ವೈದ್ಯಕೀಯ ಕ್ಷೇತ್ರದಲ್ಲಿ ಸಂಶೋಧನೆಗಳು ನಿರಂತರವಾಗಿರಬೇಕು-ಡಾ. ಎಂ. ಕೆ. ರಮೇಶ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 19: ದೇಶದಲ್ಲಿ ವೈದ್ಯಕೀಯ ಸೇವೆ ಹೊಸ ಮಜಲನ್ನು ತಲುಪಿದ್ದು, ರೋಗಗಳಿಗೆ ಗುಣಮಟ್ಟದ ಸೇವೆ ತಲುಪಿಸಲು ಅತ್ಯಾಧುನಿಕ ತಂತ್ರಜ್ಞಾನ ಸದ್ಬಳಕೆಯಾಗುತ್ತಿದೆ ಎಂದು ನವದೆಹಲಿ ರಾಷ್ಟ್ರೀಯ ವೈದ್ಯಕೀಯ ಆಯೋಗದ ವೈದ್ಯಕೀಯ ಮೌಲ್ಯಮಾಪನ ಮತ್ತು ಶ್ರೇಯಾಂಕ ಮಂಡಳಿಯ ಅಧ್ಯಕ್ಷ ಡಾ. ಎಂ. ಕೆ. ರಮೇಶ ಹೇಳಿದ್ದಾರೆ.ಶುಕ್ರವಾರ ನಗರದ ಪ್ರತಿಷ್ಠಿತ ಬಿ. ಎಲ್. ಡಿ. ಡೀಮ್ಡ್ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವದಲ್ಲಿ ಅವರು ಘಟಿಕೋತ್ಸವ ಭಾಷಣ ಮಾಡಿದರು.ಒಂದು ಕಾಲದಲ್ಲಿ ಬರಕ್ಕೆ ಹೆಸರಾಗಿದ್ದ ವಿಜಯಪುರ ಜಿಲ್ಲೆಯಲ್ಲಿ ಇಂದು ಮಲೆನಾಡಿನ ಅನುಭವವಾಗುತ್ತಿದೆ….

Read More

ಸತೀಶ್ಜಾರಕಿಹೊಳಿಡಿನ್ನರ್ಮೀಟಿಂಗ್ಮಾಡಿರೋದ್ರಲ್ಲಿ, ಎಲ್ಲಸೇರಿರೋದ್ರಲ್ಲಿತಪ್ಪೇನಿದೆ: ಡಿಸಿಎಂಡಿ.ಕೆ. ಶಿವಕುಮಾರ್ಮರುಪ್ರಶ್ನೆ

ಸಪ್ತಸಾಗರ ವಾರ್ತೆ, ಬೆಳಗಾವಿ, ಡಿ.19: “ಒಟ್ಟಿಗೆ ಸೇರಿ ಊಟ ಮಾಡುವುದನ್ನು ಬೇಡ ಎಂದು ಹೇಳಲು ಆಗುತ್ತದೆಯೇ? ನನಗೇಕೆ ಅದೆಲ್ಲಾ? ಹೊರಗಡೆಯಿಂದ ಬಂದಿದ್ದೀವಿ. ಎಲ್ಲಾ ಸೇರಿರೋದ್ರಲ್ಲಿ, ಊಟ ಮಾಡೋದ್ರಲ್ಲಿ ತಪ್ಪೇನಿದೆ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮರುಪ್ರಶ್ನಿಸಿದ್ದಾರೆ. ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಸತೀಶ್ ಜಾರಕಿಹೊಳಿ ಅವರ ಮನೆಯಲ್ಲಿ ಗುರುವಾರ ರಾತ್ರಿ ಡಿನ್ನರ್ ಮೀಟಿಂಗ್ ನಡೆದಿದೆಯಲ್ಲ ಎಂದು ಕೇಳಿದಾಗ ಡಿಸಿಎಂ ಈ ರೀತಿ ಉತ್ತರಿಸಿದರು. ಎಲ್ಲ ಸೇರಿ…

