ಸಾಧನೆ ಮಾಡುವ ಮನಸ್ಸಿದ್ದರೆ ಅಂಗ ವೈಕಲ್ಯ ಲೆಕ್ಕಕ್ಕೆ ಬರುವುದಿಲ್ಲ; ಬಸವರಾಜ ಉಮರಾಣಿ

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 28:ದೇವರು ನನಗೆ ದೃಷ್ಠಿ ಕೊಟ್ಟಿದ್ದರೆ ಬಹುಶಃ ಇಂತಹ ಸಾಧನೆ ಮಾಡುವ ಧೈರ್ಯ ಮಾಡುತ್ತಿರಲಿಲ್ಲ. ನಮ್ಮಲ್ಲಿರುವಸಮಸ್ಯೆಗಳು ನಮ್ಮ ಸಾಧನೆಗೆ ಪೂರಕವಾಗಬೇಕೆ ಹೊರತು ಮಾರಕವಾಗಬಾರದು. ಸಾಧನೆ ಮಾಡುವಮನಸಿದ್ದರೆ ಸರ್ವ ಸಿದ್ಧಿಯಾಗುತ್ತದೆ ಎಂದು ಮಾನವ ಕಂಪ್ಯೂಟರ್ ಖ್ಯಾತಿಯ ಬಸವರಾಜ ಉಮರಾಣಿ ಹೇಳಿದರು.ನಗರದ ಎಕ್ಸಲಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿಆಯೋಜಿಸಲಾಗಿದ್ದ ಒಂದು ದಿನದ ವಿಶೇಷ ಉಪನ್ಯಾಸಕಾರ್ಯಕ್ರಮವನ್ನುದ್ಧೇಶಿಸಿ ಮಾತನಾಡಿದ ಅವರು, ಗಣಿತ ಎನ್ನುವುದು ಹಲವರಿಗೆ ಕಬ್ಬಿಣದ ಕಡಲೆಯಾದರೆ ಕೆಲವರಿಗೆಅದು ಎಲ್ಲದಕ್ಕಿಂತಲೂ ಸಾಮಾನ್ಯವಾದ ವಿಷಯವಾಗಿ ಕಾಣುತ್ತದೆ.ಅದಕ್ಕೆ ಕಾರಣ ಆ ವಿಷಯದ…

Read More

ಕೆಂಪೇಗೌಡರು ಹುಟ್ಟಿದ್ದು ಒಕ್ಕಲಿಗನಾಗಿ ಬೆಳೆದಿದ್ದು ವಿಶ್ವಮಾನವನಾಗಿ: ಸಿಎಂ ಡಿ.ಕೆ. ಶಿವಕುಮಾರ

ಸಪ್ತಸಾಗರ ವಾರ್ತೆ,ಬೆಂಗಳೂರು, ಜೂನ್ 27: “ಕೆಂಪೇಗೌಡರು ಹುಟ್ಟಿದ್ದು ಒಕ್ಕಲಿಗನಾಗಿ ಬೆಳೆದಿದ್ದು ವಿಶ್ವಮಾನವನಾಗಿ. ಇದನ್ನು ಯಾರೂ ಸಹ ಮರೆಯಬಾರದು.‌ ಈ ಹಾದಿಯಲ್ಲಿಯೇ ನಾವೆಲ್ಲರೂ ನಡೆಯಬೇಕು” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಕರೆ ನೀಡಿದರು.ಯಲಹಂಕದಲ್ಲಿ ಬೆಂಗಳೂರು ಉತ್ತರ ತಾಲ್ಲೂಕು ಒಕ್ಕಲಿಗರ ಸಮಿತಿ ಶನಿವಾರ ಆಯೋಜಿಸಿದ್ದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಶಿವಕುಮಾರ್ ಅವರು ಮಾತನಾಡಿದರು.“ಇಡೀ ವಿಶ್ವ ಬೆಂಗಳೂರನ್ನು ನೋಡುತ್ತಿದೆ. ಇದಕ್ಕೆ ಕಾರಣ ನಾಡಪ್ರಭು ಕೆಂಪೇಗೌಡರು. 500 ವರ್ಷಗಳ ಹಿಂದೆ ಈ ಭೂಮಿಗೆ ಪೂಜೆ ಮಾಡಿ…

