ನಿಡಗುಂದಿ ತಾಲೂಕಾ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ಡಾ. ಆನಂದ ಭೇಟಿ, ಪರಿಶೀಲನೆ

ಸಪ್ತಸಾಗರ ವಾರ್ತೆ, ವಿಜಯಪುರ ಅ.15: ಜಿಲ್ಲೆಯ ನಿಡಗುಂದಿ ತಾಲೂಕಿನ ತಹಶೀಲ್ದಾರ ಕಚೇರಿ, ನ್ಯಾಯಬೆಲೆ ಅಂಗಡಿ, ಅಂಗನವಾಡಿ-ಗ್ರಾಮ ಒನ್ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ನಿಡಗುಂದಿ ತಹಶೀಲ್ದಾರ ಕಚೇರಿ ಹಾಗೂ ಅಟಲ್ ಜನಸ್ನೇಹಿ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಅವರು, ವಿವಿಧ ಕೆಲಸ ಕಾರ್ಯಗಳಿಗೆ ಕಚೇರಿಗೆ ಆಗಮಿಸುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ಅವರ ಕಾರ್ಯಗಳಿಗೆ ಸ್ಪಂದಿಸಬೇಕು. ಸಕಾಲ ಅರ್ಜಿಗಳನ್ನು ಕೂಡಲೇ ವಿಲೇ ಮಾಡಬೇಕು. ಯಾವುದೇ ಬಾಕಿ ಕಡತಗಳನ್ನು ಉಳಿಸಿಕೊಳ್ಳದೇ…

Read More

ನಾಳೆ ವಿಜಯಪುರ ಬಂದ್ ಗೆ ಕರೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 15: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದಿರುವ ಆರೋಪಿ ಬಂಧನಕ್ಕೆ ಆಗ್ರಹಿಸಿ ನಾಳೆ (ಅ. 16ರಂದು) ವಿವಿಧ ಪ್ರಗತಿಪರ ಸಂಘಟನೆಗಳು ವಿಜಯಪುರ ಬಂದ್ ಗೆ ಕರೆ ನೀಡಿವೆ.ಅವಶ್ಯಕ ವಸ್ತುಗಳು, ಔಷಧ ಹಾಗೂ ಆರೋಗ್ಯ ಸೇರಿದಂತೆ ತುರ್ತು ಸೇವೆಗಳು ಹೊರತುಪಡಿಸಿ ಉಳಿದೆಲ್ಲ ಸೇವೆಗಳು ಬಹುತೇಕ ಸ್ತಬ್ಧವಾಗಲಿವೆ.ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ನ್ಯಾಯವಾದಿಯೊಬ್ಬರು ಶೂ ಎಸೆದಿರುವುದು ಅತ್ಯಂತ ಖಂಡನಾರ್ಹ. ಇದು ಪ್ರಜಾಪ್ರಭುತ್ವ ಮೇಲೆ ಹಾಗೂ…

Read More

ಉದ್ಯೋಗ ಮೇಳದಲ್ಲಿ 32 ಜನರ ಆಯ್ಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 15: ನಗರದ‌ ಬಿ.ಎಲ್.ಡಿ.ಇ ಸಂಸ್ಥೆಯ‌ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ ಕಾಲೇಜಿನಲ್ಲಿ ಅಕ್ಟೋಬರ್ 13 ಮತ್ತು 14‌ ರಂದು ದಕ್ಷಿಣ ಕೋರಿಯಾದ ಪ್ರತಿಷ್ಠಿತ ಸಿ.ಎನ್.ಸಿ‌ ಯಂತ್ರಗಳ ಉತ್ಪಾದಕ ಸಂಸ್ಥೆ ಡಿ. ಎನ್. ಸೊಲೂಶನ್ಸ್ ಆಯೋಜಿಸಿದ್ದ ಎರಡು ದಿನಗಳ ಉದ್ಯೋಗ ಮೇಳದಲ್ಲಿ 32 ಜನ ಆಯ್ಕೆಯಾಗಿದ್ದಾರೆ.ಬೆಂಗಳೂರಿನ‌ ಡಿ. ಎನ್. ಸೊಲೂಶನ್ಸ್ ಸಂಸ್ಥೆಯ ಉಪಾಧ್ಯಕ್ಷ ಸುರೇಶ ನಾರಾಯಣ ಮತ್ತು ಮಾನವ ಸಂಪನ್ಮೂಲ ಅಧಿಕಾರಿ ಸ್ಮೀತಾ ಆರ್. ಅವರು ಈ ಉದ್ಯೋಗ‌ ಮೇಳದಲ್ಲಿ‌ ನಡೆಸಿದ ಸಂದರ್ಶನದಲ್ಲಿ‌ ವಿಜಯಪುರ…

