ರೈಲ್ವೆ ಯೋಜನೆಗಳಿಗೆ ವೇಗ: ಸೋಮಣ್ಣ

ಸೊರಬವನ್ನು ತಾಳಗುಪ್ಪ–ಸಿರಸಿ ರೈಲು ಮಾರ್ಗಕ್ಕೆ ಸೇರಿಸಲು ರಾಘವೇಂದ್ರ ಮನವಿ ಸಪ್ತಸಾಗರ ವಾರ್ತೆ,ಶಿವಮೊಗ್ಗ, ಅ. 12: ಮಲೆನಾಡು ಭಾಗದ ರೈಲ್ವೆ ಸಂಪರ್ಕ ಬಲಪಡಿಸುವ ನಿಟ್ಟಿನಲ್ಲಿ ಪ್ರಗತಿಯಲ್ಲಿರುವ ಹಾಗೂ ಪ್ರಸ್ತಾವಿತ ಯೋಜನೆಗಳನ್ನು ತ್ವರಿತಗೊಳಿಸುವ ಕುರಿತು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರು ಅಧಿಕಾರಿಗಳೊಂದಿಗೆ ಸೋಮವಾರ ಶಿವಮೊಗ್ಗದಲ್ಲಿ ಪ್ರಗತಿ ಪರಿಶೀಲನೆ ನಡೆಸಿದರು.ಶಿವಮೊಗ್ಗ ಲೋಕಸಭಾ ಕ್ಷೇತ್ರದ ರೈಲ್ವೆ ಯೋಜನೆಗಳ ಕುರಿತು ನಡೆದ ಸಭೆಯಲ್ಲಿ ತಾಳಗುಪ್ಪ–ಸಿದ್ದಾಪುರ–ಸಿರಸಿ–ಹುಬ್ಬಳ್ಳಿ ಶಿವಮೊಗ್ಗ–ತೀರ್ಥಹಳ್ಳಿ–ಶೃಂಗೇರಿ–ಮಂಗಳೂರು, ಭದ್ರಾವತಿ–ಚಿಕ್ಕಜಾಜೂರು, ತಾಳಗುಪ್ಪ–ಹೊನ್ನಾವರ ಹಾಗೂ ಶಿವಮೊಗ್ಗ–ಬೀರೂರು ಜೋಡಿ ರೈಲು ಮಾರ್ಗಗಳ ಪ್ರಗತಿ…

Read More

ಮಹನೀಯರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ: ಡಾ. ಔದ್ರಾಮ

ಅ.23ರಂದು ಕಿತ್ತೂರು ರಾಣಿ ಚೆನ್ನಮ್ಮ, ನ.11ರಂದು ಒನಕೆ ಓಬವ್ವ ಹಾಗೂ ನ.27ರಂದು ಕನಕದಾಸ ಜಯಂತಿ ಸಪ್ತಸಾಗರ ವಾರ್ತೆ,ವಿಜಯಪುರ, ಅ.12:ಕಿತ್ತೂರು ರಾಣಿ ಚೆನ್ನಮ್ಮ, ವೀರವನಿತೆ ಒನಕೆ ಓಬವ್ವ ಹಾಗೂ ಕನಕದಾಸರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಸೂಚಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಯಂತಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಅಕ್ಟೋಬರ್ 23ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ,…