Read More

ಪೋಲಿಯೋ ಹನಿ ಜೀವಮಾನದ ರಕ್ಷಕ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ಇಂಡಿ, ಜೂ. 27: ಪೋಲಿಯೋ ನಿರ್ಮೂಲನೆ ಪ್ರತಿಯೊಬ್ಬರ ಜವಾಬ್ದಾರಿ. ಲಸಿಕೆ, ಜಾಗೃತಿ ಮತ್ತು ಸ್ವಚ್ಛತೆಯ ಮೂಲಕ ನಾವು ಆರೋಗ್ಯಕರ ಸಮಾಜ ನಿರ್ಮಿಸಬೇಕು ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಶನಿವಾರ ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್, ಕೆಜಿಎಸ್, ಯುಬಿಎಸ್ ಶಾಲೆಯ ಸಹಯೋಗದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಹಮ್ಮಿಕೊಂಡ ಪಲ್ಸ್ ಪೋಲಿಯೋ ಲಸಿಕೆಯ ಜಾಗೃತಿ ಜಾಥಾ ಉದ್ಧೇಶಿಸಿ ಅವರು ಮಾತನಾಡಿದರು.ಕೇವಲ ಎರಡು ಹನಿ ಪೋಲಿಯೊ ಲಸಿಕೆ ಮಗುವಿಗೆ ಜೀವಮಾನದ ರಕ್ಷಣೆ ನೀಡುತ್ತದೆ. ಭಾರತವನ್ನು…

Read More

ಉದ್ಘಾಟನೆ ಕಾಣದ ವಿಜಯಪುರ ವಿಮಾನ ನಿಲ್ದಾಣ: ಕೋಟ್ಯಾಂತರ ವೆಚ್ಚದ ಯೋಜನೆಗೆ ಇನ್ನೂ ಹಸಿರು ನಿಶಾನೆ ಇಲ್ಲ; ಉತ್ತರ ಕರ್ನಾಟಕದ ಜನರ ನಿರೀಕ್ಷೆ ಹುಸಿ

ಚೇತನ ಆಸಂಗಿ ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 26: ಉತ್ತರ ಕರ್ನಾಟಕದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿರುವ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಂಡು ಸುಮಾರು ಒಂದು ವರ್ಷ ಕಳೆದರೂ ಇನ್ನೂ ಅಧಿಕೃತ ಉದ್ಘಾಟನೆ ಭಾಗ್ಯ ದೊರೆತಿಲ್ಲ. ಪರಿಣಾಮವಾಗಿ, ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ವಿಮಾನ ನಿಲ್ದಾಣ ಜನಸೇವೆಗೆ ತೆರೆದುಕೊಳ್ಳದೇ ಕಾಯುವ ಸ್ಥಿತಿಯಲ್ಲಿದೆ.ವಿಜಯಪುರ ಸೇರಿದಂತೆ ಬಾಗಲಕೋಟೆ, ಕಲಬುರಗಿ, ಯಾದಗಿರಿ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ಜನರು ವಿಮಾನ ಸೇವೆ ಆರಂಭವಾಗುವ ನಿರೀಕ್ಷೆಯಲ್ಲಿದ್ದಾರೆ. ಆದರೆ ವಿವಿಧ ಆಡಳಿತಾತ್ಮಕ ಮತ್ತು ತಾಂತ್ರಿಕ ಪ್ರಕ್ರಿಯೆಗಳ ವಿಳಂಬದಿಂದ…