Read More

ನಾಳೆ ಅಲೋಪಥಿ ಮತ್ತು ಆಯುರ್ವೇದ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 15: ಒಂದೇ ಸೂರಿನಡಿ ಅಲೊಪಥಿ ಮತ್ತು ಆಯುರ್ವೇದ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ನಗರದ ಬಿ.ಎಲ್.ಡಿ.ಇ ಆಯುರ್ವೇದ ಕಾಲೇಜಿನ ಆವರಣದಲ್ಲಿರುವ ನಗರ ಆರೋಗ್ಯ ಕೇಂದ್ರ ಮತ್ತು ಬಿ.ಎಲ್.ಡಿ.ಇ ಹೈಟೆಕ್ ಆಯುರ್ವೇದ ಆಸ್ಪತ್ರೆಯಲ್ಲಿ ಅಕ್ಟೋಬರ್ 17 ರಂದು ಶುಕ್ರವಾರ ನಡೆಯಲಿದೆ.ಅಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಗೆ ಈ ಶಿಬಿರ ನಡೆಯಲಿದ್ದು, ಅಲೋಪಥಿ ಚಿಕಿತ್ಸೆಗಳು, ಬೆಂಬಲಿತ ಸೇವೆಗಳು, ಆಯುರ್ವೇದ ಚಿಕಿತ್ಸೆಗಳು ಲಭ್ಯವಿರಲಿವೆ. ಈ ಶಿಬಿರದಲ್ಲಿ ಅಲೋಪತಿ ಚಿಕಿತ್ಸೆಗಳಾದ ವೈದ್ಯಕೀಯ…

Read More

ಸಹಕಾರಿ ಯುನಿಯನ್ ಅಧ್ಯಕ್ಷರಾಗಿ ಮುಲ್ಲಾ, ಉಪಾಧ್ಯಕ್ಷರಾಗಿ ಅಮರಗೊಂಡ ಅವಿರೋಧ ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಅ. 14 :ಹಿರಿಯ ಸಹಕಾರಿಗಳಾದ ಸಚಿವ ಶಿವಾನಂದ ಪಾಟೀಲ ಅವರ ಪ್ರಯತ್ನದಿಂದಾಗಿ ಶ್ರೀ ಸಿದ್ಧೇಶ್ವರ ಸಹಕಾರಿ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆಯಲ್ಲಿ ಎದುರಾಳಿಗಳನ್ನು ಹಳೆಯ ಪೆನಲ್ ಕ್ಲೀನಸ್ವೀಪ್ ಮಾಡಿದ ಬೆನ್ನಲ್ಲೇ ಸಚಿವರ ಪ್ರಯತ್ನದಿಂದಾಗಿ ವಿಜಯಪುರ ಜಿಲ್ಲಾ ಸಹಕಾರಿ ಯುನಿಯನ್ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದಿದೆ.ವಿಜಯಪುರ ಜಿಲ್ಲಾ ಸಹಕಾರಿ ಯುನಿಯನ್ ನಿ. ಅಧ್ಯಕ್ಷರಾಗಿ ಎಂ.ಸಿ. ಮುಲ್ಲಾ, ಉಪಾಧ್ಯಕ್ಷರಾಗಿ ನಾಗಪ್ಪ ಅಮರಗೊಂಡ ಅವಿರೋಧ ಆಯ್ಕೆಯಾಗಿದ್ದಾರೆ.ಈಚೆಗೆ ನಡೆದ ಚುನಾವಣೆಯಲ್ಲಿ 2025-30 ರ ಅವಧಿಗೆ ಆಡಳಿತ ಮಂಡಳಿಯ…

