ಜ.5ರಂದು ಫೋನ್-ಇನ್ ಕಾರ್ಯಕ್ರಮ

ಸಪ್ತಸಾಗರ ವಾರ್ತೆ, ವಿಜಯಪುರ ಜ.3:ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಮೂಲಕ ಪ್ರಯಾಣಿಕರ ಅನುಕೂಲಕ್ಕಾಗಿ ಅಹವಾಲು ಮತ್ತು ಕುಂದುಕೊರತೆಗಳನ್ನು ಆಲಿಸಲು ಜ.5ರ ಸೋಮವಾರ ಮಧ್ಯಾಹ್ನ 3.30 ರಿಂದ 4.30ರವರೆಗೆ ಫೋನ್-ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಮೊ. 6366423887 ಸಂಖ್ಯೆಗೆ ಸಾರ್ವಜನಿಕರು ಕರೆ ಮಾಡಿ, ತಮ್ಮ ಕುಂದುಕೊರತೆಗಳನ್ನು ಪರಿಹರಿಸಿಕೊಳ್ಳಬಹುದಾಗಿದ್ದು, ಆದ್ದರಿಂದ ಸಾರ್ವಜನಿಕರು ಫೋನ್-ಇನ್ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಜ.10 ರಿಂದ 17ರವರೆಗೆ ಸಿದ್ದೇಶ್ವರ ಜಾನುವಾರು ಜಾತ್ರೆ: ಅಚ್ಚುಕಟ್ಟು ಆಯೋಜನೆಗೆ ಜಿಲ್ಲಾಧಿಕಾರಿಡಾ. ಆನಂದ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ.3: ಪ್ರತಿ ವರ್ಷದಂತೆ ಈ ವರ್ಷವೂ ವಿಜಯಪುರ ತಾಲೂಕಿನ ತೊರವಿಯಲ್ಲಿ ನಡೆಯುವ ಸಂಕ್ರಮಣ ಸಿದ್ದೇಶ್ವರ ಜಾನುವಾರು ಜಾತ್ರೆ ಜ.10ರಿಂದ 17ರವರೆಗೆ ನಡೆಯಲಿದ್ದು, ಜಾತ್ರೆಯನ್ನು ಅತ್ಯಂತ ಅಚ್ವುಕಟ್ಟಾಗಿ ಹಾಗೂ ವ್ಯವಸ್ಥಿತವಾಗಿ ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಆಯೋಜಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಜರುಗಿದ ಸಿದ್ದೇಶ್ವರ ಜಾನುವಾರು ಜಾತ್ರೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಾನುವಾರು ಗಡಿ ಭಾಗವಾಗಿರುವುದರಿಂದ ಜಾತ್ರೆಯಲ್ಲಿ ಮಹಾರಾಷ್ಟ್ರ ಸೇರಿದಂತೆ ವಿವಿಧ ಭಾಗಗಳಿಂದ…

Read More

ಚರ್ಮರೋಗ ತಜ್ಞ ಇನಾಮದಾರರಿಗೆ ರಾಷ್ಟ್ರೀಯ ಅತ್ಯುತ್ತಮ ವೈದ್ಯಕೀಯ ಶಿಕ್ಷಕ ಪ್ರಶಸ್ತಿ ಪ್ರದಾನ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 3:ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಹಂಗಾಮಿ ಕುಲಪತಿ ಡಾ. ಅರುಣ ಚಂ. ಇನಾಮದಾರ ಅವರಿಗೆ ಭಾರತೀಯ ವೈದ್ಯಕೀಯ ಸಂಘ(Indian Medical Association) ರಾಷ್ಟ್ರೀಯ ಅತ್ಯುತ್ತಮ ವೈದ್ಯಕೀಯ ಶಿಕ್ಷಕ(National Best Medical Teacher Award) ನೀಡಿ ಗೌರವಿಸಿದೆ.ಡಿ. 26 ರಂದು ಗುಜರಾತಿನ ಅಹ್ಮದಾಬಾದಿನಲ್ಲಿ ನಡೆದ ಸಂಘದ 100ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು. ಓಡಿಶಾ ಆರೋಗ್ಯ ಸಚಿವ ಡಾ. ಮುಕೇಶ ಮಹಾಲಿಂಗ ಪ್ರಶಸ್ತಿ ಪ್ರದಾನ ಮಾಡಿದರು.ಡಾ. ಅರುಣ ಚಂ….