Read More

ಶಾಲಾ ದಶಮಾನೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದ ಶ್ರೀಗಳು

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 19: ಯಶಸ್ವಿ ಹತ್ತು ವರ್ಷಗಳನ್ನು ಪೂರೈಸಿರುವ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ದಶಮಾನೋತ್ಸವ ಸಮಾರಂಭ ಡಿ.26 ಮತ್ತು ಡಿ.27 ರಂದು ನಡೆಯಲಿದ್ದು,ಗುರುವಾರ ಸಂಜೆ ಗ್ರಾಮದ ಶ್ರೀ ಉದಯಲಿಂಗೇಶ್ವರ ಹಿರೇಮಠದಲ್ಲಿ ನಡೆದ ಸಮಾರಂಭದಲ್ಲಿ ಪರಮಪೂಜ್ಯ ಶ್ರೀ ಮ ಘ ಚ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಗಳು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು.ಶ್ರೀಗಳು ಮಾತನಾಡಿ, ಶಾಲೆಯು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅಕ್ಷರ ಜ್ಞಾನ ನೀಡುವ ಜತೆಗೆ ಸಂಸ್ಕಾರ ಕಲಿಸಿ…

Read More

ನಾಳೆ 102 ನೂತನ ನಗರ ಸಾರಿಗೆ ವಾಹನಗಳ ಲೋಕಾರ್ಪಣೆ

ಸಪ್ತಸಾಗರ ವಾರ್ತೆ, ವಿಜಯಪುರ,ಡಿ.19 :ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ 102 ನೂತನ ನಗರ ಸಾರಿಗೆ ವಾಹನಗಳ ಲೋಕಾರ್ಪಣೆ ಸಮಾರಂಭವು ಡಿ.20ರಂದು ನಗರದ ದರಬಾರ ಶಾಲೆಯ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ 10:30ಕ್ಕೆ ನಡೆಯುವ ಸಮಾರಂಭದಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಅವರು ಲೋಕಾರ್ಪಣೆಗೊಳಿಸುವರು. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ ಅವರು ಉದ್ಘಾಟಿಸುವರು. ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ…

Read More

ವಿಆರ್‌ಎಲ್ ಲಾಜಿಸ್ಟಿಕ್ಸ್ ಲಿಮಿಟೆಡ್‌ಗೆ ಪ್ರತಿಷ್ಠಿತ ಪ್ರಶಸ್ತಿ ಗರಿ

ಸಪ್ತಸಾಗರ ವಾರ್ತೆ, ಹುಬ್ಬಳ್ಳಿ, ಡಿ. 19 : ಸಾರಿಗೆ ಕ್ಷೇತ್ರದ ದಿಗ್ಗಜ ವಿಆರ್‌ಎಲ್ ಲಾಜಿಸ್ಟಿಕ್ಸ್ ಲಿಮಿಟೆಡ್‌ಗೆ ದೇಶದ ಪ್ರತಿಷ್ಠಿತ ಕಾನ್ಫಿಡರೇಶನ್ ಆ್ ಇಂಡಿಯನ್ ಇಂಡಸ್ಟ್ರಿ (ಸಿಐಐ) ಕೊಡಮಾಡುವ ಸಪ್ಲೈ ಚೈನ್ ಆೃಂಡ್ ಲಾಜಿಸ್ಟಿಕ್ಸ್ ಎಕ್ಸಲೆನ್ಸ್ ಅವಾರ್ಡ್ಸ್ (ಸ್ಕೇಲ್) – 2025 ಪ್ರಶಸ್ತಿ ಲಭ್ಯವಾಗಿದೆ. ತನ್ಮೂಲಕ ಈಗಾಗಲೇ ಹತ್ತಾರು ಗೌರವ, ಸನ್ಮಾನಗಳಿಗೆ ಪಾತ್ರವಾಗಿರುವ ಸಂಸ್ಥೆಯ ಸಾಧನೆಯ ಕಿರೀಟಕ್ಕೆ ವಿಶೇಷ ಗರಿ ಮೂಡಿದಂತಾಗಿದೆ.ಸಿಐಐ ಇನ್‌ಸ್ಟಿಟ್ಯೂಟ್ ಆ್ ಲಾಜಿಸ್ಟಿಕ್ಸ್ ಸ್ಕೇಲ್ ಅವಾರ್ಡ್ಸ್ ಟೀಂ ಹೈದ್ರಾಬಾದ್‌ನಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಸಮಾರಂಭದಲ್ಲಿ 12ನೇ ಆವೃತ್ತಿಯ…

