ಬ್ಲ್ಯಾಕ್ ಮೇಲ್ ಮಾಡುವ ಸಂಸ್ಕೃತಿ ನನ್ನದಲ್ಲ: ಯತ್ನಾಳ ಹೇಳಿಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 17:ಬ್ಲ್ಯಾಕ್ಮೇಲ್ ಮಾಡುವ ಸಂಸ್ಕೃತಿ ನನ್ನದಲ್ಲ. ಬ್ಲ್ಯಾಕ್ಮೇಲ್ ಮಾಡಿದ್ದರೆ ಎಂದೋ ಸಚಿವನಾಗಿರುತ್ತಿದ್ದೆ.ಮಾಜಿ ಸಿಎಂ ಯಡಿಯೂರಪ್ಪನವರ ಸಾಕಷ್ಟು ಭ್ರಷ್ಟಾಚಾರ ನನ್ನ ಬಳಿ ಇದ್ದವು.ಪಕ್ಷದ ಹಿತ ದೃಷ್ಟಿಯಿಂದ ಬ್ಲಾಕ್ಮೇಲ್ ಮಾಡಲಿಲ್ಲ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸಚಿವ ಎಂ.ಬಿ. ಪಾಟೀಲರಿಗೆ ಟಾಂಗ್ ನೀಡಿದರು.ಟಿಕೆಟ್ ಗಾಗಿ ಯತ್ನಾಳ ಬಿಜೆಪಿಗೆ ಬ್ಲ್ಯಾಕಮೇಲ್ ಮಾಡುತ್ತಿದ್ದಾರೆ ಎಂಬ ಸಚಿವ ಎಂ. ಬಿ. ಪಾಟೀಲರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಯತ್ನಾಳ ಸುದ್ದಿಗಾರರ ಜೊತೆಗೆ ಮಾತನಾಡಿದರು.ಯಡ್ಡಿ ಕುರಿತು ಹೈಕಮಾಂಡ್ ಗಮನಕ್ಕೆ ತರಲು ಪ್ರಯತ್ನಿಸಿದೆ….

Read More

ಭೃಷ್ಟಾಚಾರ: ಕಾರ್ಮಿಕ ಇಲಾಖೆ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 16:ವಿಜಯಪುರ ಜಿಲ್ಲೆಯಲ್ಲಿನ ಕಾರ್ಮಿಕ ಅಧಿಕಾರಿ ಕಛೇರಿಯಲ್ಲಿ ವ್ಯಾಪಕವಾಗಿ ಅವ್ಯವಹಾರ ಮತ್ತು ಭೃಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಜಿಲ್ಲೆಯ ಕಾರ್ಮಿಕ ಇಲಾಖೆ ಕಚೇರಿ ಮೇಲೆ ದಾಳಿ ನಡೆಸಿ ಶೋಧನಾ ಕಾರ್ಯ ಕೈಗೊಂಡಿದ್ದಾರೆ.ಕಾರ್ಮಿಕ ಇಲಾಖೆಯಲ್ಲಿ ಅವ್ಯವಹಾರ ಹಾಗೂ ವ್ಯಾಪಕ ಭ್ರಷ್ಟಾಚಾರ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದ ಕಾರಣ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕಾರ್ಮಿಕ ಇಲಾಖೆಯನ್ನು ಶೋಧನೆ ಮಾಡಲು ಶೋಧನಾ ವಾರಂಟ್ ಹೊರಡಿಸಿದ್ದು, ಹೀಗಾಗಿ ವಿಜಯಪುರ ಜಿಲ್ಲೆಯ…