Read More

ಹೋರಾಟಗಾರರ ಮೇಲೆ ದೌರ್ಜನ್ಯ: ಮಾರ್ಕ್ಸ್ ವಾದಿ ಕಮ್ಯುನಿಷ್ಟ ಪಕ್ಷ ಖಂಡನೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 2 : ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಸೇರಿದ್ದ ಚಳವಳಿಕಾರರನ್ನು ಪೊಲೀಸರು ಬಂಧಿಸಿದ್ದು ಅಲ್ಲದೆ, ಜೈಲಿಗಟ್ಟಿ, ಪ್ರತಿಭಟನೆ ನಡೆಸುತ್ತಿದ್ದ ಟೆಂಟ್ ನ್ನು ತೆರವುಗೊಳಿಸಿದ ವಿಜಯಪುರ ಪೋಲೀಸರ ಸರ್ವಾಧಿಕಾರಿ ಕ್ರಮವನ್ನು ಭಾರತ ಕಮ್ಯುನಿಸ್ಟ್ ಪಕ್ಷ ( ಮಾರ್ಕ್ಸವಾದಿ ) ಕರ್ನಾಟಕ ರಾಜ್ಯ ಸಮಿತಿ ಬಲವಾಗಿ ಖಂಡಿಸಿದೆ.ಹೋರಾಟಗಾರರನ್ನು ಬಂಧಿಸಿ ಜೈಲಿಗಟ್ಟಿದ ಎಲ್ಲ ಹೋರಾಟ ಸಮಿತಿಯ ಮುಖಂಡರನ್ನು ಬೇಷರತ್ತಾಗಿ ಬಿಡುಗಡೆ ಮಾಡುವಂತೆ ಸಿಪಿಐಎಂ ಆಗ್ರಹಿಸಿದೆ.ಜಿಲ್ಲೆಯಲ್ಲಿ ಒಂದು ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪಿಸಿ ಎಂದು ಆಗ್ರಹಿಸಿ ಹೋರಾಟ ನಡೆಸುವುದು…

Read More

ಬ್ಯಾಡ್ಮಿಂಟನ್ ಪಂದ್ಯಾವಳಿ: ಡಾ. ಮಾಲಬಾವಡಿ ಪ್ರಥಮ

ಸಪ್ತಸಾಗರ ವಾರ್ತೆ ವಿಜಯಪುರ, ಜ. 2:ನಗರದ ಯೋಗಾ ಗಾರ್ಡನ್ ನಲ್ಲಿ ಸ್ನೇಹಿತರ ಕೂಟದ ನೇತೃತ್ವದಲ್ಲಿ ನಡೆದ ಡಬಲ್ ಬ್ಯಾಡ್ಮಿಂಟನ್ ರೋಚಕ ಪಂದ್ಯಾವಳಿಯಲ್ಲಿ ಹಿರಿಯ ಪತ್ರಕರ್ತರೂ ಆದ ಡಾ. ಎಂ. ಎ. ಮಾಲಬಾವಡಿ ಹಾಗೂ ಜಯರಾಮ ಚವ್ಹಾಣ ಅವರು ಪ್ರಥಮ ಬಹುಮಾನವನ್ನು ಗೆದ್ದು ಬೀಗಿದರು.ಹುಸೇನಸಾಬ ಮನಗೂಳಿ, ಜಗದೀಶ ರಾಠೋಡ ಅವರು ದ್ವಿತೀಯ ಬಹುಮಾನ ಗಳಿಸಿದರು.ಇಸ್ಮಾಯಿಲ್ ಮನಗೂಳಿ ಹಾಗೂ ಲಕ್ಷ್ಮಣ ರಾಠೋಡ ತೃತೀಯ ಸ್ಥಾನ ಪಡೆದುಕೊಂಡರು.ಸಿದ್ದಣ್ಣ ಸಕ್ರಿ ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.ಇದೇ ಸಂದರ್ಭದಲ್ಲಿ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಕ್ರೀಡಾಪಟುಗಳಿಗೆ…