Read More

ಬಸವ ಧರ್ಮ ವಿಶ್ವ ಧರ್ಮ – ಪ್ರೊ.ಎಮ್.ಬಿ.ರೆಬಿನಾಳ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 18 :ಬಸವಾದಿ ಪ್ರಮಥರ ವಚನಗಳು ನಮ್ಮೆಲ್ಲರ ಬದುಕಿಗೆ ದಾರಿದೀಪಗಳಾಗಿವೆ, ಬಸವ ಧರ್ಮ ವಿಶ್ವ ಧರ್ಮವಾಗಬೇಕು ಎಂದು ಶ್ರೀ ಶಾಂತವೀರ ಪದವಿ ಪೂರ್ವ ಮಹಾವಿದ್ಯಾಲಯದಪ್ರಾಚಾರ್ಯ ಪ್ರೊ.ಎಮ್.ಬಿ.ರೆಬಿನಾಳ ಕರೆ ನೀಡಿದರು.ನಗರದ ಬಿ. ಎಲ್.ಡಿ.ಇ.ಸಂಸ್ಥೆಯ, ಜೆ.ಎಸ್. ಎಸ್.ಶಿಕ್ಷಣ ಮಹಾವಿದ್ಯಾಲಯದಲ್ಲಿ ದಿ. ಧರೆಪ್ಪ ಮತ್ತು ಬಸಮ್ಮ ಐಹೊಳ್ಳಿ ದಂಪತಿಗಳ ಸ್ಮರಣಾರ್ಥ ದತ್ತಿ ಉಪನ್ಯಾಸ ನೀಡಿ ಮಾತನಾಡಿದ ಅವರು, ಸಾಂಸ್ಕೃತಿಕ ನಾಯಕ ಬಸವಣ್ಣನವರು ಎಂದೆಂದಿಗೂ ಪ್ರಸ್ತುತ. ದಾನ, ದಾಸೋಹ, ಧರ್ಮ, ಪೂಜೆ ಇವೆಲ್ಲ ತೋರಿಕೆ ಮತ್ತು ಡಾಂಬಿಕತೆಯಿಂದ ಕೂಡಿರಬಾರದು….

Read More

ಬೆಂಗಳೂರುಮಹಾನಗರಭೂಸಾರಿಗೆಪ್ರಾಧಿಕಾರ (ತಿದ್ದುಪಡಿ) ವಿಧೇಯಕಅಂಗೀಕಾರ

ಸಪ್ತಸಾಗರ ವಾರ್ತೆ, ಬೆಳಗಾವಿ, ಡಿ.17:ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರ (ತಿದ್ದುಪಡಿ) ವಿಧೇಯಕವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು.2025ನೇ ಸಾಲಿನ ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರ (ತಿದ್ದುಪಡಿ) ವಿಧೇಯಕವನ್ನು ಮಂಡಿಸಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬುಧವಾರ ಮಾತನಾಡಿದರು.“ಜಿಬಿಎ ಮೂಲಕ ಐದು ಪಾಲಿಕೆಗಳನ್ನು ಮಾಡಲಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರದಲ್ಲಿ ಬಿಬಿಎಂಪಿ ಮೇಯರ್ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರು ಎಂಬುದನ್ನು ಗ್ರೇಟರ್ ಬೆಂಗಳೂರಿನ ವಿವಿಧ ನಗರ ಪಾಲಿಕೆಯ ಹೆಸರುಗಳನ್ನು ಸೇರಿಸಿ ಬದಲಾವಣೆ ಮಾಡಲಾಗುತ್ತಿದೆ. ಇದರ…

