ಪ್ರತಿ ಕ್ವಿಂಟಲ್ ಗೆ 7,721 ರೂ. ಬೆಂಬಲ ಬೆಲೆಯಡಿ ಸೂರ್ಯಕಾಂತಿ ಉತ್ಪನ್ನ ಖರೀದಿ: ಜಿಲ್ಲಾಧಿಕಾರಿ ಆನಂದ

ಸಪ್ತಸಾಗರ ವಾರ್ತೆ ವಿಜಯಪುರ, ಮೇ. 12:ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರವು ಬೆಂಬಲ ಬೆಲೆ ಯೋಜನೆಯಡಿ ಎಫ್ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಉತ್ಪನ್ನವನ್ನು ಪ್ರತಿ ಕ್ವಿಂಟಾಲ್ ಗೆ 7,721 ರೂ. ಬೆಂಬಲೆ ಬೆಲೆಯಡಿ ಖರೀದಿಗೆ ರೈತರ ನೋಂದಣಿಯನ್ನು 50 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 60 ದಿನಗಳವರೆಗೆ ನಿಗದಿಪಡಿಸಿ ನೋಂದಣಿ ಕಾರ್ಯದ ಜೊತೆಗೆ ಖರೀದಿ ಪ್ರಕ್ರಿಯೆ ಪ್ರಾರಂಭಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಕನಿಷ್ಠ ಬೆಂಬಲ ಬೆಲೆ ಕಾರ್ಯಪಡೆ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.ಕನಿಷ್ಠ ಬೆಂಬಲ ಬೆಲೆ ಕಾರ್ಯಪಡೆ ಸಮಿತಿ ಸಭೆಯಲ್ಲಿ…

Read More

ರಸ್ತೆ ಅಪಘಾತ ತಡೆಯಲು ಸಂಚಾರ ನಿಯಮ ಕಟ್ಟುನಿಟ್ಟಾಗಿ ಪಾಲಿಸಿ: ಬೆಳಗಾವಿ ಲೋಕಾಯುಕ್ತ ಎಸ್ಪಿ ದೇಸಾಯಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 12:ದೇಶದಲ್ಲಿ ರಸ್ತೆ ಅಪಘಾತಗಳಲ್ಲಿ ಸಾವಿಗೀಡಾಗುವವರ ಸಂಖ್ಯೆ ಪ್ರತಿ ವರ್ಷ ಹೆಚ್ಚಾಗುತ್ತಿದ್ದು, ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅಗತ್ಯವಾಗಿದೆ ಬೆಳಗಾವಿ ಲೋಕಾಯುಕ್ತ ಕಚೇರಿ ಎಸ್ಪಿ ಪ್ರಸನ್ನ ದೇಸಾಯಿ ಹೇಳಿದ್ದಾರೆ.ನಗರದ ಬಿ.ಎಲ್.ಡಿ.ಇ‌ ಡೀಮ್ಡ್ ವಿಶ್ವವಿದ್ಯಾಲಯದ ಕಾನೂನು ಶಾಲೆಯಲ್ಲಿ ಸೋಮವಾರ ಆಯೋಜಿಸಲಾದ ಅಪಘಾತಗಳನ್ನು ಹೇಗೆ ನಿಯಂತ್ರಿಸಬೇಕು ಎಂಬ ವಿಷಯ ಕುರಿತು ವಿಶೇಷ ಉಪನ್ಯಾನ ನೀಡಿದರು.ಕರ್ನಾಟಕ ಪೊಲೀಸ್ ಕಾಯ್ದೆ, 1963ರ ಕುರಿತು ಮಾತನಾಡಿ, ಭಾರತದ ಪ್ರತಿ ರಾಜ್ಯಕ್ಕೂ ಪ್ರತ್ಯೇಕ ಪೊಲೀಸ್ ಕಾಯ್ದೆಗಳಿವೆ. ಕ್ರಿಮಿನಲ್ ನ್ಯಾಯ ವ್ಯವಸ್ಥೆ, ಹೆಚ್ಚುತ್ತಿರುವ ಸೈಬರ್…

