ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಪಾಲಕರ ಸಹಕಾರ ಅವಶ್ಯ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.9: ಮಕ್ಕಳಿಗೆ ಸಂವಹನ ಕಲೆಯನ್ನು, ಪ್ರಶಸ್ತಿ ಪಡೆದವರ ಸಾಧನೆಯನ್ನು ತಿಳಿಸುವುದು ಮತ್ತು ಅವರಿಗೆ ಶಿಕ್ಷಕರು ಪಾಲಕರು ಪ್ರೇರಣೆಯನ್ನು ನೀಡಿ ಸತ್ಪ್ರಜೆಗಳನ್ನಾಗಿ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅವರು ಹೇಳಿದರು.ಎ.ಎಸ್.ಹಿಪ್ಪರಗಿ ಪ್ರತಿಷ್ಠಾನ ಮತ್ತು ಸಮನ್ವಯ ಆಂಗ್ಲ ಮಾಧ್ಯಮಿಕ ಶಾಲೆ ಬ ಇವುಗಳ ಸಹಯೋಗದಲ್ಲಿ ನಡೆದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಕೃಷ್ಣಾಜಿ ದಂಪತಿ ಮತ್ತು ಶಂಭು ತುಪ್ಪದ ಕೊಡಮಾಡಿದ ದತ್ತಿ ದಾಸೋಹಿಗಳು ವಿದ್ಯಾರ್ಥಿಗಳಿಗೆ ಬಹುಮಾನ ನೀಡಲು ಇವರು…

Read More

ಅಹಿಂದ ವಿದ್ಯಾರ್ಥಿ ಪರಿಷತ್ ಘಟಕಕ್ಕೆ ರಾಜ್ಯಾಧ್ಯಕ್ಷರಾಗಿ ಶಂಕರ ವಡ್ರೆ ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 9:ಅಹಿಂದ ವಿದ್ಯಾರ್ಥಿ ಪರಿಷತ್ ಘಟಕದ ರಾಜ್ಯಾದ್ಯಕ್ಷರಾಗಿ ಶಂಕರ ಘೋರಕನಾಥ ವಡ್ರೆ ಮರಗೂರ ಅವರು ಆಯ್ಕೆಯಾಗಿದ್ದಾರೆ.ಅಹಿಂದ ಕರ್ನಾಟಕ ರಾಜ್ಯ ಒಕ್ಕೂಟ (ರಿ) ಬೆಂಗಳೂರು ರಾಜ್ಯಾದ್ಯಕ್ಷ ಪ್ರಭುಲಿಂಗ ದೊಡ್ಡಿಣಿ ಅವರ ಆದೇಶದ ಮೇರೆಗೆ ಅಹಿಂದ ವಿದ್ಯಾರ್ಥಿ ಪರಿಷತ್ ಘಟಕ ರಾಜ್ಯಾದ್ಯಕ್ಷರನ್ನಾಗಿ ಶಂಕರ ಘೋರಕನಾಥ ವಡ್ರೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಬೀರಲಿಂಗೇಶ್ವರ ಪೂಜಾರಿ ಹಾಗೂ ವಿಠ್ಠಲ ಬಿರಾದಾರ, ರಾಜ್ಯ ಸಂಘಟನಾ ಕಾರ್ಯದರ್ಶಿ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬಿಜೆಪಿ ಪ್ರತಿಭಟನೆ ಮಾಡಬೇಕಿರುವುದು ಕೇಂದ್ರ ಸರ್ಕಾರದ ವಿರುದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ ಬೆಳಗಾವಿ, ಡಿ.9:“ರಾಜ್ಯಕ್ಕೆ ಅನ್ಯಾಯ ಆಗಿರುವುದು ಕೇಂದ್ರ ಸರ್ಕಾರದಿಂದ. ಹೀಗಾಗಿ ಬಿಜೆಪಿಯು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು.ಬೆಳಗಾವಿ ಸರ್ಕಿಟ್ ಹೌಸ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು.ರಾಜ್ಯ ಸರ್ಕಾರ ವಿರುದ್ಧ ಬಿಜೆಪಿಯ ಪ್ರತಿಭಟನೆ ಬಗ್ಗೆ ಕೇಳಿದಾಗ “ಕಬ್ಬು, ಮೆಕ್ಕೆಜೋಳ, ಸಕ್ಕರೆ, ಎಥನಾಲ್ ಸೇರಿದಂತೆ ಪ್ರತಿ ವಿಚಾರದಲ್ಲಿ ಅನ್ಯಾಯ ಆಗಿರುವುದು ಕೇಂದ್ರ ಸರ್ಕಾರದಿಂದ. ಕೇಂದ್ರ ಸರ್ಕಾರ ನಮ್ಮ ರಾಜ್ಯಕ್ಕೆ ನೀಡಬೇಕಾದ ಅನುದಾನ…