Read More

ಇಬ್ರಾಹಿಂಪುರದಲ್ಲಿ ನಂದಬಸವೇಶ್ವರ ಜಾತ್ರೆಯ ವೈಭವ: ಕಣ್ಮನ ಸೆಳೆದ ನಂದಿಕೋಲ ಮೆರವಣಿಗೆ

ಸಪ್ತಸಾಗರ ವಾರ್ತೆ,ವಿಜಯಪುರ, ಡಿ.17: ನಗರದ ಇಬ್ರಾಹಿಂಪುರದಲ್ಲಿ ಬುಧವಾರ ಶ್ರೀ ನಂದಬಸವೇಶ್ವರ ಜಾತ್ರೆಯ ಅಂಗವಾಗಿ ನಂದಿಕೋಲ ಮೆರವಣಿಗೆ ವೈಭವದಿಂದ ನಡೆಯಿತು.ಸಿದ್ಧೇಶ್ವರ ಸಂಕ್ರಮಣ ಜಾತ್ರೆಯ ಮಾದರಿಯಲ್ಲಿ ವಿವಿಧ ವಾದ್ಯ ಮೇಳದೊಂದಿಗೆ ನಡೆದ ಅಲಂಕೃತ ನಂದಿಕೋಲ ಮೆರವಣಿಗೆ ಭಕ್ತರ ಕಣ್ಮನ ಸೆಳೆಯಿತು.ಗ್ರಾಮದ ಹೃದಯ ಭಾಗದಲ್ಲಿರುವ ಶ್ರೀ ನಂದಬಸವೇಶ್ವರ ದೇವಸ್ಥಾನದಿಂದ ಪ್ರಾರಂಭವಾದ ನಂದಿಕೋಲ ಮೆರವಣಿಗೆ ಭಕ್ತರ ಮನೆಗಳಿಗೆ ಭೇಟಿ ನೀಡುತ್ತ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಮುಂದೆ ಹಾಯ್ದು ಸಂಜೆ ನಗರದ ರೇಲ್ವೆ ಸ್ಟೇಷನ್ ಮುಂದುಗಡೆ ನಡೆಯುವ ಶ್ರೀ ಪವಾಡ ಬಸವೇಶ್ವರ ದೇವರ ಭೇಟಿಗೆ…

Read More

ಜಿಲ್ಲಾ ಮಟ್ಟದ ಕಲಾ ಪ್ರತಿಭೋತ್ಸವ

ಸಪ್ತಸಾಗರ ವಾರ್ತೆ, ವಿಜಯಪುರ,ಡಿ.17: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವತಿಯಿಂದ ಜಿಲ್ಲಾ ಮಟ್ಟದ ಕಲಾ ಪ್ರತಿಭೋತ್ಸವ ಸ್ಪರ್ಧೆಗಳನ್ನು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಡಿ.18 ಹಾಗೂ 19ರಂದು ನಡೆಯಲಿದ್ದು, ವಿವಿಧ ಕಲಾಪ್ರಕಾರಗಳಲ್ಲಿ ಬಾಲ ಪ್ರತಿಭೆ, ಕಿಶೋರ ಪ್ರತಿಭೆ ಹಾಗೂ ಯುವ ಪ್ರತಿಭೆಗಳ ಸ್ಪರ್ಧೆಗಳು ಬೆಳಗ್ಗೆ 10 ಗಂಟೆಗೆ ಪ್ರಾರಂಭಗೊಳ್ಳಲಿವೆ.ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಉದ್ಘಾಟಿಸುವರು. ಜವಳಿ, ಕಬ್ಬು…

Read More

ಸಕ್ಕರೆ ಕಾರ್ಖಾನೆಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ ಭೇಟಿ, ಪರಿಶೀಲನೆ

ಸಪ್ತಸಾಗರ ವಾರ್ತೆವಿಜಯಪುರ, ಡಿ.17: ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಯರಗಲ್ ಬಾಲಾಜಿ ಸಕ್ಕರೆ ಕಾರ್ಖಾನೆಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಬುಧವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಗತ್ಯ ಸೂಚನೆಗಳನ್ನು ನೀಡಿದರು.ಕಾರ್ಖಾನೆಗಳಲ್ಲಿನ ಕಬ್ಬಿನ ತೂಕ ಹಾಗೂ ಸಕ್ಕರೆ ಇಳುವರಿಯ ಕುರಿತು ಪರಿಶೀಲನೆ ನಡೆಸಿದರು.ರೈತರಿಗೆ ಸಕಾಲದಲ್ಲಿ ಬಿಲ್ ಪಾವತಿಸುವಂತೆ ಸೂಚನೆ ನೀಡಿದ ಅವರು, ರೈತರಿಂದ ದೂರುಗಳು ಬಾರದಂತೆ ನೋಡಿಕೊಳ್ಳುವಂತೆಯೂ, ಕಾರ್ಖಾನೆಯಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಕಾರ್ಮಿಕರಿಗೆ ಸುರಕ್ಷತಾ ನಿಯಮಗಳನ್ನು ಪಾಲಿಸಲು ತಿಳಿಸಿ, ನಿಯಮಾನುಸಾರ ಕಾರ್ಮಿಕರಿಗೆ ಸೌಲಭ್ಯಗಳನ್ನು ಒದಗಿಸುವಂತೆ ಅವರು…

Read More