ಯುವಕನ ಭೀಕರ ಹತ್ಯೆ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 14:ನಗರದ ಗಾಂಧಿಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯ ಮೀನಾಕ್ಷಿ ಚೌಕದ ಬಳಿ ಬುಧವಾರ ಬೆಳಗ್ಗೆ ಯುವಕನೊಬ್ಬನನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆಗೈದಿದ್ದಾರೆ.ಮೃತನನ್ನು ಅಲ್ತಾಫ್ ಮನಗೂಳಿ (25) ಎಂದು ಗುರುತಿಸಲಾಗಿದೆ.ಅಲ್ತಾಫ್ ಕಳ್ಳತನ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಗಾಂಧಿಚೌಕ್ ಪೊಲೀಸ್ ಠಾಣೆಯ ಎಂ.ಒ.ಬಿ. (ಮೋಡಸ್ ಆಪರಾಂಡಿ ಬ್ಯೂರೋ) ದಾಖಲೆಯಲ್ಲಿ ಆತನ ಹೆಸರು ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ.ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಗಾಂಧಿಚೌಕ್ ಠಾಣೆಯ ಸಿಪಿಐ ಹಾಗೂ ಪಿಎಸ್‌ಐ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮೃತದೇಹವನ್ನು…

Read More

ಎಸ್‌ಐಆರ್‌ ಪ್ರಕ್ರಿಯೆ ಸ್ಥಗಿತಕ್ಕೆ ಆಗ್ರಹಿಸಿ ಅ.16ರಂದು ಪ್ರತಿಭಟನೆ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 14:ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಸ್ಥಗಿತಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಡಾ. ಡಿ.ಜಿ. ಸಾಗರ ಬಣ) ನೇತೃತ್ವದಲ್ಲಿ ಅ.16ರಂದು ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ ಹಾಗೂ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಜಿಲ್ಲಾ ಸಂಚಾಲಕ ಸಿದ್ದು ರಾಯಣ್ಣನವರ ತಿಳಿಸಿದ್ದಾರೆ.ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಬೇಕು ಹಾಗೂ ಎಸ್‌ಐಆರ್‌ ಪ್ರಕ್ರಿಯೆಯನ್ನು ತಕ್ಷಣ…

Read More

ಯುವ ಸಂಸತ್‌ನಲ್ಲಿ ವಿದ್ಯಾರ್ಥಿಗಳಿಂದ ಅರ್ಥಪೂರ್ಣ ಚರ್ಚೆ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 14:ತಿಕೋಟಾ ಪಟ್ಟಣದ ಹಜಿಮಸ್ತಾನಿ ಶಾದಿ ಮಹಲ್‌ನಲ್ಲಿ ಅ.13ರಂದು ನಡೆದ ಯುವ ಸಂಸತ್ ಕಾರ್ಯಕ್ರಮದಲ್ಲಿ ವಿವಿಧ ಕಾಲೇಜುಗಳ 250 ವಿದ್ಯಾರ್ಥಿಗಳು ಭಾಗವಹಿಸಿ, ಸಂಸದೀಯ ಕಲಾಪದ ಮಾದರಿಯನ್ನು ಸಮರ್ಥವಾಗಿ ಪ್ರಸ್ತುತಪಡಿಸಿದರು.ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ, ಪೀಠಿಕಾ ವಾಚನ ಹಾಗೂ ನಾಡಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು.ಅಧ್ಯಕ್ಷತೆ ವಹಿಸಿದ್ದ ತಿಕೋಟಾ ತಹಶೀಲ್ದಾರ್ ಸುರೇಶ ಚವಲರ್ ಮಾತನಾಡಿ, ಯುವ ಸಂಸತ್ ಕೇವಲ ಅಣಕು ಪ್ರದರ್ಶನವಲ್ಲ; ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಯುವಜನರ ಮನಸ್ಸಿನಲ್ಲಿ ಬಿತ್ತುವ ವೇದಿಕೆಯಾಗಿದೆ. ವಿದ್ಯಾರ್ಥಿಗಳಲ್ಲಿ…