Read More

ಹೋರಾಟಗಾರರ ಬಂಧನ:ಎಐಯುಟಿಯುಸಿ ಕಾರ್ಮಿಕ ಸಂಘಟನೆ ಖಂಡನೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಜ. 2: ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿಗಾಗಿ ಆಗ್ರಹಿಸಿ ಜಿಲ್ಲಾ ಉಸ್ತುವಾರಿ ಸಚಿವರ ಮನೆ ಮುಂದೆ ಧರಣಿ ನಡೆಸಲು ಮುಂದಾದ ಹೋರಾಟಗಾರರನ್ನು ಬಂಧಿಸಿ, ಸುಳ್ಳು ಮೊಕದ್ದಮೆ ದಾಖಲಿಸಿರುವ ಕ್ರಮವನ್ನು ಎಐಯುಟಿಯುಸಿ ಕರ್ನಾಟಕ ರಾಜ್ಯ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ.ಪಿಪಿಪಿ ಮಾದರಿಯ ಬದಲಿಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕೆಂದು ಹೋರಾಟ ಸಮಿತಿಯಿಂದ ನಿರಂತರವಾಗಿ ೧೦೦ಕ್ಕೂ ಹೆಚ್ಚು ದಿನಗಳಿಂದ ಹೋರಾಟ ನಡೆಯುತ್ತಿತ್ತು. ನಿನ್ನೆ ಹೋರಾಟದ ಮುಂದುವರೆದ ಭಾಗವಾಗಿ ಜಿಲ್ಲಾ ಉಸ್ತುವಾರಿ ಸಚಿವರ ಮನೆ ಮುಂದೆ ಧರಣಿ…

Read More

ಸಂಕ್ರಾಂತಿ: ವಿಜಯಪುರ-ಬೆಂಗಳೂರು ಮಧ್ಯೆ ವಿಶೇಷ ರೈಲು

ಸಪ್ತಸಾಗರ ವಾರ್ತೆ, ವಿಜಯಪುರ, ಜ. 2: ವಿಜಯಪುರ ಜಿಲ್ಲೆಯ ಪ್ರಯಾಣಿಕರ ಅನುಕೂಲಕ್ಕಾಗಿ ವಿಜಯಪುರ-ಬೆಂಗಳೂರಿಗೆ ಸಕ್ರಾಂತಿ ಹಬ್ಬದ ಸಂದರ್ಭದಲ್ಲಿ ವಿಶೇಷ ರೈಲು ಸೇವೆ ಒದಗಿಸಲಾಗುತ್ತಿದ್ದು, ಶೀಘ್ರದಲ್ಲಿಯೇ ಈ ರೈಲು ಸಂಚಾರ ಆರಂಭಿಸಲಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ವಿಜಯಪುರದಿಂದ ಬೆಂಗಳೂರು ಪ್ರಯಾಣ ಬೆಳೆಸುವವರ ಸಂಖ್ಯೆ ಅಧಿಕ, ಸಂಕ್ರಾಂತಿ ಸೇರಿದಂತೆ ಬರುವ ಹಬ್ಬಗಳಿಗೆ ಅನೇಕರು ಪ್ರಯಾಣ ಮಾಡಬೇಕಾಗುತ್ತದೆ. ಹೀಗಾಗಿ ಈ ಜನತೆಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ವಿಶೇಷ ರೈಲು ಸೇವೆ ಆರಂಭಿಸಲು…

