ಅಧಿಕಾರಿಗಳ ಸರಣಿ ಸಭೆ: ರೇಲ್ವೆ ಸೌಲಭ್ಯ ಫಲಪ್ರದ

ಸಪ್ತಸಾಗರ ವಾರ್ತೆ,ವಿಜಯಪುರ, ಡಿ. 27: ಬೆಂಗಳೂರು- ವಿಜಯಪುರ ರೈಲು ಸಂಚಾರ ಅವಧಿಯನ್ನು 14 ಗಂಟೆಯಿಂದ 10 ಗಂಟೆಗೆ ಇಳಿಸಲು ಐದು ಸಲ ನಡೆಸಿರುವ ಸಭೆಗಳು ಮತ್ತು ರೇಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿರುವ ನಿರಂತರ ಸಭೆಗಳ ಫಲವಾಗಿ ಈ ವಿಶೇಷ ರೈಲು ಓಡಿಸಲಾಗಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಬೆಂಗಳೂರು- ವಿಜಯಪುರ ರೈಲು ಸಂಚಾರ ಅವಧಿ ಕಡಿಮೆ ಮಾಡುವ ನಿಟ್ಟಿನಲ್ಲಿ…

Read More

ಅನ್ಯಾಯದ ವಿರುದ್ಧ ಧ್ವನಿ ಎತ್ತುವುದು ಧರ್ಮ ಕಾರ್ಯ: ಪಟ್ಟಣಶೆಟ್ಟಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 27 :ಹಿಂದೂ ಧರ್ಮಕ್ಕೆ ಅನ್ಯಾಯವಾದರೆ ಅದರ ವಿರುದ್ಧ ಸ್ವಯಂಪ್ರೇರಿತವಾಗಿ ಧ್ವನಿ ಎತ್ತುವುದು ಪ್ರತಿಯೊಬ್ಬ ಹಿಂದೂಗಳ ಕರ್ತವ್ಯ, ಅನ್ಯಾಯದ ವಿರುದ್ಧ ಧ್ವನಿ ಎತ್ತುವುದು ಧರ್ಮ ಕಾರ್ಯ ಎಂದು ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಹೇಳಿದರು.ಬಿಜೆಪಿ ಕಾರ್ಯಾಲಯದಲ್ಲಿ ಬಬಲೇಶ್ವರದಲ್ಲಿ ನಡೆಯಲಿರುವ ಬಸವಾದಿ ಶರಣರ ಹಿಂದೂ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹಿಂದೂಗಳು ನಾವೆಲ್ಲರೂ ಒಂದಾಗಬೇಕು. ಹಿಂದೂಗಳ ವಿರುದ್ಧ ಅನ್ಯಾಯವಾದರೆ ಅದನ್ನು ಪ್ರತಿಭಟಿಸಬೇಕು. ಉಳಿದ ಧರ್ಮೀಯರಿಗೆ ಅನ್ಯಾಯವಾದರೆ ಅದರಲ್ಲೂ ಬೇರೆ ದೇಶದಲ್ಲಿಯೂ ಅನ್ಯಾಯವಾದರೂ…

Read More

ಲ್ಯಾಂಡ್ ಮಾಫಿಯಾದವರು ಏಕಾಏಕಿ ಒತ್ತುವರಿ ಮಾಡಿ ಸ್ಲಂ ನಿರ್ಮಾಣ ಮಾಡಲು ಅವಕಾಶ ನೀಡುವುದಿಲ್ಲ: ಡಿಕೆಸಿ

