ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಅಭಿವೃದ್ಧಿ ಹೊಂದಲು ಡಿಸಿ ಆಶಯ
ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 8:ಜಿಲ್ಲಾ ಪಂಚಾಯತಿ, ಕೌಶಲ್ಯಾಭಿವೃದ್ಧಿ ಉದ್ಯಮಿಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ-2026 ಕ್ಕೆ ಜಿಲ್ಲಾಧಿಕಾರಿಗಳಾದ ಕೆ. ಆನಂದ ಅವರು ಚಾಲನೆ ನೀಡಿದರು.ಸ್ವ-ಸಹಾಯ ಸಂಘದ ಮಹಿಳೆಯರು ಉತ್ಪಾದಿಸಿದ ಉತ್ಪನ್ನಗಳ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳದಲ್ಲಿ ಸ್ವ-ಸಹಾಯ ಸಂಘಗಳ ಮಹಿಳೆಯರು ತಯಾರಿಸಿದ ಹಲವಾರು ವಸ್ತುಗಳನ್ನು ಜಿಲ್ಲಾಧಿಕಾರಿಗಳು ವೀಕ್ಷಿಸಿ, ಪ್ರಶಂಸಿಸಿದರು….