Read More

‘ಗುಲಾಬಿ’ ಚಿತ್ರದ ಪೋಸ್ಟರ್ ಬಿಡುಗಡೆ: ಶೀಘ್ರದಲ್ಲೇ ತೆರೆಗೆ

ಸಪ್ತಸಾಗರ ವಾರ್ತೆ,ತುಮಕೂರು, ಅ. 12:ಶ್ರೀಸಿದ್ಧಿವಿನಾಯಕ ಸೇವಾ ಮಂಡಳಿ, ತುಮಕೂರು ಇವರ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ನಮ್ಮ ಜೇನುಗೂಡು ಬಳಗ’ದ ಸಹಯೋಗದಲ್ಲಿ ಸಾವಿತ್ರಿ ರಾಮಚಂದ್ರ ಬ್ಯಾನರ್‌ ನಿರ್ಮಾಣದ ‘ಗುಲಾಬಿ’ ಕನ್ನಡ ಚಲನಚಿತ್ರದ ಪೋಸ್ಟರ್‌ ಬಿಡುಗಡೆ ಮಾಡಲಾಯಿತು.ಪ್ಯಾನ್ ಇಂಡಿಯಾ ಸಿನೆಮಾವಾಗಿ ಮೂಡಿಬರುತ್ತಿರುವ ‘ಗುಲಾಬಿ’ ಚಿತ್ರವನ್ನು ಅಡ್ವೊಕೇಟ್ ಡಾ. ಆರ್. ವಿಜಯಕುಮಾರ್ ನಿರ್ದೇಶಿಸಿದ್ದು, ಅವರೇ ನಾಯಕನಾಗಿ ಅಭಿನಯಿಸಿದ್ದಾರೆ. ಜೇನುಗೂಡು ಬಳಗದ ಅಧ್ಯಕ್ಷ ಸೆಲ್ವಂ ಹಾಗೂ ತಂಡದವರು ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದರು.ಕಾರ್ಯಕ್ರಮದಲ್ಲಿ ಚಿತ್ರದ ನಾಯಕಿ ಅನಿತಾಶ್ರೀ, ಸಹ ನಿರ್ದೇಶಕ ವಾಸುದೇವ ಶೆಟ್ಟಿ…

Read More

ಟೊಯೋಟಾ ಕ್ಯಾಂಪಸ್ ಡ್ರೈವ್‌ನಲ್ಲಿ 240 ವಿದ್ಯಾರ್ಥಿಗಳ ಭಾಗಿ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 12:ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಪೂಜ್ಯ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ವಿದ್ಯಾಲಯದಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ವತಿಯಿಂದ ನಡೆದ ಎರಡು ದಿನಗಳ ಪೂಲ್ ಕ್ಯಾಂಪಸ್ ಸಂದರ್ಶನದಲ್ಲಿ 240ಕ್ಕೂ ಹೆಚ್ಚು ಡಿಪ್ಲೋಮಾ ವಿದ್ಯಾರ್ಥಿಗಳು ಭಾಗವಹಿಸಿದರು.ಅಕ್ಟೋಬರ್ 9 ಮತ್ತು 10ರಂದು ನಡೆದ ಕ್ಯಾಂಪಸ್ ಡ್ರೈವ್‌ಗೆ ವಿಜಯಪುರ ನಗರ ಹಾಗೂ ಜಿಲ್ಲೆಯ ವಿವಿಧ ಪಾಲಿಟೆಕ್ನಿಕ್ ಕಾಲೇಜುಗಳ 320ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅರ್ಹತೆ ಪಡೆದ 240 ವಿದ್ಯಾರ್ಥಿಗಳು ಲಿಖಿತ ಪರೀಕ್ಷೆ, ತಾಂತ್ರಿಕ ಮೌಲ್ಯಮಾಪನ ಹಾಗೂ ನೇರ ಸಂದರ್ಶನದಲ್ಲಿ ಪಾಲ್ಗೊಂಡರು….

Read More

ಐಸಿಎಸ್‌ಎಸ್‌ಆರ್ ಪ್ರಾಜೆಕ್ಟ್: ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 12: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಭಾರತೀಯ ಸಮಾಜ ವಿಜ್ಞಾನ ಸಂಶೋಧನಾ ಮಂಡಳಿ (ಐಸಿಎಸ್‌ಎಸ್‌ಆರ್), ನವದೆಹಲಿ ಪ್ರಾಯೋಜಕತ್ವದಲ್ಲಿ ನಡೆಯುತ್ತಿರುವ ಸಂಶೋಧನಾ ಪ್ರಾಜೆಕ್ಟ್‌ಗೆ ತಾತ್ಕಾಲಿಕವಾಗಿ ಸಹಾಯಕ ಸಂಶೋಧಕರು ಹಾಗೂ ಫೀಲ್ಡ್ ಇನ್ವಸ್ಟಿಗೇಟರ್‌ಗಳ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಅ.22ರೊಳಗೆ ಪ್ರಾಜೆಕ್ಟ್ ನಿರ್ದೇಶಕರು, ಐಸಿಎಸ್‌ಎಸ್‌ಆರ್ ಪ್ರಾಜೆಕ್ಟ್, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಇವರಿಗೆ…