ಸಪ್ತಸಾಗರ ವಾರ್ತೆ, ಬೆಂಗಳೂರು, ಡಿ.27:“ಕೋಗಿಲು ಬಡಾವಣೆಯಲ್ಲಿ ಅಕ್ರಮ ಒತ್ತುವರಿ ಪ್ರದೇಶ ನೆಲಸಮಗೊಳಿಸಿರುವ ಪ್ರಕರಣದಲ್ಲಿ ಸತ್ಯಾಸತ್ಯತೆ ಅರಿಯದೇ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಹಸ್ತಕ್ಷೇಪ ಮಾಡಬಾರದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು.ಕೋಗಿಲು ಬಡಾವಣೆ ಅಕ್ರಮ ಒತ್ತುವರಿ ಸಂಬಂಧ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಕರ್ನಾಟಕದಲ್ಲಿ ಬುಲ್ಡೋಜರ್ ರಾಜ್ ನಡೆಯುತ್ತಿದೆ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಪಿಣರಾಯಿ ವಿಜಯನ್ ರಂತಹ ಹಿರಿಯ…

Read More

ಪಾಲಕರು ಚಾರಿತ್ರ್ಯದ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು-ಹಾರಿಕ ಮಂಜುನಾಥ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 27: ಈಗಿನ ಆಧುನಿಕ ಯುಗದಲ್ಲಿ ಮಕ್ಕಳಿಗೆ ಸ್ವಾಮಿ ವಿವೇಕಾನಂದರಂತಹ ಚಾರಿತ್ರ್ಯದ ಶಿಕ್ಷಣಕ್ಕೆ ಪಾಲಕರು ಮೊದಲಾದ್ಯತೆ ನೀಡಬೇಕು. ಪಠ್ಯ ಪುಸ್ತಕಗಳು ಮಕ್ಕಳನ್ನು ಶಿಕ್ಷಣವಂತರಾಗಿ ಮಾತ್ರ ಮಾಡುತ್ತವೆ. ಪಾಲಕರು ತಮ್ಮ ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರವನ್ನು ಧಾರೆ ಎರೆಯಬೇಕು ಎಂದು ಬೆಂಗಳೂರಿನ ಯುವ ವಾಗ್ಮಿ ಕುಮಾರಿ ಹಾರಿಕ ಮಂಜುನಾಥ ಹೇಳಿದರು.ಶುಕ್ರವಾರ ಸಂಜೆ ತಾಲೂಕಿನ ನಾಗಠಾಣ ಗ್ರಾಮದಲ್ಲಿ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ದಶಮಾನೋತ್ಸವ ಹಾಗೂ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮದಲ್ಲಿ ಮುಖ್ಯ ಉಪನ್ಯಾಸ ನೀಡಿ…

Read More

ಗೋಲಗುಮ್ಮಜ್ ಎಕ್ಸಪ್ರೆಸ್ ಟ್ರೈನ್ ಹುಬ್ಬಳ್ಳಿ, ಗದಗ ಬೈಪಾಸ್ ಮಾರ್ಗ ಓಡಿಸಲು ಜಿಗಜಿಣಗಿ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 26:ಗೋಲಗುಂಬಜ್ ಎಕ್ಸಪ್ರೆಸ್ ರೈಲನ್ನು ಹುಬ್ಬಳ್ಳಿ ಬೈಪಾಸ್ ಹಾಗೂ ಗದಗ ಬೈಪಾಸ್ ಎರಡು ಮಾರ್ಗದಲ್ಲಿ ಸಂಚರಿಸಲು ಆದೇಶಿಸುವಂತೆ ಒತ್ತಾಯಿಸಿ ಸಂಸದ ರಮೇಶ ಜಿಗಜಿಣಗಿ ಅವರು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಲಿಖಿತ ಮನವಿ ಸಲ್ಲಿಸಿದರು.ಇದಕ್ಕೆ ಕೇಂದ್ರ ಸಚಿವರು ತಾತ್ವಿಕ ಒಪ್ಪಿಗೆ ನೀಡಿದ್ದು, ಶೀಘ್ರದಲ್ಲಿಯೇ ಈ ರೈಲು ಸಂಚಾರ ಆರಂಭಗೊಳ್ಳಲಿದ್ದು, ಪ್ರಯಾಣಿಕರಿಗೆ ಸಮಯ ಉಳಿತಾಯವಾಗಿ ಅನುಕೂಲವಾಗಲಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ…

