಜನೆಗಳ ಲಾಭ ಪಡೆದುಕೊಂಡು, ಪ್ರತಿಯೊಬ್ಬರೂ ಯಶಸ್ಸನ್ನು ಹೊಂದಿ, ಉದ್ಯಮಿಗಳಾಗುವುದರ ಜೊತೆಗೆ ಬೇರೆಯವರಿಗೂ ಉದ್ಯೋಗವನ್ನು ನೀಡುವಂತವರಾಗಿ ಎಂದು ನಿವೃತ್ತ ಕೃಷಿ ಸಹ ವಿಸ್ತರಣೆ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ ಕರೆ ನೀಡಿದರು.ನಗರ ಹೊರ ವಲಯದ ಹಿಟ್ನಳ್ಳಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣೆಯ ಯೋಜನೆಯ ಫಲಾನುಭವಿಗಳಿಗೆ ಹಮ್ಮಿಕೊಂಡ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಕೃಷಿಯಲ್ಲಿ ಉದ್ಯಮಿಗಳಾಗಲು ಅನೇಕ ಅವಕಾಶಗಳಿವೆ. ಆಡು, ಕುರಿ ಸಾಕಣೆ, ಹೈನೋದ್ಯಮ, ಎರೆಹುಳು…

Read More

ಕೃಷಿ ಹೊಂಡದಲ್ಲಿ ಮುಳುಗಿ ಮೂವರು ಮಕ್ಕಳ ಸಾವು

ಸಪ್ತ ಸಾಗರ ವಾರ್ತೆ ವಿಜಯಪುರ, ಅ. 16:ಕೃಷಿ ಹೊಂಡದಲ್ಲಿ ಜಾರಿ ಬಿದ್ದುಓರ್ವ ಬಾಲಕ ಸೇರಿ ಮೂವರು ಮಕ್ಕಳು ಮೃತಪಟ್ಟ ಘಟನೆ ವಿಜಯಪುರ ತಾಲೂಕಿನ ಮಿಂಚನಾಳ ತಾಂಡಾದ ಮಾದೇವಿ ನಗರದಲ್ಲಿ ನಡೆದಿದೆ.ಶಿವಮ್ಮ‌ ರಾಜೂ ರಾಠೋಡ್ (8) , ಕಾರ್ತಿಕ ವಿಶ್ವಾ ರಾಠೋಡ್ (7) ಹಾಗೂಸ್ವಪ್ನಾ ರಾಜೂ ರಾಠೋಡ್ (12) ಮೃತಪಟ್ಟ ಮಕ್ಕಳು.ಕುರಿ‌ಗಳ ಜೊತೆಗೆ ಆಟವಾಡುತ್ತಾ ಕೃಷಿ ಹೊಂಡದ ಬಳಿ ತೆರಳಿದ್ದ ಮಕ್ಕಳುಆಟವಾಡುವ ವೇಳೆ‌ ಕಾಲು ಜಾರಿ ಕೃಷಿ ಹೊಂಡದಲ್ಲಿ ಬಿದ್ದು ನೀರು ಕುಡಿದು ಸಾವನ್ನಪ್ಪಿದ್ದಾರೆ.ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು…

Read More

ಕನ್ಹೇರಿ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗಳ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ಖಂಡಿಸಿ ಕಾರಜೋಳ ಆಕ್ರೋಶ

ಸಪ್ತ ಸಾಗರ ವಾರ್ತೆ ವಿಜಯಪುರ,ಅ. 16:ಭಾರತೀಯ ಸಂಸ್ಕೃತಿ, ಸಂಸ್ಕಾರಗಳ ಮಹತ್ವ ಸಾರಿ, ಸಾವಯವ ಕೃಷಿಗೆ ಒತ್ತು ನೀಡುವ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಕನ್ಹೇರಿ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗಳ ವಿಜಯಪುರ ಜಿಲ್ಲಾ ಪ್ರವೇಶ ನಿರ್ಬಂಧಿಸಿರುವ ಕ್ರಮ ಖಂಡನೀಯ ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸರ್ಕಾರ ಜಿಲ್ಲಾಧಿಕಾರಿಗಳ ಮೇಲೆ ಒತ್ತಡ ಹೇರಿ ಶ್ರೀಗಳ ಜಿಲ್ಲಾ ನಿಷೇಧ ಹೇರುವ ಮೂಲಕ ರಾಜ್ಯ ಸರ್ಕಾರ ತನ್ನ ಕುಟೀಲ…

