ಪ್ರಿಯಾಂಕ್ ಖರ್ಗೆ ವಿರುದ್ದ ಹೇಳಿಕೆ: ಜಿಗಜಿಣಗಿಗೆ ರಾಜು ಆಲಗೂರ ಎಚ್ಚರಿಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 22:ಆರ್‌ಎಸ್‌ಎಸ್ ಕುರಿತು ರಾಜ್ಯದ ಗೃಹ ಸಚಿವ ಪ್ರಿಯಾಂಕಾ ಖರ್ಗೆ ಅವರು ನೀಡಿರುವ ಹೇಳಿಕೆಗೆ ಬೆಂಬಲ ವ್ಯಕ್ತಪಡಿಸಿರುವ ಮಾಜಿ ಶಾಸಕ ರಾಜು ಆಲಗೂರ ಅವರು, ಈ ವಿಚಾರದಲ್ಲಿ ಮಾಜಿ ಸಂಸದ ರಮೇಶ ಜಿಗಜಿಣಗಿ ನೀಡಿರುವ ಪ್ರತಿಕ್ರಿಯೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.ಪತ್ರಿಕಾ ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿರುವ ಅವರು, ರಾಜ್ಯದ ನೂತನ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ದೇಶದಲ್ಲಿರುವ ಎಲ್ಲ ಸಂಘ-ಸಂಸ್ಥೆಗಳು ನೋಂದಣಿ ಮಾಡಿಕೊಂಡಿರುವಾಗ ಆರ್‌ಎಸ್‌ಎಸ್ ಏಕೆ ನೋಂದಣಿ ಮಾಡಿಕೊಳ್ಳಬಾರದು ಎಂದು ಪ್ರಶ್ನೆ ಎತ್ತಿರುವುದು ಸಂವಿಧಾನಬದ್ಧ ಹಕ್ಕಾಗಿದೆ…

Read More

ಭೀಮಾತೀರ 6 ಜನರ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಮಹೇಶ್ ತಳವಾರ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

ಸಪ್ತಸಾಗರ ವಾರ್ತೆ,ವಿಜಯಪುರ, ಜೂನ್ 22:ಭೀಮಾತೀರದಲ್ಲಿ ನಡೆದ ಆರು ಜನರ ಸಾಮೂಹಿಕ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಹೇಶ್ ತಳವಾರನನ್ನು ಬಂಧಿಸುವ ವೇಳೆ ಪೊಲೀಸರು ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.ತಿಕೋಟಾ ತಾಲೂಕಿನ ಇಟ್ಟಂಗಿಹಾಳ ಗ್ರಾಮದ ಹೊರವಲಯದಲ್ಲಿ ಆರೋಪಿ ಮಹೇಶ್ ತಳವಾರನನ್ನು ಬಂಧಿಸಲು ಚಡಚಣ ಪೊಲೀಸರು ತೆರಳಿದ್ದ ವೇಳೆ ಆತ ಪೊಲೀಸರ ಮೇಲೆ ಕಲ್ಲು ತೂರಿ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಆತ್ಮರಕ್ಷಣೆ ಹಾಗೂ ಬಂಧನದ ಉದ್ದೇಶದಿಂದ ಚಡಚಣ ಸಿಪಿಐ ಪರಶುರಾಮ ಮನಗೂಳಿ ಅವರು ಮಹೇಶ್‌ನ…

Read More

ಯೋಗದಿಂದ ದೇಹ-ಮನಸ್ಸಿನ ಸಮತೋಲನ ಸಾಧ್ಯ: ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಹರೀಶ ಎ.