Read More

ವಲ್ಲಭಭಾಯಿ ಪಟೇಲರು ಏಕತೆಯ ಹರಿಕಾರ: ನಂದಿನಿ ಬಿರಾದಾರ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 9: ದೇಶದ ರ‍್ಯೆತರ ಮೇಲಿನ ಶೋಷಣೆ ಹೋಗಲಾಡಿಸಿದ ದೇಶದ ಏಕತೆಗಾಗಿ ಹೋರಾಡಿದ ಹರಿಕಾರ ದೇಶಕಂಡ ಅಪರೂಪದ ವ್ಯಕ್ವತ್ವ ಸರದಾರ ವಲ್ಲಭಭಾಯಿ ಪಟೇಲರದು ಎಂದು ಉಪನ್ಯಾಸಕಿ ನಂದಿನಿ ಬಿರಾದಾರ ಹೇಳಿದರುನಗರದ ವೀರಶ್ಯೆವ ಲಿಂಗಾಯತ ಸಭಾ ಭವನದಲ್ಲಿ ಅಖಿಲ ಭಾರತ ವೀರಶ್ಯೆವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕ ಹಮ್ಮಿಕೊಂಡಿದ್ದ ಶಿವಾನುಭವ ಗೋಷ್ಟಿಯಲ್ಲಿ ಸರದಾರ ವಲ್ಲಭಭಾಯಿ ಪಟೇಲರ ಬದುಕು ಮತ್ತು ಹೋರಾಟ ಕುರಿತು ಉಪನ್ಯಾಸ ನೀಡಿದ ಅವರು, ಸರದಾರ ವಲ್ಲಭಬಾಯಿ ಪಟೇಲರು ೧೮೭೫ರಲ್ಲಿ ಜನ್ಮತಾಳಿ ಕಾನೂನು…

Read More

ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ,ಡಿ.9: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2025-26ನೇ ಸಾಲಿನ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ನೀಡಲಾಗುವ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ಮಹಿಳಾ ಅಭಿವೃದ್ಧಿ ಕ್ಷೇತ್ರದಲ್ಲಿ ಆದರ್ಶವಾಗಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿ ಹಾಗೂ ಸಂಸ್ಥೆಗಳು ಮತ್ತು ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡುತ್ತಿರುವ ಮಹಿಳೆಯರೂ ಸೇರಿದಂತೆ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿದಂತಹ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ…

Read More

ಜಿಲ್ಲಾಧಿಕಾರಿ ಡಾ. ಆನಂದ‌ ಬಬಲೇಶ್ವರ ತಾಲೂಕಿಗೆ ಭೇಟಿ, ಪರಿಶೀಲನೆ

ಸಪ್ತಸಾಗರ ವಾರ್ತೆ, ವಿಜಯಪುರ,ಡಿ.9: ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಮಂಗಳವಾರ ಬಬಲೇಶ್ವರ ತಾಲೂಕಿನ ವಿವಿಧ ತಾಲೂಕು‌ ಕಚೇರಿಗೆ ಭೇಟಿ ನೀಡಿ,‌ಪರಿಶೀಲನೆ ನಡೆಸಿದರು.ತಾಲೂಕಾ ಆಡಳಿತ ಸೌಧಕ್ಕೆ ತೆರಳಿ,ತಾಲೂಕ ಖಜಾನೆ ಹಾಗೂ ತಹಶೀಲದಾರ ಕಾರ್ಯಾಲಯದ ಇ-ಪೌತಿ, ಭೂಮಿ, ಆಧಾರ ಸಿಡಿಂಗ್ ಹಾಗೂ ಮತದಾರ ಪಟ್ಟಿ ಮ್ಯಾಪಿಂಗ್ ಪ್ರಗತಿ ಪರಿಶೀಲಿಸಿದರು.ಬಬಲೇಶ್ವರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಬಿಸಿ ಊಟದ ಅಡುಗೆ ಕೊಠಡಿ ಹಾಗೂ ಮಕ್ಕಳಿಗೆ ವಿತರಿಸುವ ಆಹಾರದ ಕುರಿತ ಪರಿಶೀಲಿಸಿ ಅಡುಗೆ ಸಹಾಯಕರೊಂದಿಗೆ ಚರ್ಚಿಸಿ, ಅವರ ಕುಂದುಕೊರತೆ…

Read More

ಗ್ಯಾರಂಟಿ ಯೋಜನೆಗಳ ಕಲಾ ಜಾಥಾ ಪ್ರದರ್ಶನ: ಸಂಚಾರಿ ವಾಹನಕ್ಕೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಚಾಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.9: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಐದು ಪಂಚ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ ಮತ್ತು ಯುವನಿಧಿ ಹಾಗೂ ಸರ್ಕಾರದ ಜನಪರ ಯೋಜನೆಗಳ ಕುರಿತು ಜನಜಾಗೃತಿ ಮೂಡಿಸಲು ವಿಜಯಪುರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಎಲ್‌ಇಡಿ ಕಲಾ ಜಾಥಾ ಪ್ರದರ್ಶನ ಸಂಚಾರಿ ವಾಹನಕ್ಕೆ ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಚಾಲನೆ ನೀಡಿದರು.ರಾಜ್ಯ ಸರ್ಕಾರವು ಜನರ ಜೀವನ ಮಟ್ಟ ಉತ್ತಮ ಪಡಿಸಲು ಹಲವಾರು ಜನಪರ…