Read More

ಭೀಮಾ ಹಾಗೂ ಕೃಷ್ಣಾ ನದಿಗಳ ನೀರು ಬಳಕೆ ಗೊಂದಲ ನಿವಾರಣೆಗೆ ಮಹಾಕ್ಕೆ ಶಾಸಕರ ನಿಯೋಗ: ಶಾಸಕ ಯಶವಂತರಾಯಗೌಡ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 12 :ಭೀಮಾ ಹಾಗೂ ಕೃಷ್ಣಾ ನದಿಗಳ ನೀರು ಬಳಕೆಗೆ ಸಂಬಂಧಿಸಿದಂತೆ ಇರುವ ಗೊಂದಲವನ್ನು ಪರಿಹರಿಸಿಕೊಂಡು ಸೌಹಾರ್ದತೆಯ ಮೂಲಕ ಶಾಶ್ವತ ಪರಿಹಾರ ಕಂಡುಕೊಳ್ಳಲು ವಿಜಯಪುರ, ಬೆಳಗಾವಿ, ಕಲಬುರ್ಗಿ ಜಿಲ್ಲೆಯ ಶಾಸಕರು ಸೇರಿದಂತೆ ಉನ್ನತ ಮಟ್ಟದ ನಿಯೋಗವನ್ನು ಮಹಾರಾಷ್ಟ್ರ ಸರ್ಕಾರವನ್ನು ಭೇಟಿ ಮಾಡುವ ಮಹತ್ವದ ಕಾರ್ಯ ಕೈಗೊಳ್ಳಲಾಗುವುದು ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾನವೀಯತೆ ಹಾಗೂ ಸಹೋದರತೆಯ ಭಾವದೊಂದಿಗೆ ಈ ಬಾರಿ ಮಹಾರಾಷ್ಟ್ರ ಸರ್ಕಾರ ಉಜನಿ ಜಲಾಶಯದಿಂದ 16…

Read More

ಪಂಚ ಗ್ಯಾರಂಟಿ ಯೋಜನೆಗಳು ನಾಡಿನ ಜನತೆಗೆ ಆಶಾಕಿರಣ: ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ ಅಭಿಮತ

ಸಪ್ತಸಾಗರ ವಾರ್ತೆ ,ವಿಜಯಪುರ, ಮೇ.12:ನಮ್ಮ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳು ನೇರವಾಗಿ ಜನರನ್ನುತಲುಪುತ್ತಿವೆ. ಹಾಗಾಗಿ ಐದು ಗ್ಯಾರಂಟಿ ಯೋಜನೆಗಳು ನಾಡಿನಬಡವರು, ದೀನ-ದುರ್ಬಲರ ಬದುಕಿಗೆ ಆಶಾಕಿರಣವಾಗಿವೆ ಎಂದು ನಾಗಠಾಣಮತಕ್ಷೇತ್ರದ ಶಾಸಕ ವಿಠ್ಠಲ ಕಟಕದೊಂಡಹೇಳಿದರು.ಮಂಗಳವಾರ ನಗರದ ಡಾ.ಬಿ.ಆರ್. ಅಂಬೇಡ್ಕರ ಕ್ರೀಡಾಗಂಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಸಂಯುಕ್ತ ಆಶ್ರಯದಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ 32 ಫಲಾನುಭವಿಗಳಿಗೆ ಇಂಧನ ಚಾಲಿತ ತ್ರಿಚಕ್ರವಾಹನ ಕೀ ಹಸ್ತಾಂತರಿಸಿ ಅವರು ಮಾತನಾಡಿದರು.ನಮ್ಮ ಸರ್ಕಾರ ಜನರ ಹಿತದಿಂದ ಇಂತಹ…