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 21:ಯೋಗಾಭ್ಯಾಸದಿಂದ ದೇಹ ಮತ್ತು ಮನಸ್ಸು ಒಗ್ಗೂಡಿ ಆರೋಗ್ಯಕರ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹರೀಶ ಎ. ಹೇಳಿದರು.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ನ್ಯಾಯವಾದಿಗಳ ಸಂಘ, ಆರ್.ಕೆ.ಎಮ್. ಸಮೂಹ ಸಂಸ್ಥೆಗಳು ಹಾಗೂ ಜಿಲ್ಲಾ ನ್ಯಾಯಾಂಗ ಇಲಾಖೆ ನೌಕರರ ಸಂಘದ ಸಹಯೋಗದಲ್ಲಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ…

Read More

ವಿಜಯಪುರ ಕೇಂದ್ರ ಕಾರಾಗೃಹದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 21:ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ವಿಜಯಪುರ ಕೇಂದ್ರ ಕಾರಾಗೃಹದಲ್ಲಿ ಆರ್ಟ್ ಆಫ್ ಲಿವಿಂಗ್ ಹಾಗೂ ಕೇಂದ್ರ ಕಾರಾಗೃಹದ ಸಂಯುಕ್ತ ಆಶ್ರಯದಲ್ಲಿ ವಿಶೇಷ ಯೋಗ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಕಳೆದ ಏಳು ದಿನಗಳಿಂದ ಕಾರಾಗೃಹ ಸಿಬ್ಬಂದಿ ಹಾಗೂ ಕೈದಿಗಳಿಗಾಗಿ ಡಾ. ಬಿ.ಎಂ. ಪಾಟೀಲ್ ಗುರೂಜಿಯವರ ನೇತೃತ್ವದಲ್ಲಿ ಸಂತಸದ ಕಾರ್ಯಕ್ರಮ ಮತ್ತು ಸುದರ್ಶನ ಕ್ರಿಯೆ ಶಿಬಿರ ಆಯೋಜಿಸಲಾಗಿತ್ತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾರಾಗೃಹ ಅಧೀಕ್ಷಕ ಡಾ. ಎಂ.ಎಸ್. ಮಾಳಿ, ಆರೋಗ್ಯಕರ ಜೀವನಕ್ಕೆ ಮನಸ್ಸಿನ ಶಾಂತಿ ಅತ್ಯಗತ್ಯವಾಗಿದೆ. ಮನಸ್ಸು…

Read More

ಆರ್‌ಎಸ್‌ಎಸ್‌ಗೆ ನೋಂದಣಿ ಕಡ್ಡಾಯವಲ್ಲ: ಪ್ರಿಯಾಂಕ ಖರ್ಗೆ ಆರೋಪಗಳಿಗೆ ಬಿಜೆಪಿ ತಿರುಗೇಟು

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 21:ಸರ್ಕಾರದಿಂದ ಅನುದಾನ ಪಡೆಯಲು ಬಯಸುವ ಸಂಘ-ಸಂಸ್ಥೆಗಳು ಮಾತ್ರ ನೋಂದಣಿ ಮಾಡಿಸಿಕೊಳ್ಳಬೇಕಿದ್ದು, ಯಾವುದೇ ಸಹಾಯ ಪಡೆಯದ ಸಂಸ್ಥೆಗಳಿಗೆ ನೋಂದಣಿ ಕಡ್ಡಾಯ ಎಂಬ ನಿಯಮ ಸಂವಿಧಾನದಲ್ಲಿ ಇಲ್ಲ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ಹೇಳಿದರು.ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1925ರಿಂದ ಕಾರ್ಯ ನಿರ್ವಹಿಸುತ್ತಿರುವ ಆರ್‌ಎಸ್‌ಎಸ್‌ ಕಾನೂನುಬದ್ಧವಾಗಿ ಕೆಲಸ ಮಾಡುತ್ತಿದ್ದು, ಅದರ ವಿರುದ್ಧ ದಾಖಲಾದ ಹಲವು ಪ್ರಕರಣಗಳಲ್ಲೂ ಕಾನೂನು ಹೋರಾಟದ ಮೂಲಕ ಗೆಲುವು ಸಾಧಿಸಿದೆ ಎಂದು…