Read More

ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರ ಗೌರವಧನ ಹೆಚ್ಚಳಕ್ಕೆ ಸದನದಲ್ಲಿ ಸುನೀಲಗೌಡ ಪ್ರಸ್ತಾಪ

ಸಪ್ತಸಾಗರ ವಾರ್ತೆ ವಿಜಯಪುರ,ಡಿ. 9: ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಗೌರವಧನ ಹೆಚ್ಚಿಸುವಂತೆ ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಮತ್ತೊಮ್ಮೆ ವಿಧಾನಮಂಡಲದ ಅಧಿವೇಶನದಲ್ಲಿ ಧ್ವನಿ ಎತ್ತಿದ್ದಾರೆ.ಮಂಗಳವಾರ ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಪರಿಷತ ಕಲಾಪದಲ್ಲಿ ಶಾಸಕರು ಈ ಕುರಿತು ಪ್ರಶ್ನೆ ಕೇಳಿದರು. ಇದಕ್ಕೆ ಉತ್ತರಿಸಿದ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ, ಗೌರವಧನ ಹೆಚ್ಚಳ ಕುರಿತು ಇತರ ರಾಜ್ಯಗಳ ಚುನಾಯಿತ ಪ್ರತಿನಿಧಿಗಳ ಗೌರವಧನ ದಾಖಲೆಗಳನ್ನು ನಿಯಮಾನುಸಾರ…

Read More

ಬೆಳೆ ಪರಿಹಾರ ತಾರತಮ್ಯ ಖಂಡಿಸಿ ರೈತರಿಂದ ಆಕ್ರೋಶ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 9 : ಬೆಳೆ ಹಾನಿ ಪ್ರಮಾಣ ಹೆಚ್ಚಾಗಿದ್ದರೂ ಪರಿಹಾರ ನೀಡುವಲ್ಲಿ ಸರ್ಕಾರ ತಾರತಮ್ಯ, ಅಸಮರ್ಪಕ ಹಾಗೂ ಅನ್ಯಾಯಯುತವಾದ ಕ್ರಮಗಳನ್ನು ಅನುಸರಿಸಿರುವುದನ್ನು ಹಾಗೂ ಇನ್ನೂ ಕೆಲ ರೈತರಿಗೆ ಪರಿಹಾರ ಹಣವನ್ನು ಜಮಾ ಮಾಡದೇ ಇರುವುದನ್ನು ಖಂಡಿಸಿ ಬಸವನ ಬಾಗೇವಾಡಿ ತಾಲೂಕಿನ ಡೋಣೂರ ಗ್ರಾಮದ ರೈತರು ಮಂಗಳವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಹಸಿರು ಸೇನೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ವ್ಯಾಪಕ ಮಳೆಯಾಗಿದ್ದರ ಪರಿಣಾಮ ಸರ್ಕಾರ ರೈತರಿಗೆ ಬೆಳೆ ಪರಿಹಾರ…

Read More

ಬಿ.ಎಲ್.ಡಿ.ಇ ಧ್ವನಿ 98.6 FM ರೇಡಿಯೋ ಕೇಂದ್ರದ ಉದ್ಘಾಟನೆ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 8: ನಗರದ ಪ್ರತಿಷ್ಟಿತ ಬಿ.ಎಲ್.ಡಿ.ಇ ಸಂಸ್ಥೆಯ “ಬಿ.ಎಲ್.ಡಿ.ಇ ಧ್ವನಿ 98.6 FM ಸಮುದಾಯ ಬಾನುಲಿ ಕೇಂದ್ರವನ್ನು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಎಂ.ಬಿ.ಪಾಟೀಲ ರವಿವಾರ ಉದ್ಘಾಟಿಸಿದರು.ಬಿ.ಎಲ್.ಡಿ.ಇ ಸಂಸ್ಥೆಯ ಬಂಗಾರಮ್ಮ ಸಜ್ಜನ ಆವರಣದಲ್ಲಿ ನೂತನವಾಗಿ ಆರಂಭವಾಗುತ್ತಿರುವ ಬಿ.ಎಲ್.ಡಿ.ಇ ಧ್ವನಿ 98.6 FM ಆಕಾಶವಾಣಿ ಕೇಂದ್ರವನ್ನು ಉದ್ಘಾಟಿಸಿ ಬಳಿಕ, ಯುವಕರು, ಮಹಿಳೆಯರು ಮತ್ತು ರೈತ ಸಮುದಾಯಗಳಿಗಾಗಿ ವಿನೂತನ ಕಾರ್ಯಕ್ರಮಗಳು ಮೂಡಿ ಬರಲಿ ಎಂದು ರೇಡಿಯೋ…

Read More