Read More

ಕಾಂಗ್ರೆಸ್ಸಿಗರೇ ನಿಮಗೆ ಬಂಗಾರ ಮುಖ್ಯವೋ ದೇಶ ಮುಖ್ಯವೋ? ರಾಘವ್ ಅಣ್ಣಿಗೇರಿ ಪ್ರಶ್ನೆ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 12:ಶೇ. 88ರಷ್ಟು ಕಚ್ಚಾ ತೈಲನ್ನು ಭಾರತ ಗಲ್ಫ್ ರಾಷ್ಟ್ರಗಳಿಂದ ಆಮದು ಮಾಡಿಕೊಳ್ಳುತ್ತಿದೆ. ಅಮೆರಿಕ- ಇರಾನ್ ನಡುವಿನ ಯುದ್ಧ, ಭಾರತಕ್ಕಷ್ಟೇ ಅಲ್ಲ, ಇಡೀ ವಿಶ್ವಕ್ಕೆ ಎಚ್ಚರಿಕೆಯ ಸಂದೇಶ ನೀಡಿದೆ ಎಂದು ಸ್ವಾಮಿ ವಿವೇಕಾನಂದ ಸೇನೆ ರಾಜ್ಯಾಧ್ಯಕ್ಷ ರಾಘವ ಅಣ್ಣಿಗೇರಿ ಹೇಳಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈಗಾಗಲೇ ಯುದ್ಧದ ಪರಿಣಾಮದಿಂದ ಅನೇಕ ದೇಶಗಳು ಅವಸಾನದ ಅಂಚಿಗೆ ಹೋಗಿವೆ. ಯುದ್ಧ ಪ್ರಾರಂಭವಾಗಿ ಎರಡು ತಿಂಗಳು ಕಳೆದರೂ ಕೂಡ ಇಲ್ಲಿಯವರೆಗೆ ಭಾರತಕ್ಕೆ ಯಾವುದೇ ತೊಂದರೆ…

Read More

ನವಜಾತ ಶಿಶು ಪುನರುಜ್ಜೀವನ ತರಬೇತಿ ಅತ್ಯಂತ ಅಗತ್ಯ: ಡಾ. ಇನಾಮದಾರ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 11:ನವಜಾತ ಶಿಶುಗಳ ಜೀವಿತಾವಧಿ ಹೆಚ್ಚಿಸಲು ಮತ್ತು ಗುಣಮಟ್ಟದ ಆರೋಗ್ಯ ಸೇವೆಯನ್ನು ಮತ್ತಷ್ಟು ಬಲಪಡಿಸಲು ಸಂರಚಿತ ನವಜಾತ ಶಿಶು ಪುನರುಜ್ಜೀವನ ತರಬೇತಿ ಅತ್ಯಂತ ಅಗತ್ಯವಾಗಿದೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಕುಲಪತಿ ಡಾ.‌ಅರುಣ ಚಂ. ಇಮಾಮದಾರ ಹೇಳಿದ್ದಾರೆ.ರವಿವಾರ ನಗರದ ಬಿ.ಎಲ್‌.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ‌ ನಡೆದ ರಾಷ್ಟ್ರವ್ಯಾಪಿ ನವಜಾತ ಶಿಶು ಪುನರುಜ್ಜೀವನ ತರಬೇತಿ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಮಕ್ಕಳಶಾಸ್ತ್ರ ವಿಭಾಗದ ಸೇವಾ ಮನೋಭಾವ ಮತ್ತು ಶೈಕ್ಷಣಿಕ ಕಾರ್ಯಚಟುವಟಿಕೆಗಳು‌ ಈ ನಿಟ್ಟಿನಲ್ಲಿ ಪ್ರಮುಖವಾಗಿವೆ ಎಂದು ಅವರು…

Read More

ಬೂದಿಹಾಳ- ಪೀರಾಪೂರ ಏತ ನೀರಾವರಿ ಯೋಜನೆ ನೆನೆಗುದಿಗೆ: ರೈತ ಸಂಘ ಆಕ್ರೋಶ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 11 : ಬೂದಿಹಾಳ : ಪೀರಾಪೂರ ಏತ ನೀರಾವರಿ ಯೋಜನೆಯ ಬಾಕಿ ಉಳಿದ ಕಾಮಗಾರಿ ನೆನೆಗುದಿಗೆ ಬಿದ್ದಿದ್ದು ಧರಣಿ ಸಂದರ್ಭದಲ್ಲಿ ನೀಡಿದ ಭರವಸೆ ಕೇವಲ ಮೂಗಿಗೆ ತುಪ್ಪ ಸವರಿ ಹೋದಂತಾಗಿದೆ. ಅವರು ಕೊಟ್ಟ ಮಾತು ಉಳಿಸಿಕೊಳ್ಳಲು ವಿಫಲರಾಗಿದ್ದಾರೆ. ಇವರು ಕೇವಲ ಭರವಸೆ ನೀಡುತ್ತಾ ರೈತರಿಗೆ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಹಾಗೂ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಗುರುರಾಜ ಪಡಶೆಟ್ಟಿ ಸಚಿವರ ವಿರುದ್ಧ…