Read More

ಮಳೆಗಾಲದಲ್ಲೂ ಬೇಸಿಗೆಯ ದಾಹ: ಮಳೆಯಿಲ್ಲದೆ ಕಂಗಾಲಾದ ರೈತರು, ಬಿಸಿಗಾಳಿಗೆ ತತ್ತರಿಸಿದ ಜನಜೀವನ

ವಿಶೇಷ ವರದಿಸಪ್ತಸಾಗರ ವಾರ್ತೆ, ವಿಜಯಪುರ, ಜೂ. 21:ಸಾಮಾನ್ಯವಾಗಿ ಜೂನ್ ತಿಂಗಳು ಆರಂಭವಾಗುತ್ತಿದ್ದಂತೆಯೇ ಮಳೆಗಾಲದ ವಾತಾವರಣ ನಿರ್ಮಾಣವಾಗಿ ಜನರಿಗೆ ಬೇಸಿಗೆಯ ಬಿಸಿಲಿನಿಂದ ನಿರಾಳತೆ ಸಿಗಬೇಕು. ಆದರೆ ಈ ಬಾರಿ ಜಿಲ್ಲೆಯಾದ್ಯಂತ ಚಿತ್ರಣವೇ ಬೇರೆಯಾಗಿದೆ. ರೋಹಿಣಿ ಮತ್ತು ಮೃಗಶಿರ ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದ ಕಾರಣ ರೈತರು ಆತಂಕಕ್ಕೆ ಒಳಗಾಗಿದ್ದು, ಮತ್ತೊಂದೆಡೆ ಮಳೆಗಾಲದಲ್ಲೂ ಮುಂದುವರಿದಿರುವ ತೀವ್ರ ಉಷ್ಣಾಂಶ ಜನಜೀವನವನ್ನು ಹೈರಾಣಗೊಳಿಸಿದೆ. ಕೈ ಎತ್ತಿ ಆಕಾಶ ನೋಡುವ ರೈತರು ರೋಹಿಣಿ ಮತ್ತು ಮೃಗಶಿರ ಮಳೆ ಕೃಷಿ ಚಟುವಟಿಕೆಗಳಿಗೆ ಅತ್ಯಂತ ಮಹತ್ವದ್ದಾಗಿದ್ದು, ಈ…

Read More

12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ: ಆರೋಗ್ಯಯುತ ಜೀವನಕ್ಕಾಗಿ ಯೋಗ ಮಾಡಿ -ಜಿಲ್ಲಾಧಿಕಾರಿ ಡಾ. ಆನಂದ್ ಕೆ.

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 21:ಆರೋಗ್ಯಯುತ ಜೀವನ ರೂಪಿಸಿಕೊಳ್ಳಲು ಯೋಗವನ್ನು ಪ್ರತಿಯೊಬ್ಬರೂ ತಮ್ಮ ಬದುಕಿನ ದೈನಂದಿನ ಭಾಗವಾಗಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಅವರು ಕರೆ ನೀಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ ಇವರ ಸಹಯೋಗದಲ್ಲಿ ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ ಎಂಬ ಘೋಷವಾಕ್ಯದ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.ಯೋಗವು ಜಗತ್ತಿಗೆ ನಮ್ಮ ದೇಶ…

Read More

ಉದ್ಯೋಗ ಮೇಳದಲ್ಲಿ ಬಿಎಲ್ಡಿಇ ಕಾಲೇಜಿನ 23 ವಿದ್ಯಾರ್ಥಿಗಳು ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಜೂ. 21:ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ವಿದ್ಯಾಲಯದಲ್ಲಿ ಜೂನ್ 9ರಂದು ಬೆಂಗಳೂರಿನ ಸೆಂಟಮ್ ಎಲೆಕ್ಟ್ರಾನಿಕ್ಸ್ ಮತ್ತು ಬೆಳಗಾವಿಯ ಏಕಸ್ ಸಂಸ್ಥೆಗಳು ನಡೆಸಿದ ಕ್ಯಾಂಪಸ್ ಉದ್ಯೋಗ ಮೇಳದಲ್ಲಿ ಕಾಲೇಜಿನ ಒಟ್ಟು 23 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.ಸೆಂಟಮ್ ಎಲೆಕ್ಟ್ರಾನಿಕ್ಸ್ ಸಂಸ್ಥೆಗೆ 17 ಮತ್ತು ಏಕಸ್ ಸಂಸ್ಥೆಗೆ ಆರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.ಬೆಂಗಳೂರಿನ ಸೆಂಟಮ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯ ವತಿಯಿಂದ ಸಹಾಯಕ ವ್ಯವಸ್ಥಾಪಕ ಮತ್ತು ಮಾನವ ಸಂಪನ್ಮೂಲ ಅಧಿಕಾರಿ ಅಂಶಿತ್ ಸಿ. ಡಿ. ಅವರು ಖುದ್ದಾಗಿ ಆಗಮಿಸಿ…