Read More

ಮಕ್ಕಳ ಶ್ರೇಯೋಭಿವೃದ್ಧಿಗೆ ಶ್ರಮಿಸಿ-ಡಾ. ಆನಂದ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 2: ಬಾಲಮಂದಿರದ ಆವರಣದಲ್ಲಿ ಕೈತೋಟ ಅಭಿವೃದ್ಧಿಪಡಿಸಬೇಕು ಹಾಗೂ ಮಕ್ಕಳು ವಿದ್ಯಾಭ್ಯಾಸದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಬೇಕು ಯೋಜನಾಬದ್ಧವಾಗಿ ಮಕ್ಕಳ ಶ್ರೇಯೋಭಿವೃದ್ಧಿಗೆ ಶ್ರಮಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಹೇಳಿದರು.ಜಿಲ್ಲಾಡಳಿತ,ಎಂ.ಬಿ.ಪಾಟೀಲ ಫೌಂಡೇಷನ್,ಅಮ್ಮನ ಮಡಿಲು ಚಾರಿಟೇಬಲ್ ಟ್ರಸ್ಟ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಜ. 1 ರಂದು ನಗರದ ಸರ್ಕಾರಿ ಬಾಲಕರ ಬಾಲಮಂದಿರ ವಿಜಯಪುರದಲ್ಲಿ ಹೊಸ ವರ್ಷಾಚರಣೆಯನ್ನು ಮಕ್ಕಳೊಂದಿಗೆ ಆಚರಿಸಿ ಅವರು ಮಾತನಾಡಿದರು.ಮಕ್ಕಳು ಭವಿಷ್ಯವನ್ನು ಉಜ್ವಲಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಮಕ್ಕಳಿಗಾಗಿ…

Read More

ಸರ್ಕಾರಿ ವೈದ್ಯಕೀಯ ಕಾಲೇಜ್ ಘೋಷಣೆ ವಿಳಂಬ: ಹೋರಾಟಗಾರರಿಂದ ಸಚಿವ ಎಂ. ಬಿ. ಪಾಟೀಲರ ಮನೆಗೆ ಮುತ್ತಿಗೆ ಯತ್ನ

ಸಪ್ತಸಾಗರ ವಾರ್ತೆ ವಿಜಯಪುರ, ಜ. 1:ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜ್ ಘೋಷಣೆಗೆ ಸರ್ಕಾರದ ವಿಳಂಬ ಧೋರಣೆ ಖಂಡಿಸಿ ಹೋರಾಟಗಾರರು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲರ ಮನೆಗೆ ಮುತ್ತಿಗೆ ಹಾಕಲು ಗುರುವಾರ ವಿಫಲ ಯತ್ನ ನಡೆಸಿದರು.ಹೋರಾಟಗಾರರು ಸಚಿವ ಎಂ.ಬಿ. ಪಾಟೀಲ ಅವರ ಮನೆಗೆ ಮುತ್ತಿಗೆ ಹಾಕಲು ತೆರಳುತ್ತಿದ್ದಾಗ ಮಧ್ಯದಲ್ಲಿಯೇ ಪೊಲೀಸರು ಅವರನ್ನು ತಡೆದು ಬಂಧಿಸಿದರು.ಇದರಿಂದ ಆಕ್ರೋಶಗೊಂಡ ಹೋರಾಟಗಾರರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದರು. ಸರ್ಕಾರ ಹೋರಾಟಗಾರರನ್ನು ಪೊಲೀಸರ ಮುಖಾಂತರ ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎಂದು ಪ್ರತಿಭಟನೆಕಾರರು ಆರೋಪಿಸಿದರು.ಸಚಿವರು…

Read More

ಕ್ರೀಡಾಪಟುಗಳಿಗೆ ಅನುಕೂಲ ಕಲ್ಪಿಸಲು ಕ್ರೀಡಾಂಗಣಗಳಲ್ಲಿ ಅಗತ್ಯ ಸೌಲಭ್ಯ ಒದಗಿಸಿ-ಜಿಲ್ಲಾಧಿಕಾರಿ ಡಾ.ಆನಂದ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ.1: ಜಿಲ್ಲೆಯ ಕ್ರೀಡಾಪಟುಗಳು ರಾಜ್ಯ-ರಾಷ್ಟ್ರ- ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈಯ್ಯಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾ ಕ್ರೀಡಾಂಗಣ ಹಾಗೂ ನಗರದ ಕನಕದಾಸ ಬಡಾವಣೆಯಲ್ಲಿರುವ ಒಳಾಂಗಣ ಕ್ರೀಡಾಂಗಣಗಳಲ್ಲಿ ಎಲ್ಲ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಗುರುವಾರ ನಗರದ ಜಿಲ್ಲಾ ಕ್ರೀಡಾಂಗಣದ ಕಚೇರಿಯಲ್ಲಿ ಜರುಗಿದ ಜಿಲ್ಲಾ ಕ್ರೀಡಾಂಗಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಜಿಲ್ಲೆಯ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆಗೈಯಲು…

Read More