Read More

ನಾಯಿ ಕಡಿತಕ್ಕೆ ನಿರ್ಲಕ್ಷ್ಯ ಬೇಡ : ಎಚ್ಚರಿಕೆ ಇರಲಿ- ತಕ್ಷಣ ಲಸಿಕೆ ಪಡೆದುಕೊಳ್ಳಿ-ಜಿಲ್ಲಾಧಿಕಾರಿ ಡಾ.ಆನಂದ ಕೆ. ಕರೆ

ಸಪ್ತಸಾಗರ ವಾರ್ತೆ, ವಿಜಯಪುರ ಅ.14: ನಾಯಿ ಕಡಿತಕ್ಕೊಳಗಾದಲ್ಲಿ ಸಾರ್ವಜನಿಕರು ನಿರ್ಲಕ್ಷ್ಯ ವಹಿಸದೇ ಎಚ್ಚರಿಕೆ ವಹಿಸಿ, ತಕ್ಷಣ ಲಸಿಕೆ ಪಡೆದುಕೊಳ್ಳುವ ಮೂಲಕ ರೇಬಿಸ್ ಬಾರದಂತೆ ತಡೆಗಟ್ಟಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಪಶು ಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಕರ್ನಾಟಕ ಪಶುವೈದ್ಯಕೀಯ ಸಂಘ ಹಾಗೂ ಜಿಲ್ಲಾ ಘಟಕ ಇವರ ಸಹಯೋಗದಲ್ಲಿ ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ರೇಬಿಸ್ ತಡೆಗಟ್ಟಲು ಮುಂದಾಗೋಣ ನೀವು-ನಾವು ನಮ್ಮ ಸಮಾಜ ಎಂಬ ಘೋಷವಾಕ್ಯದಡಿ 2025-ರ…

Read More

ರಂಗಕರ್ಮಿ ತಾಳಿಕೋಟೆ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಕಂಬನಿ

ಸಪ್ತಸಾಗರ ವಾರ್ತೆ, ಸಿಂದಗಿ, ಅ. 14: ರಂಗದ ಮೇಲೆ ಹಾಸ್ಯದ ಮೂಲಕ ಸಾಮಾಜಿಕ ಜಾಗೃತಿ ಮೂಡಿಸಿ ಜನಮನ್ನಣೆ ಗಳಿಸಿದ್ದ ರಾಜು ತಾಳಿಕೋಟಿ ಎಂಬ ಅದ್ಭುತ ಕಲಾವಿದ ನಗುತ್ತಲೇ ಜೀವನ ರಂಗಕ್ಕೆ ವಿದಾಯ ಹೇಳಿದ್ದಾರೆ. ರಂಗಭೂಮಿ ಇಂಥ ಅದ್ಭುತ ಪ್ರತಿಭೆಯನ್ನು ಕಳೆದುಕೊಂಡು ಬಡವಾಗಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ವಿಷಾದಿಸಿದರು.ನಿಧನರಾಗಿರುವ ರಂಗಕರ್ಮಿ, ಧಾರವಾಡ ರಂಗಾಯಣ ನಿರ್ದೇಶಕರಾಗಿದ್ದ ರಾಜು ತಾಳಿಕೋಟಿ ಅವರ ಅಂತಿಮ ದರ್ಶನ ಪಡೆದು ಸಿಂದಗಿ ಕನ್ನಡ ಸಾಹಿತ್ಯ…

Read More

ಮಂಡ್ಯ ಭಾಗದಿಂದಲೇ ಹಿಂದೂ ಧ್ರುವೀಕರಣ ಪ್ರಾರಂಭ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 14: ಮೈಸೂರು, ಮದ್ದೂರು ಹಾಗೂ ಮಂಡ್ಯದಿಂದಲೇ ಹಿಂದೂ ಧ್ರುವೀಕರಣ ಪ್ರಾರಂಭವಾಗಿದೆ. ಇದಕ್ಕೆ ಸಾವಿರಾರು ಸಂಖ್ಯೆಗಳಲ್ಲಿ ಸೇರಿದ್ದ ಕಾರ್ಯಕರ್ತರೇ ಸಾಕ್ಷಿ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ತಿಳಿಸಿದ್ದಾರೆ.ಯದುವಂಶದ ಅರಸರ ಆಳ್ವಿಕೆಯಿಂದ ಸಮೃದ್ಧವಾಗಿರುವ ಆ ಭಾಗದಲ್ಲಿ ಹಿಂದೂ ಆಚರಣೆಗಳಲ್ಲಿ, ಹಬ್ಬಗಳಲ್ಲಿ ಕಲ್ಲು ತೂರುವುದು, ಅಶಾಂತಿ ಸೃಷ್ಟಿಸುವುದು ಕಳೆದ ಎರಡು ವರ್ಷಗಳಲ್ಲಿ ಸರ್ವೇ ಸಾಮಾನ್ಯವಾಗಿದೆ. ಇದಕ್ಕೆ ಆಳುವ ಸರ್ಕಾರದ ಅಲ್ಪ ಸಂಖ್ಯಾತ ಓಲೈಕೆ ನೀತಿಯೇ ಕಾರಣ ಎಂದು ಬಿಡಿಸಿ ಹೇಳಬೇಕಾಗಿಲ್ಲ.ನಾಲ್ವಡಿ ಕೃಷ್ಣರಾಜ ಒಡೆಯರ್…