Read More

ದೇಶದ ಹೆಸರಿನಲ್ಲಿ ಮೋದಿ ಜನರ ಚಿನ್ನಾಭರಣ ಕಿತ್ತುಕೊಂಡಿಲ್ಲ: ಜಿಗಜಿಣಗಿ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 16:ದೇಶದ ಹೆಸರು ಹೇಳಿ ಕಾಂಗ್ರೆಸ್‌ನವರಂತೆ ಚಿನ್ನದ ತುಲಾಭಾರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿಸಿಕೊಂಡಿಲ್ಲ. ಬದಲಾಗಿ ಚಿನ್ನದ ಖರೀದಿಯನ್ನು ಮಿತ ಪ್ರಮಾಣಕ್ಕೆ ಸೀಮಿತಗೊಳಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಕಾಂಗ್ರೆಸ್‌ನಂತೆ ತುರ್ತು ಪರಿಸ್ಥಿತಿ ಹೇರಿ ಪ್ರಜಾಪ್ರಭುತ್ವ ದಮನಿಸುವ ಕೆಲಸವನ್ನು ಬಿಜೆಪಿ ಮಾಡಿಲ್ಲ. ಕೋವಿಡ್‌ನಂತಹ ಸಂಕಷ್ಟದ ಸಮಯದಲ್ಲಿ ಕಾಂಗ್ರೆಸ್ ಏನಾದರೂ ಅಧಿಕಾರದಲ್ಲಿದ್ದರೆ ದೇಶದ ಪರಿಸ್ಥಿತಿ ಊಹಿಸಲು ಸಾಧ್ಯವಾಗಿರದಷ್ಟು ಕೆಟ್ಟಿರುತ್ತಿತ್ತು ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಂತಾರಾಷ್ಟ್ರೀಯ ಮಟ್ಟದ…

Read More

ನಾಗಠಾಣದಲ್ಲಿ ಸಂಭ್ರಮದ ಚೌಡೇಶ್ವರಿ ದೇವಿಯ ಜಾತ್ರೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 16:ಬಾದ್ಮಿ ಅಮಾವಾಸ್ಯೆ ನಿಮಿತ್ತ ಶನಿವಾರದಂದು ತಾಲೂಕಿನ ನಾಗಠಾಣ ಗ್ರಾಮದಲ್ಲಿ ಶ್ರೀ ಚೌಡೇಶ್ವರಿ ಜಾತ್ರಾ ಮಹೋತ್ಸವ ಬಹು ವಿಜೃಂಭಣೆಯಿಂದ ಜರುಗಿದ್ದು, ದೇವಿಯ ದರ್ಶನಕ್ಕೆ ಭಕ್ತಸಾಗರವೇ ಹರಿದು ಬಂದಿತ್ತು.ಶುಕ್ರವಾರ ಸಂಜೆ ಭಕ್ತ ಮಹಿಳೆಯರು ಅಂಬಲಿ ಬಿಂದಿಗೆ ಹೊತ್ತು, ಬಾಸಿಂಗ, ಕಳಸದ ಮೆರವಣಿಗೆಯು ಗುಡಿ ತಲುಪಿ, ಅಲ್ಲಿ ಎಲ್ಲರೂ ಅಂಬಲಿ ಅರ್ಪಿಸಿ, ಪುನೀತರಾದರು.ಚೌಡೇಶ್ವರಿ ದೇವಿಯ ಮುಖವಾಡ ಹೊತ್ತವರು ಅಪಾರ ಸಂಖ್ಯೆಯ ಭಕ್ತರು, ಬಾಜಾ-ಭಜಂತ್ರಿ, ಡೊಳ್ಳು ವಾದ್ಯಗಳು ಹಾಗೂ ಭಕ್ತರ ಜಯಘೋಷಗಳೊಂದಿಗೆ ಇಡೀ ಗ್ರಾಮದ ಭಕ್ತರ ಮನೆ ಮನೆಗೆ…