Read More

ಹಡಪದ ಅಪ್ಪಣ್ಣರ ಕಾಯಕನಿಷ್ಠೆ, ವಿನಯ ಮಾದರಿ: ಮಮತಾ ಮುಳಸಾವಳಗಿ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 12:ಕಾಯಕನಿಷ್ಠೆ, ಕಾರ್ಯತತ್ಪರತೆ ಹಾಗೂ ವಿನಯದಿಂದ ಬದುಕಿದ ಹಡಪದ ಅಪ್ಪಣ್ಣ ಅವರು ಬಸವಣ್ಣನವರ ಆಪ್ತ ಕಾರ್ಯದರ್ಶಿಯಾಗಿ ಶರಣ ಪರಂಪರೆಯಲ್ಲಿ ವಿಶಿಷ್ಟ ಸ್ಥಾನ ಪಡೆದಿದ್ದರು ಎಂದು ಸಾಹಿತಿ ಮಮತಾ ಮುಳಸಾವಳಗಿ ಹೇಳಿದರು.ನಗರದ ಸಹ್ಯಾದ್ರಿ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದಲ್ಲಿ ತಾಲ್ಲೂಕು ಶರಣ ಸಾಹಿತ್ಯ ಪರಿಷತ್ತು ಆಯೋಜಿಸಿದ್ದ ದತ್ತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಪ್ಪಣ್ಣ ಅವರ ಅಧ್ಯಾತ್ಮಶಕ್ತಿ, ಸರಳತೆ ಹಾಗೂ ವ್ಯಕ್ತಿತ್ವ ಅನುಕರಣೀಯ. ಅಪ್ಪಣ್ಣ ಮತ್ತು ಲಿಂಗಮ್ಮ ಶರಣ ದಂಪತಿಗಳಾಗಿ ಅನುಭಾವದ ಮೇರುಗೇರಿದ್ದರು ಎಂದರು.ಜಂಬುನಾಥ ಕಂಚ್ಯಾಣಿ…

Read More

ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ

ಸಪ್ತಸಾಗರ ವಾರ್ತೆ,ಬಬಲೇಶ್ವರ, ಅ. 12: ತಾಲೂಕಿನ ಕೃಷ್ಣನಗರದ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ 2026-27ನೇ ಸಾಲಿನ ಕಬ್ಬು ನುರಿಸುವ ಹಂಗಾಮಿನ ಬಾಯ್ಲರ್ ಅಗ್ನಿ ಪ್ರದೀಪನ ಹಾಗೂ ಕೇನ್ ಕ್ಯಾರಿಯರ್ ಪೂಜಾ ಕಾರ್ಯಕ್ರಮ ಸೋಮವಾರ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾರ್ಖಾನೆ ಅಧ್ಯಕ್ಷ ಕುಮಾರ ಚಂದ್ರಕಾಂತ ದೇಸಾಯಿ (ಜೈನಾಪುರ) ಮಾತನಾಡಿ, ಪ್ರಸಕ್ತ ಹಂಗಾಮಿನಲ್ಲಿ 10 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿ ಹೊಂದಲಾಗಿದೆ. ರೈತರು ಹೆಚ್ಚಿನ ಪ್ರಮಾಣದಲ್ಲಿ ಕಬ್ಬನ್ನು ಕಾರ್ಖಾನೆಗೆ ಕಳುಹಿಸಬೇಕು. ಮುಂಬರುವ ದಿನಗಳಲ್ಲಿ ಹೊಸ ಕಾರ್ಖಾನೆಗೆ ಚಾಲನೆ…