Read More

ಸರ್ಕಾರಿ ಎಸ್ಸಿ ಎಸ್ಟಿ ನೌಕರರ ಸಮನ್ವಯ ಸಮಿತಿ ಕಚೇರಿ ಉದ್ಘಾಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 26:ಕರ್ನಾಟಕ ರಾಜ್ಯ ಸರಕಾರಿ ಎಸ್.ಸಿ., ಎಸ್.ಟಿ. ನೌಕರರ ಸಮನ್ವಯ ಸಮಿತಿ (ರಿ) ಜಿಲ್ಲಾ ಶಾಖೆ ವಿಜಯಪುರ ಕಚೇರಿ ಉದ್ಘಾಟನಾ ಹಾಗೂ ಸಮಾಜ ಪರಿವರ್ತನೆಯಲ್ಲಿ ನೌಕರರ ಪಾತ್ರ ಕುರಿತು ವಿಚಾರ ಸಂಕಿರಣ ಡಿ. 28ರಂದು ಬೆಳಿಗ್ಗೆ 11-30 ಗಂಟೆಗೆ ಸ್ಟೇಶನ್ ರಸ್ತೆ ಅಂಬೇಡ್ಕರ್ ಸರ್ಕಲ್ ಹತ್ತಿರ ಇರುವ ಡಾ. ಬಾಬಾಸಾಹೇಬ ಅಂಬೇಡ್ಕರ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ.ಮಾಜಿ ಶಾಸಕ ರಾಜು ಆಲಗೂರ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಕಚೇರಿ…

Read More

ವಿಪತ್ತು ಬಂದಾಗ ಗಾಬರಿಯಾಗಬೇಡಿ, ಸಿದ್ದತೆಯೇ ನಮ್ಮ ರಕ್ಷಣೆ: ಮೋಹಮದ್ ಅಜ್ಮಲ್ ಶಕೀಬ್

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 26:ವಿಪತ್ತು ಪ್ರಕೃತಿ ಅಥವಾ ಮಾನವ ಸೃಷ್ಟಿಯಾದ ಅನಾಹುತಗಳಿಂದ ಉಂಟಾಗುವ ಗಂಭೀರ ಸಮಸ್ಯೆಗಳಾಗಿದ್ದು, ಸರಿಯಾದ ಸಿದ್ಧತೆ ಮತ್ತು ಜಾಗೃತಿಯ ಮೂಲಕ ಅವುಗಳಿಂದಾಗುವ ಹಾನಿಯನ್ನು ಕಡಿಮೆ ಮಾಡಬಹುದು ಎಂದು ಬೆಂಗಳೂರಿನ ಕರ್ನಾಟಕ ರಾಜ್ಯ ಘಟಕದ ವಿಪತ್ತು ನಿರ್ವಹಣೆ ಉಪ ಸಮಿತಿಯ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ನಿರ್ದೇಶಕ ಮೊಹಮ್ಮದ್ ಅಜ್ಮಲ್ ಶಕೀಬ್ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಯುವ ರೆಡ್ ಕ್ರಾಸ್ ಘಟಕ ಹಾಗೂ ವಿಜಯಪುರದ ಬಿಎಲ್‌ಡಿಇ ಸಂಸ್ಥೆಯ ಎ.ಎಸ್.ಪಾಟೀಲ ವಾಣಿಜ್ಯ…