Read More

ಆರೋಗ್ಯ ಕ್ಷೇತ್ರದ ಬೆನ್ನೆಲುಬು ದಾದಿಯರು: ಸಂಗಮೇಶ ಬಬಲೇಶ್ವರ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 16: ವಿಶ್ವದ ಆರೋಗ್ಯ ಕ್ಷೇತ್ರದಲ್ಲಿ ದಾದಿಯರ ಪಾತ್ರ ಅನನ್ಯವಾದದ್ದು. ಅವರ ತ್ಯಾಗವನ್ನ ಜಗತ್ತು ಅತ್ಯಂತ ಕೃತಜ್ಞತೆಯಿಂದ ಸ್ಮರಿಸುತ್ತದೆ. ಪ್ರತಿ ವರ್ಷ ಮೇ 12 ರಂದು ವಿಶ್ವಾದ್ಯಂತ ದಾದಿಯರ ದಿನವನ್ನು, ತನ್ನ ನಿಸ್ವಾರ್ಥ ಸೇವೆಯ ಮೂಲಕ ಜಗತ್ತಿನ ಗಮನ ಸೆಳೆದಿದ್ದ ದೀಪದ ಕನ್ಯೆ ಎಂದೇ ಸುಪ್ರಸಿದ್ಧಳಾಗಿದ್ದ ದಾದಿ ಪ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನದ ನೆನಪಿಗಾಗಿ ಈ ದಿನವನ್ನು ಅಂತರಾಷ್ಟ್ರೀಯ ದಾದಿಯರ ದಿನವನ್ನಾಗಿ ಆಚರಿಸುತ್ತಾ ಬರಲಾಗಿದೆ. ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿರುವ ಎಲ್ಲ ವಿದ್ಯಾರ್ಥಿಗಳು ಶ್ರೇಷ್ಠ…

Read More

ರಷ್ಯಾದಿಂದ ತೈಲ ಖರೀದಿಗೆ ಅಮೆರಿಕ ಒಪ್ಪಿಗೆ ಕೇಳುವ ಮೋದಿ: ದುರ್ಬಲ ರಾಷ್ಟ್ರದ ಸಂಕೇತ- ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 16:ರಷ್ಯಾದಿಂದ ತೈಲ ಖರೀದಿಗೆ ಪ್ರಧಾನಿ ಅಮೆರಿಕ ಒಪ್ಪಿಗೆ ಕೇಳುವುದು ಸರಿಯಲ್ಲ. ಇದು ಭಾರತ ಎಷ್ಟು ದುರ್ಬಲವಾಗಿದೆ ಎಂಬುದರ ಸಂಕೇತವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದರು.ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ನಮ್ಮದು ಸ್ವತಂತ್ರ್ಯ ರಾಷ್ಟ್ರ ಏನು ಮಾಡಬೇಕು. ಎಲ್ಲಿ ಖರೀದಿ ಮಾಡಬೇಕು ಎಂಬುದನ್ನು ಅಮೆರಿಕ ಬಳಿ ಅಡವಿಟ್ಟಿದ್ದರೆ ಇದು ನಮ್ಮ ದುರ್ಭಾಗ್ಯ ಎಂದರು.ಮನಮೋಹನ್ ಸಿಂಗ್ ಪ್ರಧಾನಿ ಇದ್ದಾಗ ಆರ್ಥಿಕ ಪರಿಸ್ಥಿತಿ ಉತ್ತಮವಾಗಿತ್ತು.ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ,…

Read More

ಸಚಿವ ಎಂಬಿಪಿ ಸಾಧನೆಯನ್ನು ಪ್ರತ್ಯಕ್ಷವಾಗಿ ದರ್ಶನ ಮಾಡಿಸುತ್ತೇವೆ-ಗಣಿಹಾರ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 16 :ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಸಚಿವ ಡಾ.ಎಂ.ಬಿ. ಪಾಟೀಲರಿಗೆ ನೀಡಿರುವ ಪಂಥಾಹ್ವಾನವನ್ನು ಸ್ವೀಕರಿಸಿದ್ದು, ನಾವೇ ದಾಖಲೆ ಸಮೇತ, ಆಧಾರ ಸಹಿತವಾಗಿ ಸಚಿವ ಡಾ.ಎಂ.ಬಿ. ಪಾಟೀಲರು ನೀರಾವರಿಗೆ ನೀಡಿದ ಕೊಡುಗೆಯನ್ನು ವಿವರಿಸುತ್ತೇವೆ, ಬಿಜೆಪಿ ನಾಯಕರೇ ವೇದಿಕೆ ಸಿದ್ದಪಡಿಸಲಿ, ಕೇವಲ‌ ಕಾಗದ ಅಷ್ಟೇ ಅಲ್ಲ ನೀರಾವರಿ ಆಗಿರುವ ಸ್ಥಳಕ್ಕೆ ಕರೆದುಕೊಂಡು ಹೋಗಿ ಅವರನ್ನು ತೋರಿಸುತ್ತೇವೆ ಎಂದು ಕೆಪಿಸಿಸಿ ವಕ್ತಾರ ಎಸ್.ಎಂ. ಪಾಟೀಲ ಗಣಿಹಾರ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆರೆ ತುಂಬುವ ಯೋಜನೆ ಸಚಿವ ಡಾ.ಎಂ.ಬಿ. ಪಾಟೀಲರ…