Read More

371(ಜೆ) ಹೋರಾಟಕ್ಕೆ ಜಂಗಮ ಸಂಘ ಬೆಂಬಲ

ಸಪ್ತಸಾಗರ ವಾರ್ತೆ,ಸಿಂದಗಿ, ಅ. 11: ವಿಜಯಪುರ ಜಿಲ್ಲೆಯನ್ನು 371(ಜೆ) ಕಲಂ ವ್ಯಾಪ್ತಿಗೆ ಸೇರಿಸಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಧರಣಿ ಸತ್ಯಾಗ್ರಹಕ್ಕೆ ತಾಲ್ಲೂಕು ಜಂಗಮ ಕ್ಷೇಮಾಭಿವೃದ್ಧಿ ಸಂಘ ಬೆಂಬಲ ವ್ಯಕ್ತಪಡಿಸಿದೆ.ಸಂಘದ ಅಧ್ಯಕ್ಷ ಶಂಕರಲಿಂಗಯ್ಯ ಹಿರೇಮಠ ಮಾತನಾಡಿ, ವಿಜಯಪುರ ಜಿಲ್ಲೆಯನ್ನು 371(ಜೆ) ವ್ಯಾಪ್ತಿಗೆ ತಕ್ಷಣ ಸೇರಿಸಿ, ಈ ಭಾಗದ ಜನರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.ಹೋರಾಟದ ಮುಖಂಡ ರಂಗನಾಥ ತೋರ್ಪೆ ಮಾತನಾಡಿ, 371(ಜೆ) ಜಾರಿಗಾಗಿ ಜಿಲ್ಲೆಯ ಎಲ್ಲ ಸಮುದಾಯಗಳು ಒಗ್ಗಟ್ಟಾಗಿ ಹೋರಾಡಬೇಕು ಎಂದರು. ಸಿದ್ದಲಿಂಗಯ್ಯ ಹಿರೇಮಠ ಮಾತನಾಡಿ,…

Read More

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಕಲ್ಪಿಸಲು ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 11:ವಿಜಯಪುರ ಜಿಲ್ಲೆಗೆ ಸಂವಿಧಾನದ 371(ಜೆ) ಅಡಿಯಲ್ಲಿ ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ಜಿಲ್ಲಾ 371(ಜೆ) ಹೋರಾಟ ಸಮಿತಿ ಮುಖಂಡರು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಸಂತ ಹೊನಮೋಡೆ ಅವರಿಗೆ ಮನವಿ ಸಲ್ಲಿಸಿದರು.371(ಜೆ) ಮೀಸಲಾತಿ ಜಾರಿಗೊಳಿಸುವ ಸಂದರ್ಭದಲ್ಲಿ ವಿಜಯಪುರ ಜಿಲ್ಲೆಯನ್ನು ಕೈಬಿಟ್ಟಿರುವುದರಿಂದ ಶಿಕ್ಷಣ, ಉದ್ಯೋಗ ಹಾಗೂ ಅಭಿವೃದ್ಧಿ ಕ್ಷೇತ್ರಗಳಲ್ಲಿ ಜಿಲ್ಲೆಯ ಜನರಿಗೆ ಅನ್ಯಾಯವಾಗಿದೆ. ಹೀಗಾಗಿ ಮುಖ್ಯಮಂತ್ರಿಗಳ ಗಮನಕ್ಕೆ ತಂದು, ವಿಜಯಪುರ ಜಿಲ್ಲೆಯನ್ನು 371(ಜೆ) ವ್ಯಾಪ್ತಿಗೆ ಸೇರಿಸುವಂತೆ ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಬೇಕು…

Read More

ಜ್ಞಾನೇಶಕುಮಾರ್ ರಾಜೀನಾಮೆಗೆ ಆಗ್ರಹ: ಲಾಠಿಚಾರ್ಜ್ ಖಂಡಿಸಿ ಪ್ರತಿಭಟನೆ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 11:ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಹೋರಾಟಗಾರರ ಮೇಲಿನ ಲಾಠಿಚಾರ್ಜ್ ಖಂಡಿಸಿ ವಿವಿಧ ಪ್ರಗತಿಪರ ಸಂಘಟನೆಗಳ ವೇದಿಕೆಯ ನೇತೃತ್ವದಲ್ಲಿ ಭಾನುವಾರ ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.ಎಸ್‌ಯುಸಿಐ(ಸಿ) ಜಿಲ್ಲಾ ಕಾರ್ಯದರ್ಶಿ ಭಗವಾನ್ ರೆಡ್ಡಿ ಮಾತನಾಡಿ, ಕೇಂದ್ರ ಗೃಹ ಇಲಾಖೆ ಪ್ರಜಾಸತ್ತಾತ್ಮಕ ಹೋರಾಟಗಳನ್ನು ಹತ್ತಿಕ್ಕಲು ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದರು. ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಲಾಠಿಚಾರ್ಜ್ ಮಾಡಿ, ರಸ್ತೆಗೆ ಬೀಳಿಸಿ ಎಳೆದಾಡಿರುವ ದೃಶ್ಯಗಳು ಪ್ರಜಾಪ್ರಭುತ್ವದ ಕಗ್ಗೊಲೆಗೆ…

Read More