Read More

ಪ್ರಧಾನಮಂತ್ರಿ ರಾಷ್ಟೀಯ‌ ಶಿಶಿಕ್ಷು ಮೇಳ: 350ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 26:ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ‌ ಸಂಸ್ಥೆಯ ಕೈಗಾರಿಕೆ ತರಬೇತಿ ಸಂಸ್ಥೆಯಲ್ಲಿ ನಡೆದ ಪ್ರಧಾನ ಮಂತ್ರಿ ರಾಷ್ಟ್ರೀಯ ಶಿಶಿಕ್ಷು(ಅಂಪ್ರೆಂಟಿಸ್) ಮೇಳದಲ್ಲಿ 350ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ನಾನಾ ಕಂಪನಿಗಳ ಕಂಪನಿಗಳಿಗೆ ಆಯ್ಕೆಯಾಗಿದ್ದಾರೆ.ಮಂಗಳವಾರ ಬಿ.ಎಲ್.ಡಿ.ಇ ಕೈಗಾರಿಕೆ ತರಬೇತಿ ಸಂಸ್ಥೆ, ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಇಲಾಖೆಯ ಸರಕಾರಿ, ಅನುದಾನಿತ ಮತ್ತು ಖಾಸಗಿ ಐಟಿಐ ಹಾಗೂ ಉದ್ಯೋಗ ವಿನಿಮಯ ಕಚೇರಿ, ಕೌಶಾಲ್ಯಾಭಿವ್ಯದ್ಧಿ ಇಲಾಖೆ ಇವರ ಸಹಯೋಗದಲ್ಲಿ ನಡೆದ ಈ ಪ್ರಧಾನಮಂತ್ರಿ ರಾಷ್ಟೀಯ‌ ಶಿಶಿಕ್ಷು ಮೇಳವನ್ನು ವಿಜಯಪುರ ಸರಕಾರಿ ಐಟಿಐ…

Read More

ವಿಜಯಪುರ ಕೇಂದ್ರ ಬಸ್ ನಿಲ್ದಾಣದ ಮುಂದೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಸ್ಥಾಪನೆ ಮಾಡಲು ಒತ್ತಾಯ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 26 :ವಿಜಯಪುರ ಕೇಂದ್ರ ಬಸ್ ನಿಲ್ದಾಣದ ಮುಂದೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡುವಂತೆ ಒತ್ತಾಯಿಸಿ ವಿಜಯಪುರ ನಗರ ಘಟಕ ಕುರುಬರ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.ವಿಜಯಪುರ ಕೇಂದ್ರ ಬಸ್ ನಿಲ್ದಾಣ ಮುಂಭಾಗದಲ್ಲಿ ವೀರರಾಣಿ ಕಿತ್ತೂರ ಚನ್ನಮ್ಮನವರ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದು ಸಂತೋಷದ ಸಂಗತಿ. ಆದರೆ ಸ್ವಾತಂತ್ರ್ಯ ಸಮರವನ್ನು ಸಾರಿದ ಕೀರ್ತಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಅವರ ಎಡಭಾಗದಲ್ಲಿ ಪ್ರತಿಷ್ಠಾಪನೆ…

Read More

ಡಿ. 29ರಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 26: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯಿರ್ವೇದ, ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿ ಪ್ರಸೂತಿ ತಂತ್ರ ಮತ್ತು ಸ್ತ್ರೀ ರೋಗ ವಿಭಾಗದ ವತಿಯಿಂದ ಡಿಸೆಂಬರ್ 29 ರಿಂದ ಜನೇವರಿ 03ರ ವರೆಗೆ ಡಿಸ್ಮೆನೋರಿಯಾ(ಮಾಸಿಕ ಧರ್ಮದ ನೋವು ಮತ್ತು ತೊಂದರೆ) ಕುರಿತು ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿದೆ.ಇಂಥ ಸಮಸ್ಯೆಯನ್ನು ಎದುರಿಸುತ್ತಿರುವ ಸ್ತ್ರೀಯರು ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಆಸ್ಪತ್ರೆಯ ಆಡಳಿತಾಧಿಕಾರಿಗ ಡಾ.‌ ಸಂಜಯ ಕಡ್ಲಿಮಟ್ಟಿ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಹೆಚ್ಚಿನ…

Read More