Read More

ಯಾರು ಭಾರತವನ್ನು ಪ್ರೀತಿಸುತ್ತಾರೋ ಅವರು ಆರ್‌ಎಸ್‌ಎಸ್ ಪ್ರೀತಿಸುತ್ತಾರೆ ಅಭಿಯಾನಕ್ಕೆ ಚಾಲನೆ

ಸಪ್ತ ಸಾಗರ ವಾರ್ತೆ ವಿಜಯಪುರ, ಅ. 14:ಯಾರು ಭಾರತವನ್ನು ಪ್ರೀತಿಸುತ್ತಾರೋ ಅವರು ಆರ್‌ಎಸ್‌ಎಸ್ ಪ್ರೀತಿಸುತ್ತಾರೆ ಎಂಬ ಅಭಿಯಾನದ ಅಂಗವಾಗಿ ಈ ಸಂದೇಶವುಳ್ಳ ಪೋಸ್ಟರ್ ಅಂಟಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಬಿಜೆಪಿ ನಗರ ಮಂಡಳ ವತಿಯಿಂದ ಅಧ್ಯಕ್ಷ ಸಂದೀಪ್ ಪಾಟೀಲ್ (ಝಳಕಿ) ನೇತೃತ್ವದಲ್ಲಿ ವಿಜಯಪುರದ ವಾರ್ಡ್ ನಂ.೭ ರಲ್ಲಿ ವಿದ್ಯುಕ್ತ ಚಾಲನೆ ನೀಡಲಾಯಿತು.ಅಭಿಯಾನದಲ್ಲಿ ಪಾಲ್ಗೊಂಡ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಮಾತನಾಡಿ, ಆರ್‌ಎಸ್‌ಎಸ್ ನಿಷೇಧ ಮಾಡುವ ಹೇಳಿಕೆ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆ ಬಾಲಿಷತನದಿಂದ ಕೂಡಿದೆ….

Read More

ಕನ್ನೂರ ಜೋಡಿ ಕೊಲೆ ಪ್ರಕರಣ: ಐವರು ಆರೋಪಿಗಳ ಬಂಧನ, ಪರಾರಿಯಾಗಲು ಯತ್ನಿಸಿದ ಓರ್ವ ಆರೋಪಿ ಮೇಲೆ ಫೈರಿಂಗ್

ಸಪ್ತಸಾಗರ ವಾರ್ತೆ,ವಿಜಯಪುರ, ಅ. 14: ತಾಲೂಕಿನ ಕನ್ನೂರು ಗ್ರಾಮದಲ್ಲಿ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಪೊಲೀಸರ ಮೇಲೆ ಬೈಕ್ ಹಾಯಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.ಸಾಗರ ಬೆಳ್ಳುಂಡಗಿ ಹಾಗೂ ಇಸಾಕ್ ಖರೇಷಿ ಕೊಲೆ ಮಾಡಿದ ಆರೋಪಿಗಳ ಪೈಕಿ ಒಟ್ಟು ಐದು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದಾರೆ.ಆರೋಪಿ ಅಕ್ಷಯ ಶಿವಾನಂದ ಜುಲಜುಲೆ ಪೊಲೀಸರ ಮೇಲೆ ಬೈಕ್ ಹಾಯಿಸಿ ಪರಾರಿಯಾಗಲು ಯತ್ನ ನಡೆಸಿದ.ಆಗ ವಿಜಯಪುರ…

Read More