Read More

ಕಬ್ಬಿಗೆ ನ್ಯಾಯಯುತ ಬೆಲೆ ಆಗ್ರಹಿಸಿ ರೈತರ ಹೋರಾಟ ತೀವ್ರ

ಯಲಗೂರ ಕ್ರಾಸ್‌ನಲ್ಲಿ ಹೆದ್ದಾರಿ ತಡೆ; 700ಕ್ಕೂ ಹೆಚ್ಚು ರೈತರ ಪ್ರತಿಭಟನೆ ಸಪ್ತಸಾಗರ ವಾರ್ತೆ,ವಿಜಯಪುರ, ಅ. 13: ಕಬ್ಬಿಗೆ ನ್ಯಾಯಯುತ ಹಾಗೂ ಲಾಭದಾಯಕ ಬೆಲೆ ನಿಗದಿಪಡಿಸಬೇಕು, ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ವಿಜಯಪುರ ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಂಡಿದೆ.ನಿಡಗುಂದಿ ತಾಲೂಕಿನ ಯಲಗೂರ ಕ್ರಾಸ್ ಬಳಿ ಮಂಗಳವಾರ 700ಕ್ಕೂ ಹೆಚ್ಚು ರೈತರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಕಬ್ಬಿಗೆ ಹೆಚ್ಚಿನ ದರ ನಿಗದಿಪಡಿಸುವುದು, ಸ್ವಾಮಿನಾಥನ್ ಆಯೋಗದ ಶಿಫಾರಸು ಜಾರಿಗೊಳಿಸುವುದು, ರೈತರ ಸಾಲ ಮನ್ನಾ ಹಾಗೂ…

Read More

ತಿಕೋಟಾ: ರೈತರ ಸಂಕಷ್ಟಕ್ಕೆ ಸರ್ಕಾರ ತಕ್ಷಣ ಸ್ಪಂದಿಸಲಿ: ರವಿ ಭಾಮಲು ರಾಠೋಡ

ಸಪ್ತಸಾಗರ ವಾರ್ತೆ,ತಿಕೋಟಾ, ಅ. 13: ಸಮರ್ಪಕ ಮಳೆಯಿಲ್ಲದೆ ಬೆಳೆಗಳು ಒಣಗಿ, ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ, ಬರಪೀಡಿತ ರೈತರಿಗೆ ಪ್ರತಿ ಎಕರೆಗೆ ಕನಿಷ್ಠ ₹10,000 ಪರಿಹಾರ ನೀಡಬೇಕು ಎಂದು ಭೀಮ ರಾಜ್ಯ ದಲಿತ ಸೇವಾ ಸಮಿತಿಯ ತಿಕೋಟಾ ತಾಲೂಕು ಅಧ್ಯಕ್ಷ ರವಿ ಭಾಮಲು ರಾಠೋಡ ಆಗ್ರಹಿಸಿದ್ದಾರೆ.ತಾಲೂಕಿನಲ್ಲಿ ಮಳೆ ಕೊರತೆಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳು ಹಾನಿಗೀಡಾಗಿವೆ. ಬಿತ್ತನೆ ಬೀಜ, ರಸಗೊಬ್ಬರ, ಉಳುಮೆ ಹಾಗೂ ಕೂಲಿ ಸೇರಿದಂತೆ ಕೃಷಿಗೆ ಅಪಾರ ಹಣ ಹೂಡಿಕೆ ಮಾಡಿರುವ ರೈತರಿಗೆ…

Read More

ರೂ.3.42 ಕೋಟಿ ಕಾಮಗಾರಿಗಳಿಗೆ ಯತ್ನಾಳ ಭೂಮಿಪೂಜೆ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 13:ನಗರದ ವಾರ್ಡ್‌ ನಂ.23ರಲ್ಲಿ ರೂ.3.42 ಕೋಟಿ ಅನುದಾನದಲ್ಲಿ ಕೈಗೊಳ್ಳಲಾಗುತ್ತಿರುವ ಒಳಚರಂಡಿ ಹಾಗೂ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಂಗಳವಾರ ಭೂಮಿಪೂಜೆ ನೆರವೇರಿಸಿದರು.ಮರಾಠಿ ವಿದ್ಯಾಲಯದ ಬಳಿ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯ 2ನೇ ಹಂತದಲ್ಲಿ ಮಂಜೂರಾದ ರೂ.1 ಕೋಟಿ ವೆಚ್ಚದಲ್ಲಿ ಕೊತ್ವಾಲ್ ಬಿಲ್ಡಿಂಗ್‌ನಿಂದ ಮರಾಠಿ ವಿದ್ಯಾಲಯದವರೆಗೆ, ಮನಗೂಳಿ ಅಗಸಿ ಟೆಕಡೆ ಗಲ್ಲಿಯ ಪಶ್ಚಿಮ ಭಾಗ ಹಾಗೂ ನಾಗರ ಬಾವಡಿ ಗಲ್ಲಿಯ ಪಶ್ಚಿಮ ಭಾಗದಲ್ಲಿ ಆಂತರಿಕ ಒಳಚರಂಡಿ ಮತ್ತು…