Read More

ವೈಜ್ಞಾನಿಕ ತ್ಯಾಜ್ಯ ಸಂಸ್ಕರಣೆ, ವಿಲೇವಾರಿ, ಅನಿಲ ತಯಾರಿಕೆಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮಧ್ಯೆ ಒಪ್ಪಂದ

ಸಪ್ತಸಾಗರ ವಾರ್ತೆ, ಬೆಂಗಳೂರು:ನಗರದಲ್ಲಿ ವೈಜ್ಞಾನಿಕ ತ್ಯಾಜ್ಯ ಸಂಸ್ಕರಣೆ, ವಿಲೇವಾರಿ, ಅನಿಲ ತಯಾರಿಕೆ ಸಂಬಂಧದ ಒಪ್ಪಂದಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮುಖ್ಯ ಆಯುಕ್ತ ಡಾ. ಮಹೇಶ್ವರರಾವ್ ಹಾಗೂ ಭಾರತೀಯ ಅನಿಲ ಪ್ರಾಧಿಕಾರದ (ಗೇಲ್) ಕಾರ್ಯ ನಿರ್ವಾಹಕ ನಿರ್ದೇಶಕ ಎಸ್. ಎನ್. ಯಾದವ್ ಅವರು ಡಿಸಿಎಂ ಡಿ.ಕೆ. ಶಿವಕುಮಾರ ಅವರ ಸಮ್ಮುಖದಲ್ಲಿ ವಿಧಾನಸೌಧದಲ್ಲಿ ಬುಧವಾರ ಸಹಿ ಹಾಕಿ, ಕಡತ ವಿನಿಮಯ ಮಾಡಿಕೊಂಡರು.ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿ ನಾಥ್, ಮುಖ್ಯ ಆಯುಕ್ತ ಮಹೇಶ್ವರರಾವ್, ಬೆಂಗಳೂರು ಘನ…

Read More

ಕನ್ಹೇರಿ ಶ್ರೀಗಳ ಮೇಲಿನ ನಿಷೇಧ ಹಿಂಪಡೆಯದಿದ್ದರೆ ವಿಜಯಪುರ ಬಂದ್ ಗೆ ಕರೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 16: ಸಮಾಜದಲ್ಲಿ ನಡೆಯುತ್ತಿರುವ ಘಟನಾವಳಿಗಳನ್ನು ಯಥಾವತ್ತಾಗಿ ವಿವರಿಸಿದ್ದಕ್ಕೆ ಶ್ರೀ ಕನೇರಿ ಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಮಠದ ಸ್ವಾಮೀಜಿಗಳಿಗೆ ವಿಜಯಪುರಕ್ಕೆ ಬರದಂತೆ ಜಿಲ್ಲಾಡಳಿತ ನಿಷೇಧ ಹೇರಿರುವುದನ್ನು ಹಿಂಪಡೆಯದಿದ್ದರೆ ವಿಜಯಪುರದ ಬಂದ್ ಗೆ ಕರೆ ನೀಡಬೇಕಾಗುತ್ತದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಎಚ್ಚರಿಸಿದ್ದಾರೆ.ರಾಜಕೀಯ ಪ್ರಾಬಲ್ಯ ಸಾಧಿಸಲು, ವೋಟ್ ಬ್ಯಾಂಕ್ ರಾಜಕಾರಣವನ್ನು ಧಿಕ್ಕರಿಸಲು ಅವರು ಮಾತನಾಡಿದ ಕಾರಣ, ಅವರ ಮೇಲೆ ಈ ಕ್ರಮ ಜರುಗಿಸಲಾಗಿದೆ. ಆತ್ಮನಿರ್ಭರ ಸಮಾಜವನ್ನು ಸ್ಥಾಪಿಸಲು ಅನೇಕ ಉಪಕ್ರಮಗಳನ್ನು…