Read More

ಹೊಸ ಬೀಟ್ ವ್ಯವಸ್ಥೆ ಜಾರಿ : ಮನೆ ಸುರಕ್ಷತೆಗೆ `ಆರಕ್ಷಕರ ಹೊಸ ಸೂತ್ರ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 11 :ಬೇಸಿಗೆ ರಜೆ, ಮದುವೆ ಮೊದಲಾದ ಶುಭ ಸಮಾರಂಭ, ಪ್ರವಾಸ ಹೀಗೆ ಅನೇಕ ಸಂದರ್ಭಗಳಲ್ಲಿ ಮನೆಗಳಿಗೆ ಕೀಲಿ ಹಾಕಿ ಹೋಗಬೇಕಾದ ಪ್ರಸಂಗ ಬರುತ್ತದೆ. ಇದನ್ನು ಬಳಸಿ ಕಳ್ಳರು ತಮ್ಮ ಕೈಚಳಕ ಪ್ರದರ್ಶಿಸುವುದುಂಟು. ಆದರೆ ಈಗ ಹೆದರಬೇಕಿಲ್ಲ. ಈ ಸಂದರ್ಭದಲ್ಲಿ ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಆರಕ್ಷಕ ಇಲಾಖೆ ಹೊಸ ಸೂತ್ರ ಅನುಸರಿಸಿದ್ದು, ಲಾಕ್ಡ್ ಹೌಸ್ ಬೀಟ್ ಸಿಸ್ಟಂ ಎನ್ನುವ ಹೊಸ ಯೋಜನೆಯನ್ನು ರೂಪಿಸಿದೆ.ಈ ನೂತನ ಯೋಜನೆ ಮೂಲಕ ವಿಶೇಷ ಸಹಾಯವಾಣಿ ಸಂಖ್ಯೆಯಾದ 8277970747 ಸಂಖ್ಯೆಗೆ…

Read More

ಐಟಿಐ ಪ್ರವೇಶಾತಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ.11:ಜಿಲ್ಲೆಯ 10 ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಎನ್‌ಸಿವಿಟಿ ಸಂಯೋಜನೆ ಹೊಂದಿರುವ ವೃತ್ತಿಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.ಮೆರಿಟ್ ಮತ್ತು ಮೀಸಲಾತಿ ಆಧಾರದ ಮೇಲೆ ಆಗಸ್ಟ್-2026ನೇ ಸಾಲಿನ ಪ್ರವೇಶ ಪಡೆಯಲು 10ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳು www..cite.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಮೇ 15 ಕೊನೆ ದಿನವಾಗಿದೆ. ಮಹಿಳಾ ಅಭ್ಯರ್ಥಿಗಳಿಗೆ ಪ್ರವೇಶ ಶುಲ್ಕವಿಲ್ಲ. ಜಿಲ್ಲಾ ನೋಡಲ್ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ವಿಜಯಪುರದಲ್ಲಿ 08 ಸಾಂಪ್ರದಾಯಿಕ ವೃತ್ತಿಗಳಲ್ಲಿ ಮತ್ತು 06 ಇಂಡಸ್ಟ್ರೀಸ್-4.0…

Read More

ಸರ್ಕಾರಿ ನೌಕರರ ಪ್ರತಿಭಾವಂತ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 11:ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯ ಸರ್ಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರತಿ ವರ್ಷ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ‘ಪ್ರತಿಭಾ ಪುರಸ್ಕಾರ’ ನೀಡಿ ಗೌರವಿಸಲಾಗುತ್ತಿದೆ. ಆದರಂತೆ 2026ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆಗಳಲ್ಲಿ ಶೇ. 90 ಕ್ಕಿಂತ ಹೆಚ್ಚು ಅಂಕ ಗಳಿಸಿರುವ ರಾಜ್ಯ ಸರ್ಕಾರಿ ನೌಕರರ ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಶೇ. 90…

Read More