Read More

ಕುರುಬರ ಕಲೆ, ಸಂಸ್ಕೃತಿ ಅಕಾಡೆಮಿ ಸ್ಥಾಪನೆಗೆ ಆಗ್ರಹ

ವಿಜಯಪುರದಲ್ಲಿ ಕುರುಬ ಸಮಾಜದಿಂದ ಸರ್ಕಾರಕ್ಕೆ ಮನವಿ ಸಪ್ತಸಾಗರ ವಾರ್ತೆ,ವಿಜಯಪುರ, ಅ. 13:ಕುರುಬ ಸಮುದಾಯದ ವಿಶಿಷ್ಟ ಕಲೆ, ಸಂಸ್ಕೃತಿ ಮತ್ತು ಜಾನಪದ ಪರಂಪರೆಯ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಕೂಡಲೇ ಕುರುಬರ ಕಲೆ ಮತ್ತು ಸಂಸ್ಕೃತಿ ಅಕಾಡೆಮಿ ಸ್ಥಾಪಿಸಬೇಕು ಎಂದು ಕುರುಬ ಸಮಾಜದ ಮುಖಂಡರು ಒತ್ತಾಯಿಸಿದ್ದಾರೆ.ಕುರುಬ ಸಮುದಾಯವು ಶತಮಾನಗಳಿಂದ ಉಳಿಸಿಕೊಂಡು ಬಂದಿರುವ ಡೊಳ್ಳಿನ ಪದ, ಡೊಳ್ಳಿನ ಕೈಪಟ್ಟು, ಡೊಳ್ಳಿನ ವಾಲಗ, ಡೊಳ್ಳು ಕುಣಿತ, ದಟ್ಟಿ ಕುಣಿತ, ಗೊರವರ ಕುಣಿತ, ವೀರಮಕ್ಕಳ ಕುಣಿತ, ವಗ್ಗಯ್ಯರ ಪದ–ಕುಣಿತ, ಟಗರಜೋಗಿ ಕಲೆ,…

Read More

ಹಿರಿಯರ ಮರೆವಿನ ಕಾಯಿಲೆ ನಿರ್ಲಕ್ಷಿಸದಿರಿ, ಆರಂಭದಲ್ಲೇ ಪತ್ತೆಹಚ್ಚಿ ಚಿಕಿತ್ಸೆ ನೀಡಲು ಸಲಹೆ

ಸಪ್ತಸಾಗರ ವಾರ್ತೆ,ವಿಜಯಪುರ, ಅ.13:ಹಿರಿಯ ನಾಗರಿಕರಲ್ಲಿ ಹೆಚ್ಚುತ್ತಿರುವ ಬುದ್ಧಿಮಾಂದ್ಯತೆ (ಡಿಮೆನ್ಷಿಯಾ) ಕುರಿತು ಜಾಗೃತಿ ಮೂಡಿಸುವುದು ಹಾಗೂ ಆರಂಭಿಕ ಹಂತದಲ್ಲೇ ಕಾಯಿಲೆ ಪತ್ತೆಹಚ್ಚುವ ಉದ್ದೇಶದಿಂದ ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ.ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ವೃದ್ಧಾಪ್ಯ ವೈದ್ಯಕೀಯ ವಿಭಾಗದಲ್ಲಿ ಮಂಗಳವಾರ ಬುದ್ಧಿಮಾಂದ್ಯತೆ ತಪಾಸಣಾ ಶಿಬಿರ ನಡೆಯಿತು.ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಜಿಲ್ಲಾ ಆರೋಗ್ಯ ಕಚೇರಿ ಸಹಯೋಗದಲ್ಲಿ, ಅಟಲ್ ವಯೋ ಅಭ್ಯುದಯ ಯೋಜನೆ ಹಾಗೂ ಹಿರಿಯ ನಾಗರಿಕರ ರಾಜ್ಯ ಕ್ರಿಯಾ ಯೋಜನೆಯಡಿ ಆಯೋಜಿಸಿದ್ದ…