Read More

ಕನ್ಹೇರಿ ಶ್ರೀಗಳಿಗೆ ಜಿಲ್ಲಾ ಪ್ರವೇಶ ನಿರ್ಬಂಧ: ಜಿಗಜಿಣಗಿ ಖಂಡನೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 16 :ಕನ್ಹೇರಿ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗಳ ವಿಜಯಪುರ ಜಿಲ್ಲಾ ಪ್ರವೇಶ ನಿರ್ಬಂಧಿಸಿರುವ ಕ್ರಮ ಖಂಡನೀಯ. ಸಂತರನ್ನು ಮುಟ್ಟಿದವರು ಯಾರು ಉಳಿದಿಲ್ಲ. ಜನ ಕಳಕಳಿಯ ಮತ್ತು ಸಮಾಜಮುಖಿ ಸಂತರನ್ನು ಅಡ್ಡಿಪಡಿಸಿ, ಕಾಂಗ್ರೆಸ್ ಸರ್ಕಾರ ತನ್ನ ಸಂಕುಚಿತ ಮನಸ್ಸನ್ನು ಮತ್ತೊಮ್ಮೆ ಸಾಬೀತುಮಾಡಿದೆ ಎಂದು ಸಂಸದ ರಮೇಶ ಜಿಗಜಿಣಗಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹಿಂದೂ ಧರ್ಮದ ಪರವಾಗಿ ಮಾತನಾಡುವೆ. ಅದು ಅಪರಾಧವೇ? ಹಿಂದೂ ದೇವರ ಬಗ್ಗೆ ಅವಹೇಳನದ ಬಗ್ಗೆ…

Read More

ಬಸವನಬಾಗೇವಾಡಿ ಕ್ಷೇತ್ರಕ್ಕೆ 3 ಕೆ.ಪಿ.ಎಸ್ ಶಾಲೆ ಮಂಜೂರು

ಸಪ್ತಸಾಗರ ವಾರ್ತೆ, ವಿಜಯಪುರ, ಅ. 16 : ರಾಜ್ಯ ಸರ್ಕಾರ ರಾಜ್ಯದ ಆಯ್ದ ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ (ಕೆ.ಪಿ.ಎಸ್.) ಉನ್ನತೀಕರಿಸಿ ಆದೇಶ ಹೊರಡಿಸಿದೆ. ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅವರ ತವರು ಕ್ಷೇತ್ರವಾದ ಬಸವನಬಾಗೇವಾಡಿ ವಿಧಾನಸಭೆ ಕ್ಷೇತ್ರಕ್ಕೂ 3 ಕೆ.ಪಿ.ಎಸ್ ಶಾಲೆಗಳನ್ನು ಮಂಜೂರು ಮಾಡಿ ಆದೇಶಿಸಿದೆ.ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರ ಪ್ರಯತ್ನದ ಫಲವಾಗಿ ಕೊಲ್ಹಾರದ ಸರ್ಕಾರಿ…

Read More

ಪಕ್ಷ ನಿಷ್ಠನಾಗಿ ಜೈಲುವಾಸ ಆಯ್ಕೆ ಮಾಡಿಕೊಂಡೆ: ಡಿಸಿಎಂ‌‌ ಡಿ.ಕೆ. ಶಿವಕುಮಾರ

ಸಪ್ತಸಾಗರ ವಾರ್ತೆ ಬೆಂಗಳೂರು, ಅ.16:“ಸಮ್ಮಿಶ್ರ ಸರ್ಕಾರ ಬಿದ್ದು ಹೋಗುವ ವೇಳೆ ಪಕ್ಷ ನಿಷ್ಠನಾಗಿ ಜೈಲುವಾಸ ಆಯ್ಕೆ ಮಾಡಿಕೊಂಡೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.ನಗರದ ಎಫ್ ಕೆಸಿಸಿಐ ಸಭಾಂಗಣದಲ್ಲಿ ಬುಧವಾರ ನಡೆದ ಕೆ.ಎಂ.ರಘು ಡೈರೆಕ್ಟರ್ ಅವರು ಬರೆದಿರುವ ಡಿ.ಕೆ. ಶಿವಕುಮಾರ್ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಡಿಸಿಎಂ ಮಾತನಾಡಿದರು.“ಸಮ್ಮಿಶ್ರ ಸರ್ಕಾರದಲ್ಲಿ ಹತ್ತು ಜನ‌ ಶಾಸಕರು ರಾಜಿನಾಮೆ ನೀಡಲು ಹೊರಟಿದ್ದರು. ಕನಕಪುರದಲ್ಲಿದ್ದ ನಾನು ಬೆಂಗಳೂರಿಗೆ ಬಂದು ಐದಾರು ಜನರನ್ನು ವಾಪಸ್ ಕ್ವಾಟ್ರಸ್ ಗೆ ಕರೆದುಕೊಂಡು ಬಂದೆ.‌ ಆಗ ನನಗೆ ಒಬ್ಬ…