Read More

ಕ್ರಿಕೆಟ್ ಒಗ್ಗಟ್ಟು ಮತ್ತು ಕ್ರೀಡಾ ಮನೋಭಾವ ಬೆಳೆಸುತ್ತದೆ: ಸುನೀಲಗೌಡ ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 24:ಕ್ರಿಕೆಟ್ ಕ್ರೀಡೆಯು ತಂಡವಾಗಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಲು ಹಾಗೂ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಲು ಪ್ರೇರಣೆ ನೀಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು.ಬಬಲೇಶ್ವರ ಪಟ್ಟಣದಲ್ಲಿ ದಿ. ಬಿ.ಎಂ. ಪಾಟೀಲ ಸ್ಮರಣಾರ್ಥ ಆಯೋಜಿಸಲಾದ ಬಬಲೇಶ್ವರ ಪ್ರೀಮಿಯರ್ ಲೀಗ್ (ಬಿಪಿಎಲ್) ಸೀಸನ್-2 ಕ್ರಿಕೆಟ್ ಟೂರ್ನಾಮೆಂಟ್ ಅನ್ನು ಮಂಗಳವಾರ ಬ್ಯಾಟಿಂಗ್ ಮಾಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.ದಿ. ಬಿ.ಎಂ. ಪಾಟೀಲ ಅವರು ಶಿಕ್ಷಣ ಪ್ರೇಮಿಯಾಗಿದ್ದು, ಬಡ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ದೊರೆಯುವಂತೆ…

Read More

ವಿಜಯಪುರದಲ್ಲಿ ಅಕ್ರಮ ಎಲ್‌ಪಿಜಿ ಗ್ಯಾಸ್ ಪತ್ತೆ: 23 ಸಿಲಿಂಡರ್‌ಗಳ ವಶ

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 24:ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಜಂಟಿಯಾಗಿ ದಾಳಿ ನಡೆಸಿ, 10 ವಾಣಿಜ್ಯ ಎಲ್ ಪಿಜಿ ಹಾಗೂ 13 ಗೃಹ ಬಳಕೆ ಸಿಲಿಂಡರ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.ನಗರದ ರಹಿಂನಗರ ಪ್ರದೇಶದಲ್ಲಿರುವ ರಾಜೇಶ್ವರಿ ಮಲ್ಲಪ್ಪ ಬರಟಗಿ ಅವರ ಖಾಲಿ ಜಾಗೆಯಲ್ಲಿನ ಶೆಡ್‌ನಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳಿಂದ ವಾಣಿಜ್ಯ ಸಿಲಿಂಡರ್‌ಗಳಿಗೆ ಅಕ್ರಮವಾಗಿ ಗ್ಯಾಸ್ ತುಂಬಿಸಿ ಹೋಟೆಲ್‌ಗಳಿಗೆ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಆಧರಿಸಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ದಾಳಿಯ ವೇಳೆ 10…