Read More

ಅ. 21ರಂದು ಅಂಚೆ ಅದಾಲತ್: ಅಹವಾಲು ಸಲ್ಲಿಸಲು ಅವಕಾಶ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 13:ಭಾರತೀಯ ಅಂಚೆ ಇಲಾಖೆಯ ವಿಜಯಪುರ ವಿಭಾಗದ ವತಿಯಿಂದ 2026-27ನೇ ಸಾಲಿನ ವಿಭಾಗೀಯ ಅಂಚೆ ಅದಾಲತ್‌ ಅ. 21ರಂದು ಮಧ್ಯಾಹ್ನ 3 ಗಂಟೆಗೆ ವಿಜಯಪುರದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನಡೆಯಲಿದೆ.ವಿಜಯಪುರ ಅಂಚೆ ವಿಭಾಗದ ವ್ಯಾಪ್ತಿಯ ಬಬಲೇಶ್ವರ, ಬಸವನಬಾಗೇವಾಡಿ, ಚಡಚಣ, ದೇವರಹಿಪ್ಪರಗಿ, ಇಂಡಿ, ಕೊಲ್ಹಾರ, ಮುದ್ದೇಬಿಹಾಳ, ನಿಡಗುಂದಿ, ಸಿಂದಗಿ, ತಾಳಿಕೋಟೆ, ತಿಕೋಟಾ, ಆಲಮೇಲ ಹಾಗೂ ವಿಜಯಪುರ ತಾಲೂಕುಗಳ ಅಂಚೆ ಸೇವೆಗಳಿಗೆ ಸಂಬಂಧಿಸಿದ ದೂರು, ಸಲಹೆ ಮತ್ತು ಸೂಚನೆಗಳನ್ನು ಸಾರ್ವಜನಿಕರು ಸಲ್ಲಿಸಬಹುದು.ಅಹವಾಲುಗಳನ್ನು ಲಿಖಿತ ರೂಪದಲ್ಲಿ ಸಿದ್ಧಪಡಿಸಿ, ಲಕೋಟೆಯ…

Read More

ಅ.13ರಂದು ನಾಡದೇವಿ ದಸರಾ ಮಹೋತ್ಸವದ ಮೆರವಣಿಗೆ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 12:ನಗರದ ರಾಮಮಂದಿರ ರಸ್ತೆಯ ಶ್ರೀ ಸಿದ್ದೇಶ್ವರ ಆದಿಶಕ್ತಿ ತರುಣ ಮಂಡಳಿಯ ವತಿಯಿಂದ 2026ನೇ ಸಾಲಿನ ನಾಡದೇವಿ ದಸರಾ ಮಹೋತ್ಸವವನ್ನು ಅ.13ರಂದು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.ಮಂಗಳವಾರ ನಗರದ ಪ್ರಮುಖ ಬೀದಿಗಳಲ್ಲಿ ವಾದ್ಯಮೇಳದೊಂದಿಗೆ ನಾಡದೇವಿಯ ಮೆರವಣಿಗೆ ನಡೆಯಲಿದ್ದು, ಬಳಿಕ ರಾಮಮಂದಿರದಲ್ಲಿ ಪ್ರತಿಷ್ಠಾಪಿಸಲಾಗಿರುವ ಆಂಧ್ರಪ್ರದೇಶದ ತಿರುಪತಿ ಬಾಲಾಜಿ ದೇವಾಲಯದ ಗಾಳಿ ಗೋಪುರ ಮಾದರಿಯ ದೇವಾಲಯದಲ್ಲಿ ದೇವಿಯ ಪ್ರತಿಷ್ಠಾಪನೆ ನೆರವೇರಲಿದೆ.ಮಂಡಳಿಯ ಸಂಸ್ಥಾಪಕ ದಿ. ಶ್ರೀಶೈಲ ಗಚ್ಚಿನಮಠ ಅವರು 1979ರಲ್ಲಿ ಮಂಡಳಿಯನ್ನು ಸ್ಥಾಪಿಸಿದ್ದು, ಇದೀಗ ಅವರ ಪುತ್ರ ಗುರುಪಾದಯ್ಯ (ಗುರು) ಗಚ್ಚಿನಮಠ…

Read More