Read More

ಜಿಲ್ಲೆಯಲ್ಲಿ ಲಸಿಕಾ ಅಭಿಯಾನಕ್ಕೆ ಸಕಲ ಸಿದ್ಧತೆ:2.92 ಲಕ್ಷ ಮಕ್ಕಳಿಗೆ ಪಲ್ಸ್‌ ಪೋಲಿಯೋ ಲಸಿಕೆ ಹಾಕುವ ಗುರಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 20: ಜಿಲ್ಲೆಯಲ್ಲಿ ಜೂನ್‌ 28 ರಿಂದ ಜುಲೈ 1ರವರೆಗೆ ರಾಷ್ಟ್ರೀಯ ಪಲ್ಸ್‌ ಪೊಲಿಯೋ ಲಸಿಕಾ ಅಭಿಯಾನಕ್ಕಾಗಿ ಅಗತ್ಯ ಸಿದ್ಧತೆ ಕೈಗೊಂಡು ಅಭಿಯಾನ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ.ಕೆ ಅವರು ಹೇಳಿದರು.ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಪ್ರಮುಖವಾಗಿ 5 ವರ್ಷದೊಳಗಿನ ಒಟ್ಟು 2,92,495 ಮಕ್ಕಳಿಗೆ ಪಲ್ಸ್ ಪೊಲಿಯೋ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮ…

Read More

ಗಾಂಧಿ ವೃತ್ತದಲ್ಲಿ ಸಿಗ್ನಲ್ ಕೆಳಗೇ ಆಟೋ ಹಾಗೂ ಸಿಟಿ ಬಸ್ ನಿಲುಗಡೆಗೆ ಅವಕಾಶ: ಸಾರ್ವಜನಿಕರ ಆಕ್ರೋಶ

ರುದ್ರಪ್ಪ ಆಸಂಗಿಸಪ್ತಸಾಗರ ವಾರ್ತೆ,ವಿಜಯಪುರ, ಜೂ. 20:ನಗರದ ಪ್ರಮುಖ ಸಂಚಾರ ಕೇಂದ್ರವಾಗಿರುವ ಗಾಂಧಿ ವೃತ್ತದಲ್ಲಿ ಸಿಗ್ನಲ್ ವ್ಯವಸ್ಥೆ ಇದ್ದರೂ, ಅದರ ಕೆಳಭಾಗದಲ್ಲೇ ಆಟೋ ರಿಕ್ಷಾ ಹಾಗೂ ಸಿಟಿ ಬಸ್‌ಗಳ ನಿಲುಗಡೆ ವ್ಯವಸ್ಥೆ ಮಾಡಿರುವುದರಿಂದ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗುತ್ತಿದೆ. ಇದರಿಂದ ಪ್ರತಿನಿತ್ಯ ಸಾವಿರಾರು ವಾಹನ ಸವಾರರು ಹಾಗೂ ಪಾದಚಾರಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.ಗಾಂಧಿ ವೃತ್ತವು ನಗರದ ಹೃದಯಭಾಗವಾಗಿದ್ದು, ಇಲ್ಲಿಂದ ವಿವಿಧ ಪ್ರದೇಶಗಳಿಗೆ ವಾಹನಗಳು ಸಂಚರಿಸುತ್ತವೆ. ಆದರೆ ಸಿಗ್ನಲ್ ಸಮೀಪವೇ ಆಟೋಗಳ ನಿಲುಗಡೆ ಮತ್ತು ಪ್ರಯಾಣಿಕರ ಏರಿಳಿತ ನಡೆಯುತ್ತಿರುವುದರಿಂದ ವಾಹನಗಳ…

Read More