Read More

ಕನ್ಹೇರಿ ಶ್ರೀಗಳಿಗೆ ಎರಡು ತಿಂಗಳ ಕಾಲ ಜಿಲ್ಲಾ ಪ್ರವೇಶ ನಿರ್ಬಂಧಿಸಿ ಡಿಸಿ ಆದೇಶ

ಸಪ್ತಸಾಗರ ವಾರ್ತೆ ವಿಜಯಪುರ, ಅ. 16:ಮಹಾರಾಷ್ಟ್ರದ ಕನ್ಹೇರಿ ಅದೃಶ್ಯ ಕಾಡಸಿದ್ದೇಶ್ವರ ಶ್ರೀಗಳಿಗೆ ವಿಜಯಪುರ ಜಿಲ್ಲಾ ಪ್ರವೇಶ ನಿರ್ಬಂಧಿಸಿಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಆದೇಶ ಹೊರಡಿಸಿದ್ದಾರೆ.ಇತ್ತೀಚೆಗೆ ಮಹಾರಾಷ್ಟ್ರದ ಜತ್ತ ತಾಲೂಕಿನ ಬೀಳೂರು ಗ್ರಾಮದಲ್ಲಿ ಸಿಎಂ ಕೃಪಾಪೋಷಿತ ಲಿಂಗಾಯತ ಮಠಾಧೀಶರ ಒಕ್ಕೂಟ ಎಂದು ಪ್ರಚೋದನಕಾರಿ ಭಾಷಣ ಮಾಡಿದ್ದ ಹಿನ್ನೆಲೆ ಕನ್ಹೇರಿ ಶ್ರೀಗಳಿಗೆ ದಿನಾಂಕ 16-10-2025 ರಿಂದ 14-12- 2025 ವರೆಗೆ ಎರಡು ತಿಂಗಳ ಕಾಲ ಜಿಲ್ಲಾ ಪ್ರವೇಶ ನಿರ್ಬಂಧಿಸಿ ಆದೇಶ ಮಾಡಿದ್ದಾರೆ.ಅ. 16, 17 ರಂದು ಬಸವನ ಬಾಗೇವಾಡಿಯಲ್ಲಿ ನಡೆಯುವ…

Read More

ಪ್ರೀತಿಸುವಂತೆ ಅಪ್ರಾಪ್ತ ಬಾಲಕಿಗೆ ಯುವಕನ ಕಿರುಕುಳ: ನೇಣು ಬಿಗಿದ ಸ್ಥಿತಿಯಲ್ಲಿ ಬಾಲಕಿ ಶವ ಪತ್ತೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 15:ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಯುವಕನೋರ್ವ ಪ್ರೀತಿಸುವಂತೆ ಪೀಡಿಸಿದ ಹಿನ್ನೆಲೆಯಲ್ಲಿ ಅಪ್ರಾಪ್ತ ಬಾಲಕಿ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ 3 ಜ‌ನ ಆರೋಪಿಗಳನ್ನು ಬಂಧಿಸಲಾಗಿದೆ.ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಮಾಳಿಂಗರಾಯ ದ್ಯಾಮಣ್ಣ ದಂಡೋಜಿ, ಶಿವನಗೌಡ ಚನ್ನಪ್ಪಗೌಡ ಬಿರಾದಾರ, ಜುಮ್ಮಣ್ಣ ದಳವಾಯಿ ಬಂಧಿತ ಆರೋಪಿಗಳು.ಈ ಆರೋಪಿಗಳ ಪೈಕಿ ಮಾಳಿಂಗರಾಯ ದಂಡೋಜಿ ಈತ ಅಪ್ರಾಪ್ತೆಯನ್ನು ಪ್ರೀತಿಸಿ, ನನ್ನನ್ನೆ ಮದುವೆ ಆಗು ಎಂದು ಕೆಲ ದಿನಗಳಿಂದ ಪೀಡಿಸುತ್ತಿದ್ದ. ಈ ವಿಷಯ ಬಾಲಕಿ ತಂದೆ ತಾಯಿಗೆ…

Read More