Read More

ಐತಿಹಾಸಿಕ ವಿಜಯಪುರದಲ್ಲಿ ಪಾರ್ಕಿಂಗ್ ಸಮಸ್ಯೆ: ವಾಹನ ಸವಾರರ ಪರದಾಟ, ಸಂಚಾರ ಅಸ್ತವ್ಯಸ್ತ

ನಗರಾಭಿವೃದ್ಧಿಗೆ ಸವಾಲಾದ ವಾಹನ ನಿಲುಗಡೆ ವ್ಯವಸ್ಥೆಯ ಕೊರತೆ. ರುದ್ರಪ್ಪ ಆಸಂಗಿಸಪ್ತಸಾಗರ ವಾರ್ತೆ,ವಿಜಯಪುರ, ಜೂ. 24: ಐತಿಹಾಸಿಕ ಸ್ಮಾರಕಗಳ ನಗರ, ವಿಶ್ವವಿಖ್ಯಾತ ಗೋಳಗುಮ್ಮಟ ಖ್ಯಾತಿಯಿಂದ ಜಗತ್ತಿನ ಗಮನ ಸೆಳೆದಿರುವ ವಿಜಯಪುರ ಮಹಾನಗರದಲ್ಲಿ ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆಯಾದರೂ, ಸಮರ್ಪಕ ಪಾರ್ಕಿಂಗ್ ವ್ಯವಸ್ಥೆ ಇಲ್ಲದಿರುವುದು ನಾಗರಿಕರು ಹಾಗೂ ವಾಹನ ಸವಾರರಿಗೆ ತೀವ್ರ ತೊಂದರೆಯಾಗಿ ಪರಿಣಮಿಸಿದೆ.ನಗರದ ಪ್ರಮುಖ ವಾಣಿಜ್ಯ ಪ್ರದೇಶಗಳಾದ ಎಂ.ಜಿ.ರಸ್ತೆ, ಗಾಂಧಿ ಚೌಕ್, ಸಿದ್ಧೇಶ್ವರ ದೇವಸ್ಥಾನ ರಸ್ತೆ, ಸ್ಟೇಷನ್ ರಸ್ತೆ, ಮಿನಿ ವಿಧಾನಸೌಧ ಸುತ್ತಮುತ್ತ, ಸರ್ಕಾರಿ ಕಚೇರಿಗಳು ಹಾಗೂ…

Read More

ಮಳೆ ಅಭಾವ ಎದುರಿಸಲು ಅಧಿಕಾರಿಗಳು ಸಜ್ಜಾಗಲಿ: ಸಚಿವ ಡಾ. ಎಂ.ಬಿ. ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 23:ಜಿಲ್ಲೆಯಲ್ಲಿ ಈ ವರ್ಷ ಮಳೆ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಉಂಟಾಗಬಹುದಾದ ಸಮಸ್ಯೆಗಳನ್ನು ಎದುರಿಸಲು ಅಧಿಕಾರಿಗಳು ಯುದ್ಧೋಪಾದಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಸಚಿವ ಡಾ. ಎಂ.ಬಿ. ಪಾಟೀಲ ಸೂಚನೆ ನೀಡಿದರು.ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು,…

Read More

ಜನ-ಜಾನುವಾರುಗಳಿಗೆ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ-ಸಚಿವ ಡಾ.ಎಂ.ಬಿ. ಪಾಟೀಲ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 23:ಜುಲೈ 2ನೇ ವಾರದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಆದಾಗ್ಯೂ ಮಳೆ ಅಭಾವದಿಂದ ಜಿಲ್ಲೆಯಾದ್ಯಂತ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಜವಾಬ್ದಾರಿ ಅರಿತು ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸಬೇಕು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಡಾ. ಎಂ.ಬಿ. ಪಾಟೀಲ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅವರು ಮಾತನಾಡಿದರು.ಜಿಲ್ಲೆ ಸೇರಿದಂತೆ…

Read More

ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರ ಸಹಭಾಗಿತ್ವ ಅಗತ್ಯ: ಜಿಲ್ಲಾಧಿಕಾರಿ ಡಾ. ಆನಂದ್ ಕೆ.

ಸಪ್ತಸಾಗರ ವಾರ್ತೆ,ವಿಜಯಪುರ, ಜೂ.23:ಅಂತರರಾಷ್ಟ್ರೀಯ ಮಾದಕ ವಸ್ತು ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರೋಧಿ ದಿನದ ಹಿನ್ನೆಲ್ಲೆಯಲ್ಲಿ ಜಿಲ್ಲೆಯಾದ್ಯಂತ ಒಂದು ವಾರಗಳ ಕಾಲ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜನರಲ್ಲಿ ಅರಿವು ಮೂಡಿಸಲು ಜಾಥಾ, ವಿಚಾರ ಸಂಕಿರಣ ಹಾಗೂ ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಆನಂದ್ ಕೆ ಹೇಳಿದರು.ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮಂಗಳವಾರ ‌ಮಾದಕ ದ್ರವ್ಯಗಳ ದುರ್ಬಳಕೆ ಮತ್ತು ಅಕ್ರಮ‌ ಸಾಗಾಣಿಕೆ ವಿರುದ್ದ ಅಂತರರಾಷ್ಟ್ರೀಯ ದಿನ ಆಚರಣೆಯ…

Read More