Read More

ಡಿಪ್ಲೋಮ ಕೋರ್ಸ್‌ಗೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 16:2026-27ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ ಕೋರ್ಸ್ ಕಲಿಕೆಗಾಗಿ 49 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ವ್ಯಾಸಂಗದ ವೇಳೆ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು 2.500 ರೂ. ವರೆಗೆ ಶಿಷ್ಯವೇತನ ನೀಡಲಾಗುವುದು. ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು.ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ…

Read More

ನೀಟ್ ಪರೀಕ್ಷೆಯನ್ನು ವಿರೋಧಿಸುವ ನಿರ್ಣಯವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲು ವಿದ್ಯಾರ್ಥಿ ಸಂಘಟನೆ ಆಗ್ರಹ

ಸಪ್ತಸಾಗರ ವಾರ್ತೆ, ವಿಜಯಪುರ,ಮೇ. 16 :ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮದಿಂದಾಗಿ ನೀಟ್ ಅವ್ಯವಸ್ಥೆ ಆಗರವಾಗಿದೆ. ಬಡ ವಿದ್ಯಾರ್ಥಿಗಳಿಗೆ ದೊಡ್ಡ ಮೋಸವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪ್ರಸ್ತುತ ರೂಪದಲ್ಲಿರುವ ನೀಟ್ ಪರೀಕ್ಷೆಯನ್ನು ವಿರೋಧಿಸುವ ನಿರ್ಣಯವನ್ನು ವಿಧಾನಸಭೆಯಲ್ಲಿ ಅಂಗೀಕರಿಸಬೇಕು ಎಂದು ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀಶೈಲ ತೇಲಿ ಒತ್ತಾಯಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವೈದ್ಯರಾಗ ಬಯಸುವ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅದರಲ್ಲೂ ಬಡ ಹಾಗೂ ಮಧ್ಯಮ ವರ್ಗದ…

Read More

ವಿಜಯಪುರದಲ್ಲಿ ಮೇ 17 ರಿಂದ ಪ್ರಪ್ರಥಮ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿ: ಪಂದ್ಯಾಟದಲ್ಲಿ 756 ಆಟಗಾರರು ಭಾಗಿ- ಕುಮಾರ ಬಂಗಾರಪ್ಪ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 16:ಐತಿಹಾಸಿಕ ಗುಮ್ಮಟ ನಗರಿ ವಿಜಯಪುರದಲ್ಲಿ ಇದೇ ಮೊದಲ ಬಾರಿಗೆ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಮೇ 17 ರಿಂದ ಆಯೋಜಿಸಲಾಗಿದೆ ಎಂದು ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ರಾಜ್ಯ ಅಧ್ಯಕ್ಷ ಕುಮಾರ ಬಂಗಾರಪ್ಪ ತಿಳಿಸಿದರು.ಶನಿವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಬ್ಯಾಡ್ಮಿಂಟನ್ ಅಸೋಸಿಯೇಷನ್ ಹಾಗೂ ಬಿಎಲ್‌ಡಿಇ ಸಂಸ್ಥೆಯ ಸಹಯೋಗದಲ್ಲಿ ಅನೆಕ್ಸ್ ಸನ್ ರೈಸರ್ ಟೈಟಲ್ ಕಾರ್ಡ್ ನಡಿ ಈ ಪಂದ್ಯಾವಳಿ ನಡೆಯಲಿದೆ ಎಂದರು.ಈಗಾಗಲೇ ರಾಜ್ಯದ ವಿವಿಧ ಭಾಗಗಳಿಂದ 756 ಕ್ರೀಡಾಪಟುಗಳು ನೋಂದಾಯಿಸಿಕೊಂಡಿದ್ದು, ರಾಜ್ಯ, ರಾಷ್ಟ್ರ…

Read More